ಗದಗ: ಗದಗ- ಬೆಟಗೇರಿ ನಗರಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ದಾಸರ ಓಣಿಯಲ್ಲಿ ನಡೆದಿದೆ. ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಆತನ ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಗೀಡಾದವರು.
ಮಂಡ್ಯ: ಕೇಂದ್ರ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಎಲ್ಲಾ ರೈತರ ಸಾಲ ಮನ್ನಾ ಮಾಡುತ್ತೇವೆ ಮತ್ತು ರಾಜ್ಯದಲ್ಲಿ ಬಡ ಮಹಿಳೆಯರಿಗೆ ಈಗಾಗಲೇ ನೀಡುತ್ತಿರುವ 24 ಸಾವಿರಕ್ಕೆ 1 ಲಕ್ಷ ರೂ. ಸೇರಿಸಿ 1 ಲಕ್ಷದ 20 ಸಾವಿರ ರೂಪಾಯಿ ನೀಡುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ
ಬೆಂಗಳೂರು, ಏಪ್ರಿಲ್ 15: ಮಹಿಳೆಯರ ಘನತೆ ಮತ್ತು ಚಾರಿತ್ರ್ಯಕ್ಕೆ ಧಕ್ಕೆ ತಂದ ಆರೋಪದಡಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಉಸ್ತುವಾರಿ ಸಂಜಯ್ ಪಾಟೀಲ್ ಅವರಿಗೆ ಮಹಿಳಾ ಆಯೋಗ ನೋಟಿಸ್ ನೀಡಿದೆ. ಇಬ್ಬರೂ ನಾಯಕರು ಖುದ್ದು
ಮೈಸೂರು: ನನ್ನ ಪೂರ್ವಜರಂತೆ ನಾನು ಕೂಡ ಜನರಿಗಾಗಿ ಶ್ರಮಸುತ್ತೇನೆಂದು ಮೈಸೂರು ಕ್ಷೇತ್ರದ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಭಾನುವಾರ ಹೇಳಿದರು. ಮಹಾರಾಜ ಮೈದಾನದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಭಾನುವಾರ ಆಯೋಜಿಸಿದ್ದ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿಗೆ ಜನರ ಮಧ್ಯೆ ಇದ್ದು ಗೊತ್ತಿಲ್ಲ
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರವನ್ನು ನಡೆಸುತ್ತಿದ್ದು, ಇದರಂತೆ ನಗರದ ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಸಭೆಯಲ್ಲಿ ಗದ್ದಲವುಂಟಾದ ಪರಿಣಾಮ ಸಿಟ್ಟಿಗೆದ್ದ ಸಂಸದ ತೇಜಸ್ವಿ ಸೂರ್ಯ ಅವರು ಹೊರಗೆ ನಡೆದಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. ಲೋಕಸಭಾ ಚುನಾವಣಾ ಹಿನ್ನೆಲೆ ಏಪ್ರಿಲ್ 13ರಂದು
ಬೆಂಗಳೂರು: ಮನೆಯಿಂದ ಮತದಾನ (ವಿಎಫ್ಹೆಚ್) ಹಂತ-2ರ ಅಡಿಯಲ್ಲಿ ಶನಿವಾರದಿಂದ ಮತದಾನ ಪ್ರಾರಂಭವಾಗಿದ್ದು, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ 85 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ಅಂಗವಿಕಲರಲ್ಲಿ 4,459 ಮಂದಿ ಮನೆಯಿಂದಲೇ ಮತ ಚಲಾಯಿಸಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ ಮಾಹಿತಿ
ಕೊಡಗು: ಇಲ್ಲಿನ ಶ್ರೀಮಂಗಲ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಸೋಮವಾರ ಕಾಡಾನೆ ದಾಳಿಗೆ 50 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊನ್ನಂಪೇಟೆ ತಾಲ್ಲೂಕಿನ ಬೀರುಗ ಎಂಬಲ್ಲಿ ಬೆಳಗ್ಗೆ 6.30ರ ಸುಮಾರಿಗೆ ಈ ಘಟನೆ ಸಂಭವಿಸಿದೆ. 'ಮಡಿಕೇರಿ ವನ್ಯಜೀವಿ ವಿಭಾಗದ ಶ್ರೀಮಂಗಲ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಆನೆ ದಾಳಿಯಿಂದ ವ್ಯಕ್ತಿಯೊಬ್ಬರು ಸಾವಿಗೀಡಾಗಿರುವ ಬಗ್ಗೆ
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಬೆಳಗಾವಿಯಲ್ಲಿ ಭಾನುವಾರ ಪ್ರತಿಭಟನೆ ನಡೆಸಿದ್ದು, ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ. ಬೆಳಗಾವಿಯ ಆದರ್ಶ ನಗರದಲ್ಲಿರುವ ಸಂಜಯ್ ಪಾಟೀಲ್ ನಿವಾಸದ ಎದುರು ಕೆಪಿಸಿಸಿ ಸದಸ್ಯೆ ಆಯಿಷಾ ಸನದಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಬೆಂಗಳೂರು: ಗ್ಯಾರೆಂಟಿ ಯೋಜನೆಯಿಂದ ಹಳ್ಳಿ ಹೆಣ್ಣುಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಪ್ರಚಾರ ಸಭೆಯಲ್ಲಿ ಹೇಳಿದ್ದರು. ಇದು ವಿವಾದಕ್ಕೆ ಕಾರಣವಾಗಿದ್ದು, ಪ್ರತಿ ಪಕ್ಷಗಳಿಗೆ ಅಸ್ತ್ರವಾಗಿ ಪರಿಣಮಿಸಿದೆ. ಹೆಚ್ಡಿ ಕುಮಾರಸ್ವಾಮಿ ಅವರ ಈ ಹೇಳಿಕೆಯಿಂದ ಎನ್ಡಿಎ ಮೈತ್ರಿಕೂಟಕ್ಕೆ ಹೊಡೆತ ಬೀಳುವ ಸಾಧ್ಯತೆ ಹಿನ್ನೆಲೆಯಲ್ಲಿ ಡ್ಯಾಮೇಜ್ ಕಂಟ್ರೋಲ್ಗೆ
ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ನ್ಯಾಯಾಧೀಶರು 10 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳ ವಶಕ್ಕೆ ನೀಡಿ ಆದೇಶಿಸಿದ್ದಾರೆ. ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಗೊಳಿಸಿ ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ