ಬೆಂಗಳೂರು: ಒಂದು ತಿಂಗಳೊಳಗೆ ಎಲ್ಲಾ ಇಲಾಖೆಗಳಲ್ಲೂ ಕನಿಷ್ಟ ಶೇ.50ರಷ್ಟು ಬಾಕಿ ಮೊತ್ತ ಬಿಡುಗಡೆ ಮಾಡಬೇಕು, ಇಲ್ಲದಿದ್ದರೆ, ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅವರು, ಬಾಕಿ ಬಿಲ್ ಪಾವತಿಸುವಂತೆ ನಾಲ್ಕು ನಾಲ್ಕು
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಐಟಿ ದಾಳಿಯಾಗಿದೆ. ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಬೆಳ್ಳಂಬೆಳಗ್ಗೆ ನಗರದ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ತೀವ್ರ ಶೋಧ ನಡೆಸುತ್ತಿದ್ದಾರೆ. ಮಲ್ಲೇಶ್ವರಂ, ಸದಾಶಿವನಗರ, ಡಾಲರ್ಸ್ ಕಾಲೋನಿ, ಮತ್ತಿಕೆರೆ, ಸರ್ಜಾಪುರ ರಸ್ತೆ ಸೇರಿದಂತೆ 10ಕ್ಕೂ ಹೆಚ್ಚು ಕಡೆ ಚಿನ್ನದ
ಬೆಂಗಳೂರು: ಆನೇಕಲ್ ಪಟ್ಟಣದ ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 14 ಮಂದಿ ಸಾವಿಗೀಡಾದ ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ಒಪ್ಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಆದೇಶಿಸಿದ್ದಾರೆ. ಇದೀಗ ಪೊಲೀಸರ ವಶದಲ್ಲಿರುವ ಅಂಗಡಿ ಮಾಲೀಕನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಮುಖ್ಯಮಂತ್ರಿ ಹೇಳಿದರು. 'ನಿಖರವಾಗಿ ಏನಾಯಿತು ಎಂದು ನಮಗೆ
ಆನೇಕಲ್(ಬೆಂಗಳೂರು): ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ನಿನ್ನೆ ಶನಿವಾರ ಸಾಯಂಕಾಲ ಸಂಭವಿಸಿದ ಭಾರೀ ಪಟಾಕಿ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಮೃತಪಟ್ಟ ಕಾರ್ಮಿಕರ ಪೈಕಿ ಬಹುತೇಕರು ತಮಿಳುನಾಡಿನ ಶಿವಕಾಶಿ ಮೂಲದವರಾಗಿದ್ದು ಮೃತದೇಹಗಳು ಸುಟ್ಟು ಕರಕಲಾಗಿವೆ. ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋದಾಮಿನ ಮಾಲಿಕರಾದ
ಬೆಂಗಳೂರು: ಮುಂಬರುವ 2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮೈತ್ರಿಗೆ ಎರಡೂ ಪಕ್ಷಗಳ ಒಳಗೂ ಅಸಮಾಧಾನ ಕೇಳಿಬರುತ್ತಿದೆ. ಈಗಾಗಲೇ ಜೆಡಿಎಸ್ ನಾಯಕರು ಬಹಿರಂಗವಾಗಿಯೇ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದು, ಕೆಲ ಬಿಜೆಪಿ ನಾಯಕರು ಕೂಡ ಮೈತ್ರಿಗೆ ಅಪಸ್ವರ ಎತ್ತಿದ್ದಾರೆ. ಶಾಸಕ ಎಸ್ಟಿ ಸೋಮಶೇಖರ್ ಕೂಡ ಬಹಿರಂಗವಾಗಿ
ಮೈಸೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಬಸವಣ್ಣನವರ ಧನೆಯಿಂದ ಪ್ರಭಾವಿತವಾಗಿವೆ, 12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರ ತತ್ವ ಸಿದ್ಧಾಂತದಲ್ಲಿ ನಮಗೆ ನಂಬಿಕೆಯಿದ್ದು, ಆ ಮಾರ್ಗದಲ್ಲಿ ನಡೆಯಲು ತಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಆಯೋಜಿಸಿದ್ದ ಬಸವ ಜಯಂತಿ
ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿ ಸಮೀಪದ ಕೆಕೋಡ್ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ. ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿವೆ. ಮನೆಯ ಕೋಣೆಯ ಒಳಗೆ ಕಟ್ಟಿಗೆಯನ್ನು ಕೂಡಿಸಿ ಬೆಂಕಿ ಹಚ್ಚಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಆತ್ಮಹತ್ಯೆಯ ಶಂಕೆ ಎದುರಾಗಿದೆ. ಅದೇ ಕುಟುಂಬದ ಮತ್ತೊಬ್ಬ ಸದಸ್ಯನ ಸ್ಥಿತಿ ಗಂಭೀರವಾಗಿದ್ದು,
ಬೆಂಗಳೂರು: 70 ‘ಅತಿ ಹಿಂದುಳಿದ ಸಮುದಾಯ’ಗಳ ಮುಖಂಡರ ಗುಂಪು ಗುರುವಾರ ಶಾಸಕರ ಭವನದಲ್ಲಿ ಸಭೆ ನಡೆಸಿದ್ದು, ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಸಮಯಾವಕಾಶ ಕೋರಿದೆ. ಸ್ಪಷ್ಟ ದಿನಾಂಕ ನಿಗದಿಪಡಿಸಿ ಕಾಂತರಾಜ್ ಆಯೋಗದ ವರದಿಯನ್ನು ಸಾರ್ವಜನಿಕವಾಗಿ ಮಂಡಿಸುವಂತೆ ಒತ್ತಾಯಿಸುತ್ತೇವೆ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ.ಎಸ್.ದ್ವಾರಕಾನಾಥ್,
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಜನತಾ ದಳ (ಜಾತ್ಯತೀತ) ಜೊತೆ ಬಿಜೆಪಿ ಮೈತ್ರಿಗೆ ಮಾಜಿ ಸಚಿವ ಮತ್ತು ಬಿಜೆಪಿ ಶಾಸಕ ಎಸ್ಟಿ ಸೋಮಶೇಖರ್ ವಿರೋಧ ವ್ಯಕ್ತ ಪಡಿಸಿದ್ದಾರೆ. ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಮೇಲಿನವರು ಸುಲಭವಾಗಿ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ. ಕೆಳಹಂತದ ಕಾರ್ಯಕರ್ತರು ಹಿಂಸೆ ಅನುಭವಿಸುತ್ತಾರೆ. ಉಸಿರುಕಟ್ಟುವ ವಾತಾವರಣ ಸೃಷ್ಟಿಯಾಗಿದೆ. ಮೈತ್ರಿಗೆ
ಬೆಂಗಳೂರು: ರಾಜ್ಯದಲ್ಲಿ ಸದ್ಯ ತಲೆದೋರಿರುವ ಬರ ಪರಿಸ್ಥಿತಿಯನ್ನು ಅವಲೋಕಿಸಲು ಕೇಂದ್ರದ ಮೂರು ತಂಡಗಳು ಗುರುವಾರ ಕರ್ನಾಟಕಕ್ಕೆ ಭೇಟಿ ನೀಡಲಿವೆ. ಮೌಲ್ಯಮಾಪನ ಆರಂಭಿಸುವ ಮುನ್ನ ತಂಡಗಳು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿವೆ ಎಂದು ಮೂಲಗಳು ಖಚಿತಪಡಿಸಿವೆ. ಅಕ್ಟೋಬರ್ 9ರವರೆಗೆ ರಾಜ್ಯದಲ್ಲಿಯೇ ಇರಲು ನಿರ್ಧರಿಸಲಾಗಿದ್ದು, ಈ ವೇಳೆ ತಂಡಗಳು ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ,