ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಶಿವಮೊಗ್ಗ/ಬೆಂಗಳೂರು, (ಏಪ್ರಿಲ್ 05): ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣದ(Bengaluru Rameshwaram café blast Case)  ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್​ಐಎ) ತೀವ್ರಗೊಳಿಸಿದ್ದು, ಇದೀಗ ಮತ್ತೋರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದೆ. ಶಿವಮೊಗ್ಗ(Shivamogga)  ಜಿಲ್ಲೆ ತೀರ್ಥಹಳ್ಳಿಯಲ್ಲಿ ಸಾಯಿಪ್ರಸಾದ್ ಎನ್ನುವಾತನನ್ನು ಇಂದು (ಏಪ್ರಿಲ್ 05) ಎನ್​ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರು: ಬೆಂಗಳೂರು ಪೊಲೀಸರು ಐವರಿ ಕೋಸ್ಟ್ ಪ್ರಜೆಯೊಬ್ಬನನ್ನು ಬಂಧಿಸಿದ್ದು ಸುಮಾರು ಎರಡು ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳಕ್ಕೆ ಸಿಕ್ಕ ಮಾಹಿತಿ ಮೇರೆಗೆ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗದ ತಂಡವು ಮಾದಕ ದ್ರವ್ಯ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ 33 ವರ್ಷದ

ಬೆಂಗಳೂರು: ಬೇಸಿಗೆಯ ಬಿರು ಬಿಸಿಲಿನ ಮಧ್ಯೆ ಬೆಂಗಳೂರಿನ ಆರ್.ಟಿ.ನಗರದಲ್ಲಿ ಶುಕ್ರವಾರ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದೆ. ಇಲ್ಲಿನ ಮಿರಾಕಲ್ ಡ್ರಿಂಕ್ಸ್ ಮತ್ತು ಐಡಿಎಸ್ ಕಟ್ಟಡದ ನೆಲಮಹಡಿಯಲ್ಲಿ ಐಟಿ ಕಂಪೆನಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಟ್ಟಡದ ನೆಲಮಹಡಿಯಲ್ಲಿ ಬೆಂಕಿ ಹೊತ್ತಿಕೊಂಡು ನಂತರ

ಚಾಮರಾಜನಗರ: ಗೋಪಿನಾಥಂ ಜಲಾಶಯದಲ್ಲಿ ಬಟ್ಟೆ ತೊಳೆಯಲು ಹೋಗಿ ಮೂವರು ನೀರುಪಾಲಾದ ದಾರುಣ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಮೃತರನ್ನು ಪುದೂರು ಗ್ರಾಮದ ನಿವಾಸಿ 33 ವರ್ಷದ ಮೀನಾ, 13 ವರ್ಷದ ಪವಿತ್ರ ಮತ್ತು 12 ವರ್ಷದ ಕೀರ್ತಿ ಎಂದು ಗುರುತಿಸಲಾಗಿದೆ. ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಟ್ಟೆ ತೊಳೆಯುತ್ತಿದ್ದ ಮೀನಾ

ಬೆಂಗಳೂರು : ನಟಿ-ಹಾಗೂ ಮಂಡ್ಯದ ಸ್ವತಂತ್ರ ಸಂಸದೆ ಸುಮಲತಾ ಅಂಬರೀಶ್ ಅಧಿಕೃತವಾಗಿ ಶುಕ್ರವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಕರ್ನಾಟಕ ಚುನಾವಣಾ

ವಿಜಯಪುರ, ಏಪ್ರಿಲ್ 4: ವಿಜಯಪುರ (Vijayapura) ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ (Lachyana) ಗ್ರಾಮದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಮಗು ಸಾತ್ವಿಕ್​ನನ್ನು ಕೊನೆಗೂ ರಕ್ಷಣೆ ಮಾಡಲಾಗಿದೆ. ಸತತ 20 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಕಾರ್ಯಾಚರಣೆಯ ಬಳಿಕ ಮಗುವನ್ನು ರಕ್ಷಣೆ ಮಾಡಲಾಗಿದೆ. ಮಗುವಿನ ಪೋಷಕರಾದ ಸತೀಶ್ ಮತ್ತು

ಬೆಂಗಳೂರು: ಕರ್ನಾಟಕದಲ್ಲಿ 'ಮೋದಿ ಅಲೆ' ಇಲ್ಲ. ಹೀಗಾಗಿ ಕಾಂಗ್ರೆಸ್ ಆರಾಮದಾಯಕವಾಗಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಉಪ ಮುಖ್ಯಮಂತ್ರಿ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ. ಬಿಜೆಪಿ ತನ್ನ ನಾಲ್ಕು ವರ್ಷಗಳ ಆಡಳಿತದಲ್ಲಿ ರಾಜ್ಯದಲ್ಲಿ ಏನನ್ನೂ ಮಾಡಿಲ್ಲ ಮತ್ತು ನೀಡಿದ್ದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ

ಬೆಂಗಳೂರು: ಹಿರಿಯ ಪತ್ರಕರ್ತ ಎಂ.ಕೆ.ಭಾಸ್ಕರರಾವ್‌ ಅವರು ಬೆಂಗಳೂರಿನಲ್ಲಿ ಬುಧವಾರ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಎರಡು ವರ್ಷದಿಂದ ಕ್ಯಾನ್ಸರ್‌ ನಿಂದ ಬಳಲುತ್ತಿದ್ದ ಅವರು ಅನಾರೋಗ್ಯಕ್ಕೆ ಒಳಗಾಗಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಕೊನೆಯುಸಿರೆಳೆದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಮೃತರಿಗೆ ಪತ್ನಿ

ಮಂಡ್ಯ: ಸಕ್ಕರೆ ನಾಡು ಮಂಡ್ಯ ಬಿಟ್ಟು ಬೇರೆ ಕಡೆ ನನ್ನ ರಾಜಕೀಯ ಜೀವನವಿಲ್ಲ, ಮಂಡ್ಯ ಮಣ್ಣಿನ ಸೊಸೆಯಾಗಿ ಜಿಲ್ಲೆಯ ಜನರ ಕೈಬಿಡಲು ನಾನು ಇಷ್ಟಪಡುವುದಿಲ್ಲ. ಈ ಮಂಡ್ಯದ ಋಣ ಮತ್ತು ಈ ಮಂಡ್ಯದ ಜನವನ್ನು ನಾನು ಎಂದೆಂದಿಗೂ ಬಿಡುವುದಿಲ್ಲ ಎಂದು ಪ್ರಮಾಣ ಮಾಡಿ ಹೇಳುತ್ತೇನೆ ಎಂದು ಸಂಸದೆ ಸುಮಲತಾ ಪುನರುಚ್ಛರಿಸಿದ್ದಾರೆ.

ಬೆಂಗಳೂರು: ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ '400 ಪಾರ್' (400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸ) ಗುರಿಯ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿರುವ ಪಕ್ಷದ ಹಿರಿಯ ನಾಯಕ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಜೊತೆ ಇಂಡಿಯಾ ಬ್ಲಾಕ್ ನ್ನು ಹೋಲಿಸಲು ಸಾಧ್ಯವೇ ಇಲ್ಲ.