ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಪ್ರಕರಣದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಶುರುವಾಗಿದೆ. ಸಿದ್ಧರಾಮಯ್ಯ ಪ್ರಕರಣದ ತನಿಖೆಯಲ್ಲಿ ನಿರ್ಲಕ್ಷ್ಯ ತೋರಿದ ಲೋಕಾಯುಕ್ತ ಎಡಿಜಿಪಿ ಧೋರಣೆಗೆ ಆಕ್ರೋಶ ವ್ಯಕ್ತಪಡಿಸಿರುವ ಜನಪ್ರತಿನಿಧಿಗಳ ನ್ಯಾಯಾಲಯ, ಶೋಕಾಸ್‌‍ ನೋಟೀಸ್‌‍ ಜಾರಿ ಮಾಡಿದೆ. ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ತಮ್ಮ

ಕೊಪ್ಪಳ: ತಾಲೂಕಿನ ಮಂಗಳಾಪುರ ಗ್ರಾಮದ ಒಂದೇ ಕುಟುಂಬದ ಮೂವರು ಅಪಘಾತದಲ್ಲಿ ಮೃತ ಪಟ್ಟಿದ್ದಾರೆ. ಹುಬ್ಬಳ್ಳಿಯ ಹೆಬ್ಬಸೂರ ಗ್ರಾಮದ ಬಳಿ ಶುಕ್ರವಾರ ತಡ ರಾತ್ರಿ ಘಟನೆ ನಡೆದಿದೆ. ಓಮಿನಿ ಮತ್ತು ಲಾರಿ ನಡುವೆ ನಡೆದ ಅಪಘಾತ ನಡೆದಿದ್ದು, ಘಟನೆಯಲ್ಲಿ ಜಾಫರಸಾಬ ಮಂಗಳೂರು(60), ಮುಸ್ತಫಾ (36), ಶೊಹೇಬ್(6)ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಜಾಫರ್‌ ಅವರಿಗೆ ಪಾರ್ಶ್ವವಾಯು

ಶಿವಮೊಗ್ಗ, ಆ.21: ಬೇಕರಿಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಎಲ್​ಪಿಜಿ ಸಿಲಿಂಡರ್ ಸ್ಫೋಟವಾದ ಘಟನೆ ಶಿವಮೊಗ್ಗ ತಾಲೂಕಿನ ಆಯನೂರಿನ ಎಸ್​ಎಲ್​ವಿ ಅಯ್ಯಂಗಾರ್ ಬೇಕರಿಯಲ್ಲಿ ನಡೆದಿದೆ. ಕೆಲವೇ ನಿಮಿಷದಲ್ಲಿ 3 ಬಾರಿ ಸ್ಫೋಟವಾಗಿದ್ದು, ಬೇಕರಿಯಲ್ಲಿದ್ದ ಎಲ್ಲಾ ವಸ್ತುಗಳು ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್​ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಈ ಕುರಿತು ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ

ಬೆಂಗಳೂರು, (ಆಗಸ್ಟ್ 20): ಬೆಂಗಳೂರಿನ ಎಲೆಕ್ಟ್ರಾನಿಕ್​ ಸಿಟಿಗೆ ದೇವರಾಜ ಅರಸು ಎಲೆಕ್ಟ್ರಾನಿಕ್​ ಸಿಟಿ ಎಂದು ಮರುನಾಮಕರಣ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಇಂದು (ಆಗಸ್ಟ್​ 20) ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ 109 ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ

ಯಾದಗಿರಿ, ಆ.20: ಹಿಂದೂ ಮನೆಗೆ ತೆರಳಿ ಬಲವಂತವಾಗಿ ಕ್ರೈಸ್ತ ಧರ್ಮದ ಕರಪತ್ರ ಹಂಚಿ ಮತಾಂತರ ಕ್ಕೆ ಯತ್ನಿಸಿದ ಆರೋಪ ಯಾದಗಿರಿ  ನಗರದ ಲಕ್ಷ್ಮೀ ಬಡಾವಣೆಯಲ್ಲಿ ಕೇಳಿಬಂದಿದೆ. ಕೂಡಲೇ ಎಚ್ಚೆತ್ತ ಜನ, ಮತಾಂತರಕ್ಕೆ ಮುಂದಾದ ಇಬ್ಬರು ಕ್ರಿಶ್ಚಿಯನ್ ಮಹಿಳೆಯರನ್ನು ಪೋಲಿಸರಿಗೆ ಒಪ್ಪಿಸಿದ್ದಾರೆ. ಬೆಂಗಳೂರು ಮೂಲದ ಮಹಿಳೆಯರಾದ ರೇಚಲ್ ರಾಬರ್ಟ್ ಹಾಗೂ ಕರುಣಾ ಅವರು, ಮತಾಂತರಕ್ಕೆ

ಬೆಂಗಳೂರು, (ಆಗಸ್ಟ್ 19):  ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ  ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರ ಅನುಮತಿ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್, ಆಗಸ್ಟ್ 29ಕ್ಕೆ ಮುಂದೂಡಿದೆ. ಸಿಎಂ ಪರ ವಕೀಲರು ಇಂದು (ಆಗಸ್ಟ್​ 19) ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ

ಬೆಂಗಳೂರು, (ಆಗಸ್ಟ್ 12): ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ) ಸೈಟ್ ಹಂಚಿಕೆಯಲ್ಲಿ ಭಾರೀ ಹಗರಣದ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರು ಕೇಳಿಬಂದಿದೆ. ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಸಲ್ಲಿಸಿದ್ದ ದೂರಿನ ಮೇರೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿದ್ದರಾಮಯ್ಯನವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ.

ಬೆಂಗಳೂರು: ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವನ್ನು ಅದ್ದೂರಿಯಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಕೊರೊನಾ - ಬರದ ಕಾರಣಕ್ಕೆ ಕಳೆದ ಬಾರಿ ವಿಜೃಂಭಣೆಯಿಂದ ಆಚರಣೆ ಮಾಡಲಾಗಲಿಲ್ಲ, ಆದರೆ

ಬೆಂಗಳೂರು: ಸ್ವಾತಂತ್ರ್ಯೋತ್ಸವ ಅಂಗವಾಗಿ ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಂತ್ರಿ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದರು. ಈ ಬಾರಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ವಿಷಯಾಧಾರಿತ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದ್ದು, ಬಾಬಾಸಾಹೇಬ್ ಅಂಬೇಡ್ಕರ್ ರವರ ಜೀವನ ಸಾಧನೆ, ದೇಶಕ್ಕೆ ನೀಡಿದ ಕೊಡುಗೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ,

ಬೆಂಗಳೂರು: ಬೆಂಗಳೂರಿನ ಹೊರವಲಯ ನೆಲಮಂಗಲದ ಬಳಿ ನಡೆದ ಘೋರ ಅಪಘಾತದಲ್ಲಿ, ಟಿಪ್ಪರ್‌ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗರ್ಭಿಣಿ ಬಲಿಯಾಗಿದ್ದಾರೆ. ಹೊಟ್ಟೆಯಲ್ಲಿದ್ದ 8 ತಿಂಗಳ ಮಗು ಹೊರಬಂದು ಸಾವಿಗೀಡಾಗಿದೆ. ಮೃತ ಮಹಿಳೆಯನ್ನು ಎಡೇಹಳ್ಳಿ ಗ್ರಾಮದ ಸಿಂಚನ (30) ಎಂದು ಗುರುತಿಸಲಾಗಿದೆ. ಪತಿ ಮಂಜುನಾಥ್ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರು ಗ್ರಾಮಾಂತರ