ಮಂಡ್ಯ: ಎರಡು ವರ್ಷಗಳ ನಂತರ ಭರ್ತಿಯಾಗಿರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್ಎಸ್ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಅಭಿಜಿತ್ ಲಗ್ನದಲ್ಲಿ ಬಾಗಿನ ಅರ್ಪಿಸಿದರು. ಇಂದು ಕೆಆರ್ ಎಸ್ ಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದ ನಂತರ ಬಾಗಿನ ಅರ್ಪಿಸಿದರು. ಮುಖ್ಯಮಂತ್ರಿಗಳಿಗೆ, ಡಿಸಿಎಂ ಡಿಕೆ
ರಾಮನಗರ: ದಲಿತ ಯುವಕನ ಮೇಲೆ ಹಲ್ಲೆ ನಡೆಸಿ ಕೈ ಕತ್ತರಿಸಿದ ಆರೋಪದ ಮೇಲೆ ಕನಕಪುರದಲ್ಲಿ ಭಾನುವಾರ ಇಬ್ಬರು ರೌಡಿಶೀಟರ್‌ಗಳ ಕಾಲುಗಳಿಗೆ ಪೊಲೀಸರು ಗುಂಡು ಹಾರಿಸುವ ಮೂಲಕ ಅವರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಹರ್ಷ ಅಲಿಯಾಸ್ ಕೈಮಾ ಮತ್ತು ಕರುಣೇಶ್ ಅಲಿಯಾಸ್ ಕಣ್ಣ ಎಂದು ಗುರುತಿಸಲಾಗಿದೆ. ಇಬ್ಬರು ರೌಡಿಶೀಟರ್‌ಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜುಲೈ
ಕಾರವಾರ, ಜುಲೈ.28: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಗುಡ್ಡ ಕುಸಿತ (Shirur Landslide) ಪ್ರಕರಣಕ್ಕೆ ಸಂಬಂಧಿಸಿ ಹದಿಮೂರನೇ ದಿನದ ಕಾರ್ಯಾಚರಣೆಯೂ ವಿಫಲವಾಗಿದೆ. ಕಣ್ಮರೆಯಾದ ಮೂವರ ಬಗ್ಗೆ ಸಣ್ಣ ಸುಳಿವು ಸಿಕ್ಕಿಲ್ಲ. ಬೆಳಿಗ್ಗೆಯಿಂದ ನಿರಂತರ ಕಾರ್ಯಾಚರಣೆ ಮಾಡಿ ಮುಳುಗು ತಜ್ಞರು ಹೈರಾಣಾಗಿದ್ದಾರೆ. ಹೀಗಾಗಿ
ವಿಜಯಪುರ, ಜುಲೈ 28: ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ ರಾಜೀವ್ ಬಿಜೆಪಿಯಲ್ಲೆ ಇದ್ದಾಗ ಆದ ಹಗರಣ ನಡೆದಿದೆ. ಈಗ ಅವರು ಕಾಂಗ್ರೆಸ್ ಸೇರಿದ್ದಾನೆ. ಕಾಂಗ್ರೆಸ್ಗೆ ಯಾಕೆ ಸೇರಿದ್ದಾರೆ ಅಂದರೆ ಇದೆಲ್ಲ ಮುಚ್ಚಿ ಹಾಕಲು ಸೇರಿದ್ದಾರೆ ಎಂದು ಶಾಸಕ ಬಸನಗೌಡಾ ಪಾಟೀಲ ಯತ್ನಾಳ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕೆಡವಲು
ಕೇಂದ್ರ ಸರ್ಕಾರದ ಬಜೆಟ್ನಲ್ಲಿ ಕರ್ನಾಟಕಕ್ಕೆ ಅನ್ಯಾಯ ಆಗಿದೆ, ಬಜೆಟ್ನಲ್ಲಿ ಏನೂ ಕೊಟ್ಟಿಲ್ಲ ಅಂತ ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಿದ್ದಾರೆ. ಇದು ಶುದ್ಧ ಸುಳ್ಳು, ರಾಜ್ಯ ಕಾಂಗ್ರೆಸ್ ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ತಿರುಗೇಟು ನೀಡಿದರು. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ
ಅಥಣಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ ನೀರಿನ ಒಳಹರಿವು 2.5 ಲಕ್ಷ ಕ್ಯೂಸೆಕ್‌ಗೆ ಏರಿಕೆಯಾಗಿದ್ದು, ಪ್ರವಾಹ ಭೀತಿಯಿಂದಾಗಿ ಅಥಣಿ ಹುಲಗಬಾಳ ಗ್ರಾಮದ ಪಕಾಲಿ ತೋಟ ಸೇರಿದಂತೆ ಮಾಂಗ ತೋಟದ ಜನರು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುತ್ತಿದ್ದಾರೆ. ಈಗಾಗಲೇ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ
ಬೆಂಗಳೂರು: ಮುಡಾ ಹಗರಣ, ಮಹರ್ಷಿ ವಾಲ್ಮೀಕಿ ನಿಗಮ ಹಗರಣಗಳ ಕುರಿತು ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ವಾಗ್ದಾಳಿ ನಡೆಸುತ್ತಿರುವ ನಡುವಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು, ಜು.29ರಂದು ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡುತ್ತಿದ್ದು, ನಾಯಕರ ಈ ಭೇಟಿ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ನಾಯಕರ ದೆಹಲಿ
ಬೀದರ್, ಜುಲೈ 27: ಸಿಕ್ಕಿಂನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಕೋರಿಯಾಳ ಗ್ರಾಮದ ಯೋಧ ಹವಾಲ್ದಾರ್ ಅನಿಲ್ ಕುಮಾರ್ ನವಾಡೆ (40) ಹೃದಯಾಘಾತದಿಂದ ನಿಧನರಾಗಿದ್ದಾರೆ. ಯೋಧ ಅನಿಲ್ ಕಳೆದ 20 ವರ್ಷದಿಂದ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸಿಕ್ಕಿಂ ಗಡಿ ಭಾಗದ ಹಿಮ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ದಾಖಲೆಗಳ ಮೂಲಕ ಉತ್ತರ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ, ಮುಡಾ ಅಕ್ರಮ ಪ್ರಕರಣ ಸಂಬಂಧ ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ನವರು ಅರೆಬರೆ ದಾಖಲೆಗಳನ್ನು ಮುಂದಿಟ್ಟು ಸುಳ್ಳು ಆರೋಪ ಮಾಡುತ್ತಿದ್ದಾರೆ. ರಾಜ್ಯಪಾಲರಿಗೂ ತಪ್ಪು
ಕರ್ನಾಟಕದ ಕರಾವಳಿ ಸೇರಿ 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಯಾದಗಿರಿ, ವಿಜಯಪುರ, ಕಲಬುರಗಿ, ಬೀದರ್ಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.