ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆರ್‌ಬಿಐ ಹೆಸರನ್ನು ಬಳಸಿಕೊಂಡು, ಬೇಕಾದಷ್ಟು ಸಾಲ ನೀಡುವುದಾಗಿ ಹಾಗೂ ಅರ್ಧದಷ್ಟು ಸಬ್ಸಿಡಿ ನೀಡುವುದಾಗಿ ಹೇಳಿ ಅಮಾಯಕರಿಂದ ಕೋಟಿ ರೂ. ಹಣ ಪಡೆದು ಮಹಿಳೆಯೊಬ್ಬಳು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ, ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ತಮಿಳುನಾಡಿನ ಹೊಸೂರು ಮೂಲದ

ಬೆಂಗಳೂರು: ರಾಜ್ಯದ ಉತ್ಪನ್ನಗಳನ್ನು ಪ್ರದರ್ಶಿಸಲು ಮೈಸೂರಿನಲ್ಲಿ ದಿಲ್ಲಿ ಹಾತ್ ಮಾದರಿಯಲ್ಲಿ ಶಾಶ್ವತ ವಸ್ತುಪ್ರದರ್ಶನ ಕೇಂದ್ರವನ್ನು ಸ್ಥಾಪಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಗುರುವಾರ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಆರ್ ಟಿಸಿ) ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ "100 ಹೊಸ ವಿನ್ಯಾಸದ ಕರ್ನಾಟಕ ಸಾರಿಗೆ ಬಸ್ಸು( ಅಶ್ವಮೇಧ - ಪಾಯಿಂಟ್ ಟು ಪಾಯಿಂಟ್ ಎಕ್ಸ್‌ಪ್ರೆಸ್)ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಬಣ್ಣ ಬಣ್ಣದ ಬಗೆ ಬಗೆಯ ಹೂವುಗಳಿಂದ ಸಿಂಗಾರಗೊಂಡಿರುವ

ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರತಿನಿಧಿ ಶ್ರೀನಿವಾಸಾಚಾರ್ಯ ದಿನೇಶ್ ಕುಮಾರ್ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು ಇಂದು ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ಮುಖ್ಯ ನ್ಯಾಯಮೂರ್ತಿಗಳಿಗೆ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಕಾನೂನು ಮತ್ತು ಸಂಸದೀಯ

ಬೆಂಗಳೂರು: ಬಿಜೆಪಿ ಮುಖಂಡರ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಒಂದು ವರ್ಷದಿಂದಲೂ ಪರಿಸರ ನಿಯಮಾವಳಿ ಉಲ್ಲಂಘನೆ ಮಾಡಿರುವುದು ಪತ್ತೆಯಾಗಿದ್ದು, ಕಾರ್ಖಾನೆ ಮುಚ್ಚುವಂತೆ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ನೋಟಿಸ್ ಜಾರಿಗೊಳಿಸಿದೆ. ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಉಲ್ಲಂಘಿಸಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆಯನ್ನು ಮುಚ್ಚಲು

ಬೆಳಗಾವಿ: ಬಿಜೆಪಿ ಸೇರ್ಪಡೆಯಾಗುವಂತೆ ಒತ್ತಡವಿದೆ. ಆದರೆ, ನಾನು ಕಾಂಗ್ರೆಸ್ ತೊರೆದು ಬಿಜೆಪಿಗೆ ಹೋಗಲ್ಲ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಅವರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಜಗದೀಶ್ ಶೆಟ್ಟರ್ ಒಟ್ಟಿಗೆ ನಿರ್ಧಾರ ಮಾಡಿ ಕಾಂಗ್ರೇಸ್ ಗೆ ಪಕ್ಷಕ್ಕೆ ಸೇರ್ಪಡೆ ಆಗಿದ್ದಲ್ಲ. ನಾನು ಮೊದಲು ಬಂದೆ. ಟಿಕೆಟ್

ವಿಜಯಪುರ ತಾಲೂಕಿನ ಹೊನಗನಳ್ಳಿ ಗ್ರಾಮ ಓರ್ವ ಮಹಿಳೆ ಹಾಗೂ ನಾಲ್ವರು ಯುವಕರು, ಗುರುವಾರ ಸಂಜೆ ಬನಶಂಕರಿ ಜಾತ್ರೆಗೆ‌ ಬಂದಿದ್ದರು. ದೇವಿಯ ರಥೋತ್ಸವ ಹಾಗೂ ರಾತ್ರಿ‌ ನಾಟಕ ನೋಡಿಕೊಂಡು, ಸಂಭ್ರಮದ ಜಾತ್ರೆ ಮಾಡಿದ್ದರು.‌ ಗುರುವಾರ ಮಧ್ಯರಾತ್ರಿ ಬಾದಾಯಿಂದ ಹೊರಟಿದ್ದರು. ಶುಕ್ರವಾರ ಬೆಳಗಿನ ಜಾವ ಸುನಗ ಕ್ರಾಸ್ ಬಳಿ ಕಬ್ಬು ತುಂಬಿಕೊಂಡು

ಬೆಂಗಳೂರು: ರಾಜ್ಯದಲ್ಲಿ 75ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಧ್ವಜಾರೋಹಣ ನೆರವೇರಿಸಿದರು. ಬೆಳಗ್ಗೆ 9 ಗಂಟೆಗೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಪೊಲೀಸ್ ತುಕಡಿಗಳಿಂದ ಗೌರವ ವಂದನೆ ಸ್ವೀಕಾರ

ಚಿತ್ರದುರ್ಗ: ಬಹಳ ಭೀಕರ ಮತ್ತು ಅತ್ಯಂತ ದಾರುಣ ಅಪಘಾತವಿದು (gory accident). ಇಂದು ಬೆಳಗಿನ ಜಾವ ಜಿಲ್ಲೆಯ ಚಳ್ಳಕೆರೆ (Challakere) ತಾಲ್ಲೂಕಿನ ಸಾಣೆಕೆರೆ ಬಳಿ ಹೆದ್ದಾರಿಯಲ್ಲಿ ಜರುಗಿದ ಅಪಘಾತದಲ್ಲಿ ಮೂರು ಪುಟ್ಟ ಪುಟ್ಟ ಕಂದಮ್ಮಗಳು ಮತ್ತು ಒಬ್ಬ 26 ವರ್ಷದ ಪುರುಷ ಬಲಿಯಾಗಿದ್ದಾರೆ. ಮೃತ ಮಕ್ಕಳನ್ನು 2- ವರ್ಷದ ಸಿಂಧುಶ್ರೀ, 5-ತಿಂಗಳ ಶಿಶು ಹಯ್ಯಾಳಪ್ಪ

ನವದೆಹಲಿ, ಜ.25: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮಾಜಿ ಮುಖ್ಯಮಂತ್ರಿಯೂ ಆಗಿರುವ ಕಾಂಗ್ರೆಸ್ ಎಂಎಲ್​ಸಿ ಜಗದೀಶ್ ಶೆಟ್ಟರ್ (Jagadish Shettar) ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa), ಬಿವೈ ವಿಜಯೇಂದ್ರ (BY Vijayendra), ಕೇಂದ್ರ ಸಚಿವ ಭುಪೇಂದ್ರ ಯಾದವ್​, ರಾಜೀವ್​ ಚಂದ್ರಶೇಖರ್​ ಸಮ್ಮುಖದಲ್ಲಿ ಶೆಟ್ಟರ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಪಕ್ಷ ಸೇರ್ಪಡೆಗೂ ಮುನ್ನ ಶೆಟ್ಟರ್