ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಬೆಂಗಳೂರು: ಏಕರೂಪ ನಾಗರಿಕ ಸಂಹಿತೆಯನ್ನು(UCC) ಜಾರಿಗೆ ತರಬೇಕೆಂದು ಹೈಕೋರ್ಟ್, ಸಂಸತ್ತು ಮತ್ತು ರಾಜ್ಯ ಸರ್ಕಾರಗಳಿಗೆ ಒತ್ತಾಯಿಸಿದೆ. ಏಕರೂಪ ನಾಗರಿಕ ಸಂಹಿತೆ ನ್ಯಾಯ, ಸಮಾನತೆ, ಜಾತ್ಯತೀತತೆ ಮತ್ತು ರಾಷ್ಟ್ರೀಯ ಏಕತೆಯ ಸಾಂವಿಧಾನಿಕ ಆದರ್ಶಗಳನ್ನು ಸಾಕಾರಗೊಳಿಸುವತ್ತ ಒಂದು ನಿರ್ಣಾಯಕ ಹೆಜ್ಜೆಯಾಗಿದೆ ಎಂದು ಹೈಕೋರ್ಟ್ ಹೇಳಿದೆ. ಆಸ್ತಿ ವಿವಾದಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ

ಚೆನ್ನೈ : ಮಹತ್ವದ ಬೆಳವಣಿಗೆಯೊಂದರಲ್ಲಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಅಣ್ಣಾಮಲೈ ಹಿಂದೆ ಸರಿದಿದ್ದಾರೆ. ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ.ಅಣ್ಣಾಮಲೈ ಅವರು ಪಕ್ಷದ ಮುಂದಿನ ಬಿಜೆಪಿ ಮುಖ್ಯಸ್ಥರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗುವುದು ಮತ್ತು ನಾನು ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ ಎಂದು ಹೇಳಿದರು. ಕೊಯಮತ್ತೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅಣ್ಣಾಮಲೈ, ನಾನು ಬಿಜೆಪಿ

ಬೆಂಗಳೂರು: ಭಾರತದ ಔಷಧ ಉದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ, ಅಮೆರಿಕ ಸರ್ಕಾರವು ಔಷಧ ಉತ್ಪನ್ನಗಳನ್ನು ಸುಂಕದಿಂದ ವಿನಾಯಿತಿ ನೀಡಲು ನಿರ್ಧರಿಸಿದೆ. ಈ ಬೆಳವಣಿಗೆಯನ್ನು ಸ್ವಾಗತಿಸಿರುವ, ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್-ಶಾ ಅವರು ಔಷಧ ವಲಯದ ಮೇಲಿನ ಸಕಾರಾತ್ಮಕ ಪರಿಣಾಮಗಳ ಬಗ್ಗೆ ತಿಳಿಸಿದ್ದಾರೆ. ಭಾರತ ಮತ್ತು ಅಮೆರಿಕ ನಡುವಿನ ಬಲವಾದ ದ್ವಿಪಕ್ಷೀಯ ಸಂಬಂಧವನ್ನು

ಬೆಂಗಳೂರು: ಸುಲಿಗೆ ಹಾಗೂ ಬೆದರಿಕೆ ಆರೋಪದ ಮೇಲೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಕನ್ನಡ ಮಾಸಿಕ ಪತ್ರಿಕೆಯ ಇಬ್ಬರು ಪತ್ರಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ನಾಡಪ್ರಭು ಕೆಂಪೇಗೌಡ ಲೇಔಟ್ (ಎನ್‌ಪಿಕೆಎಲ್) ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಸಿ ಎನ್ ಅಶೋಕ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಶೀಘ್ರದಲ್ಲೇ ಸಚಿವ ಸಂಪುಟ ಪುನಾರಚನೆ ನಡೆಯಲಿದೆ ಎಂಬ ಊಹಾಪೋಹಗಳು ತೀವ್ರಗೊಳ್ಳುತ್ತಿದ್ದಂತೆ ರಾಜಕೀಯ ಬಿರುಗಾಳಿ ಎದ್ದಿದೆ. ಆಡಳಿತಾರೂಢ ಕಾಂಗ್ರೆಸ್‌ನೊಳಗಿನ ಅಸಮಾಧಾನದ ನಡುವೆ, ಪಕ್ಷದ ನಿಷ್ಠಾವಂತರು ಸಚಿವ ಸಂಪುಟ ಪುನಾರಚನೆ ವೇಳೆ ಪ್ರಸಿದ್ಧ 'ಕಾಮರಾಜ್ ಯೋಜನೆ'ಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸುತ್ತಿದ್ದಾರೆ. ಪ್ರಸ್ತುತ ಸಚಿವರಲ್ಲಿ ಸುಮಾರು ಶೇ. 70-80 ರಷ್ಟು ಜನರು ಸಿದ್ದರಾಮಯ್ಯ ಅವರ

ಬೆಂಗಳೂರು: ಕಳೆದ 50 ವರ್ಷಗಳಿಂದ ಕನ್ನಡಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದ, ಸಂಶೋಧಕ ಹಾಗೂ ಸಾಹಿತಿ ಪಿ ವಿ ನಾರಾಯಣ ಅವರು ಗುರುವಾರ ವಯೋಸಹಜ ಕಾಯಿಲೆಗಳಿಂದ ನಿಧನರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು. 1942 ರಲ್ಲಿ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಅಕ್ಕಿರಾಂಪುರ ಗ್ರಾಮದಲ್ಲಿ ಜನಿಸಿದ ನಾರಾಯಣ ಅವರು ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ನಾರಾಯಣ ಅವರು

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತಿತರ ಹಿರಿಯ ಬಿಜೆಪಿ ನಾಯಕರು ಪೊಲೀಸರು ಗುರುವಾರ ವಶಕ್ಕೆ ಪಡೆದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮತ್ತಿತರ ಬಿಜೆಪಿ ಶಾಸಕರನ್ನು ವಶಕ್ಕೆ ಪಡೆದರು. ಬೆಲೆ ಏರಿಕೆ ಮತ್ತಿತರ

ಮಂಡ್ಯ, ಏಪ್ರಿಲ್​ 03: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೈವೇನಲ್ಲಿ ಐರಾವತ ಬಸ್ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಮಂಡ್ಯ ತಾಲೂಕಿನ ತೂಬಿನಕೆರೆ ಗ್ರಾಮದ ಬಳಿ ಎಕ್ಸಿಟ್​ನಲ್ಲಿ ನಡೆದಿದೆ. ಇಬ್ಬರು ಮಹಿಳೆಯರು ಸೇರಿದಂತೆ ಇಬ್ಬರು ಪುರುಷರ ಸಾವನ್ನಪ್ಪಿದ್ದು, ಮಂಡ್ಯ ಗ್ರಾಮಾಂತರ ಪೊಲೀಸ್

ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರು ಮಂಗಳವಾರ ಜಾಮೀನು ಕೋರಿ ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ಈ ಹಿಂದೆ ಜಾಮೀನು ಕೋರಿ ನಟಿ ರನ್ಯಾ ರಾವ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ 64ನೇ ಸಿಸಿಹೆಚ್​​ ಕೋರ್ಟ್​, ಅರ್ಜಿ ವಜಾಗೊಳಿಸಿ ಆದೇಶ

ಬೆಂಗಳೂರು, ಮಾರ್ಚ್ 30: ಕರ್ನಾಟಕ ಪೊಲೀಸ್​ ಇಲಾಖೆಯ ಹೆಡ್​ ಕಾನ್​​ಸ್ಟೆಬಲ್​​ ಹಾಗೂ ಕಾನ್​​ ಸ್ಟೆಬಲ್​ಗಳು ಈಗಲೂ ಬ್ರಿಟಿಷ್​ ಕಾಲದ ಟೋಪಿಯನ್ನು  ಧರಿಸುತ್ತಾರೆ. ಈ ಟೋಪಿ ಬದಲಿಸುವ ಕೂಗು ಮೊದಲಿನಿಂದಲೂ ಕೇಳಿಬರುತ್ತಿತ್ತು. ಇದು ಪೊಲೀಸರ ಬಹುವರ್ಷಗಳ ಬೇಡಿಕೆ ಕೂಡ ಆಗಿತ್ತು. ಇದೀಗ ಅದಕ್ಕೆ ಸಮಯ ಬಂದಿದ್ದು, ದೊಡ್ಡ ಟೋಪಿ ಬದಲಾಗಿ