ಬೆಂಗಳೂರು: ರಾಜ್ಯ ಸರ್ಕಾರ ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಬಿ-ಖಾತಾ ಗೊಂದಲಗಳಿಗೆ ತೆರೆ ಎಳೆಯಲು ಮುಂದಾಗಿದ್ದು, 2024ರ ಸೆ.30 ರವರೆಗೆ ಬಿಬಿಎಂಪಿ ನೀಡಿರುವ ಎಲ್ಲಾ ಬಿ-ಖಾತಾಗಳಿಗೆ ಎ ಖಾತಾ ಮಾನ್ಯತೆ ನೀಡಲು ನಿರ್ಧಾರ ಕೈಗೊಂಡಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಅಕ್ರಮ ಮತ್ತು ಅನಿಯಂತ್ರಿತ
ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ತಮ್ಮ ಮೇಲೆ ಕೈ ಎತ್ತಿ ಹೊಡೆಯಲು ಯತ್ನಿಸಿದ್ದರಿಂದ ತೀವ್ರ ಅವಮಾನಕ್ಕೊಳಗಾಗಿ ಸ್ವಯಂ ನಿವೃತ್ತಿಗೆ ಮುಂದಾಗಿದ್ದ ಧಾರವಾಡ ಎಎಸ್ಪಿ ನಾರಾಯಣ ಬರಮನಿ ಅವರಿಗೆ ಈಗ ಜಾಕ್‌ಪಾಟ್ ಹೊಡೆದಿದೆ. ಧಾರವಾಡ ಎಎಸ್‌ಪಿ ಆಗಿದ್ದ ಬರಮನಿ ಅವರಿಗೆ ಈಗ ಬೆಳಗಾವಿ ಕಾನೂನು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್ ಆಯುಕ್ತ(ಡಿಸಿಪಿ)
ಬೆಂಗಳೂರು:ಜು. 16: ಹಿಂದುಳಿದ ವರ್ಗಗಳಿಗೆ ಶೈಕ್ಷಣಿಕ, ಸೇವೆ ಹಾಗೂ ರಾಜಕೀಯ ವಲಯದಲ್ಲಿ ಶೇಕಡಾ 50 ರಷ್ಟು ಮೀಸಲಾತಿ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಸಮಿತಿ ಮಂಡಳಿ ಸಭೆಯಲ್ಲಿ ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗಗಳ ಬಗ್ಗೆ ಮತ್ತು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು
ಬೆಂಗಳೂರು:ಜು. 16:ಬೆಂಗಳೂರಿನಲ್ಲಿ ರೌಡಿಶೀಟರ್ ಹತ್ಯೆಗೆ ಸಂಬಂಧಿಸಿದ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಭೈರತಿ ಬಸವರಾಜ್ ಹೆಸರಿಸಲ್ಪಟ್ಟ ನಂತರ ಅವರು ವಿವಾದದ ಕೇಂದ್ರಬಿಂದುವಾಗಿದ್ದಾರೆ. ಜುಲೈ 15 ರಂದು ರಾತ್ರಿ ನಡೆದ ಈ ಘಟನೆಯು ಹಾಲಿ ಶಾಸಕರು ಮತ್ತು ಅವರ ಆಪ್ತ ಸಹಾಯಕರ ವಿರುದ್ಧ ಗಂಭೀರ ಆರೋಪಗಳನ್ನು
ಬೆಂಗಳೂರು: ಮುಂದಿನ ಏಳು ದಿನಗಳಲ್ಲಿ ಕರ್ನಾಟಕ ರಾಜ್ಯಾದ್ಯಂತ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಬಗ್ಗೆ ಹವಾಮಾನ ಇಲಾಖೆ ಬುಧವಾರ ಮಾಹಿತಿ ನೀಡಿದ್ದು,'ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದ ಮಳೆಯಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಅಲ್ಲಲ್ಲಿ ಭಾರಿ ಮಳೆ ನಿರೀಕ್ಷಿಸಲಾಗಿದೆ. ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ
ಬೆಂಗಳೂರು: ರಾಜ್ಯದಾದ್ಯಂತ ಜುಲೈ 12 ರಂದು ನಡೆದ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ 55.56 ಲಕ್ಷ ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿದಂತೆ ಒಟ್ಟು 58.67 ಲಕ್ಷ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ಇದು ಅದ್ಭುತ ಯಶಸ್ಸು ಎಂದು ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ (ಕೆಎಸ್‌ಎಲ್‌ಎಸ್‌ಎ) ಕಾರ್ಯನಿರ್ವಾಹಕ ಅಧ್ಯಕ್ಷ ಹಾಗೂ ನ್ಯಾಯಮೂರ್ತಿ ವಿ ಕಾಮೇಶ್ವರ
ಬೆಂಗಳೂರು: ಸೋಮವಾರ ನಿಧನರಾದ ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ಸರೋಜಾದೇವಿ ಅವರು ಮಂಗಳವಾರ ತಮ್ಮ ಹುಟ್ಟೂರು ಚನ್ನಪಟ್ಟಣದ ದಶಾವರದ ಮಣ್ಣಲ್ಲಿ ಮಣ್ಣಾಗಿದ್ದು, ಅಭಿನಯ ಸರಸ್ವತಿ ಇನ್ನೂ ನೆನಪು ಮಾತ್ರ. ಇಂದು ಮಧ್ಯಾಹ್ನ ಸಕಲ ಸರ್ಕಾರಿ ಗೌರವದೊಂದಿಗೆ, ಒಕ್ಕಲಿಗ ಸಂಪ್ರದಾಯದಂತೆ ಸರೋಜಾದೇವಿ ಅವರ ಅಂತ್ಯಕ್ರಿಯೆ ನೆರವೇರಿತು. ದಶಾವರದಲ್ಲಿ ಅವರ ತಾಯಿಯ ಸಮಾಧಿ ಪಕ್ಕವೇ
ಶಿವಮೊಗ್ಗ: ಎಡಬಿಡದೆ ಸುರಿಯುತ್ತಿರುವ ಮಳೆಯ ನಡುವೆಯೂ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸೋಮವಾರ ಮಧ್ಯಾಹ್ನ ಸಾಗರ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ನಡುವಿನ ಶರಾವತಿ ಹಿನ್ನೀರಿನಲ್ಲಿ ನಿರ್ಮಿಸಿರುವ ಭಾರತದ ಎರಡನೇ ಅತಿ ಉದ್ದದ ಕೇಬಲ್-ಸ್ಟೇಡ್ ಸೇತುವೆಯನ್ನು ಉದ್ಘಾಟಿಸಿದರು. ಬಿಜೆಪಿಯ ಹಿರಿಯ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ
ಬೆಂಗಳೂರು: ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರು ನಿಧನರಾಗಿದ್ದಾರೆ. ಅವರಿಗೆ 87 ವರ್ಷಗಳಾಗಿತ್ತು. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ, ಸರೋಜಾದೇವಿ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಸರೋಜಾ ದೇವಿ 1938ರ ಜನವರಿ 7ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಬೈರಪ್ಪ ಅವರು ಪೊಲೀಸ್ ಅಧಿಕಾರಿಯಾಗಿದ್ದರು. ತಾಯಿ ರುದ್ರಮ್ಮಾ. ಸರೋಜಾ ಬಳಿ ಭೈರಪ್ಪ
ತುಮಕೂರು: ಕೌಟುಂಬಿಕ ಕಹಲದಿಂದ ಬೇಸತ್ತ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರು (PSI) ಲಾಡ್ಜ್ ವೊಂದರಲ್ಲಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ. ದಾವಣಗೆರೆ ನಗರದ ಬಡಾವಣೆ PSI ನಾಗರಾಜಪ್ಪ (45) ಆತ್ಮಹತ್ಯೆ ಮಾಡಿಕೊಂಡವರು. ಜು.1ರಂದು ಬೆಳಿಗ್ಗೆ 7 ಗಂಟೆಗೆ ದ್ವಾರಕಾ ಹೋಟೆಲ್‍ನ 4ನೇ ಮಹಡಿಯಲ್ಲಿ