ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ಸರ್ವೆ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುರುವಾರ ನಡೆದಿದೆ. ಮೂಡಿಗೆರೆ ಸರ್ವೆ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ಶಿವಕುಮಾರ್ (45) ಅವರು ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರು ನೌಕರರ ಸಂಘದ ನಿರ್ದೇಶಕರಾಗಿದ್ದ ಶಿವಕುಮಾರ್ ಅವರು ಮೂಡಿಗೆರೆ ಬಸ್ ನಿಲ್ದಾಣದ
ಮೈಸೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲಿನ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಶಾಂತಿನಗರದ ನಿವಾಸಿಗಳಾದ ಸುಹೇಲ್ ರಹಿಲ್ ಪಾಶಾ, ಅಯಾನ್ ಬಿನ್ ಜಬೀವುಲ್ಲಾ, ಗೌಸಿಯಾ ನಗರದ ಸೈಯದ್ ಸಾದಿಕ್ ಬಿನ್ ನವೀದ್, ಸತ್ಯನಗರದ ಇಜಾಜ್ ಬಿನ್ ಅಬ್ದುಲ್ ವಾಜೀದ್, ರಾಜೀವ್ ನಗರದ
ಕಲಬುರಗಿ: ಈಗಾಗಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ನಡುವೆ ಪೈಪೋಟಿ ಆರಂಭವಾಗಿದ್ದು, ಈ ಮಧ್ಯೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಮಹತ್ವದ ಸುಳಿವು ನೀಡಿದ್ದಾರೆ. ಇಂದು ಕಲಬುರಗಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಶೀಘ್ರದಲ್ಲೇ ಕೆಲವು ರಾಜ್ಯಗಳಲ್ಲಿ ಅಧ್ಯಕ್ಷರ ಬದಲಾವಣೆ
ಚಿಕ್ಕಮಗಳೂರು: ರಸ್ತೆ ಅಪಘಾತವನ್ನೇ ನೆಪವಾಗಿಟ್ಟುಕೊಂಡು ದರ್ಗಾಕ್ಕೆ ಆಗಮಿಸುತ್ತಿದ್ದವರ ಕಾರನ್ನು ಅಡ್ಡಗಟ್ಟಿ ಬಜರಂಗದಳದ ಕಾರ್ಯಕರ್ತರೆನ್ನಲಾದ ತಂಡವೊಂದು ಹಲ್ಲೆ ನಡೆಸಿದ ಘಟನೆ ಶೃಂಗೇರಿಯಲ್ಲಿ ರವಿವಾರ ರಾತ್ರಿ ನಡೆದಿರುವುದು ವರದಿಯಾಗಿದೆ. ಹಲ್ಲೆಯಿಂದ ಗಾಯಗೊಂಡವರನ್ನು ಶೃಂಗೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಪ್ಪ ಮೂಲದ ಕುಟುಂಬವೊಂದು ಕಳೆದ ರಾತ್ರಿ ಮೂರು ಕಾರುಗಳಲ್ಲಿ ಶೃಂಗೇರಿ ಪಟ್ಟಣದಲ್ಲಿನ ದರ್ಗಾಕ್ಕೆ ಭೇಟಿ ನೀಡುವ ಉದ್ದೇಶದಿಂದ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಸೋಮವಾರ ಮತ್ತೆ ನೋಟಿಸ್ ನೀಡಿದೆ. ಈ ಹಿಂದೆಯೂ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್ ನೀಡಿತ್ತು ಮತ್ತೆ ಅವರು
ಧಾರವಾಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ)ದ ನೋಟಿಸ್ ಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಸೋಮವಾರ ವಿಸ್ತರಿಸಿದೆ. ಇಡಿ ಸಮನ್ಸ್ ರದ್ದು ಕೋರಿ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ
ಬೆಂಗಳೂರು: ಆಸ್ತಿ ಖರೀದಿ, ಮಾರಾಟ ಸೇರಿ ನೋಂದಣಿ ಪ್ರಕ್ರಿಯೆಗೆ ಬಳಸುವ ಕಾವೇರಿ 2.0 ಸಾಫ್ಟ್ವೇರ್ ಹ್ಯಾಕ್ ಆಗಿರುವ ಬೆಳವಣಿಗೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಶನಿವಾರ ತಿಳಿಸಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, 2.0 ಸಾಫ್ಟ್ವೇರ್
ಯುವಜನತೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿರುವ ಹಠಾತ್ ಸಾವು ಪ್ರಕರಣಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಪ್ರಕರಣಗಳ ಬಗ್ಗೆ ತನಿಖೆ ನಡೆಸುವುದಕ್ಕೆ ರಾಜ್ಯ ಸರ್ಕಾರ ತಜ್ಞರ ಸಮಿತಿಯೊಂದನ್ನು ರಚಿಸಿದೆ. ಸ್ವತಃ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಕೊವಿಡ್ ಅಥವಾ ಕೊವಿಡ್ ಲಸಿಕೆಯ ಅಡ್ಡಪರಿಣಾಮದಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ
ಬೆಂಗಳೂರು, ಫೆಬ್ರವರಿ 7: ಲಕ್ಕಿ ಭಾಸ್ಕರ್ ತೆಲಗು ಸಿನಿಮಾದಲ್ಲಿ ನಾಯಕ ನಟ ಬ್ಯಾಂಕ್ ಉದ್ಯೋಗಿ. ಬ್ಯಾಂಕ್ನಿಂದ ಹಣ ತೆಗೆದುಕೊಂಡು ಹೋಗುತ್ತಿದ್ದ ನಾಯಕ ಅದನ್ನು ಬೇರೆ ಬೇರೆ ವ್ಯವಹಾರಕ್ಕೆ ಬಳಸಿಕೊಳ್ಳುತ್ತಿದ್ದ. ಅದರಿಂದ ಬಂದ ಲಾಭದ ದುಡ್ಡನ್ನು ಮತ್ತೆ ಬ್ಯಾಂಕ್ ಖಜಾನೆಗೇ ತಂದಿಡುತ್ತಿದ್ದ. ಅದೇ ರೀತಿ ಮಾಡಿ ಶ್ರೀಮಂತನಾಗುತ್ತಾನೆ. ಇದು ಸಿನಿಮಾ
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬೇಸತ್ತು ಅನೇಕರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅದೆಷ್ಟೋ ಜನರು ಬೀದಿಗೆ ಬಿದ್ದಿದ್ದರು. ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಜನರು ರೋಸಿ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಮೂಗುದಾರ ಹಾಕಲು ರಾಜ್ಯ ಸರ್ಕಾರ ಹೊರಟಿತ್ತು. ಆದರೆ, ಇದೀಗ