ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಮುನ್ನ ಆಡಳಿತಾರೂಢ ಕಾಂಗ್ರೆಸ್ ನೀಡಿದ್ದ ಐದು ಭರವಸೆಗಳನ್ನು ಜಾರಿಗೊಳಿಸಲು ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷ ಬಿಜೆಪಿ ನಾಯಕರು ಇಂದು ಮಂಗಳವಾರ ಬೆಳಗ್ಗೆ ವಿಧಾನ ಸಭೆ ಕಲಾಪ ಸೇರಿದಾಗಲೇ ತೀವ್ರ ಪ್ರತಿಭಟನೆ ಮಾಡಿದ್ದರಿಂದ  ಸ್ಪೀಕರ್ ಅವರು ಕಲಾಪವನ್ನು ಅಪರಾಹ್ನ 3 ಗಂಟೆಗೆ ಮುಂದೂಡಿದರು. ಇಂದು ಬೆಳಗ್ಗೆ ಕಲಾಪ

ಬೆಂಗಳೂರು: ಇತ್ತ ಸದನದಲ್ಲಿ ಆಡಳಿತ ಮತ್ತು ವಿಪಕ್ಷ ನಾಯಕರು ಕದನ ಮುಂದುವರಿಸಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದರೂ, ಫ್ರೀಡಂ ಪಾರ್ಕ್ ನಲ್ಲಿ ಸರ್ಕಾರ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದರೂ ಅತ್ತ ಆಡಳಿತ, ವಿಪಕ್ಷ ನಾಯಕರು ಒಟ್ಟು ಸೇರಿ ಖುಷಿಯಿಂದ ಸಮಯ ಕಳೆದಿದ್ದಾರೆ. ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮ ಅವರು ಸೋಮವಾರ ಬೆಂಗಳೂರಿಗೆ ಆಗಮಿಸಿದ್ದು, ಎಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ ನೇರವಾಗಿ ಚಿಕ್ಕಬಳ್ಳಾಪುರಕ್ಕೆ ತೆರಳಿರುವ ರಾಷ್ಟ್ರಪತಿ ಮುರ್ಮು ಅವರು, ಮುದ್ದೇನಹಳ್ಳಿಯಲ್ಲಿ ಶ್ರೀ ಸತ್ಯಸಾಯಿ ವಿಶ್ವವಿದ್ಯಾಲಯದ

ಬೆಂಗಳೂರು: ಬಿಟ್ ಕಾಯಿನ್ (Bitcoin scam) ಹಗರಣಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಮರುಜೀವ ಸಿಕ್ಕಂತಾಗಿದೆ. ರಾಜ್ಯ ಸರ್ಕಾರ ಬಿಟ್ ಕಾಯಿನ್ ಹಗರಣ ಬಗ್ಗೆ ವಿಶೇಷ ತನಿಖಾ ತಂಡದಿಂದ(SIT probe)l ಮರು ತನಿಖೆ ಆದೇಶ ನೀಡಿದೆ. ಪ್ರಕರಣದ ಮೊದಲ ಹಂತವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದರು.

ಬೆಂಗಳೂರು: ನೂತನವಾಗಿ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ್ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರು, ಬೋಸರಾಜು  ಅವರು ಪ್ರಮಾಣವಚನ ಸ್ವೀಕರಿಸಿದರು. ಜಗದೀಶ ಶೆಟ್ಟರ್ ಮತ್ತು ಎನ್.ಎಸ್.ಭೋಸರಾಜು ಅವರು ಭಗವಂತನ ಹೆಸರಿನಲ್ಲಿ

ಬೆಂಗಳೂರು: ರಾಜ್ಯದಲ್ಲಿ ನೂತನ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ವಿಧಾನ ಮಂಡಲ ಜಂಟಿ ಅಧಿವೇಶನ ಇಂದು ಜುಲೈ 3ರಂದು ಆರಂಭವಾಗಿದೆ. ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಿದ್ದಾರೆ. ಜುಲೈ 7ಕ್ಕೆ 14ನೇ ಬಾರಿ ಸಿಎಂ ಸಿದ್ದರಾಮಯ್ಯ ಬಜೆಟ್​ ಮಂಡಿಸಲಿದ್ದಾರೆ. ಒಟ್ಟು 10 ದಿನಗಳ ಕಾಲ ವಿಧಾನಮಂಡಲ ಜಂಟಿ ಬಜೆಟ್

ಬೆಂಗಳೂರು: ರಾಜ್ಯ ವಿಧಾನಸಭೆ, ಪರಿಷತ್ ವಿಪಕ್ಷ ನಾಯಕ ಆಯ್ಕೆ, ಪ್ರತಿಪಕ್ಷಗಳ ನಾಯಕ ಆಯ್ಕೆ ಸೇರಿದಂತೆ ವಿವಿಧ ವಿಚಾರಗಳ ಕುರಿತು ರಾಜ್ಯ ಬಿಜೆಪಿ ನಾಯಕರು ಹಾಗೂ ಹೈಕಮಾಂಡ್ ಚರ್ಚೆಗಳು ನಡೆಸಿದ್ದು, ಆದರೂ, ಇನ್ನೂ ಈ ಕುರಿತು ಯಾವುದೇ ರೀತಿಯ ಅಂತಿಮ ನಿರ್ಧಾರಗಳಾಗಿಲ್ಲ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ

ವಿಜಯವಾಡ: ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ಹಾಗೂ ವೈಎಸ್‌ಆರ್ ತೆಲಂಗಾಣ ಪಕ್ಷದ (ವೈಎಸ್‌ಆರ್‌ಟಿಪಿ) ನಾಯಕಿ ವೈ.ಎಸ್.ಶರ್ಮಿಳಾ ಶೀಘ್ರದಲ್ಲೇ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ನಾಯಕ ಕೆ.ವಿ.ಪಿ.ರಾಮಚಂದ್ರರಾವ್ ಹೇಳಿದ್ದಾರೆ. ಶರ್ಮಿಳಾ ಶೀಘ್ರದಲ್ಲೇ ಕಾಂಗ್ರೆಸ್ ಕಟ್ಟಾ ಕಾಂಗ್ರೆಸ್ಸಿಗ ವೈ.ಎಸ್.ರಾಜಶೇಖರ ರೆಡ್ಡಿ ಅವರ ಪುತ್ರಿಯಾಗಿರುವ ಶರ್ಮಿಳಾ ಅವರನ್ನು

ಹುಬ್ಬಳ್ಳಿ: ‘ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗಲಿದ್ದು, ಜಲಪ್ರಳಯ ಆಗುವ ಲಕ್ಷಣಗಳಿವೆ. ಪ್ರಕೃತಿ ಮುನಿದಿದ್ದು ಸರಿಯಾಗಲಿದೆ. ಜಾಗತಿಕ ಮಟ್ಟದಲ್ಲಿ ದುರಂತ ಆಗುವುದಿದೆ. ಜನರ ಅಕಾಲ ಮೃತ್ಯು ಸಂಭವಿಸುವ ಸಾಧ್ಯತೆ ಇದೆ’ ಎಂದು ಕೋಡಿಮಠ ಮಹಾಸಂಸ್ಥಾನದ ಪೀಠಾಧ್ಯಕ್ಷ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು. ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜಾಗತಿಕ

ರಾಯಗಡ: ಒಡಿಶಾದ ರಾಯಗಡ ಜಿಲ್ಲೆಯ ಕ್ರಷರ್ ಘಟಕದಲ್ಲಿ ಶಂಕಿತ ನಕ್ಸಲೀಯರು 9 ಯಂತ್ರಗಳಿಗೆ ಬೆಂಕಿ ಹಚ್ಚಿದ್ದು,  ಆಸ್ತಿಪಾಸ್ತಿಗಳನ್ನು ದೋಚಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.  ಶುಕ್ರವಾರ ತಡರಾತ್ರಿ ಮುನಿಗೂಡ ಪೊಲೀಸ್ ಠಾಣಾ ವ್ಯಾಪ್ತಿಯ ದೇವುಕುಪಲಿ ಬಳಿ ಈ  ಘಟನೆ ನಡೆದಿದೆ. ಕೆಲವು ಮಹಿಳಾ ಕಾರ್ಯಕರ್ತರು ಸೇರಿದಂತೆ 10 ನಕ್ಸಲೀಯರು ಕ್ರಷರ್ ಘಟಕಕ್ಕೆ ನುಗ್ಗಿದ್ದು,