ಹಾಸನ: ಆರ್.ಎಸ್.ಎಸ್ ಮಾತ್ರವಲ್ಲ ಸಾರ್ವಜನಿಕ ಸ್ಥಳಗಳಲ್ಲಿ ಜನರಿಗೆ ತೊಂದರೆ ಕೊಟ್ಟು ನಡೆಸುತ್ತಿರುವ ಎಲ್ಲಾ ಸಂಘಟನೆಗಳನ್ನು ನಿರ್ಬಂಧಿಸುವ ಬಗ್ಗೆ ಯೋಜನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದರು. ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಸಂಘಟನೆಗಳ ನಿರ್ಬಂಧದ ಬಗ್ಗೆ ಈಗಾಗಲೇ ತಮಿಳುನಾಡು ಸರ್ಕಾರ ಕ್ರಮ ಕೈಗೊಂಡಿದ್ದು ಅದರ ಬಗ್ಗೆ ಮಾಹಿತಿ
ಬೆಂಗಳೂರು, (ಅಕ್ಟೋಬರ್ 14): ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ (IPS Alok Kumar) ವಿರುದ್ಧದ ಫೋನ್ ಟ್ಯಾಪಿಂಗ್ ಪ್ರಕರಣಕ್ಕೆ (Phone Tapping Case) ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆದೇಶಿಸಿದ್ದ ಇಲಾಖಾ ತನಿಖೆಯನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (CAT) ರದ್ದುಗೊಳಿಸಿದೆ. ಅಲ್ಲದೇ ತಡೆಹಿಡಿಯಲಾಗಿದ್ದ ಅವರ ಬಡ್ತಿ ಮತ್ತು ಇತರ ಸೌಲಭ್ಯಗಳನ್ನು ನೀಡುವಂತೆ ಆದೇಶಿಸಿದೆ.
ಬೆಂಗಳೂರು: ಐತಿಹಾಸಿಕ ಕಿತ್ತೂರು ಉತ್ಸವದ ಜ್ಯೋತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಾಲನೆ ನೀಡಿದ್ದಾರೆ. ವಿಧಾನಸೌಧದ ಮುಂಭಾಗ ಇಂದು ಆಯೋಜಿಸಿದ್ದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿಸಿ, ಉತ್ಸವಕ್ಕೆ ಚಾಲನೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾಡಳಿತದಿಂದ ನಡೆದ ಕಾರ್ಯಕ್ರಮದಲ್ಲಿ ಚೆನ್ನಮ್ಮನ ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ,
ದೇಶದ ಆರ್ ಬಿ ಐಯು ಇತ್ತೀಚಿನ ದಿನಗಳ ಹಿ೦ದೆ ಹಣಕಾಸುವರ್ಗಾವಣೆಯಲ್ಲಿ ವ್ಯವಸ್ಥೆಯಲ್ಲಿ ಹೊಸ ನೀತಿಯೊ೦ದನ್ನು ಜಾರಿಗೆ ತ೦ದಿದ್ದು ಇದರಿ೦ದಾಗಿ ಬ್ಯಾ೦ಕ್ ವ್ಯವಹಾರದ ಮೇಲೆ ದೊಡ್ದ ಪರಿಣಾಮವನ್ನು೦ಟುಮಾಡಿದೆ. ಈ ಹೊಸ ನೀತಿ ಎಲ್ಲಾ ಬ್ಯಾ೦ಕ್ ಗ್ರಾಹಕರಿಗೆ ದೊಡ್ಡ ತಲೆನೋವನ್ನು೦ಟು ಮಾಡಿದೆ, ಮಾತ್ರವಲ್ಲದೇ ಬ್ಯಾ೦ಕ್ ಖಾತೆಯ ಗ್ರಾಹಕರು ತಮ್ಮ ತಮ್ಮ ಹಣಕಾಸಿನ
ಧಾರವಾಡ: ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 8 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ತಾಲೂಕಿನ ತೇಗೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಗದಗದ ಹುಡ್ಕೋ ಕಾಲನಿಯ ನಿವಾಸಿಗಳಾದ ಸುರೇಶ ಬಸವಣೆಪ್ಪ
ಕೊಲ್ಲಂ: ಬಾವಿಗೆ ಹಾರಿದ ಮಹಿಳೆಯನ್ನು ರಕ್ಷಿಸಲು ಹೋಗಿ ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ ನೆಡುವತೂರಿನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ನೆಡುವತೂರಿನ ಅರ್ಚನಾ, ಆಕೆಯ ಸ್ನೇಹಿತ ಶಿವಕೃಷ್ಣನ್ ಮತ್ತು ಕೊಟ್ಟಾರಕ್ಕರ ಠಾಣೆಯಲ್ಲಿ ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಅಧಿಕಾರಿ ಸೋನಿ ಎಸ್ ಕುಮಾರ್ ಎಂದು ಗುರುತಿಸಲಾಗಿದೆ. ಭಾನುವಾರ
ಬೆಂಗಳೂರು: ಇಲ್ಲಿನ ಪಬ್ನ ಶೌಚಾಲಯದೊಳಗೆ 31 ವರ್ಷದ ಬ್ಯಾಂಕ್ ಮ್ಯಾನೇಜರ್ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಮೃತರನ್ನು ಮೇಘರಾಜ್ ಎಂದು ಗುರುತಿಸಲಾಗಿದ್ದು, ಅವರಿಗೆ ಪತ್ನಿ ಮತ್ತು ಆರು ತಿಂಗಳ ಮಗು ಇದೆ. ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅವರು ತಿಳಿಸಿದ್ದಾರೆ. ಗುರುವಾರ ರಾತ್ರಿ ಅವರು
ಮೈಸೂರು: ಇಂದು ಬೆಳಗಿನ ಜಾವ ಟ್ರಕ್ ಮತ್ತು ಬಸ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 12 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ . ಮೈಸೂರು-ಮಡಿಕೇರಿ ರಸ್ತೆಯ ಹುಣಸೂರು ತಾಲ್ಲೂಕಿನ ಜಡಗನಕೊಪ್ಪಲು ಬಳಿ ಬೆಳಗಿನ ಜಾವ 4.30 ರ ಸುಮಾರಿಗೆ ಈ ಅಪಘಾತ ಸಂಭವಿಸಿತ್ತು. ಮೃತರನ್ನು ಬಸ್ ಚಾಲಕ ಶಂಶಾದ್ ಮತ್ತು
ಮಡಿಕೇರಿ: ವಸತಿ ಶಾಲೆಯೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 2ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ನಡೆದಿದೆ. ವಸತಿ ಶಾಲೆಯ 2ನೇ ತರಗತಿ ವಿದ್ಯಾರ್ಥಿ ಪುಷ್ಪಕ್ ಮೃತಪಟ್ಟಿದ್ದಾನೆ. ಪುಷ್ಪಕ್ ಚೆಟ್ಟಿಮಾನಿ ನಿವಾಸಿ ಅನೀಲ್ ಅವರ ಪುತ್ರ ಎಂದು ತಿಳಿದುಬಂದಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಾಟಗೇರಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಬೆಳಗಿನ
ಚೆನ್ನೈ: 20 ಮಕ್ಕಳ ಸಾವಿಗೆ ಸಂಬಂಧಿಸಿದಂತೆ ಕೋಲ್ಡ್ರಿಫ್ ಸಿರಪ್ ತಯಾರಕ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿ ಮಾಲೀಕನನ್ನು ಬಂಧಿಸಲಾಗಿದೆ. ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಿಸಿದ ಶ್ರೀಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಮಾಲೀಕ ಎಸ್. ರಂಗನಾಥನ್ ಅವರನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ಶ್ರೀಸನ್ ಫಾರ್ಮಾ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಕಂಪನಿಯ ಮಾಲೀಕ ರಂಗನಾಥನ್ ಅವರನ್ನು