ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಬೆಂಗಳೂರು: ನಗರದ ವೀರಭದ್ರ ನಗರದಲ್ಲಿ ಬೆಂಕಿ ಅನಾಹುತ ಉಂಟಾಗಿದ್ದು, ಹಲವು ಖಾಸಗಿ ಬಸ್ ಗಳು ಬೆಂಕಿಗಾಹುತಿಯಾಗಿರುವ ಬಗ್ಗೆ ವರದಿಯಾಗಿದೆ. ವೀರಭದ್ರನಗರದ ಬಸ್ ಗಳ ಬಾಡಿ ಬಿಲ್ಡಿಂಗ್ ಮತ್ತು ವೆಲ್ಡಿಂಗ್ ಮಾಡುವ ವರ್ಕ್ ಶಾಪ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಬೆಂಕಿ ವರ್ಕ್​​ಶಾಪ್​ ನಲ್ಲಿರೋ ಇತರೆ ವಾಹನಗಳಿಗೆ ಬೆಂಕಿ ವ್ಯಾಪಿಸುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ಮುಂದುವರಿದಿದೆ. ಇಂದು ಸೋಮವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬರೋಬ್ಬರಿ 90 ಕಡೆ ವಿವಿಧ ಇಲಾಖೆಗಳ ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ. ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ವಿವಿಧ

ಉಡುಪಿ : ಅ.28, ಉಡುಪಿಯ ಅಜ್ಜರಕಾಡಿನ ಮಹಾತ್ಮ ಗಾಂಧಿ ಮೈದಾನದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ 'ವಿಶ್ವ ಬಂಟರ ಸಮ್ಮೇಳನ-2023ಕ್ಕೆ ಶನಿವಾರದ೦ದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ವಿದ್ಯುಕ್ತ ಚಾಲನೆ ನೀಡಿದರು. ಸಮಾರ೦ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯನಾಗರೀಕರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ಅವರು ಗುರುವಾರ ನವದೆಹಲಿಯಲ್ಲಿ ಕೇಂದ್ರ ಸಚಿವ ಮತ್ತು ಕರ್ನಾಟಕ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿ ಮಾಡಿ, 2024 ರ ಲೋಕಸಭೆ ಚುನಾವಣೆ  ಸಂಬಂಧ ರಾಜಕೀಯ ಪರಿಸ್ಥಿತಿಯ ಕುರಿತು ಚರ್ಚಿಸಿದರು. ಬಿಜೆಪಿ-ಜೆಡಿಎಸ್ ಮೈತ್ರಿ ಮತ್ತು ರಾಜ್ಯ ವಿಧಾನಸಭೆಯ ವಿರೋಧ

ಚಿಕ್ಕಮಗಳೂರು: ಹುಲಿ ಉಗುರು ಬೇಟೆಯನ್ನು ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಇತರ ಭಾಗಗಳಲ್ಲಿ ಅರಣ್ಯಾಧಿಕಾರಿಗಳು ಮುಂದುವರಿಸಿದ್ದಾರೆ. ನಿನ್ನೆ ಧಾರ್ಮಿಕ ಗುರು ವಿನಯ್ ಗುರೂಜಿಯವರನ್ನು ಚಿಕ್ಕಮಗಳೂರಿನಲ್ಲಿ ವಿಚಾರಣೆ ನಡೆಸಿದ ಅಧಿಕಾರಿಗಳು ಇಂದು ಶುಕ್ರವಾರ ಬೆಳಗ್ಗೆ ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಇಬ್ಬರು ಅರ್ಚಕರನ್ನು ಬಂಧಿಸಿದ್ದಾರೆ. ಚಿಕ್ಕಮಗಳೂರಿನ ಖಾಂಡ್ಯ ಮಾರ್ಕಾಂಡೇಶ್ವರ ದೇವಾಲಯದ ಇಬ್ಬರು ಅರ್ಚಕರನ್ನು ಬಾಳೆಹೊನ್ನೂರು

ಬೆಂಗಳೂರು: ಚಿಕ್ಕಬಳ್ಳಾಪುರದ ಚಿತ್ರಾವತಿ ಸಮೀಪ ಗುರುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ 13 ಮಂದಿ ಮೃತಪಟ್ಟಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ, ಚಿಕ್ಕಬಳ್ಳಾಪುರದ ಚಿತ್ರಾವತಿ ಸಮೀಪ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ 13

ಬೆಂಗಳೂರು: ವಿಧಾನಸಭೆ ಚುನಾವಣೆ ಮುಗಿದು ಐದು ತಿಂಗಳು ಕಳೆದರು ಪಕ್ಷಕ್ಕೆ ರಾಜ್ಯಾಧ್ಯಕ್ಷರು ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕನನ್ನು ನೇಮಕ ಮಾಡಲು ಬಿಜೆಪಿ ತಿಣುಕಾಟ ನಡೆಸುತ್ತಿದೆ. ಲೋಕಸಭೆ ಚುನಾವಣೆ ಸಮೀಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ನೇಮಕಕ್ಕೆ ಬಿಜೆಪಿ ಹೈಕಮಾಂಡ್ ಮುಂದಾಗಿದೆ ಎನ್ನಲಾಗಿದ್ದು ಇನ್ನೇನು ಕೆಲ ದಿನಗಳಲ್ಲೇ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಹೆಸರನ್ನು ಹೈಕಮಾಂಡ್​

ಬೆಂಗಳೂರು: ಹುಲಿ ಉಗುರು ಧರಿಸಿದ ಆರೋಪದ ಮೇಲೆ ಬಿಗ್ ಬಾಸ್ ಸೀಸನ್ 10ರ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಅವರನ್ನು ಬಂಧಿಸಿದ ನಂತರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಅಂತಹದ್ದೇ ಪೆಂಡೆಂಟ್ ಧರಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅವರ ವಿರುದ್ಧವೂ ಕ್ರಮ ತೆಗೆದುಕೊಳ್ಳುವಂತೆ ಹಲವರು ಒತ್ತಾಯಿಸಿದ್ದಾರೆ ಮತ್ತು ಈ ಸಂಬಂಧ

ಬೆಂಗಳೂರು: ಐತಿಹಾಸಿಕ ಮೈಸೂರು ದಸರಾದ (Mysuru dasara 2023) ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ಇದಕ್ಕೆ ಮುನ್ನ ಮೈಸೂರು ಅರಮನೆ ಬಲರಾಮ ಗೇಟ್​ ಬಳಿ ಸಿಎಂ ಸಿದ್ದರಾಮಯ್ಯ ನಂದಿಧ್ವಜ ಪೂಜೆ ನೆರವೇರಿಸಿದರು. ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್​, ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ, ಸಚಿವರಾದ ಕೆ.ಹೆಚ್​.ಮುನಿಯಪ್ಪ, ವೆಂಕಟೇಶ್​,

ಶಿವಮೊಗ್ಗ : ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ತಾಲೀಮು ನಡೆಸಿದ್ದ 28 ವರ್ಷದ ನೇತ್ರಾವತಿ ಆನೆಯು ಹೆಣ್ಣು ಮರಿಗೆ ಜನ್ಮ ನೀಡಿದೆ. ಕೆಲವು ವರ್ಷಗಳಿಂದ ಶಿವಮೊಗ್ಗ ದಸರಾದಲ್ಲಿ ಬೆಳ್ಳಿ ಅಂಬಾರಿ ಹೊರಲು ಮೂರು ಆನೆಗಳನ್ನು ಬಳಸಿಕೊಳ್ಳಲಾಗುತ್ತಿದೆ. ಈ ಬಾರಿಯು ಅಂಬಾರಿ ಹೊರುವ ಸಾಗರನ ಜತೆ ಯಾವ ಅನೆಗಳನ್ನು ಕಳುಹಿಸಬೇಕು ಎಂದು ಗೊಂದಲ