ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಮಡಿಕೇರಿ: ಸ್ಯಾಂಡಲ್​ವುಡ್​ ನಟ ಅಭಿಷೇಕ್​ ಅಂಬರೀಷ್​ ತಮ್ಮ ಪತ್ನಿ ಅವಿವಾ  ಜೊತೆಗೆ ಕೊಡಗಿಗೆ ತೆರಳಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದ್ದಾರೆ. ಕಾವೇರಿ ಉಗಮಸ್ಥಾನವಾದ ತಲಕಾವೇರಿಗೆ ಭೇಟಿ ನೀಡಿದ ನವ ದಂಪತಿ ದೇವರ ದರ್ಶನ ಪಡೆದಿದ್ದಾರೆ. ಅಭಿಷೇಕ್​ ಮತ್ತು ಅವಿವಾ ಭಾಗಮಂಡಲದಲ್ಲಿರುವ ತಲಕಾವೇರಿಗೆ ತೆರಳಿ ಕಾವೇರಿ ಮಾತೆಗೆ ವಿಶೇಷ ಪೂಜೆ ನೆರವೇರಿದ್ದಾರೆ. ಪೂಜೆ

ದಾವಣಗೆರೆ: ಸಾಹಿತಿಗಳಿಗೆ ಅನಾಮಧೇಯ ಪತ್ರದ ಮೂಲಕ ಜೀವ ಬೆದರಿಕೆ ಪತ್ರ ಕಳುಹಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ದಾವಣಗೆರೆಯ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಪತ್ರ ಬರೆಯುತ್ತಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಶಿವಾಜಿ ರಾವ್‌ ಜಾಧವ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಸುಮಾರು ಎರಡು ವರ್ಷಗಳಿಂದ ಕೊಲೆ ಬೆದರಿಕೆ ಪತ್ರ ಬರೆಯುತ್ತಿದ್ದ

ಬೆಂಗಳೂರು: ಕಾವೇರಿ, ಕೃಷ್ಣಾ ಹಾಗೂ ಮಹಾದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಹಾಗೂ ನ್ಯಾಯ ಮಂಡಳಿಗಳ ಮುಂದೆ ವಾದ ಮಂಡನೆಗಾಗಿ ರಾಜ್ಯ ಸರ್ಕಾರವು ರೂ.122 ಕೋಟಿಗೂ ಅಧಿಕ ಮೊತ್ತವನ್ನು ಹಿರಿಯ, ಕಿರಿಯ ವಕೀಲರು ಹಾಗೂ ಅಡ್ವೊಕೇಟ್‌ ಜನರಲ್‌ಗಳಿಗೆ ಶುಲ್ಕದ ರೂಪದಲ್ಲಿ ಪಾವತಿಸಿದೆ ಎಂಬ ಅಂಶ ಮಾಹಿತಿ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಕರ್ನಾಟಕ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಬೆಂಗಳೂರಿನಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಅವರನ್ನು ತಮಿಳುನಾಡು ಮತ್ತು ಡಿಎಂಕೆ ಏಜೆಂಟ್ ಎಂದು ಕರೆದರು. ಕಾವೇರಿ ನದಿ ನೀರು

ಬೆಳ್ಳೂರು ಕ್ರಾಸ್(ಆದಿಚುಂಚನಗಿರಿ): ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿ.ಜಿ.ನಗರ ಬಳಿಯ ಬೆಳ್ಳೂರು ಕ್ರಾಸ್ ಬಳಿ ಬುಧವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ಮೃತಪಟ್ಟಿದ್ದಾರೆ. ರಸ್ತೆ ಬದಿ ನಿಂತಿದ್ದ ಕೆಎಸ್ ಆರ್ ಟಿಸಿ ಬಸ್​​​ಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.ಕಾರಿನಲ್ಲಿದ್ದ ಮಹಿಳೆ ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರು ಬೆಂಗಳೂರು

ಬೆಂಗಳೂರು:ಸೆ 27. ಎರಡು ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಹಿಂಪಡೆಯುವುದಾಗಿ ಹೇಳಿದ್ದ ರಿಸರ್ವ್ ಬ್ಯಾಂಕ್‌ ಆಫ್‌ ಇಂಡಿಯಾ ಪಿಂಕ್ ನೋಟ್ ಹಿಂದಿರುಗಿಸಿ, ಬೇರೆ ನೋಟು ಪಡೆಯುವಂತೆ ಸೆ.30ರವರೆಗೆ ಗಡುವು ನೀಡಿತ್ತು. ಸದ್ಯ ಈ ಅವಧಿ ಮುಕ್ತಾಯದ ಹಂತದಲ್ಲಿದ್ದು ಇನ್ನು ಕೇವಲ ಮೂರು ದಿನಗಳಷ್ಟೇ ಬಾಕಿ ಉಳಿದಿದೆ. ಕಳೆದ ಮೇ ನಲ್ಲಿ

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಮುಂಗಾರು ಮಳೆ ಕೊರತೆಯಿಂದ ತೀವ್ರ ಬರಗಾಲ ಉಂಟಾಗಿರುವಾಗ ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ಮಾಡುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಹಿರಿಯ ಚಳವಳಿಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಾಡಿದ್ದು ಅಂದರೆ ಸೆಪ್ಟೆಂಬರ್ 29ರಂದು ಶುಕ್ರವಾರ ಕರ್ನಾಟಕ ಬಂದ್ ಗೆ ಕರೆ ನೀಡಿದ್ದು ಯಾವುದೇ ಕಾರಣಕ್ಕೂ ಹಿಂತೆಗೆದುಕೊಳ್ಳುವುದಿಲ್ಲ

ಚಾಮರಾಜನಗರ: ಚಾಮರಾಜನಗರಕ್ಕೆ ಭೇಟಿ ನೀಡಿದರೆ ಮುಖ್ಯಮಂತ್ರಿಗಳು ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯ ನಂಬಿಕೆಯನ್ನು ಸಡ್ಡು ಸಿಎಂ ಸಿದ್ದರಾಮಯ್ಯ ಇಂದು ಬುಧವಾರ ಚಾಮರಾಜನಗರದ ಮಲೆ ಮಹದೇಶ್ವರಕ್ಕೆ ಭೇಟಿ ನೀಡಿದ್ದಾರೆ. ಕಳೆದ ರಾತ್ರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ವಾಸ್ತವ್ಯ ಹೂಡಿದ ಅವರು, ಎರಡನೇ ಬಾರಿಗೆ ಅವರು ಮುಖ್ಯಮಂತ್ರಿ ಆದ ಬಳಿಕ ಇದು ಮೊದಲ

ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣ ಸಂಬಂಧ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರಿ​ಗೆ ಕರ್ನಾಟಕ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಕೋರ್ಟ್ ಆನುಮತಿಯಿಲ್ಲದೇ ವಿದೇಶಕ್ಕೆ ಪ್ರಯಾಣಿಸುವಂತಿಲ್ಲ, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು. 5 ಲಕ್ಷ ಮೌಲ್ಯದ ಬಾಂಡ್ ಇಬ್ಬರು ಶ್ಯೂರಿಟಿ ಒದಗಿಸುವಂತೆ ಕೋರ್ಟ್ ಸೂಚಿಸಿದೆ. ಇನ್ನು ಬಂಧನವಾಗಿ

ಬೆಂಗಳೂರು: ಸೆ 25. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕನ್ನಡ ಸಂಘಟನೆಗಳ ಒಕ್ಕೂಟದ ವತಿಯಿಂದ ಸೆ.29 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್, ನಾಳಿನ ಬೆಂಗಳೂರು ಬಂದ್ ಗೆ ನಮ್ಮ ಬೆಂಬಲ ಇಲ್ಲ. ಅವರು ನಮ್ಮ