ಲಕ್ನೋ: ಪ್ರಯಾಗ್‌ರಾಜ್ ಕುಂಭಮೇಳಕ್ಕೆ ತೆರಳಿದ್ದ ಬೀದರ್ ಮೂಲದ ಒಂದೇ ಕುಟುಂಬದ 5 ಜನ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಕಾಶಿ ಬಳಿ ನಡೆದಿದೆ. ಲಾರಿ ಮತ್ತು ಕ್ರೂಸರ್ ನಡುವೆ ಇಂದು ಬೆಳಗ್ಗೆ ಮಿರಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ಅಪಘಾತ ಸಂಭವಿಸಿದೆ. 5 ಮಂದಿ ಸಾವನ್ನಪ್ಪಿದ್ದು 7 ಮಂದಿ ಗಾಯಗೊಂಡಿದ್ದಾರೆ. ಬೀದರ್ ನಗರದ
ಕಾರವಾರ : ದಾಂಡೇಲಿಯ ಲೆನಿನ್ ರಸ್ತೆಯಲ್ಲಿ ವೈದ್ಯಕೀಯ ವೃತ್ತಿಯಲ್ಲಿ ತೊಡಗಿದ ವ್ಯಕ್ತಿಯನ್ನು ಹುಬ್ಬಳ್ಳಿ ಮೂಲದ ನಕಲಿ ಪತ್ರಕರ್ತರು ಬ್ಲಾಕ್ ಮೇಲ್ ಮಾಡಿ ಹಣ ವಸೂಲಿಗೆ ಬೇಡಿಕೆ ಇಟ್ಟ ಘಟನೆಗೆ ಸoಬಂಧಿಸಿದಂತೆ ಮೂವರನ್ನು ದಾಂಡೇಲಿ ಪೋಲಿಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಹುಬ್ಬಳ್ಳಿಯ ವಿಜಯಶಂಕರ ಮೇತ್ರಾಣಿ , ಧರ್ಮರಾಜ ನಾರಾಯಣ ಕಠಾರೆ, ಸತೀಶ
ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾ.9ರಂದು ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರ ಜೊತೆ ಹಸೆಮಣೆ ಏರಲಿದ್ದಾರೆ. ಅಂದು ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಸಾಂಪ್ರದಾಯಿಕವಾಗಿ ವಿವಾಹ ಕಾರ್ಯಕ್ರಮ ನಡೆಯಲಿದೆ. ತಮಿಳುನಾಡು ಮೂಲದ ಶಿವಶ್ರೀ ಅವರು ಈಗಾಗಲೇ ಗಾಯನದಿಂದ ಖ್ಯಾತರಾಗಿದ್ದಾರೆ. ಮಾರ್ಚ್ 5 ಮತ್ತು 6ರಂದು ಬೆಂಗಳೂರಿನಲ್ಲಿ ಇವರ ವಿವಾಹ
ಬೆಂಗಳೂರು, (ಫೆಬ್ರವರಿ 17): ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದ ಅಳಂದ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ಗೆ ಇದೀಗ ಹೊಸ ಹುದ್ದೆ ನೀಡಲಾಗಿದೆ. ಕಲಬುರಗಿ ಜಿಲ್ಲೆ ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರನ್ನು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ
ಬೆಂಗಳೂರು, (ಫೆಬ್ರವರಿ 17): ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೆ ಕೊನೆಗೂ ಕಾಲ ಕೂಡಬಂದಿದೆ. ಮೇ ತಿಂಗಳ ಬಳಿಕ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆ ನಡೆಸುವುದಾಗಿ ಹೈಕೋರ್ಟ್ಗಿಂದು ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ. 3 ವರ್ಷಗಳಾದರೂ ಜಿಲ್ಲಾ ಹಾಗೂ ತಾಲೂಕು ಪಂಚಾಯಿತ್ ಚುನಾವಣೆ ನಡೆಸದ ಹಿನ್ನೆಲೆಯಲ್ಲಿ ರಾಜ್ಯ
ದೇಶಾದ್ಯಂತ ಹವಾಮಾನ ನಿರಂತರವಾಗಿ ಬದಲಾಗುತ್ತಿದೆ. ಏತನ್ಮಧ್ಯೆ ಹವಾಮಾನ ಇಲಾಖೆಯು ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆಯುಂಟಾಗುತ್ತಿದ್ದು, 13 ರಾಜ್ಯಗಳಲ್ಲಿ ಭಾರಿ ಮಳೆಯಾಗಬಹುದು ಎಂಬ ಎಚ್ಚರಿಕೆಯನ್ನು ನೀಡಿದೆ. ಅಸ್ಸಾಂ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ, ಈಶಾನ್ಯ ರಾಜ್ಯಗಳಲ್ಲಿ ಮುಂದಿನ ಏಳು ದಿನಗಳವರೆಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ನಾಗಾಲ್ಯಾಂಡ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ
ಬೆಂಗಳೂರು, ಫೆಬ್ರವರಿ 17: ಮಾರ್ಚ್ 3 ರಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುತ್ತದೆ. ಮಾರ್ಚ್ ಮಾರ್ಚ್ 7ರಂದು ಬಜೆಟ್ ಮಂಡಿಸುತ್ತೇನೆ. ಬಳಿಕ 3 ದಿನ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆಯಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಜೆಟ್ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಇಲಾಖೆಗಳೊಂದಿಗೆ ಈಗಾಗಲೆ ಪೂರ್ವಭಾವಿ ಸಭೆ
ಬೆಳಗಾವಿ: ಬೆಳಗಾವಿಯಲ್ಲಿ ಆಟೋ ಚಾಲಕರೊಬ್ಬರು ಕ್ಷುಲ್ಲಕ ಕಾರಣಕ್ಕೆ ಗೋವಾ ಮಾಜಿ ಶಾಸಕರನ್ನು ಹತ್ಯೆ ಮಾಡಿದ ಆಘಾತಕಾರಿ ಘಟನೆ ಶನಿವಾರ ನಡೆದಿದೆ. ಬೆಳಗಾವಿಯ ಖಡೇಬಜಾರ್ ನಲ್ಲಿ ಇರೋ ಶ್ರೀನಿವಾಸ ಲಾಡ್ಜ್ ಮುಂದೆ ಈ ಘಟನೆ ನಡೆದಿದ್ದು, ಗೋವಾದ ಪೋಂಡಾ ಕ್ಷೇತ್ರದ ಶಾಸಕರಾಗಿದ್ದ ಲಾವೂ ಮಾಮಲೇದಾರ್ ಅವರು ಪ್ರಯಾಣಿಸುತ್ತಿದ್ದ ಕಾರು, ಆಟೋಗೆ ಟಚ್ ಆಗಿದೆ.
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ಸಿಐಡಿಗೆ ವಹಿಸಿದೆ. ಪ್ರಕರಣ ಸಂಬಂಧ ಎಫ್ಐಆರ್ ದಾಖಲಾದ ಎರಡು ತಿಂಗಳ ಬಳಿಕ ಸಿಐಡಿ ತನಿಖೆಗೆ ಆದೇಶಿಸಲಾಗಿದೆ. ಸಿಐಡಿ ಎಸ್‌ಪಿ ರಾಘವೇಂದ್ರ ಹೆಗಡೆ, ಮೂವರು ಡಿವೈಎಸ್ಪಿ ಗಳನ್ನು ಒಳಗೊಂಡ ತಂಡ ಹಗರಣದ
ಬೆಂಗಳೂರು: ಏರೋ ಇಂಡಿಯಾವನ್ನು ಪ್ರದರ್ಶನವು ಸದ್ಯ ಏರ್ ಫೋರ್ಸ್ ಸ್ಟೇಷನ್ ಯಲಹಂಕದಲ್ಲಿ ನಡೆಯುತ್ತಿದೆ, ಆದರೆ ಮುಂದಿನ ಬಾರಿ ನಡೆಯಲಿರುವ ವೈಮಾನಿಕ ಪ್ರದರ್ಶನವನ್ನು ಬೇರೆ ಸ್ಥಳಕ್ಕೆ ಶಿಫ್ಟ್ ಮಾಡಬೇಕು ಹಾಗೂ ಕಾರ್ಯಕ್ರಮವನ್ನು ಫೆಬ್ರವರಿ ಬದಲಿಗೆ ಡಿಸೆಂಬರ್ ನಲ್ಲಿ ಆಯೋಜಿಸುವಂತೆ ವಿವಿಧ ಸರ್ಕಾರಿ ಏಜೆನ್ಸಿಗಳು ಅಭಿಪ್ರಾಯ ವ್ಯಕ್ತ ಪಡಿಸಿವೆ. ಕೇಂದ್ರ ಗೃಹ ಮತ್ತು ಭೂ