ಮಂಡ್ಯ: ಆತ್ಮಹತ್ಯೆಗೆ ಯತ್ನಿಸಿದ್ದ, ಸಾರಿಗೆ ಸಂಸ್ಥೆಯ ನಾಗಮಂಗಲ ಡಿಪೊ ಚಾಲಕ ಎಚ್.ಆರ್.ಜಗದೀಶ್ ಅವರನ್ನು ಮೈಸೂರಿನ ಆಸ್ಪತ್ರೆಗೆ ಕರೆದೊಯ್ಯುವಾಗ ಜೆಡಿಎಸ್ ಮುಖಂಡ, ಮಾಜಿ ಶಾಸಕ ಸುರೇಶ್ಗೌಡ ಅವರು, ಆಂಬುಲೆನ್ಸ್ ತಡೆದಿದ್ದಾರೆ ಎನ್ನಲಾದ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವರ್ಗಾವಣೆಯಿಂದ ಮನನೊಂದು ಕೀಟನಾಶಕ ಸೇವಿಸಿ ಕೆಎಸ್ಆರ್ಟಿಸಿ ಚಾಲಕ ಜಗದೀಶ್ ಅವರು ಆತ್ಮಹತ್ಯೆಗೆ
ಚಿಕ್ಕೋಡಿ:ಜು 09. ಜುಲೈ 6 ರಿಂದ ನಾಪತ್ತೆಯಾಗಿದ್ದ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತ ಆಶ್ರಮದ ಕಾಮಕುಮಾರ ನಂದಿ ಮಹಾರಾಜರು ಹತ್ಯೆಗೊಳಗಾಗಿದ್ದು, ಇಂದು ಅವರ ಅಂತ್ಯ ಸಂಸ್ಕಾರ ನಡೆಯಿತು. ಪಾರ್ಥಿವ ಶರೀರ ಮರಣ್ಣೋತ್ತರ ಪರೀಕ್ಷೆಗೆ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಹೋಗಿದ್ದು, ಅಲ್ಲಿಂದ ನೇರವಾಗಿ ಪೊಲೀಸ್ ಬಿಗಿ ಬಂದೋಬಸ್ತ್ ನಡುವೆ
ಗದಗ: ಅಮರನಾಥ ಯಾತ್ರೆಗೆ ತೆರಳುವ ಮಾರ್ಗಮಧ್ಯೆ ಭಾರೀ ಮಳೆಯಿಂದಾಗಿ ಗುಡ್ಡ ಕುಸಿತ ಉಂಟಾಗಿದ್ದು, ಪರಿಣಾಮ ಕರ್ನಾಟಕದ 83 ಮಂದಿ ಯಾತ್ರಾರ್ಥಿಗಳೆ ಮಾರ್ಗ ಮಧ್ಯೆ ಸಿಲುಕಿಕೊಂಡಿದ್ದಾರೆಂದು ತಿಳಿದುಬಂದಿದೆ. ಈ ಪೈಕಿ 23 ಮಂದಿ ಯಾತ್ರಾರ್ಥಿಗಳು ಗದಗ ಜಿಲ್ಲೆಯವರು ಎಂದು ಹೇಳಲಾಗುತ್ತಿದೆ. ಯಾತ್ರಾರ್ಥಿಗಳು ಸಂಕಷ್ಟಕ್ಕೆ ಸಿಲುಕಿಕೊಂಡಿರುವ ಸ್ಥಳದಿಂದಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ವಿಡಿಯೋ
ಕಾರವಾರ (ಉತ್ತರ ಕನ್ನಡ): ರಾಜ್ಯದಲ್ಲಿ ಮಳೆ ಸೃಷ್ಟಿಸಿದ ಅವಾಂತರಕ್ಕೆ 21 ಮಂದಿ ಬಲಿಯಾಗಿದ್ದು, 40ಕ್ಕೂ ಹೆಚ್ಚು ಜಾನುವಾರುಗಳು ಮೃತಪಟ್ಟಿವೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದ್ದಾರೆ. ಭಾರೀ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಕೊಚ್ಚಿ ಹೋಗಿ ಇಬ್ಬರು ಮೃತಪಟ್ಟ ಸಂಬಂಧ ಜಿಲ್ಲೆಯ ಕುಮಟಾ ತಾಲೂಕಿನ ಬೆಟ್ಕುಳಿ ಗ್ರಾಮಕ್ಕೆ ಭೇಟಿ ನೀಡಿದ
ಬೆಳಗಾವಿ: ಜು 6ರಿಂದ ನಾಪತ್ತೆಯಾಗಿದ್ದ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು (Acharya Shri 108 Kamkumarnandi Maharaj) ಇಂದು ಹತ್ಯೆಯಾಗಿರುವುದು ಬೆಳಕಿಗೆ ಬಂದಿದೆ. ಇದೀಗ ರಾಯಬಾಗ ತಾಲೂಕಿನ ಖಟಕಬಾವಿ ಗ್ರಾಮದ ಗದ್ದೆಯ ಕೊಳವೆಬಾವಿಯಲ್ಲಿ ಜೈನಮುನಿ ಮೃತದೇಹ
ಚಿಕ್ಕೋಡಿ: ಹಿರೇಕೋಡಿ ಗ್ರಾಮದಿಂದ ನಾಪತ್ತೆಯಾಗಿದ್ದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆಯಾಗಿರುವುದು ಇದೀಗ ಬಹಿರಂಗಗೊಂಡಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಎರಡು ದಿನಗಳಿಂದ ನಾಪತ್ತೆಯಾಗಿದ್ದರು. ಜುಲೈ 6ರಿಂದ ನಂದಿಪರ್ವತ ಆಶ್ರಮದಿಂದ ನಾಪತ್ತೆಯಾಗಿದ್ದ ಜೈನಮುನಿಗಾಗಿ ಜುಲೈ
ಬೆಂಗಳೂರು: ವಿಧಾನಸಭೆಯ 25ನೇ ಉಪಸಭಾಧ್ಯಕ್ಷರಾಗಿ ರುದ್ರಪ್ಪ ಮಾನಪ್ಪ ಲಮಾಣಿ, ಗುರುವಾರ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾದರು. ವಿಧಾನಸಭೆಯಲ್ಲಿಂದು ಪ್ರಶ್ನೋತ್ತರ ಅವಧಿಯ ನಂತರ ನಡೆದ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ರುದ್ರಪ್ಪ ಲಮಾಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಪ್ರಕಟಿಸಿದರು. ಸರಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ ಅವರು ಉಪಸಭಾಧ್ಯಕ್ಷ ಸ್ಥಾನಕ್ಕೆ ರುದ್ರಪ್ಪ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಭಾಗದಲ್ಲಿ ಕಳೆದ ಮುರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಅಪಾರ ಪ್ರಮಾಣದಲ್ಲಿ ಆಸ್ತಿ ಪಾಸ್ತಿ ನಷ್ಟ ಉಂಟಾಗಿದೆ. ಮಳೆಯಿಂದಾಗಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಶಾಲಾ- ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಮಳೆ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ
ಬೆಂಗಳೂರು: ಕರ್ನಾಟಕದಲ್ಲಿ ಜುಲೈ 10 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಬಹುನಿರೀಕ್ಷಿತ ಮುಂಗಾರು ಮಳೆ ರಾಜ್ಯಕ್ಕೆ ಆಗಮಿಸಿದ್ದು, ರೈತ ಸಮುದಾಯದಲ್ಲಿ ಸಂತಸ ಮೂಡಿಸಿದೆ. ರಾಜ್ಯ
ಬೆಂಗಳೂರು : ಪತಿ ಹಾಗೂ ಆತನ ಗರ್ಲ್ ಫ್ರೆಂಡ್ ವಿರುದ್ದ ಡೆತ್ ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆಬಂದಿದೆ. ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಹೆಗ್ಗನಹಳ್ಳಿ ನಿವಾಸಿ ಪವಿತ್ರಾ ಮೃತ ಮಹಿಳೆ. ಡೆತ್ ನೋಟ್ ಬರೆದಿಟ್ಟು ವಾಟ್ಸಾಪ್ ಸ್ಟೇಟಸ್ ಹಾಕಿ ನೇಣಿಗೆ ಶರಣಾಗಿದ್ದಾಳೆ.