ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಬೆಳಗಾವಿ, ಡಿಸೆಂಬರ್ 10: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು 2023-24ನೇ ಸಾಲಿನಲ್ಲಿ ನಿಯಮಾವಳಿ ಉಲ್ಲಂಘನೆ, ಮಾದಕ ದ್ರವ್ಯಗಳ ಅಕ್ರಮ ಮಾರಾಟ ಮತ್ತು ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿರುವ 292 ಫಾರ್ಮಸಿಗಳ ಪರವಾನಗಿಯನ್ನು ಹಿಂಪಡೆದಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಇಲಾಖೆ ಅಧಿಕಾರಿಗಳು ನಡೆಸಿದ ತಪಾಸಣೆ ವೇಳೆ, ಅಕ್ರಮ ಎಸಗಿರುವುದು

ಬೆಂಗಳೂರು:ಡಿ.06.ದೇಶದಲ್ಲಿ ಬಸವಣ್ಣ, ಬುದ್ಧನ ನಂತರ ಸಮಾನತೆಗಾಗಿ ಹೋರಾಡಿದವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿಧಾನಸೌಧ ದ ಮುಂಭಾಗ ಇರುವ ಸಂವಿಧಾನಶಿಲ್ಪಿ ಭಾರತ ರತ್ನ ಮಹಾ ಮಾನವತಾವಾದಿ ಬಾಬಾ ಸಾಹೇಬ್ ಡಾ . ಬಿ ಆರ್

ಬೆಂಗಳೂರು: ಮೂರು ಪ್ರತ್ಯೇಕ ಘಟನೆಗಳಲ್ಲಿ ಬ್ಯಾಂಕಾಂಕ್ ನಿಂದ ಪ್ರಯಾಣಿಸುತ್ತಿದ್ದವರಿಂದ ಕಸ್ಟಮ್ಸ್ ಅಧಿಕಾರಿಗಳು ಸುಮಾರು 1.25 ಕೋಟಿ ಮೌಲ್ಯದ ಸುಮಾರು 12.5 ಕೆಜಿ ಗಾಂಜಾವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ. 24 ಗಂಟೆಗಳ ಅವಧಿಯಲ್ಲಿ ಇಂತಹ ಘಟನೆ ನಡೆದಿರುವುದು ಇದೇ ಮೊದಲು ಎಂದು ಮೂಲಗಳು ತಿಳಿಸಿವೆ. ಕಳೆದ ನವೆಂಬರ್ 30ರಿಂದ ಡಿಸೆಂಬರ್

ಬೆಂಗಳೂರು, ಡಿಸೆಂಬರ್​ 04: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉರುಳಾಗಿ ಪರಿಣಮಿಸಿರುವ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣ ಮಹತ್ವದ ತಿರುವು ಪಡೆದುಕೊಂಡಿದೆ. ಮುಡಾದ 14 ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿಎಂ ಪಾರ್ವತಿ ಅವರಿಗೆ ಹಸ್ತಾಂತರಿಸಿರುವ ಹಿಂದೆ ಹಲವಾರು ಅವ್ಯವಹಾರಗಳು ನಡೆದಿರುವುದಕ್ಕೆ ಹಲವು ಪುರಾವೆಗಳನ್ನು ಜಾರಿ ನಿರ್ದೇಶನಾಲಯED ಪತ್ತೆ ಮಾಡಿದೆ

ಬೆಂಗಳೂರು: ತಮಿಳುನಾಡಿನಲ್ಲಿ ಉಂಟಾಗಿರುವ ಫೆಂಗಲ್ ಚಂಡಮಾರುತದ ಪರಿಣಾಮದಿಂದ ಕರ್ನಾಟಕದಲ್ಲೂ ಮಳೆ ಆರ್ಭಟ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಕರ್ನಾಟಕದ 12 ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇದೇ ರೀತಿಯ ಮಳೆ ನಾಳೆ ಕೂಡ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯಲ್ಲಿ ಈಗಾಗಲೇ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.

ಮೈಸೂರು: ನಿರಂತರವಾಗಿ ಸುರಿದ ಮಳೆಗೆ ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತಗೊಂಡಿದ್ದು, ಮಂಗಳವಾರ ಬೆಳಿಗಿನ ಜಾವ ರಸ್ತೆಗೆ ಬಂಡೆಯೊಂದು ಉರುಳಿ ಬಿದ್ದಿದೆ. ಮುಂಜಾನೆಯಾದ್ದರಿಂದ ಯಾರಿಗೂತೊಂದರೆಯಾಗಿಲ್ಲ. ಸೋಮವಾರ ಇಡೀ ದಿನ ನಿರಂತರವಾಗಿ ಮಳೆ ಸುರಿದಿದೆ. ಇರಿಂದ ಸಣ್ಣ ಗುಡ್ಡ ಕುಸಿದು ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು: 2024 ರಲ್ಲಿ ರೈಲ್ವೆ ರಕ್ಷಣಾ ಪಡೆಯ ಮಕ್ಕಳ ಕಳ್ಳಸಾಗಣೆ ವಿರೋಧಿ ಘಟಕದಿಂದ 49 ಬಾಲಕಿಯರು ಸೇರಿದಂತೆ ಒಟ್ಟು 253 ಮಕ್ಕಳನ್ನು ಸಂಭಾವ್ಯ ಶೋಷಣೆಯಿಂದ ರಕ್ಷಿಸಲಾಗಿದೆ. ರೈಲಿನಲ್ಲಿ ಪ್ರಯಾಣಿಸುವ ದುರ್ಬಲ ಮಕ್ಕಳ ಸುರಕ್ಷತೆ ಖಾತ್ರಿ ನಿಟ್ಟಿನಲ್ಲಿ ಈ ವಿಶೇಷ ಪಡೆ, 'ನನ್ಹೆ ಫರಿಷ್ಟೆಯನ್ನು ('Nanhe Farishteh) ಮೇ 2018 ರಲ್ಲಿ

ಕನ್ನಡದ ನಟಿ ಶೋಭಿತಾ ಶಿವಣ್ಣ ಅವರು ಇತ್ತೀಚೆಗೆ ಹೈದರಾಬಾದ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವು ಅನೇಕರಿಗೆ ಶಾಕಿಂಗ್ ಎನಿಸಿದೆ. ಮದುವೆ ಆಗಿ ಇನ್ನೂ ಎರಡು ವರ್ಷ ತುಂಬಿತ್ತಷ್ಟೇ. ಆಗಲೇ ಜೀವನ ಕೊನೆ ಮಾಡಿಕೊಳ್ಳುವ ನಿರ್ಧಾರಕ್ಕೆ ಅವರು ಬಂದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಹೈದರಾಬಾದ್​ನ ಗಚ್ಚಿಬೌಲಿ ಪೊಲೀಸರು ತನಿಖೆ ನಡೆಸಿದ್ದಾರೆ.

ಹಾಸನ, ಡಿಸೆಂಬರ್​ 02: ಚಾಲಕನ ನಿಯಂತ್ರ ತಪ್ಪಿ ಜೀಪ್ ರಸ್ತೆ ಬದಿಗೆ ಬಿದ್ದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್​ ಅಧಿಕಾರಿ ಹರ್ಷವರ್ಧನ್ (26) ಚಿಕಿತ್ಸೆ ಫಲಕಾರಿಯಾಗದೆ ರವಿವಾರ (ಡಿಸೆಂಬರ್​ 01) ರಾತ್ರಿ 9.30ರ ವೇಳೆಗೆ ಮೃತಪಟ್ಟಿದ್ದಾರೆ. ಹಾಸನ ತಾಲೂಕಿನ ಕಿತ್ತಾನೆಗಡಿ ಗ್ರಾಮದ ಬಳಿ ಜೀಪ್‌ ಪಲ್ಟಿಯಾಗಿತ್ತು. ಕರ್ತವ್ಯಕ್ಕೆ

ಬೆಂಗಳೂರು: ಬಿಜೆಪಿ ಶಾಸಕ, ಮಾಜಿ ಸಚಿವ ಮುನಿರತ್ನಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಬ್ಲ್ಯಾಕ್‌ಮೇಲ್ ಪ್ರಕರಣ ಸಂಬಂಧ ಅವರ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಅಶ್ಲೀಲ ವಿಡಿಯೋ ಸೃಷ್ಟಿಸಿ ಲಗ್ಗೆರೆ ವಾರ್ಡ್ ಮಾಜಿ ಕಾರ್ಪೋರೇಟರ್‌ವೊಬ್ಬರ ಪತಿಗೆ ಬ್ಲ್ಯಾಕ್‌ಮೇಲ್ ಮಾಡಲು ಯತ್ನಿಸಿದ ಆರೋಪದ ಮೇರೆಗೆ ಶಾಸಕ ಮುನಿರತ್ನ ವಿರುದ್ಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ