ಬೆಂಗಳೂರು: ಲೋಕಸಭೆ ಚುಣಾವಣೆಯಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದಕ್ಕೆ ಅಸಮಾಧಾನಗೊಂಡಿದ್ದ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಇದೀಗ ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ತಿರುಗಿಬಿದ್ದಿದ್ದಾರೆ. ಜೆಡಿಎಸ್ ಕರ್ನಾಟಕ ಚಿಂತನ ಮಂಥನ ಸಭೆಯಲ್ಲಿ ಮಾತನಾಡಿದ ಇಬ್ರಾಹಿಂ, ಜೆಡಿಎಸ್ ಪಕ್ಷಕ್ಕೆ ನಾನು ರಾಜ್ಯಾಧ್ಯಕ್ಷ.
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳು 'ದೆಹಲಿ ಚಲೋ' ಕಾರ್ಯಕ್ರಮಕ್ಕೆ ಕರೆ ನೀಡಿವೆ. ಅಕ್ಟೋಬರ್ 18ರಂದು ಜಂತರ್ ಮಂತರ್ನಲ್ಲಿ ಕನ್ನಡ ಹೋರಾಟಗಾರರು ಪ್ರತಿಭಟನೆ ನಡೆಸಲಿದ್ದಾರೆ. ಮಂಗಳವಾರ ಕನ್ನಡಪರ ಹೋರಾಟಗಾರರು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಅವರೊಂದಿಗೆ ಬೆಂಗಳೂರಿನಿಂದ
ನವದೆಹಲಿ: ಕರ್ನಾಟಕ ಮತ್ತು ಕೆಲವು ಇತರ ರಾಜ್ಯಗಳಲ್ಲಿ ಸರ್ಕಾರಿ ಗುತ್ತಿಗೆದಾರರು ಮತ್ತು ರಿಯಲ್ ಎಸ್ಟೇಟ್ ಡೆವಲಪರ್ಗಳ ಮೇಲೆ ದಾಳಿ ನಡೆಸಿದ ಆದಾಯ ತೆರಿಗೆ ಇಲಾಖೆಯು (ಐಟಿ ಇಲಾಖೆ) 94 ಕೋಟಿ ರೂ. ನಗದು, 8 ಕೋಟಿ ರೂ. ಮೌಲ್ಯದ ಚಿನ್ನ ಮತ್ತು ವಜ್ರದ ಆಭರಣಗಳು ಮತ್ತು ವಿದೇಶಿ ನಿರ್ಮಿತ 30
ಬೆಂಗಳೂರು: ರಾಜ್ಯದಲ್ಲಿ ಬರಗಾಲದಿಂದ ಉತ್ಪಾದನೆ ಕುಂಠಿತವಾಗಿ, ಬೇಡಿಕೆ ಹೆಚ್ಚಾಗಿ ವಿದ್ಯುತ್ ಸಮಸ್ಯೆ ಇದೆ, ಇದರಿಂದ ಅನಿವಾರ್ಯವಾಗಿ ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಒಪ್ಪಿಕೊಂಡಿದ್ದರು. ರೈತರಿಗೆ ಹಳ್ಳಿಗಳಲ್ಲಿ ವಿದ್ಯುತ್ ಪೂರೈಕೆ ಸಮಸ್ಯೆಯಾಗುತ್ತಿರುವ ಬಗ್ಗೆ ಹೇಳಿಕೆ ನೀಡಿರುವ ಸಿಎಂ ಸಿದ್ದರಾಮಯ್ಯ, ವಿದ್ಯುತ್ ಸಮಸ್ಯೆ ಆಗಿರುವುದು ನಿಜ. ರೈತರ ಪಂಪ್ಸೆಟ್ಗಳಿಗೆ ನಿತ್ಯ
ಮೈಸೂರು: ರಾಜ್ಯದ ಅಭಿವೃದ್ಧಿಯನ್ನು ಜನರಿಗೆ ತಿಳಿಸುವ ಕಾರ್ಯವನ್ನು ದಸರಾ ಮೆರವಣಿಗೆ ಮೂಲಕ ಮಾಡುತ್ತೇವೆ. ಇಡೀ ಜಗತ್ತಿಗೆ ಕನ್ನಡ ನಾಡಿನ ವೈಭೋಗ ತಿಳಿಸುವ ಕಾರ್ಯ ದಸರಾ ಮೂಲಕ ಆಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ದಸರಾ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ನಾಡಿನ ಸಂಪತ್ತು, ಅಧಿಕಾರ ಎಲ್ಲಾ ವರ್ಗದ
ಮೈಸೂರು:ಅ. 15: ವಿಶ್ವವಿಖ್ಯಾತ ಮೈಸೂರು ದಸರಾ ಹಬ್ಬಕ್ಕೆ ಸಂಗೀತ ನಿರ್ದೇಶಕ ಹಂಸಲೇಖ ಅವರು ಚಾಲನೆ ನೀಡಿದ್ದಾರೆ. ಚಾಮುಂಡಿಬೆಟ್ಟದಲ್ಲಿ, ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಕರ್ನಾಟಕ ಏಕೀಕರಣವಾಗಿ ಐವತ್ತು ವರ್ಷವಾಯಿತು. ಹೀಗಾಗಿ ಕರ್ನಾಟಕ ಐದಶ ಅಂತಾ ಕರೆಯೋಣ. ಕರ್ನಾಟಕದ ಐದಶದ ಜೊತೆಗೆ ನನ್ನ ಕಲಾ
ನವದೆಹಲಿ/ಬೆಂಗಳೂರು: ಅ.16ರಿಂದ 15 ದಿನಗಳ ಕಾಲ ತಮಿಳುನಾಡು ರಾಜ್ಯಕ್ಕೆ ನಿತ್ಯ 3000 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿದ್ದ ಆದೇಶವನ್ನು ಶುಕ್ರವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಎತ್ತಿಹಿಡಿದಿದೆ. ದೆಹಲಿಯಲ್ಲಿ ಶುಕ್ರವಾರ ನಡೆದ ಸಿಡಬ್ಲ್ಯೂಎಂಎ ಕಾವೇರಿಗೆ ಸಂಬಂಧಿಸಿದ ಪರಿಶೀಲನಾ ಸಭೆಯಲ್ಲಿ ಅ.16ರಿಂದ 31ರವರಗೆ
ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಸಂತ್ರಸ್ತೆ- ಬಿಕಾಂ ವಿದ್ಯಾರ್ಥಿನಿ ನಾಲ್ವರ ವಿರುದ್ಧ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳಿಗಾಗಿ ಶೋಧ ಕಾರ್ಯ ಕೈಗೊಂಡಿದ್ದಾರೆ. ಆರೋಪಿಗಳಲ್ಲಿ
ಬೆಂಗಳೂರು: ಒಂದು ತಿಂಗಳೊಳಗೆ ಎಲ್ಲಾ ಇಲಾಖೆಗಳಲ್ಲೂ ಕನಿಷ್ಟ ಶೇ.50ರಷ್ಟು ಬಾಕಿ ಮೊತ್ತ ಬಿಡುಗಡೆ ಮಾಡಬೇಕು, ಇಲ್ಲದಿದ್ದರೆ, ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅವರು, ಬಾಕಿ ಬಿಲ್ ಪಾವತಿಸುವಂತೆ ನಾಲ್ಕು ನಾಲ್ಕು
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಐಟಿ ದಾಳಿಯಾಗಿದೆ. ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಬೆಳ್ಳಂಬೆಳಗ್ಗೆ ನಗರದ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ತೀವ್ರ ಶೋಧ ನಡೆಸುತ್ತಿದ್ದಾರೆ. ಮಲ್ಲೇಶ್ವರಂ, ಸದಾಶಿವನಗರ, ಡಾಲರ್ಸ್ ಕಾಲೋನಿ, ಮತ್ತಿಕೆರೆ, ಸರ್ಜಾಪುರ ರಸ್ತೆ ಸೇರಿದಂತೆ 10ಕ್ಕೂ ಹೆಚ್ಚು ಕಡೆ ಚಿನ್ನದ