ಚಿಕ್ಕಮಗಳೂರು, ನವೆಂಬರ್ 30: ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದಲ್ಲಿರುವ ಶ್ರೀಗುರುದತ್ತಾತ್ರೇಯ ಬಾಬಾಬುಡನ್ಸ್ವಾಮಿ ದರ್ಗಾ ಇನಾಂ ದತ್ತಪೀಠ ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ ಭಜರಂಗದಳ ಮತ್ತು ವಿಹೆಚ್ಪಿ ನೇತೃತ್ವದಲ್ಲಿ 25ನೇ ವರ್ಷದ ದತ್ತಜಯಂತಿ ಆಚರಣೆಗೆ ಚಾಲನೆ ದೊರೆತಿದೆ. ಚಿಕ್ಕಮಗಳೂರು ನಗರ, ಪಟ್ಟಣಗಳಲ್ಲಿ ಕೇಸರಿ ಭಾವುಟ ಮತ್ತು ಬಂಟಿಂಗ್ಸ್ ಕಟ್ಟಿ ಅಲಂಕಾರ
ಬಳ್ಳಾರಿ, ನವೆಂಬರ್ 30: ಬಳ್ಳಾರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ನಾಲ್ವರು ಬಾಣಂತಿಯರು ಮೃತಪಟ್ಟಿದ್ದಾರೆ. ನಾಲ್ವರಲ್ಲಿ ಬಳ್ಳಾರಿ ತಾಲೂಕಿನ ಬಾಣಾಪುರ ಗ್ರಾಮದ ನಂದಿನಿ ಎಂಬುವರು ನವೆಂಬರ್ 09 ರಂದು ಹೆರಿಗೆಗೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ನವೆಂಬರ್ 12 ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆದರೆ, ಅಂದು ಮಧ್ಯರಾತ್ರಿ ಮೃತಪಟ್ಟಿದ್ದು, ದುರ್ದೈವದ
ಚಿಕ್ಕಮಗಳೂರು, ನವೆಂಬರ್ 30: ಪಶ್ಚಿಮಘಟ್ಟ ಪ್ರದೇಶಗಳಲ್ಲಿ ನಕ್ಸಲ್ (Naxal) ಚಟುವಟಿಕೆ ಕಂಡು ಬಂದ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ಪಡೆಯಿಂದ (ANF) ಕೂಂಬಿಂಗ್ ಮುಂದುವರೆದಿದೆ. ಕರ್ನಾಟಕದ ಐವರು ನಕ್ಸಲರು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಸುತ್ತಿನಗುಡ್ಡ, ಕಿಗ್ಗಾ, ಕೆರೆಕಟ್ಟೆ ಅರಣ್ಯದಲ್ಲಿ ಓಡಾಡಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ, ಹುಡಕಾಟ ನಡೆದಿದೆ. ಉಡುಪಿ, ಚಿಕ್ಕಮಗಳೂರು,
ಮೈಸೂರು, ನವೆಂಬರ್ 30: ಪಕ್ಷದ ವಿರುದ್ಧ ಸದಾ ಹೇಳಿಕೆಗಳನ್ನು ನೀಡುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬಣದ ಆಕ್ರೋಶ ತೀವ್ರಗೊಂಡಿದೆ. ಯತ್ನಾಳ್ರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಬಿಸಾಕಿ, ಅವರದ್ದು ಮುಖವಾಡದ ಹಿಂದುತ್ವ ಎಂದು ಮೈಸೂರಿನಲ್ಲಿ ಪಕ್ಷದ ಕಾರ್ಯಕರ್ತರು, ವಿಜಯೇಂದ್ರ ಬಣದ ನಾಯಕರು ಆಗ್ರಹಿಸಿದ್ದಾರೆ.
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ವೈಷಮ್ಯದ ಪೋಸ್ಟ್ ಹಾಕಿದ ಆರೋಪದಡಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ರವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಕುಂತಲಾ ನಟರಾಜ್ ವಿರುದ್ಧ ನವೆಂಬರ್ 24ರಂದು ಎಫ್.ಐ.ಆರ್ ದಾಖಲಾಗಿತ್ತು. ಈ ಹಿನ್ನೆಲೆ ತುಮಕೂರು ಜಯನಗರ ಪೊಲೀಸರು ಶಕುಂತಲಾರನ್ನು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಕೋಮು ವೈಷಮ್ಯದ ಪೋಸ್ಟ್
ಬೆಂಗಳೂರು, ನವೆಂಬರ್ 28: ಬೆಂಗಳೂರಿನಲ್ಲಿ ಉಗ್ರ ಕೃತ್ಯಗಳಿಗೆ ಸ್ಫೋಟಕ ಸಂಗ್ರಹಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರವಾಂಡದಲ್ಲಿ ತಲೆಮರೆಸಿಕೊಂಡಿದ್ದ ಲಷ್ಕರ್-ಎ-ತೊಯ್ಬಾದ ಸದಸ್ಯನಾಗಿದ್ದ ಸಲ್ಮಾನ್ ರೆಹಮಾನ್ ಖಾನ್ ಅನ್ನು ಬಂಧಿಸಿರುವುದಾಗಿ ಸಿಬಿಐ ಮಾಧ್ಯಮ ಪ್ರಕಟಣೆಯ ಮೂಲಕ ಮಾಹಿತಿ ನೀಡಿದೆ. ಜೊತೆಗೆ ಆತನನ್ನು ಭಾರತಕ್ಕೆ ಹಸ್ತಾಂತರ ಮಾಡಲಾಗಿದೆ. ಸಿಬಿಐನ ಜಾಗತಿಕ ಕಾರ್ಯಾಚರಣೆ ಘಟಕ ಮತ್ತು ಎನ್ಐಎ
ರಾಮನಗರ, ನವೆಂಬರ್ 28: ಮಾನವ ಕುಲವೇ ಬೆಚ್ಚಿಬೀಳುವಂಥ ಆಘಾತಕಾರಿ ಕೃತ್ಯವೊಂದು ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಆಗತಾನೆ ಜನಿಸಿರುವ ಶಿಶುವೊಂದನ್ನು ಶೌಚಾಲಯದ ಗುಂಡಿಗೆ ಹಾಕಿ ಫ್ಲಶ್ ಮಾಡಲಾಗಿದೆ. ಬುಧವಾರ ರಾತ್ರಿ ನಡೆದ ಈ ಅಮಾನವೀಯ ವಿದ್ಯಮಾನ ಇಂದು ಬೆಳಕಿಗೆ ಬಂದಿದ್ದು, ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾರೋಹಳ್ಳಿಯ ಆಸ್ಪತ್ರೆಯಲ್ಲಿ
ಶಿರಸಿ: ಡಿಸೆಂಬರ್ 2ರಿಂದ ಫೆಬ್ರವರಿ 25ರವರೆಗೆ ರಾಷ್ಟ್ರೀಯ ಹೆದ್ದಾರಿ 766E ಬಂದ್ ಆಗಲಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ-ಶಿರಸಿ ನಡುವಿನ NH 766E ಬಂದ್ ಆಗಲಿದೆ. ಈ ಮಾರ್ಗದಲ್ಲಿ ವಾಹನ ಸಂಚಾರವನ್ನು ನಿಷೇಧಿಸಿ ಎಸ್ಪಿ ಎಂ. ನಾರಾಯಣ ಪ್ರಕಟಣೆ ಹೊರಡಿಸಿದ್ದಾರೆ. ಹೀಗಾಗಿ, ಈ ಮಾರ್ಗದಲ್ಲಿ ಪ್ರಯಾಣಿಸುವ ಪ್ರಯಾಣಿಕರು ಬೇರೆ
ಕಲಬುರಗಿ: ಗುಲ್ಬುರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಮ್ಸ್) ನಲ್ಲಿ ಅಪಹರಣಗೊಂಡಿದ್ದ ನವ ಜಾತ ಶಿಶುವನ್ನು ರಕ್ಷಿಸುವಲ್ಲಿ ಕಲಬುರಗಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಮಗು ಅಪಹರಣ ಮಾಡಿದ್ದ ಮೂವರು ಮಹಿಳೆಯರನ್ನು ಬಂಧಿಸಿದ್ದು, ಕಂದಮ್ಮನನ್ನು ಸುರಕ್ಷಿತವಾಗಿ ಮತ್ತೆ ತಾಯಿ ಮಡಿಲಿಗೆ ಸೇರಿಸಿದ್ದಾರೆ. ಬಂಧಿತರಲ್ಲಿ ಇಬ್ಬರನ್ನು ನಸ್ರೀನ್ ಮತ್ತು ಫಾತೀಮಾ ಎಂದು ಗುರುತಿಸಲಾಗಿದೆ. ಸೋಮವಾರ ಮುಂಜಾನೆ
ಬೆಂಗಳೂರು: ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪೊಲೀಸ್ ಸಿಬ್ಬಂದಿಗೆ ಏಳು ವರ್ಷ ಜೈಲು ಶಿಕ್ಷೆ ಮತ್ತು ತಲಾ 55,000 ರೂಪಾಯಿ ದಂಡ ವಿಧಿಸಲಾಗಿದೆ. ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಂದ್ರ ರಾಥೋಡ್ ಎಂಬುವರನ್ನು 2016ರ ಮಾರ್ಚ್ 19ರಂದು ಬೆಂಗಳೂರಿನ ಜೀವನ್ ಭೀಮಾ ನಗರ ಠಾಣೆಗೆ ಕರೆತರಲಾಗಿತ್ತು. ಆದರೆ ಆತ ಪೊಲೀಸ್ ಠಾಣೆಯಲ್ಲೇ