ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಶಿಗ್ಗಾವಿ : ಪಟ್ಟಣದ ಹನುಮನರ ಹಳ್ಳಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಬೇವಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತರು ನೀಲಪ್ಪ ಮೂಲಿಮನಿ( 23), ಸುದೀಪ್ ಕೋಟಿ( 18) ಎಂದು ತಿಳಿದುಬಂದಿದೆ. ಮೃತ ದುರ್ದೈವಿಗಳು ಸವಣೂರು ತಾಲೂಕು ಬೇವಿನಹಳ್ಳಿ ಗ್ರಾಮದ ನಿವಾಸಿಗಳಾಗಿದ್ದು ಬೆಳಿಗ್ಗೆ ಬೆಳಗಾವಿ

ಬೆಂಗಳೂರು: ರಾಜ್ಯದಲ್ಲಿ ವರುಣ ಅಬ್ಬರ ಮುಂದುವರೆದಿದ್ದು, ಇಂದು(ಶುಕ್ರವಾರ) ಸಂಜೆ ಆಗುತ್ತಿದ್ದಂತೆ ರಾಜಧಾನಿ ಬೆಂಗಳೂರಿನಲ್ಲಿ ವರುಣನ ಆಗಮನವಾಗಿದೆ. ನಗರದ ಕೋರಮಂಗಲ, ಶಾಂತಿನಗರ, ಕೆ.ಹೆಚ್​ ರಸ್ತೆ, ವಿಧಾನಸೌಧ, ಕಬ್ಬನ್​ಪಾರ್ಕ್, ಮೆಜೆಸ್ಟಿಕ್, ವಿಜಯನಗರ, ರಾಜಾಜಿನಗರ, ಬನಶಂಕರಿ ಹಾಗೂ ಜಯನಗರದ ಸುತ್ತಮುತ್ತ ಮಳೆ ಶುರುವಾಗಿದೆ. ಗಾಳಿ ಸಹಿತ ಮಳೆಯಿಂದ ವಾಹನ ಸವಾರರ ಪರದಾಟ ನಡೆಸಿದ್ದು,

ಬೆಂಗಳೂರು: ಮಹರ್ಷಿ ವಾಲ್ಮೀಕಿ ನಿಗಮ ಹಗರಣದಲ್ಲಿ ಜಾರಿ ನಿರ್ದೇಶನಾಲಯದ(ED) ವಶಕ್ಕೆ ಸಿಲುಕಿರುವ ಮಾಜಿ ಸಚಿವ ಕಾಂಗ್ರೆಸ್ ಶಾಸಕ ಎಲ್ ನಾಗೇಂದ್ರ ಅವರನ್ನು ಜುಲೈ 18ರವರೆಗೆ ಜಾರಿ ನಿರ್ದೇಶನಾಲಯ (Enforcement Directorate) ವಶಕ್ಕೆ ಪಡೆದಿದೆ. ನಿನ್ನೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಯಲ್ಲಿ 10 ಗಂಟೆಗೂ ಹೆಚ್ಚು ಕಾಲ ವಿಚಾರಣೆ

ಬೆಂಗಳೂರು(ಜು.12): ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ದೋಚಿದ್ದ ಹಣದಲ್ಲಿ ಆರೋಪಿ ಎರಡು ಐಷಾರಾಮಿ ಕಾರು ಖರೀದಿಸಿರುವುದನ್ನು ಎಸ್​ಐಟಿ ಪತ್ತೆ ಮಾಡಿದೆ. ಹೈದರಾಬಾದ್​ ಮೂಲದ ಸತ್ಯನಾರಾಯಣ ಎನ್ನುವಾತ ಈ ಹಗರಣದ ಆರೋಪಿಯಾಗಿದ್ದು, ನಿಗಮದಲ್ಲಿ ದೋಚಿದ್ದ ಹಣದಲ್ಲೇ ಸೆಕೆಂಡ್​ ಹ್ಯಾಂಡ್​ನಲ್ಲಿ ಕೋಟಿ ಕೋಟಿ ರೂ. ಬೆಲೆ ಬಾಳುವ ಲ್ಯಾಂಬೋರ್ಗಿನಿ ಮತ್ತು ಬೆಂಜ್

ತುಮಕೂರು, ಜು.12: ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಇತ್ತೀಚೆಗೆ ಹಣದಾಸೆಗೆ ಚಿಕ್ಕ ಮಕ್ಕಳನ್ನ ಕಿಡ್ನಾಪ್ ಮಾಡಿ ಮಾರಾಟ ಮಾಡುವ ಜಾಲವೊಂದನ್ನ ಪೊಲೀಸರು ಪತ್ತೆಹಚ್ಚಿ  ಜೈಲಿಗೆ ಕಳುಹಿಸಿದ್ದರು. ಆ ಪ್ರಕರಣ ಆಗಿ ಕೆಲವೇ ದಿನಕ್ಕೆ ಸ್ವಂತ ಚಿಕ್ಕಮಳೆ ತನ್ನ ಸಾಲ ತೀರಿಸಲಾಗದೇ ಮನೆಗೆ ಬಂದಿದ್ದ 11 ವರ್ಷದ ಅಕ್ಕನ ಮಗಳನ್ನು ಮಾರಾಟ

ಬೆಂಗಳೂರು, ಜುಲೈ 12: ವಾಲ್ಮೀಕಿ ನಿಗಮ ಹಗರಣದಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಬಿ ನಾಗೇಂದ್ರರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದರ ಬೆನ್ನಲ್ಲೇ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ವಾಲ್ಮೀಕಿ ನಿಗಮದ ಹಗರಣ ಪ್ರಕರಣ, ಕೇಂದ್ರ ವರ್ಸಸ್​ ರಾಜ್ಯ ಸರ್ಕಾರವಾಗಿ ಬದಲಾಗಿದೆಯಾ ಎಂಬ ಅನುಮಾನ ಮೂಡಿದೆ.

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಅಕ್ರಮವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಸೈಟ್ ನೀಡಲಾಗಿದೆ ಎಂದು ಆರೋಪಿಸಿ ಮೈಸೂರಿಗೆ ತೆರಳಿ ಪ್ರತಿಭಟನೆ ನಡೆಸಲು ಮುಂದಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ಮಾರ್ಗ ಮಧ್ಯದಲ್ಲಿಯೇ ವಶಕ್ಕೆ ಪಡೆದರು. ಮುಖ್ಯಮಂತ್ರಿ ತವರು ಜಿಲ್ಲೆ ಮೈಸೂರಿನಲ್ಲಿ ಬಿಜೆಪಿ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಬಹುಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಭರ್ಜರಿ ಭೇಟಿಯಾಡಿದೆ. ಹಗರಣದಲ್ಲಿ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಖಾತೆಗೆ ಇತ್ತೀಚಿಗೆ ರಾಜೀನಾಮೆ ನೀಡಿದ್ದ ಮಾಜಿ ಬಿ. ನಾಗೇಂದ್ರ ಅವರನ್ನು ಬೆಳಂಬೆಳಿಗ್ಗೆ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮೈಸೂರು : ಆಷಾಢ ಮಾಸದ ಮೊದಲ ಶುಕ್ರವಾರದ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಾವಿರಾರು ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ. ಮುಂಜಾನೆಯಿಂದಲೇ ಬೆಟ್ಟದ ಪಾದದಿಂದ ಸಾವಿರ ಮೆಟ್ಟಿಲು ಹತ್ತಿದ ಭಕ್ತರು, ದಾರಿಯುದ್ದಕ್ಕೂ ಜಯಘೋಷ ಮೊಳಗಿಸಿದರು. ಮೆಟ್ಟಿಲುಗಳಿಗೆ ಅರಿಶಿನ- ಕುಂಕುಮ ಹಚ್ಚಿ ಹರಕೆ ತೀರಿಸುತ್ತಿದ್ದಾರೆ. ಆಷಾಢ ಮಾಸದಲ್ಲಿ ಶಕ್ತಿ ದೇವತೆಗೆ ವಿಶೇಷ

ಬೆಂಗಳೂರು, ಜು.11: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮ ದಲ್ಲಿ ಆಗಿರುವ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಎಸ್​ಐಟಿ(SIT) ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಅದರಂತೆ ದಿನಕ್ಕೊಂದು ವಿಚಾರಗಳು ಬೆಳಕಿಗೆ ಬರುತ್ತಲಿದೆ. ಇದೀಗ ಆರೋಪಿಗಳ‌ ಮತ್ತೊಂದು ಕಹಾನಿ ಬಯಲಾಗಿದ್ದು, ಹೈದರಾಬಾದ್ ಫಸ್ಟ್ ಬ್ಯಾಂಕ್​ನಲ್ಲಿ ತೆರೆದಿದ್ದ 18 ನಕಲಿ ಖಾತೆಗಳಿಗೂ ಬೆಂಗಳೂರಿನ ಕನೆಕ್ಷನ್ ಇರುವುದು ತಿಳಿದು