ನವದೆಹಲಿ, ಸೆಪ್ಟೆಂಬರ್ 5: ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಕೆಲವೇ ದಿನಗಳಲ್ಲಿ ಇದೀಗ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಕೆಯಾಗಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಕಾನೂನು ಹೋರಾಟ ಮುಂದುವರಿಸುವ
ಕೋವಲಂ: ತಮಿಳು ನಾಡು ರಾಜಧಾನಿ ಚೆನ್ನೈಯಿಂದ ಸುಮಾರು 20 ಕಿಮೀ ದೂರದಲ್ಲಿರುವ ಈಸ್ಟ್ ಕೋಸ್ಟ್ ರಸ್ತೆಯ ಕೋವಲಂ ಬಳಿ ನಿಂತಿದ್ದ ಮಿನಿ ಟ್ರಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಬುಧವಾರ ಬೆಳಗ್ಗೆ ಮೃತಪಟ್ಟಿರುವ ಘಟನೆ ನಡೆದಿದೆ. ಸೆಮ್ಮಂಚೇರಿ ಕುಪ್ಪಂ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ವೇಗವಾಗಿ
ಬೆಂಗಳೂರು: ಮುಡಾ ಹಗರಣ, ಸಿಎಂ ಬದಲಾವಣೆ ಗದ್ದಲದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ ನಡೆಸಿದ್ದಾರೆ. ಆದರೆ, ಈ ಸಭೆಗೆ ರಾಜಮನೆತನ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು,
ಬೆಂಗಳೂರು: ಪ್ರಾಥಮಿಕ ಶಾಲೆಗಳ 20 ಹಾಗೂ ಪ್ರೌಢಶಾಲೆಗಳ 11 ಶಿಕ್ಷಕರನ್ನು 2024–25ನೇ ಸಾಲಿನ ರಾಜ್ಯಮಟ್ಟದ ಶಿಕ್ಷಕರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸೆ. 5ರಂದು ನಡೆಯುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯಿಂದ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿರುವವರ ಶಿಕ್ಷಕರ ಪಟ್ಟಿ ಬಿಡುಗಡೆಯಾಗಿದ್ದು ಶಿಕ್ಷಕರಿಗೆ ಕಾರ್ಯಕ್ರಮದಲ್ಲಿ 25 ಸಾವಿರ ನಗದು ನೀಡಿ, ಗೌರವಿಸಲಾಗುತ್ತೆ. ಶಿಕ್ಷಕರ ಪಟ್ಟಿ
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಆರೋಪಿಯಾಗಿ ಜೈಲು ಸೇರಿದ ದರ್ಶನ್ ಹಾಗೂ ಇತರರಿಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶಿಸಿದೆ. ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತರಾದ ಡಾ. ಚಂದ್ರಗುಪ್ತಗೆ ಆದೇಶ ನೀಡಲಾಗಿದೆ. ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿಯನ್ನು ನೇರವಾಗಿ ಸರ್ಕಾರಕ್ಕೆ
ಯಾದಗಿರಿ, ಸೆ.01: ಯಾದಗಿರಿ ಜಿಲ್ಲೆಯಾದ್ಯಂತ ಮಳೆರಾಯನ ಅಬ್ಬರ ಜೋರಾಗಿದೆ. ನಿನ್ನೆ(ಆ.31) ಸಂಜೆ ಆರಂಭವಾದ ಮಳೆ ಇನ್ನುವರೆಗೂ ಕಮ್ಮಿಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಹೀಗಾಗಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ನಗರದ ಹಲವು ಕಡೆ ರಸ್ತೆಗಳು ಸಂಪೂರ್ಣವಾಗಿ ಜಲಾವೃತ್ತಗೊಂಡಿದ್ದು, ಅಂಗಡಿ, ಶಾಲೆ ಹಾಗೂ ಮನೆಗಳಿಗೂ ಸಹ ನೀರು ನುಗ್ಗಿದೆ. ಮಳೆಯಿಂದ ಜಿಲ್ಲೆಯಲ್ಲಿ ಹಲವು ಅವಾಂತರ ಇನ್ನು
ಕಾನ್ಸ್ಟೆಬಲ್ ಮತ್ತು ಮಹಿಳಾ ಪೊಲೀಸ್ ಪೇದೆ ಠಾಣೆಯಲ್ಲಿ ಒಟ್ಟಿಗೆ ನೃತ್ಯ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು “ಠಾಣೆಯನ್ನೇ ಡ್ಯಾನ್ಸ್ ಕ್ಲಬ್ ಮಾಡಿಕೊಂಡಿದ್ದೀರಿ” ಕಾಮೆಂಟ್ ನಲ್ಲಿ ಬರೆದುಕೊಂಡಿದ್ದಾರೆ. rohit_mastana_12 ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ವಿಡಿಯೋ ಭಾರೀ ವೈರಲ್ ಆಗಿದೆ. ಆಗಸ್ಟ್
ಬೆಂಗಳೂರು, ಸೆ,01, :ಮುಡಾ ಪ್ರಕರಣ ಸಿಎಂ ಸಿದ್ದರಾಮಯ್ಯರನ್ನ ನಿದ್ದೆಗೆಡಿಸಿದೆ. ಸದ್ಯ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ವಿರುದ್ಧ ಒಂದು ಕಡೆ ಕಾನೂನು ಸಮರ ನಡೆಯುತ್ತಿದ್ದರೆ, ಅತ್ತ ಬಿಜೆಪಿ ಅವಧಿಯ ಹಗರಣ ಕುರಿತು ಸಿಎಂ ರಾಜಕೀಯ ಹೋರಾಟವನ್ನ ಮುಂದುವರಿಸಿದ್ದಾರೆ. ಹೌದು..ಬಿಜೆಪಿ ಹೂಡಿರುವ ಮುಡಾಸ್ತ್ರಕ್ಕೆ ಕಾಂಗ್ರೆಸ್ ಕೊರೊನಾಸ್ತ್ರ ಹೂಡಿದೆ.
ಬೆಂಗಳೂರು: ಮುಡಾ ಹಗರಣದಲ್ಲಿ ತಮ್ಮ ವಿರುದ್ಧ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಇದೀಗ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 2ಕ್ಕೆ ಮುಂದೂಡಿದೆ. ಇಂದು ಬೆಳಗ್ಗೆ ಹೈಕೋರ್ಟ್ ನ ಏಕಸದಸ್ಯ ಪೀಠದಲ್ಲಿ ವಿಚಾರಣೆ ಆರಂಭವಾಯಿತು. ಸುಮಾರು
ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರ ನಡೆ ಖಂಡಿಸಿ ಕಾಂಗ್ರೆಸ್ ನಾಯಕರು ಶನಿವಾರ ‘ರಾಜಭವನ ಚಲೋ’ ನಡೆಸಿದರು. ಇಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ‘ರಾಜಭವನ ಚಲೋ’ ನಡೆಸಿ, ಕೇಂದ್ರ ಸಚಿವ ಎಚ್ ಡಿ