ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಬೆಂಗಳೂರು: ಉಡುಪಿಯ ಪ್ಯಾರಾಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯ ವಿಡಿಯೊವನ್ನು ಶೌಚಾಲಯದಲ್ಲಿ ಸಹಪಾಠಿಗಳು ಚಿತ್ರೀಕರಿಸಿದ ಘಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಪ್ರಕರಣ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಶಿಕ್ಷೆ ಕೈಗೊಳ್ಳಬೇಕೆಂದು ಬಿಜೆಪಿ ಆಗ್ರಹಿಸುತ್ತಿದೆ. ಘಟನೆ ನಡೆದಿರುವ ನೇತ್ರ ಜ್ಯೋತಿ ಕಾಲೇಜಿಗೆ ರಾಷ್ಟ್ರೀಯ ಮಹಿಳಾ ಆಯೋಗದ (National Commission for Women) ಸದಸ್ಯೆ

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ  ನೀಡುವ ಬಿಸಿಯೂಟದ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ. ಮಕ್ಕಳಿಗೆ ಪೌಷ್ಠಿಕಾಂಶವುಳ್ಳ ಆಹಾರ ನೀಡಬೇಕು ಎಂದು ಸರ್ಕಾರ ಚಿಂತನೆ ನಡೆಸುತ್ತಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಸಸ್ಯಾಹಾರ, ಮಾಂಸಾಹಾರದ ವಿಚಾರದಲ್ಲಿ ಚರ್ಚೆಗಳು ಆರಂಭವಾಗಿವೆ. ಕಳೆದ ಕೆಲ ವರ್ಷಗಳಿಂದ ಶಾಲಾ ಮಕ್ಕಳಿಗೆ ನೀಡುವ ಮೊಟ್ಟೆ ವಿಚಾರದಲ್ಲೂ ವಿವಾದ

ತುಮಕೂರು: ಸೂತಕವು ದೇವರಿಗೆ ಆಗಲ್ಲ ಎಂದು ಬಾಣಂತಿ, ಹಸುಗೂಸನ್ನೇ ಊರಿನಿಂದ ಹೊರಗಿಟ್ಟ ಕುಟುಂಬಸ್ಥರು ಇದೀಗ ಮೌಡ್ಯ ಆಚರಣೆಯಿಂದಾಗಿ ಮಗುವನ್ನೇ ಕಳೆದುಕೊಂಡಿದ್ದಾರೆ. ತುಮಕೂರು ಸಮೀಪದ ಮಲ್ಲೇನಹಳ್ಳಿ ಗೊಲ್ಲರಹಟ್ಟಿಯಲ್ಲಿ ಸಿದ್ದೇಶ್ ಮತ್ತು ವಸಂತ ದಂಪತಿಯ ಮಗು ವಿಪರೀತ ಶೀತದಿಂದ ಬಳಲಿ ಮೃತಪಟ್ಟಿದೆ. ಶೀತ ಹೆಚ್ಚಾಗಿದ್ದರಿಂದ ಮಗುವನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ

ಹಾವೇರಿ:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ಹಾವೇರಿ ಜಿಲ್ಲಾಸ್ಪತ್ರೆಗೆ ದಿಢೀರ್  ಭೇಟಿ  ನೀಡಿದ್ದು, ಅಲ್ಲಿನ ಅವ್ಯವಸ್ಥೆ ಕಂಡು ಕೆಂಡಾಮಂಡಲರಾದರು. ಜಿಲ್ಲಾಸ್ಪತ್ರೆಯ‌ ಮಕ್ಕಳ ವಾರ್ಡ್, ತಾಯಂದಿರ ವಾರ್ಡ್ ಸೇರಿದಂತೆ ಬಹುತೇಕ ವಾರ್ಡ್ ಗಳು ಮಳೆಯಿಂದ ಸೋರುತ್ತಿದ್ದು, ರೋಗಿಗಳಿಗೆ ತೀವ್ರ ಸಮಸ್ಯೆಯಾಗಿರುವ  ಹಿನ್ನೆಲೆಯಲ್ಲಿ ಇಂದು ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ, ಮಹಿಳೆಯರು ಮತ್ತು ಮಕ್ಕಳನ್ನು

ಬೆಂಗಳೂರು: ಕರ್ನಾಟಕದಲ್ಲಿ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಸಂಭವಿಸಿದ ವಿವಿಧ ದುರಂತಗಳಲ್ಲಿ ಈ ವರೆಗೂ 5 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ. ಹೌದು.. ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ಸ್ಥಗಿತಗೊಂಡಿದ್ದು, ಕುಶಾಲನಗರ ಮತ್ತು ಬೆಳಗಾವಿ ನಗರಗಳ ವಸತಿ ಪ್ರದೇಶಗಳಿಗೆ ಪ್ರವಾಹದ ನೀರು ನುಗ್ಗಿದೆ. ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಮಳೆ

ಬೆಂಗಳೂರು: 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಮಾತುಗಳ ಕುರಿತು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಮುಂಬರುವ ಲೋಕಸಬಾ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಹೋರಾಟ ನಡೆಸಲಿದೆ. ಆದಾಗ್ಯೂ, ಪರಿಸ್ಥಿತಿ ಆಧಾರಿಸಿ ಪಕ್ಷ ಮುಂದೆ ನಿರ್ಧಾರ ಕೈಗೊಳ್ಳಲಿದೆ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಹಿರಿಯ ನಾಯಕ ಮದನ್ ದಾಸ್ ದೇವಿ ಸೋಮವಾರ ಬೆಳಗ್ಗೆ ಇಲ್ಲಿ ನಿಧನರಾದರು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮಹಾರಾಷ್ಟ್ರ ಮೂಲದ 81 ವರ್ಷ ವಯಸ್ಸಿನ ಹಿಂದುತ್ವ ಸಿದ್ಧಾಂತವಾದಿ ಬೆಂಗಳೂರಿನ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಆರ್‌ಎಸ್‌ಎಸ್ ಕಾರ್ಯಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ

ಬೆಂಗಳೂರು: ತಡವಾಗಿಯಾದರೂ ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದೆ. ಕಳೆದ ಒಂದೆರಡು ವಾರದಿಂದ ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕಾವೇರಿ, ಭೀಮಾ ಸೇರಿ ಪ್ರಮುಖ ನದಿಗಳ ನೀರಿನಮಟ್ಟದಲ್ಲಿ ದಿಢೀರ್ ಏರಿಕೆಯಾಗಿ ಕರಾವಳಿ, ಮಲೆನಾಡು ಸೇರಿ ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಪ್ರವಾಹದ ಆತಂಕ ಕಾಣಿಸಿಕೊಂಡಿದೆ. ರಾಜ್ಯದ 11 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಅಲರ್ಟ್ ಘೋಷಣೆ ಮಾಡಿದ್ದು, 11

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಕಾರ್ಡ್​ಗಳನ್ನು  ವಿತರಿಸುವ ಮೂಲಕ ಮತದಾರರಿಗೆ ಆಮಿಷವೊಡ್ಡಿರುವ ಹಿನ್ನೆಲೆಯಲ್ಲಿ ವರುಣಾ ಕ್ಷೇತ್ರದ ಶಾಸಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನೆ 123(1) ಪ್ರಕಾರ ಮತದಾರರಿಗೆ ಆಮಿಷ ಒಡ್ಡುವಂತಿಲ್ಲ. ಆದರೆ ಕಾಂಗ್ರೆಸ್ ಪಕ್ಷ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಗಾರು ಬಜೆಟ್ ಅಧಿವೇಶನದ ಕೊನೆಯ ದಿನವಾದ ಇಂದು ಶುಕ್ರವಾರ ಸಿಎಂ ಸಿದ್ದರಾಮಯ್ಯ ವಿಧಾನ ಪರಿಷತ್ತಿನಲ್ಲಿ ಬಜೆಟ್ ಮಂಡನೆ ಮೇಲಿನ ಚರ್ಚೆಗೆ ಉತ್ತರಿಸಿದರು. ಈ ವೇಳೆ 10 ಮಂದಿ ಬಿಜೆಪಿ ಶಾಸಕರ ಅಮಾನತು ಖಂಡಿಸಿ ಬಿಜೆಪಿಯ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು ಕೊನೆಯ ದಿನವಾದ ಇಂದು ಕೂಡ