Israel Iran war: ಭಾರತಕ್ಕೆ ಬಿಗ್ ಶಾಕ್, ಕತಾರ್ ನಿಂದ ಕೈಗಾರಿಕೆಗಳಿಗೆ ಅನಿಲ ಸರಬರಾಜು ಕಡಿತ!...ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಅವರನ್ನು ನಿರ್ಮೂಲನೆ ಮಾಡುತ್ತೇವೆ: ಇಸ್ರೇಲ್ ಬೆದರಿಕೆ...

ಬೆಂಗಳೂರು: ಉದ್ಯಮಿಯೊಬ್ಬರನ್ನು ಅಪಹರಿಸಿ ಹಣ ಸುಲಿಗೆ ಮಾಡಿದ್ದ ಪ್ರಕರಣದ ಆರೋಪಿಯ ಬಂಧನಕ್ಕೆ ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದಡಿ ಮಾಜಿ ರೌಡಿಶೀಟರ್ ಯಶಸ್ವಿನಿ ಗೌಡಳನ್ನು ಸಿಸಿಬಿಯ ಸಂಘಟಿತ ಅಪರಾಧ ನಿಯಂತ್ರಣ ದಳದ ಪೊಲೀಸರು ಬಂಧಿಸಿದ್ದಾರೆ. ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಮೋದಿ ಆಸ್ಪತ್ರೆ ರಸ್ತೆಯಲ್ಲಿ ಸೆ.26ರಂದು ಸಂಜೆ 6.30ರ ಸುಮಾರಿಗೆ

ಬೆಂಗಳೂರು: ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದಲ್ಲಿ ಬೇಲೆಕೇರಿ ಬಂದರಿನಿಂದ ಕಬ್ಬಿಣದ ಅದಿರನ್ನು ಅಕ್ರಮವಾಗಿ ಸಾಗಿಸಿದ ಆರೋಪ ಸಾಬೀತಾದ ನಂತರ, ತಂದೆ ಮತ್ತು ಮಗನಿಗೆ ಮೂರು ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 52.30 ಲಕ್ಷ ರೂ. ಮತ್ತು 25,000 ರೂ. ದಂಡ ವಿಧಿಸಲಾಗಿದೆ. ವಿಶೇಷ ನ್ಯಾಯಾಲಯದ ನ್ಯಾಯಾಧೀಶ

ಬೆಂಗಳೂರು: ಸಾವಿರಾರು ಕೋಟಿ ಆಸ್ತಿಯ ಒಡೆಯ, ಕಾನ್‌ಫಿಡೆಂಟ್ ಗ್ರೂಪ್‌ನ ಸಂಸ್ಥಾಪಕ ಸಿ.ಜೆ. ರಾಯ್ ಲಾಂಗ್‌ಫೋರ್ಡ್ ಟೌನ್‌ನಲ್ಲಿರುವ ತಮ್ಮ ಕಚೇರಿಯಲ್ಲಿ ಶುಕ್ರವಾರ ಸಾವನ್ನಪ್ಪಿದ್ದು, ಈ ನಡುವೆ ಸಾವಿನ ಹಿಂದಿನ ಕಾರಣ ಕುರಿತು ಹಲವು ಅನುಮಾನಗಳು ಮೂಡತೊಡಗಿವೆ. ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಸಂಬಂಧ ಕಾನ್ಫಿಡೆಂಟ್‌ ಗ್ರೂಪ್‌ನ ವ್ಯವಸ್ಥಾಪಕ ನಿರ್ದೇಶಕ ಟಿಎ ಜೋಸೆಫ್‌

ಬೆಂಗಳೂರು: ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ನಮ್ಮ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಾರ್ಷಿಕೋತ್ಸವಕ್ಕೆ ರಜೆ ಘೋಷಿಸಿದೆ. ಕರ್ನಾಟಕ ಪೊಲೀಸ್ ಸಿಬ್ಬಂದಿಯ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ನೀಡುವಂತೆ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಆದೇಶ ಹೊರಡಿಸಿದ್ದಾರೆ. ಅದರಂತೆ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ನಿಯಮ ಉಲ್ಲಂಘಿಸಿ ತಮ್ಮ ಸ್ನೇಹಿತನಾದ ಪೊಲೀಸ್‌ ಕಾನ್‌ಸ್ಟೇಬಲ್‌ಗೆ ನಟ ದರ್ಶನ್ ಅವರನ್ನು ಭೇಟಿ ಮಾಡಿಸಿದ ಹಿನ್ನೆಲೆಯಲ್ಲಿ ಕಾರಾಗೃಹದ ವಾರ್ಡನ್‌ವೊಬ್ಬರು ವರ್ಗಾವಣೆಗೊಂಡಿದ್ದಾರೆ. ವಾರ್ಡನ್ ಪ್ರಭು ಚೌವ್ಹಾಣ್ ಎತ್ತಂಗಡಿ ಆಗಿದ್ದು, ಇತ್ತೀಚೆಗೆ ಸ್ನೇಹಿತನ ಕೋರಿಕೆ ಮೇರೆಗೆ ಆತನಿಗೆ ದರ್ಶನ್‌ರನ್ನು ಭೇಟಿ ಮಾಡಿಸಿದ್ದರು. ಇದರ ಬೆನ್ನಲ್ಲೇ ಕಾರಾಗೃಹಗಳ ಮಹಾನಿರ್ದೇಶಕ (ಡಿಜಿಪಿ)

ಸ್ಯಾಂಡಲ್ ವುಡ್ ನಟ ಮಯೂರ್ ಪಟೇಲ್ ಬೇಡದ ವಿಷಯಕ್ಕೆ ಸುದ್ದಿಯಾಗಿದ್ದಾರೆ. ಪಾನಮತ್ತರಾಗಿ ಕಾರು ಚಲಾಯಿಸಿ ಸರಣಿ ಅಪಘಾತ ಮಾಡಿದ ಘಟನೆ ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ನಡೆದಿದೆ. ಅಜಾಗರೂಕ ಚಾಲನೆಯಿಂದ ಬೆಂಗಳೂರಲ್ಲಿ ತಡರಾತ್ರಿ ಸರಣಿ ಅಪಘಾತ ನಡೆದಿದೆ. ಕಂಠಪೂರ್ತಿ ಕುಡಿದು ತಮ್ಮ ಟೊಯೊಟಾ ಫಾರ್ಚೂನರ್ ಕಾರನ್ನು ವೇಗವಾಗಿ ಓಡಿಸಿದ್ದಾರೆ ಮಯೂರ್ ಪಟೇಲ್.

ಬೆಂಗಳೂರು: ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರ ಫೋನ್ ಕರೆಗಳನ್ನು ರಾಜ್ಯ ಸರ್ಕಾರ ಕದ್ದಾಲಿಸುತ್ತಿದೆ ಎಂಬ ವಿರೋಧ ಪಕ್ಷದ ಬಿಜೆಪಿ ಆರೋಪವನ್ನು ಗೃಹ ಸಚಿವ ಜಿ ಪರಮೇಶ್ವರ ಗುರುವಾರ ನಿರಾಕರಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೋನ್ ಟ್ಯಾಪಿಂಗ್ ಮಾಡುವ ಅಗತ್ಯವಿಲ್ಲ ಎಂದರು. ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯಪಾಲರ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂಬ

ಬೆಂಗಳೂರು: ರಾಜ್ಯದ ಆರು ಸಾವಿರ ಗ್ರಾಮ ಪಂಚಾಯತಿಗಳಿಗೆ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹೆಸರು ಇಡಲು ತೀರ್ಮಾನ ಮಾಡಲಾಗಿದೆ. ಈ ಕುರಿತಾಗಿ ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆದ ರಾಜಭವನ ಚಲೋದಲ್ಲಿ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. ಪ್ರತಿಭಟನೆ ಯಲ್ಲಿ ಮಾತನಾಡಿದ ಸಿದ್ದರಾಮಯ್ಯ, "ಪ್ರತಿ ಗ್ರಾಮ ಪಂಚಾಯತಿಗೆ ಮಹಾತ್ಮಾ ಗಾಂಧಿ ಹೆಸರು.

ಉಡುಪಿ : ಐಲ್ಯಾಂಡ್ ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ ಕರಾವಳಿ ಭಾಗಕ್ಕಷ್ಟೇ ಅಲ್ಲದೆ, ರಾಜ್ಯದ ಮತ್ತು ದೇಶದ ಭವಿಷ್ಯಕ್ಕೆ ಹೊಸ ಬಾಗಿಲು ತೆರೆಯುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಸೇಂಟ್ ಮೇರೀಸ್ ಐಲ್ಯಾಂಡ್

ಉಡುಪಿ: ಕೋಡಿಬೇಂಗ್ರೆಯ ಡೆಲ್ಟಾ ಬೀಚ್ ಬಳಿ ಸೋಮವಾರ ಬೆಳಿಗ್ಗೆ ಪ್ರವಾಸಿ ದೋಣಿಯೊಂದು ಸಮುದ್ರ ಮಧ್ಯೆ ಮುಳುಗಡೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರವಾಗಿ ಅಸ್ವಸ್ಥಗೊಂಡ ನಾಲ್ವರ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಇನ್ನೋರ್ವ ಸ್ಥಿರವಾಗಿದ್ದಾನೆ. ಮೈಸೂರು ಮೂಲದ ಶಂಕರಪ್ಪ (22) ಮತ್ತು ಸಿಂಧು (23) ಮೃತ ದುರ್ದೈವಿಗಳು.