ಬೆಂಗಳೂರು:ಜುಲೈ, 25: ಅತ್ಯಾಚಾರ ಪ್ರಕರಣದಲ್ಲಿ ಜೀವಿತಾವಧಿ ಶಿಕ್ಷೆಗೆ ಗುರಿಯಾಗಿ ಪ್ರಜ್ವಲ್ ರೇವಣ್ಣ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇನ್ನೊಂದೆಡೆ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ ಫೋಟೋ ಹಾಗೂ ವಿಡಿಯೋಗಳನ್ನು ಪೆನ್ ಡ್ರೈವ್ ಮೂಲಕ ಹಂಚಿದವರಿಗೂ ಸಂಕಷ್ಟ ಎದುರಾಗಿದೆ. 8 ಆರೋಪಿಗಳಿಗೆ ಸಮನ್ಸ್ ಜಾರಿಗೆ ಬೆಂಗಳೂರಿನ 42ನೇ ಎಸಿಜೆಎಂ
ಬೆಂಗಳೂರು: ವಯೋಸಹಜ ಅನಾರೋಗ್ಯವಿದ್ದು ತಮ್ಮ ಪುತ್ರಿಯರಿಗೆ ತಾವು ಹೊರೆಯಾಗುತ್ತಿದ್ದೇವೆ ಎಂಬ ಆತಂಕದಿಂದ ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬಸವೇಶ್ವರನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುನಾಥನಗರದ ಬಾಡಿಗೆ ಮನೆಯಲ್ಲಿ ನಡೆದಿದೆ. ಮೃತರನ್ನು ಈಶ್ವರಾಚಾರ್ (73ವ) ಹಾಗೂ ಅವರ ಪತ್ನಿ ಗೌರಿ (66ವ) ಎಂದು ಗುರುತಿಸಲಾಗಿದೆ. ನಿನ್ನೆ ಗುರುವಾರ ಬೆಳಗ್ಗೆ ಮಕ್ಕಳು
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ Locanto ಆ್ಯಪ್ ಮೂಲಕ ಹುಡುಗಿಯನ್ನು ಭೇಟಿ ಮಾಡಿಸುವ ಆಸೆ ತೋರಿಸಿ ವ್ಯಕ್ತಿಯೊಬ್ಬರನ್ನು ಅಪಹರಿಸಿ, ಸುಲಿಗೆ ಮಾಡಿದ ಆರೋಪದ ಮೇಲೆ 11 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಚೇತನ್ ಮನು, ಶಾಬು, ಮಂಜುನಾಥ, ಜಯಕುಮಾರ್, ಅರುಣ ಕೀರ್ತಿ, ಕಾಂತ ರಾಜು, ಸಂದೀಪ್ ಎಂದು ಗುರುತಿಸಲಾಗಿದೆ. ಇನ್ನು
ಬೆಂಗಳೂರು, ಜುಲೈ 16: ಅಣ್ಣನ ಜೊತೆ ಮದುವೆ ಆಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತಕ್ಕೆ ಒಳಗಾಗಿದ್ದ ಯುವತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಅಮೃತಾ ಮೃತ ದುರ್ದೈವಿಯಾಗಿದ್ದು, ಈಕೆಗೆ ಜು.13ರಂದು ಬೆಂಗಳೂರಿನ HAL ರಸ್ತೆಯ ಕೋಡಿಹಳ್ಳಿಯಲ್ಲಿ ಸೂರ್ಯ ಎಂಬಾತ ಚಾಕು ಇರಿದಿದ್ದ. ಈ ವೇಳೆ ಗಂಭೀರ ಗಾಯಗೊಂಡಿದ್ದ
ಶಿವಮೊಗ್ಗದ ಕಲ್ಲೂರು ಮಂಡ್ಲಿಯಲ್ಲಿರುವ ಪೇಪರ್ ಪ್ಯಾಕೇಜಿಂಗ್ ಕಾರ್ಖಾನೆಯ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಏಕಾಏಕಿ ಹೊತ್ತಿಕೊಂಡ ಬೆಂಕಿಯ ಕೆನ್ನಾಲಿಗೆಗೆ ಫ್ಯಾಕ್ಟರಿಯಲ್ಲಿದ್ದ ಪೇಪರ್ ರೋಲ್‌ಗಳು ಉರಿದಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಸಾಮಗ್ರಿಗಳು ಬೆಂಕಿಗಾಹುತಿಯಾಗಿವೆ. ಕಾರ್ಖಾನೆಯಾದ್ಯಂತ ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದೆ. ಬೆಂಕಿಯ ತೀವ್ರತೆ ಅರಿತ ತಕ್ಷಣವೇ ಫ್ಯಾಕ್ಟರಿಯಲ್ಲಿದ್ದ ಸಿಬ್ಬಂದಿ ಹೊರಗೆ ಓಡಿಬಂದಿದ್ದರಿಂದ,
ರಾಯಚೂರು: ಬೀದಿ ನಾಯಿಗಳ ಹಿಂಡು ದಾಳಿ ನಡೆಸಿದ ಪರಿಣಾಮ 18 ತಿಂಗಳ ಮಗು ಸಾವನ್ನಪ್ಪಿರುವ ದಾರುಣ ಘಟನೆ ಸಿಂಧನೂರು ತಾಲೂಕಿನಲ್ಲಿ ನಡೆದಿದೆ. ಅಬ್ದುಲ್ ರಜಾಕ್ ಮತ್ತು ನದಾಫ್ ದಂಪತಿಯ ಪುತ್ರಿ 18 ತಿಂಗಳ ಅನಂ ಬಲಿಯಾದ ಪುಟ್ಟ ಬಾಲಕಿ ಬಲಿಯಾಗಿರುವ ಘಟನೆ ಸಿಂಧನೂರು ತಾಲೂಕಿನ ಕೆ.ಹಂಚಿಕಾಳ ಕ್ಯಾಂಪಿನಲ್ಲಿ ನಡೆದಿದೆ. ಮನೆ ಮುಂದೆ
ಬಿಡದಿ ಟೌನ್ಶಿಪ್ ನ್ನು ವಿರೋಧಿಸುತ್ತಿರುವ ಸ್ಥಳೀಯ ರೈತರ ಆಕ್ರೋಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜಮೀನು ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ನಿರ್ಧಾರಕ್ಕೆ ರೈತರು ಕೆರಳಿದ್ದು, ವಿರೋಧದ ನಡುವೆಯೂ ಬಿಡದಿ ತಾಲೂಕಿನ ಮಂಡಲಹಳ್ಳಿ ಗ್ರಾಮದಲ್ಲಿ ಜೆಎಂಸಿ ಸರ್ವೆಗೆ ಮುಂದಾದ ಜಿಬಿಡಿಎ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ಹೊರಹಾಕಿದ್ದಾರೆ. ಜೆಎಂಸಿ ಸರ್ವೇ ನಡೆಸದಂತೆ ಮಂಡಲಹಳ್ಳಿ ಗ್ರಾಮದ
ಮೈಸೂರು: ಹಿರಿಯ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಮೈಸೂರಿನ ಮಹಾರಾಜ ಕಾಲೇಜು ಮೈದಾನಕ್ಕೆ ತರಲಾಗಿದೆ. ನಿನ್ನೆ ನಿಧನರಾಗಿದ್ದ ಖ್ಯಾತ ಗಾಯಕಿ ಎಸ್ ಜಾನಕಿ (S Janaki) ಅವರ ಪಾರ್ಥೀವ ಶರೀರವನ್ನು ಇಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನಕ್ಕೆ ಅಂತಿಮ ದರ್ಶನಕ್ಕೆ ತರಲಾಗಿದೆ. ಇದಕ್ಕೂ ಮೊದಲು
ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದಲ್ಲಿ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಲಾರಿಯೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಬೆಂಕಿಗಾಹುತಿಯಾದ ಪರಿಣಾಮ, ಸಮೀಪದಲ್ಲಿದ್ದ ಮತ್ತೊಂದು ಲಾರಿಗೂ ಬೆಂಕಿ ವ್ಯಾಪಿಸಿದ ಘಟನೆ ನಡೆದಿದೆ. ಈ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯ 11ನೇ ಮೈಲಿ ಸಮೀಪ ಸಂಭವಿಸಿದೆ. ಪೆಟ್ರೋಲ್ ಟ್ಯಾಂಕರ್ ಚಾಲಕ
ಚಿಕ್ಕಮಗಳೂರು, ಜುಲೈ 09: ಜಿಲ್ಲೆಯ ಶೃಂಗೇರಿ ತಾಲೂಕು ಕಚೇರಿಯ ಮುಂಭಾಗದಲ್ಲಿ ನಿರ್ಮಿಸಲಾಗಿರುವ ಬೃಹತ್ ತಡೆಗೋಡೆಯಲ್ಲಿ ಬಿರುಕು (Wall Cracks) ಕಾಣಿಸಿಕೊಂಡಿದ್ದು, ಧಾರಾಕಾರ ಮಳೆಗೆ (Rain) ತಡೆಗೋಡೆ ಸಂಪೂರ್ಣ ಕುಸಿದು ಬೀಳುವ ಆತಂಕ ಎದುರಾಗಿದೆ. ತಡೆಗೋಡೆಯಲ್ಲಿನ ಬಿರುಕು ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ. ಇನ್ನು ಅದರ ಕೆಳಭಾಗದಲ್ಲಿ 4 ಮನೆ, 18ಕ್ಕೂ ಹೆಚ್ಚು ಅಂಗಡಿಗಳಿದ್ದು, ತಡೆಗೋಡೆ ಕುಸಿದರೆ ತುಂಗಾ