ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಬೆಂಗಳೂರು: ವಿದೇಶಕ್ಕೆ ಹೋಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇದುವರೆಗೆ ಅವರ ಮನೆಯವರು ಸೇರಿದಂತೆ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ ಎಂದು ಶಾಸಕ ಮತ್ತು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ ಟಿ ದೇವೇಗೌಡ ಹೇಳಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ಎಲ್ಲಿದ್ದಾರೆ ಅನ್ನೋದು ಅವ್ರ ಮನೆಯವರಿಗೂ ಗೊತ್ತಿಲ್ಲ

ಹಾಸನ, ಮೇ 10: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ರಾಜ್ಯದಲ್ಲಿ ಹಲ್​ ಚಲ್​ ಸೃಷ್ಟಿಸಿದೆ. ಈ ಪ್ರಕರಣಕ್ಕೆ ಇದೀಗ ಮೇಜರ್​ ಟ್ವಿಸ್ಟ್​ ಸಿಕ್ಕಿದೆ. ವಿಶೇಷ ತನಿಖಾ ಅಧಿಕಾರಿಗಳು (SIT) ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ಬಿಜೆಪಿ ರಾಜ್ಯ ಪ್ರಧಾನ

ಬೆಂಗಳೂರು, ಮೇ 11: ಕೆಎ​ಎಸ್ ಅಧಿಕಾರಿಯ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ​ಸಂಜಯ್​ನಗರದ ನಿವಾಸದಲ್ಲಿ ನಡೆದಿದೆ. ಚೈತ್ರಾಗೌಡ ಮೃತ ಮಹಿಳೆ. ವೃತ್ತಿಯಲ್ಲಿ ವಕೀಲರಾಗಿದ್ದರು. ಮನೆಯಲ್ಲಿ ಫ್ಯಾನ್​​ಗೆ ನೇಣುಬಿಗಿದ ಸ್ಥಿತಿಯಲ್ಲಿ ಶವಪತ್ತೆ ಆಗಿದೆ. ಸದ್ಯ ಘಟನಾ ಸ್ಥಳಕ್ಕೆ ಸಂಜಯ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಕೊಡಗು, ಮೇ.10: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್​ಎಸ್​ಎಲ್​ಸಿ ಬಾಲಕಿಯನ್ನು ಕೊಂದು ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನೇಣುಬಿಗಿದ ಸ್ಥಿತಿಯಲ್ಲಿ ಆರೋಪಿ ಪ್ರಕಾಶ್(35) ಮೃತದೇಹ ಪತ್ತೆಯಾಗಿದೆ. ಕೊಲೆ ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ಶೋಧಕಾರ್ಯ ಮಾಡುವ ಸಮಯದಲ್ಲಿ ಸೂರ್ಲಬ್ಬಿ ಗ್ರಾಮದಿಂದ 3 ಕಿ.ಮೀ. ದೂರದ ಹಮ್ನಿಯಾಲದಲ್ಲಿ ಪ್ರಕಾಶ್ ಅಲಿಯಾಸ್

ಹಾಸನ, ಮೇ.10. ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಪಟ್ಟ ಅಶ್ಲೀಲ ವೀಡಿಯೋ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿಕ್ ಹಾಗೂ ದೇವರಾಜೇಗೌಡಗೆ ಎಸ್‌ಐಟಿ ತಂಡ ನೋಟಿಸ್ ನೀಡಿದೆ. ಏ.23 ರಂದು ಹಾಸನ ಸೈಬರ್ ಪೊಲೀಸ್ ಠಾಣೆಗೆ ಪ್ರಜ್ವಲ್ ರೇವಣ್ಣ ಚುನಾವಣಾ ಏಜೆಂಟ್ ಪೂರ್ಣಚಂದ್ರ ತೇಜಸ್ವಿ ದೂರು ನೀಡಿದ್ದರು. ಅದನ್ನು ಆಧರಿಸಿ ಕಾರ್ತಿಕ್

ಬೆಂಗಳೂರು, (ಮೇ.10): ಹಾಸನ  ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ  ವಿರುದ್ಧ ಒಂದರ ಮೇಲೊಂದು ಎಫ್​ಐಆರ್ ದಾಖಲಾಗುತ್ತಿವೆ. ಅದರಲ್ಲೂ ಮೂರನೇ ಎಫ್​ಐಆರ್​ ದಾಖಲಾಗಿರುವ ಸೆಕ್ಷನ್ ಪ್ರಜ್ವಲ್ ರೇವಣ್ಣಗೆ ಕಾನೂನು ಕಂಟಕ ಎದುರಾಗಿದೆ. ಪ್ರಜ್ವಲ್​ ರೇವಣ್ಣ ವಿರುದ್ಧ ಮೂರನೇ ಎಫ್​ಐಆರ್​ನಲ್ಲಿ ಐಪಿಸಿ 376(2)(N), 376(2)(K), 354(A), 354(B), 354(C) ಹಾಗೂ 506

ಚಿಕ್ಕಮಗಳೂರು, ಮೇ 10: ಹಾಸನ ಸಂಸದ ಪ್ರಜ್ವಲ್ ರೇವಣ್ಣ ) ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ  ಹರಿಬಿಟ್ಟ ಆರೋಪಿಯನ್ನು ಕುದುರೆಮುಖ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಬಂಧಿತ ಆರೋಪಿ. ಆರೋಪಿ ಪ್ರಜ್ವಲ್, ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಅವರ ಅಶ್ಲೀಲ ವಿಡಿಯೋಗಳು

ಬೆಂಗಳೂರು, ಮೇ 09: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2023-24ನೇ ಪ್ರಸಕ್ತ ಸಾಲಿನ ಎಸ್​ಎಸ್​ಎಲ್​ಸಿ  ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿದೆ. ಈ ಬಾರಿಯೂ ಬಾಲಕಿಯರೇ ಮೈಲುಗೈ ಸಾಧಿಸಿದ್ದಾರೆ. ಅದರಲ್ಲಿಯೂ ಬಾಗಲಕೋಟೆ  ಜಿಲ್ಲೆಯ ಮುಧೋಳದ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರು 625/625ಕ್ಕೆ

ಬೆಂಗಳೂರು, ಮೇ 9: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC Results 2024) ಇದೀಗ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಕೂಡ ವೀಕ್ಷಿಸಬಹುದಾಗಿದೆ. ಕರ್ನಾಟಕ

ಬೆಂಗಳೂರು, ಮೇ.8, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್.ಐ. ಟಿ. ಮುಂದೆ ದಾಖಲಾಗುವ ಪ್ರಕರಣಗಳಿಗೆ ಇಬ್ಬರು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರ ನೇಮಕ ಮಾಡಲಾಗಿದೆ. ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ದಳವು ದಾಖಲಿಸುವ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಹಾಜರಾಗಲು