ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಬೆಂಗಳೂರು: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌ಡಿ ಕುಮಾರಸ್ವಾಮಿ ಭಾಗಿಯಾಗಿದ್ದಾರೆ ಎನ್ನಲಾದ ಅಕ್ರಮ ಗಣಿಗಾರಿಕೆ ಪ್ರಕರಣಗಳ ತನಿಖೆ ನಡೆಸುತ್ತಿರುವ ಲೋಕಾಯುಕ್ತ ವಿಶೇಷ ತನಿಖಾ ತಂಡ (ಎಸ್‌ಐಟಿ) ಪ್ರಾಸಿಕ್ಯೂಷನ್ ಅನುಮತಿಗೆ ಮತ್ತೊಮ್ಮೆ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಕಳೆದ ಏಳು ತಿಂಗಳ ಹಿಂದೆ ರಾಜ್ಯಪಾಲರಿಗೆ ಮನವಿ ಮಾಡಿದ್ದರು. ಈ ವೇಳೆ

ನವದೆಹಲಿ: ಬಹುಕೋಟಿ ರೂಪಾಯಿ ಕ್ರಿಪ್ಟೊ ಕರೆನ್ಸಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬೆಂಗಳೂರು ಸೇರಿ ದೇಶದ 60 ಕಡೆಗಳಲ್ಲಿ ನಿನ್ನೆ ಮಂಗಳವಾರ ಸಾಯಂಕಾಲ ಶೋಧ ನಡೆಸಿದೆ. ಗೇನ್ ಬಿಟ್ ಕಾಯಿನ್ ಕ್ರಿಪ್ಟೊ ಕರೆನ್ಸಿ ಹಗರಣಕ್ಕೆ ಸಂಬಂಧಿಸಿ ಬೆಂಗಳೂರು, ಪುಣೆ, ಚಂಡೀಗಡ, ದೆಹಲಿ ಎನ್‌ಸಿಆರ್, ನಾಂದೇಡ್, ಕೊಲ್ಲಾಪುರ ಸೇರಿದಂತೆ ಹಲವೆಡೆ ಸಿಬಿಐ ದಾಳಿ ನಡೆಸಿ

ನವದೆಹಲಿ: ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಯುವ ಜನಾಂಗದ ವಿದ್ಯಾರ್ಥಿ ವೇತನವನ್ನು ಕೇಂದ್ರ ಸರ್ಕಾರ ಕಿತ್ತುಕೊಂಡಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಆರೋಪಿಸಿದ್ದಾರೆ. ಕೇಂದ್ರ ಸರ್ಕಾರದ “ಸಬ್ಕಾ ಸಾಥ್, ಸಬ್ಕಾ ವಿಕಾಸ್” ಘೋಷಣೆಯು ದುರ್ಬಲ ವರ್ಗಗಳ ಆಶೋತ್ತರಗಳನ್ನು ಅಣಕಿಸುತ್ತದೆ ಎಂದು ಹೇಳಿದ್ದಾರೆ. ದೇಶದ ದುರ್ಬಲ ವರ್ಗಗಳ

ಬೆಂಗಳೂರು: 17 ವರ್ಷದ ಅತ್ಯಾಚಾರ ಸಂತ್ರಸ್ತೆಗೆ ಸಹಾಯ ಮಾಡುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಪೊಲೀಸ್ ಕಾನ್‌ಸ್ಟೆಬಲ್ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಆಗಿದ್ದ ಆರೋಪಿ ಅರುಣ್ ತೊನೆಪ ಮತ್ತು ಸಂತ್ರಸ್ತೆಯ ಗೆಳೆಯ ವಿಕ್ಕಿಯನ್ನು ಮೈಕೋ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯ ತಾಯಿ ಬೊಮ್ಮನಹಳ್ಳಿ

ಮಂಡ್ಯ: ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ವಿಷ ಸೇವಿಸಿ, ನಂತರ ವಿಸಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ದಾರುಣ ಘಟನೆ ಸೋಮವಾರ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಮಾಸ್ತಪ್ಪ, ಅವರ ಪತ್ನಿ ರತ್ನಮ್ಮ ಹಾಗೂ ಮಗಳು ಲಕ್ಷ್ಮೀ ಎಂದು ಗುರುತಿಸಲಾಗಿದ್ದು, ದಂಪತಿಯ ಮೃತದೇಹ ಪತ್ತೆ ಆಗಿದೆ. ಮಗಳ ಮೃತದೇಹಕ್ಕಾಗಿ ಶೋಧಕಾರ್ಯ

ಬೆಂಗಳೂರು, ಫೆಬ್ರವರಿ 23: ಲೋಕಾಯುಕ್ತ  ಡಿವೈಎಸ್​ಪಿ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ  ಬ್ಲ್ಯಾಕ್​ಮೇಲ್​ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಸಿದ್ದಾರೆ. ವಜಾಗೊಂಡ ರಿಸರ್ವ್ ಪೊಲೀಸ್ ಕಾನ್ಸ್​ಟೇಬಲ್ ಮುರುಗಪ್ಪ ಬಂಧಿತ ಆರೋಪಿ. ಮುರುಗೆಪ್ಪ ವಿರುದ್ಧ ರಾಜ್ಯದ ವಿವಿಧ ಠಾಣೆಯಲ್ಲಿ 60ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಆರೋಪಿ ಮುರುಗಪ್ಪ ಲೋಕಾಯುಕ್ತ ಹೆಸರಿನಲ್ಲಿ ಅಧಿಕಾರಿಗಳಿಗೆ ಬ್ಲ್ಯಾಕ್​ಮೇಲ್​ ಮಾಡಿ

ಹಾಸನ, ಫೆಬ್ರವರಿ 23: ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ  ಹೋಗುತ್ತಿದ್ದವರ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾಸನ ತಾಲೂಕಿನ ಕೆಂಚಟ್ಟಹಳ್ಳಿ ಬಳಿ ನಡೆದಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಆನಗೋಳು ಗ್ರಾಮದ ಸುರೇಶ್ (60), ಕುಮಾರ್ (55) ಮೃತ ದುರ್ದೈವಿಗಳು. ಘಟನೆಯಲ್ಲಿ ಗಂಭೀರವಾಗಿ

ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಮೇಲಿನ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಪ್ರತಾಪ್ ಸಿಂಹ ವಿರುದ್ಧ ಮೈಸೂರು ಯುವ ಕಾಂಗ್ರೆಸ್‌ ಮುಖಂಡ ಸೈಯದ್‌ ಅಬ್ರರ್ ನೀಡಿದ ದೂರಿನ ಅನ್ವಯ ಉದಯಗಿರಿ

ಸರ್ವರಿಗೂ ಆದರದ ಸ್ವಾಗತ

ಬೆಳಗಾವಿ: ಮರಾಠಿ ಮಾತನಾಡದ ನಿರ್ವಾಹಕನ ಮೇಲೆ ಪುಂಡರು ಹಲ್ಲೆ ನಡೆಸಿದ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ದೊರೆತಿದ್ದು, ಈ ಬಾರಿ ಹಲ್ಲೆಗೊಳಗಾದ ನಿರ್ವಾಹಕನ ವಿರುದ್ಧವೇ POCSO ಪ್ರಕರಣ ದಾಖಲಿಸಲಾಗಿದೆ. ಹೌದು.. ಬೆಳಗಾವಿಯ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ಕನ್ನಡದಲ್ಲಿ ಮಾತನಾಡು ಎಂದಿದ್ದಕ್ಕೆ ನಿರ್ವಾಹಕನ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು, ಈಗ ನಿರ್ವಾಹಕ