ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾದ ಆಕರ್ಷಣೆಯ ಕೇಂದ್ರಬಿಂದುವಾಗಿರುವ ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಸಂಜೆ 4.42ರಿಂದ 5.06 ವರೆಗಿನ ಕುಂಭ ಲಗ್ನದ ಶುಭ ಮುಹೂರ್ತದಲ್ಲಿ, ಚಿನ್ನದ ಅಂಬಾರಿಯಲ್ಲಿ ಆಸೀನಳಾಗಿರುವ ಚಾಮುಂಡೇಶ್ವರಿ ತಾಯಿಗೆ ಸಿಎಂ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿ ಆರಂಭಗೊಂಡಿದೆ. ಜಂಬೂ ಸವಾರಿಗೆ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಅಂತಿಮ ಘಟ್ಟಕ್ಕೆ ತಲುಪಿದೆ. ಇಂದು ವಿಜಯದಶಮಿ ಜಂಬೂ ಸವಾರಿಯೊಂದಿಗೆ ನವರಾತ್ರಿ ಹಬ್ಬ ಮುಕ್ತಾಯವಾಗುತ್ತಿದೆ. ಈ ವರ್ಷ 11 ದಿನ ದಸರಾ ಆಚರಣೆ ಕಂಡಿದೆ. ಇಷ್ಟು ದಿನಗಳಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಅರಮನೆಯಲ್ಲಿ ಖಾಸಗಿ ದರ್ಬಾರ ನಡೆಯಿತು. ಚಾಮುಂಡೇಶ್ವರಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ದೇವಿಗೆ ವಿಶೇಷ
ಮೈಸೂರು: ಗಾಂಧೀಜಿಯವರ ತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶಪ್ರಾಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ. ಗಾಂಧಿ ಜಯಂತಿ ಪ್ರಯುಕ್ತ ಮೈಸೂರಿನಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮುಖ್ಯಮಂತ್ರಿಗಳು ಸುದ್ದಿಗಾರರೊಂದಿಗೆ ಮಾತನಾಡಿದರು. ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತಿದೆ. ಬಾಪು ಅವರ ನೇತೃತ್ವದಲ್ಲಿ ನಡೆದ ಹೋರಾಟದ ಫಲದಿಂದ
ಮೈಸೂರು: ಇಂದು ಆಯುಧಪೂಜೆ, ಮಹಾನವಮಿ ಪ್ರಯುಕ್ತ ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ ಮನೆ ಮಾಡಿದೆ. ಬೆಳಗ್ಗೆಯಿಂದಲೇ ಸಾಂಪ್ರದಾಯಿಕ ಪೂಜೆ-ಪುನಸ್ಕಾರಗಳು ನಡೆದಿದೆ. ಮೈಸೂರು ರಾಜಸಂಸ್ಥಾನ ಪರಂಪರೆಯಂತೆ ಯದುವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪೂಜಾ ಕೈಂಕರ್ಯ ನೆರವೇರಿಸಿದರು. ಬೆಳಗ್ಗೆ ಅರಮನೆಯಲ್ಲಿ ಚಂಡಿಕಾ ಹೋಮ ನಡೆದಿದೆ. 'ಆಯುಧ ಪೂಜೆ'ಗೆ ರಾಜ ವೈಭವ; ಮೆರವಣಿಗೆಯಲ್ಲಿ
ಬೆಂಗಳೂರು: ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಮನೆಯೊಂದರಲ್ಲಿ ಸಂಭವಿಸಿದ ನಿಗೂಢ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಂಪತಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಸುದರ್ಶನ್ (32) ಮತ್ತು ಕಾವ್ಯಾ (28) ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲೆಯಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ, ಚಿಕಿತ್ಸೆ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ನಡೆಯುತ್ತಿರುವ ಸಮಯದಲ್ಲೇ ಸಾಂಸ್ಕೃತಿಕ ನಗರಿ ಬೆಚ್ಚಿ ಬೀಳುವಂತಹ ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದೆ. ಮೈಸೂರಿನ ವಿಜಯನಗರ ಪೊಲೀಸರು, ಸರ್ಕಾರೇತರ ಸಂಸ್ಥೆ(ಎನ್ ಜಿಒ) ಒಡನಾಡಿ ಸಹಯೋಗದೊಂದಿಗೆ ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ವರ್ಜಿನ್ ಸೆಕ್ಸ್ ದಂಧೆಯನ್ನು ಬೇಧಿಸಿದ್ದಾರೆ. ಇತ್ತೀಚೆಗೆ ಋತುಮತಿಯಾದ ಅಪ್ರಾಪ್ತ ಬಾಲಕಿಯೊಂದಿಗೆ ಲೈಂಗಿಕ ಸಂಪರ್ಕ ಏರ್ಪಡಿಸಲು 20
ಬೆಂಗಳೂರು: ನಗರದ ಮಲ್ಲೇಶ್ವರಂನ ಪೈಪ್ ಲೈನ್ ರೋಡ್‍ನಲ್ಲಿರುವ ಪೀಠೋಪಕರಣಗಳ ಮಳಿಗೆಯೊಂದರಲ್ಲಿ ಇಂದು ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಮಲ್ಲೇಶ್ವರಂನ ದತ್ತಾತ್ರೇಯ ದೇವಸ್ಥಾನ ರಸ್ತೆಯಲ್ಲಿರುವ ಅಂಗಡಿಯಲ್ಲಿ ಮಧ್ಯರಾತ್ರಿ 2:30ರ ಸುಮಾರಿಗೆ ಅಂಗಡಿಗೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಐದು ಕೋಟಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಅಲ್ಲದೇ
ಮೈಸೂರು: ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಅವರ ಅಂತ್ಯಸಂಸ್ಕಾರ ಇಂದು ಮಧ್ಯಾಹ್ನ 12:30ಕ್ಕೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರ ಭೂಮಿಯಲ್ಲಿ ನಡೆಯಿತು. ಪತ್ನಿ ಸರಸ್ವತಿ, ಕುಟುಂಬಸ್ಥರು, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಹಲವು ಗಣ್ಯರು ಸರಸ್ವತಿ ಪುತ್ರನಿಗೆ ಕಣ್ಣೀರಿನ ವಿದಾಯ ಹೇಳಿದರು. ಪುತ್ರರಾದ ರವಿಶಂಕರ್, ಉದಯ್ ಶಂಕರ್ ಅಂತಿಮ
ಬೆಳಗಾವಿ: ನೆರೆಯ ತೆಲಂಗಾಣಕ್ಕೆ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಟ್ರಕ್‌ಗೆ ಐನಾಪುರ ಪಟ್ಟಣದಲ್ಲಿ ಸೋಮವಾರ ರಾತ್ರಿ ಸ್ಥಳೀಯರು ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಯ್‌ಬಾಗ್ ತಾಲ್ಲೂಕಿನ ಕುಡಚಿ ಪಟ್ಟಣದಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ಟ್ರಕ್ ಅನ್ನು ಕಾಗವಾಡ ತಾಲ್ಲೂಕಿನ ಸಿದ್ದೇಶ್ವರ ದೇವಸ್ಥಾನದ ಬಳಿ ತಡೆದು ನಿಲ್ಲಿಸಲಾಗಿದೆ. ಸ್ಥಳೀಯರು ಪರಿಶೀಲನೆ ನಡೆಸಿದಾಗ, ವಾಹನದೊಳಗೆ ಗೋಮಾಂಸ ಇರುವುದು
ಬೆಂಗಳೂರು: ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲೂ ಒಂದು ಟಿಕೆಟ್ನ ಬೆಲೆ 200 ರೂಪಾಯಿಗೆ ನಿಗದಿಪಡಿಸಿ ಸಿದ್ದರಾಮಯ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಸರ್ಕಾರದ ದರ ನಿಗದಿ ಪ್ರಶ್ನಿಸಿ ಮಲ್ಟಿಪ್ಲೆಕ್ಸ್ ಹಾಗೂ ಹೊಂಬಾಳೆ ಫಿಲ್ಮ್ಸ್ ಹೈಕೋರ್ಟ್ ಮೊರೆ ಹೋಗಿತ್ತು. ಸರ್ಕಾರದ ಈ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ಕೊಟ್ಟಿದೆ. ಪರಭಾಷಾ ಸಿನಿಮಾಗಳ