ಹೊಸದಿಲ್ಲಿ: 2022 ಮತ್ತು 2023ರಲ್ಲಿ ಎರಡು ಲಕ್ಷಕ್ಕೂ ಅಧಿಕ ಜಾನುವಾರುಗಳು ಮತ್ತು ಎಮ್ಮೆಗಳು ಚರ್ಮಗಂಟು ರೋಗ (ಎಲ್‌ಎಸ್‌ಡಿ)ದಿಂದ ಸಾವನ್ನಪ್ಪಿವೆ ಎಂಬ ಕೇಂದ್ರ ಪಶು ಸಂಗೋಪನಾ ಸಚಿವಾಲಯದ ಅಂಕಿಅಂಶಗಳನ್ನು ಬಿಜೆಪಿ ಸಂಸದ ಪಿ.ಸಿ.ಗದ್ದಿಗೌಡರ್ ನೇತೃತ್ವದ ಕೃಷಿ,ಪಶು ಸಂಗೋಪನೆ ಮತ್ತು ಆಹಾರ ಸಂಸ್ಕರಣೆ ಕುರಿತ ಸಂಸದೀಯ ಸ್ಥಾಯಿ ಸಮಿತಿಯು ಪ್ರಶ್ನಿಸಿದೆ. ಪೀಡಿತ
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ರಾಜ್ಯಕ್ಕೆ 18,177.44 ಕೋಟಿ ರೂಪಾಯಿ ಬರ ಪರಿಹಾರವನ್ನು ಶೀಘ್ರವಾಗಿ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇಂದು ಸಂಸತ್ ಸಂಕೀರ್ಣದಲ್ಲಿರುವ ಅವರ ಕಚೇರಿಯಲ್ಲಿ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ,
ಬೆಂಗಳೂರು: ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಸಭೆ ನಡೆಸಿದರು ಮತ್ತು ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳಿಗೆ ನೆರವು ನೀಡುವಂತೆ ಕೋರಿದರು. ಶಿವಕುಮಾರ್ ಅವರು ಕರ್ನಾಟಕದ ಜಲ ಸಂಪನ್ಮೂಲ ಯೋಜನೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಮಧ್ಯಸ್ಥಿಕೆ, ಮಾರ್ಗದರ್ಶನ ಮತ್ತು ಬೆಂಬಲವನ್ನು ಕೋರಿದ್ದಾರೆ. ಸಭೆಯಲ್ಲಿ
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಇದರಲ್ಲಿ 4,663 ಕೋಟಿ ರೂ. ಇನ್‌ಪುಟ್ ಸಬ್ಸಿಡಿ, 12,577 ಕೋಟಿ ರೂ. ತುರ್ತು ಪರಿಹಾರ, 566
ಬೆಂಗಳೂರು: ನೆರೆಯ ಕೇರಳದಲ್ಲಿ ಕೋವಿಡ್-19 ಜೆಎನ್.1 ರೂಪಾಂತರಿ ಪತ್ತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೈಗೊಳ್ಳಬೇಕಾದ ಅಗತ್ಯ ಮುಂಜಾಗ್ರತೆ ಹಾಗೂ ಪೂರ್ವಭಾವಿ ಕ್ರಮಗಳ ಕುರಿತು ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಮಂಗಳವಾರ ಪ್ರಕಟಿಸಿದೆ. ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಭಾಗದ ಜಿಲ್ಲೆಗಳಲ್ಲಿ ಅಗತ್ಯ ಸಂಖ್ಯೆಯ ಪರೀಕ್ಷೆ ನಡೆಸುವುದು, ವರದಿ ಸಲ್ಲಿಸುವುದು ಅಗತ್ಯವಾಗಿದೆ.
ಬೆಂಗಳೂರು:ಡಿ 18 : ತೆರಿಗೆ ವಂಚನೆಗೆ ಸಂಬಂಧಿಸಿ ಆಭೂಷಣ್ ಜ್ಯುವೆಲ್ಲರಿ ಶೋರೂಂ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಕಳೆದ ನಾಲ್ಕು ದಿನಗಳಿಂದ ತಪಾಸಣೆ ನಡೆಯುತ್ತಿದೆ. ಈ ನಡುವೆ ಇಬ್ಬರು ಬಾಲ ಕಾರ್ಮಿಕರನ್ನು ಇಟ್ಟುಕೊಂಡಿರುವುದು ಪತ್ತೆಯಾಗಿದ್ದು, ಮತ್ತೊಂದು ಎಫ್‌ಐಆರ್ ದಾಖಲು ಮಾಡಲಾಗಿದೆ. ಆಭೂಷಣ್ ಜ್ಯುವೆಲ್ಲರಿ ಮೇಲೆ ದಾಳಿ
ಮಲಪ್ಪುರಂ: ಕರ್ನಾಟಕದಿಂದ ಬರುತ್ತಿದ್ದ ಶಬರಿಮಲೆ ಯಾತ್ರಾರ್ಥಿಗಳ ಬಸ್‌ಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಹಾಗೂ ಆಟೋದಲ್ಲಿದ್ದ ನಾಲ್ವರು ಪ್ರಯಾಣಿಕರು ಸೇರಿದಂತೆ ಐವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಂಚೇರಿಯಲ್ಲಿ ಶುಕ್ರವಾರ ಸಂಜೆ ಸುಮಾರು 6 ಗಂಟೆಗೆ ಸಂಭವಿಸಿದೆ. ನಿನ್ನೆ ಸಂಜೆ ಆರು ಗಂಟೆಗೆ ಮಂಚೇರಿ-ಅರೀಕೋಡು ರಸ್ತೆಯ ಚೆಟ್ಟಿಅಂಗಡಿ ಎಂಬಲ್ಲಿ
ಬೆಂಗಳೂರು: ಡಿ.16: ಬಿಜೆಪಿ (BJP) ಸರ್ಕಾರದ ನಮ್ಮ ಕ್ಲಿನಿಕ್ (Namma Clinic) ಯೋಜನೆಯಡಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕಟ್ಟಿದ ನಮ್ಮ ಕ್ಲಿನಿಕ್ ಗಳು ಹಳ್ಳ ಹಿಡಿತಾ ಇದಿಯಾ ಎನ್ನುವ ಪ್ರಶ್ನೆ ಎದುರಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮಹಾಕವಿ ಕುವೆಂಪು ಮೆಟ್ರೋ ಬಳಿಯಿರುವ ಕ್ಲಿನಿಕ್ ಕಳೆದ 8 ತಿಂಗಳಿಂದ
ವಿಜಯಪುರ: ಬೆಳ್ಳಂಬೆಳಿಗ್ಗೆ ಜನತಾ ಟ್ರಾವೆಲ್ಸ್‌ಗೆ ಸೇರಿದ ಬಸ್ಸು ನಡು ರಸ್ತೆಯಲ್ಲೇ ಹೊತ್ತಿ ಉರಿದು ಸುಟ್ಟು ಕರಕಲಾದ ಘಟನೆ ವಿಜಯಪುರ ತಾಲೂಕಿನ ಹಿಟ್ಟನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಬೆಂಗಳೂರಿಂದ ಪ್ರಯಾಣಿಕರನ್ನ ಹೊತ್ತು ವಿಜಯಪುರಕ್ಕೆ ಬರುತ್ತಿದ್ದಾಗ ಬಸ್ಸಿಗೆ ಬೆಂಕಿ ಹತ್ತಿಕೊಂಡಿದೆ. ಚಕ್ರ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟಗೊಳ್ಳುತ್ತಿದ್ದಂತೆ ಪ್ರಯಾಣಿಕರು
ಬೆಳಗಾವಿ (ಡಿಸೆಂಬರ್ 15): ಸಹಕಾರಿ ಬ್ಯಾಂಕ್‌ಗಳ (cooperative bank) ಸಾಲ ಮೇಲಿನ ಬಡ್ಡಿ ಮನ್ನಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಘೋಷಿಸಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದ ಕೊನೆ ದಿನವಾದ ಇಂದು (ಡಿಸೆಂಬರ್ 15) ಈ ಘೋಷಣೆ ಮಾಡಿದ್ದು. ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಕ್ಕೆ ಸಂಬಂಧಿಸಿದಂತೆ