ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಕಾರವಾರ, ಡಿಸೆಂಬರ್​ 11: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ  ತಾಲೂಕಿನ ಮುರುಡೇಶ್ವರದಲ್ಲಿ  ಶೈಕ್ಷಣಿಕ ಪ್ರವಾಸಕ್ಕೆಂದು ತೆರಳಿ ಸಮುದ್ರ ಪಾಲಾಗಿದ್ದ ವಿದ್ಯಾರ್ಥಿಗಳ ಮೃತದೇಹ ಪತ್ತೆಯಾಗಿವೆ. ಮಂಗಳವಾರ ಶಾವಂತಿ (15)ಯ ಮೃತದೇಹ ಪತ್ತೆಯಾಗಿತ್ತು. ಇಂದು (ಡಿಸೆಂಬರ್​ 11) ದೀಕ್ಷಾ (15), ಲಾವಣ್ಯ (15), ವಂದನಾ (15) ಮೃತ ದೇಹಗಳು ಪತ್ತೆಯಾಗಿವೆ. ನಾಲ್ವರೂ

ಬೆಳಗಾವಿ, (ಡಿಸೆಂಬರ್ 11): 2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯದ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಆದರೂ ಸಹ ಪ್ರತಿಭಟನೆಕಾರರು ಬ್ಯಾರಿಕೇಡ್​ಗಳನ್ನು ತಳ್ಳಿ ಸುವರ್ಣ ಸೌಧಕ್ಕೆ ನುಗ್ಗಲು ಯತ್ನಿಸಿದ್ದಾರೆ. ಇದರಿಂದ ಸುವರ್ಣಸೌಧ ಮುಂಭಾಗ ಭಾರೀ ಹೈಡ್ರಾಮಾ

ಬೆಂಗಳೂರು, ಡಿಸೆಂಬರ್​ 10: ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್​ 10) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್​​ಎಂ ಕೃಷ್ಣರನ್ನು ಮೊದಲು

ಬೆಂಗಳೂರು, ಡಿಸೆಂಬರ್ 10: ಭ್ರಷ್ಟ ಅಧಿಕಾರಿಗಳ ವಿರುದ್ಧದ ಕಾರ್ಯಾಚರಣೆ ಚುರುಕುಗೊಳಿಸಿರುವ ಲೋಕಾಯುಕ್ತ ಮಂಗಳವಾರ ಬೆಳಂಬೆಳಗ್ಗೆ ಬೆಂಗಳೂರು, ಕೊಪ್ಪಳ ಸೇರಿದಂತೆ ಕರ್ನಾಟಕ ಹಲವು ಜಿಲ್ಲೆಗಳಲ್ಲಿ ದಾಳಿ ನಡೆಸಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಗದಗ, ಕಲಬುರುಗಿ, ರಾಯಚೂರು, ಚಿತ್ರದುರ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ 5 ಕಡೆ ದಾಳಿ ನಡೆಸಿ ಮನೆಗಳಲ್ಲಿ

ಬೆಳಗಾವಿ, ಡಿಸೆಂಬರ್ 10: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು 2023-24ನೇ ಸಾಲಿನಲ್ಲಿ ನಿಯಮಾವಳಿ ಉಲ್ಲಂಘನೆ, ಮಾದಕ ದ್ರವ್ಯಗಳ ಅಕ್ರಮ ಮಾರಾಟ ಮತ್ತು ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿರುವ 292 ಫಾರ್ಮಸಿಗಳ ಪರವಾನಗಿಯನ್ನು ಹಿಂಪಡೆದಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಇಲಾಖೆ ಅಧಿಕಾರಿಗಳು ನಡೆಸಿದ ತಪಾಸಣೆ ವೇಳೆ, ಅಕ್ರಮ ಎಸಗಿರುವುದು

ಬೆಂಗಳೂರು:ಡಿ.06.ದೇಶದಲ್ಲಿ ಬಸವಣ್ಣ, ಬುದ್ಧನ ನಂತರ ಸಮಾನತೆಗಾಗಿ ಹೋರಾಡಿದವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿಧಾನಸೌಧ ದ ಮುಂಭಾಗ ಇರುವ ಸಂವಿಧಾನಶಿಲ್ಪಿ ಭಾರತ ರತ್ನ ಮಹಾ ಮಾನವತಾವಾದಿ ಬಾಬಾ ಸಾಹೇಬ್ ಡಾ . ಬಿ ಆರ್

ಬೆಂಗಳೂರು: ಮೂರು ಪ್ರತ್ಯೇಕ ಘಟನೆಗಳಲ್ಲಿ ಬ್ಯಾಂಕಾಂಕ್ ನಿಂದ ಪ್ರಯಾಣಿಸುತ್ತಿದ್ದವರಿಂದ ಕಸ್ಟಮ್ಸ್ ಅಧಿಕಾರಿಗಳು ಸುಮಾರು 1.25 ಕೋಟಿ ಮೌಲ್ಯದ ಸುಮಾರು 12.5 ಕೆಜಿ ಗಾಂಜಾವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ. 24 ಗಂಟೆಗಳ ಅವಧಿಯಲ್ಲಿ ಇಂತಹ ಘಟನೆ ನಡೆದಿರುವುದು ಇದೇ ಮೊದಲು ಎಂದು ಮೂಲಗಳು ತಿಳಿಸಿವೆ. ಕಳೆದ ನವೆಂಬರ್ 30ರಿಂದ ಡಿಸೆಂಬರ್

ಬೆಂಗಳೂರು, ಡಿಸೆಂಬರ್​ 04: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉರುಳಾಗಿ ಪರಿಣಮಿಸಿರುವ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣ ಮಹತ್ವದ ತಿರುವು ಪಡೆದುಕೊಂಡಿದೆ. ಮುಡಾದ 14 ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿಎಂ ಪಾರ್ವತಿ ಅವರಿಗೆ ಹಸ್ತಾಂತರಿಸಿರುವ ಹಿಂದೆ ಹಲವಾರು ಅವ್ಯವಹಾರಗಳು ನಡೆದಿರುವುದಕ್ಕೆ ಹಲವು ಪುರಾವೆಗಳನ್ನು ಜಾರಿ ನಿರ್ದೇಶನಾಲಯED ಪತ್ತೆ ಮಾಡಿದೆ

ಬೆಂಗಳೂರು: ತಮಿಳುನಾಡಿನಲ್ಲಿ ಉಂಟಾಗಿರುವ ಫೆಂಗಲ್ ಚಂಡಮಾರುತದ ಪರಿಣಾಮದಿಂದ ಕರ್ನಾಟಕದಲ್ಲೂ ಮಳೆ ಆರ್ಭಟ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಕರ್ನಾಟಕದ 12 ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇದೇ ರೀತಿಯ ಮಳೆ ನಾಳೆ ಕೂಡ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯಲ್ಲಿ ಈಗಾಗಲೇ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.

ಮೈಸೂರು: ನಿರಂತರವಾಗಿ ಸುರಿದ ಮಳೆಗೆ ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತಗೊಂಡಿದ್ದು, ಮಂಗಳವಾರ ಬೆಳಿಗಿನ ಜಾವ ರಸ್ತೆಗೆ ಬಂಡೆಯೊಂದು ಉರುಳಿ ಬಿದ್ದಿದೆ. ಮುಂಜಾನೆಯಾದ್ದರಿಂದ ಯಾರಿಗೂತೊಂದರೆಯಾಗಿಲ್ಲ. ಸೋಮವಾರ ಇಡೀ ದಿನ ನಿರಂತರವಾಗಿ ಮಳೆ ಸುರಿದಿದೆ. ಇರಿಂದ ಸಣ್ಣ ಗುಡ್ಡ ಕುಸಿದು ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.