ಬೆಂಗಳೂರು: ಬೆಳಗಾವಿ ಮೂಲದ ಕಾಂಟ್ರ್ಯಾಕ್ಟರ್ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪ ಅವರಿಗೆ ಭಾರೀ ಗೆಲುವು ಸಿಕ್ಕಿದೆಎನ್ನಬಹುದು. ಬೆಂಗಳೂರಿನ ಜನ ಪ್ರತಿನಿಧಿ ನ್ಯಾಯಾಲಯವು ಬಿ ರಿಪೋರ್ಟ್ ನ್ನು ಎತ್ತಿ ಹಿಡಿದಿದೆ. ಇದರಿಂದ ಪ್ರಕರಣದಲ್ಲಿ ಈಶ್ವರಪ್ಪ ಅವರಿಗೆ ಭಾರೀ ಗೆಲುವು ಸಿಕ್ಕಿದೆ ಎನ್ನಬಹುದು.
ವಿಜಯನಗರ: ಪ್ರತಿಷ್ಠಿತ ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್(ಬಿಡಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಆನಂದ್ ಸಿಂಗ್ ಅವರು ಶನಿವಾರ ದಿಢೀರ್ ರಾಜೀನಾಮೆ ನೀಡಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚಗೆ ಗ್ರಾಸವಾಗಿದೆ. ರಾಜೀನಾಮೆಗೆ ವೈಯಕ್ತಿಕ ಕಾರಣ ನೀಡಿರುವ ಆನಂದ್ ಸಿಂಗ್ ಅವರು, ಜುಲೈ 1ರಿಂದಲೇ ಅನ್ವಯ ಆಗುವಂತೆ ರಾಜೀನಾಮೆ ನೀಡಿದ್ದಾರೆ. ಗ್ರಾಮೀಣ ಭಾಗದ
ಬೆಂಗಳೂರು: ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜುಲೈ 19 ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಗ್ರಾಮ ಒನ್ ಅಥವಾ ಬಾಪೂಜಿ ಸೇವಾ
ಬೆಂಗಳೂರು: ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಇಂದು ಬುಧವಾರ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ನಾಯಕರು ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು. ಬಿಜೆಪಿ ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಿ, ರಾಜ್ಯ ಸರ್ಕಾರದ ವಿರುದ್ಧ
ಬೆಂಗಳೂರು: ನಗರದಲ್ಲಿ ಟೆಕ್ ಕಂಪನಿಯೊಂದರ ವ್ಯವಸ್ಥಾಪಕ ನಿರ್ದೇಶಕ (MD) ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಹತ್ಯೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಘಟನೆ ನಡೆದ 24 ಗಂಟೆಯೊಳಗೆ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ಫಿಲೆಕ್ಸ್, ಶಿವು ಮತ್ತು ಬೆಂಗಳೂರಿನ ರೂಪೇನಾ ಅಗ್ರಹಾರದ ವಿನಯ್ ರೆಡ್ಡಿ ಬಂಧಿತ ಆರೋಪಿಗಳು. ಬೆಂಗಳೂರಿನ ಅಮೃತಹಳ್ಳಿಯಲ್ಲಿ
ಬೆಂಗಳೂರು: ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ವಿಮಾನವೊಂದು ತುರ್ತು ಭೂಸ್ಪರ್ಶ ಮಾಡಿದ್ದು ಕೂದಲೆಳೆ ಅಂತರದಲ್ಲಿ ಭಾರಿ ಅನಾಹುತವೊಂದು ತಪ್ಪಿದೆ. ಫ್ಲೈ ಬೈ ವೈರ್ ಪ್ರೀಮಿಯರ್ 1ಎ ವಿಮಾನವು ತನ್ನ ನೋಸ್ ಲ್ಯಾಂಡಿಂಗ್ ಗೇರ್ನಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನಲೆಯಲ್ಲಿ ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ಎಎಲ್) ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ
ಮಂಡ್ಯ: ಆತ್ಮಹತ್ಯೆಗೆ ಯತ್ನಿಸಿದ್ದ, ಸಾರಿಗೆ ಸಂಸ್ಥೆಯ ನಾಗಮಂಗಲ ಡಿಪೊ ಚಾಲಕ ಎಚ್.ಆರ್.ಜಗದೀಶ್ ಅವರನ್ನು ಮೈಸೂರಿನ ಆಸ್ಪತ್ರೆಗೆ ಕರೆದೊಯ್ಯುವಾಗ ಜೆಡಿಎಸ್ ಮುಖಂಡ, ಮಾಜಿ ಶಾಸಕ ಸುರೇಶ್ಗೌಡ ಅವರು, ಆಂಬುಲೆನ್ಸ್ ತಡೆದಿದ್ದಾರೆ ಎನ್ನಲಾದ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವರ್ಗಾವಣೆಯಿಂದ ಮನನೊಂದು ಕೀಟನಾಶಕ ಸೇವಿಸಿ ಕೆಎಸ್ಆರ್ಟಿಸಿ ಚಾಲಕ ಜಗದೀಶ್ ಅವರು ಆತ್ಮಹತ್ಯೆಗೆ
ಚಿಕ್ಕೋಡಿ:ಜು 09. ಜುಲೈ 6 ರಿಂದ ನಾಪತ್ತೆಯಾಗಿದ್ದ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತ ಆಶ್ರಮದ ಕಾಮಕುಮಾರ ನಂದಿ ಮಹಾರಾಜರು ಹತ್ಯೆಗೊಳಗಾಗಿದ್ದು, ಇಂದು ಅವರ ಅಂತ್ಯ ಸಂಸ್ಕಾರ ನಡೆಯಿತು. ಪಾರ್ಥಿವ ಶರೀರ ಮರಣ್ಣೋತ್ತರ ಪರೀಕ್ಷೆಗೆ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಹೋಗಿದ್ದು, ಅಲ್ಲಿಂದ ನೇರವಾಗಿ ಪೊಲೀಸ್ ಬಿಗಿ ಬಂದೋಬಸ್ತ್ ನಡುವೆ
ಗದಗ: ಅಮರನಾಥ ಯಾತ್ರೆಗೆ ತೆರಳುವ ಮಾರ್ಗಮಧ್ಯೆ ಭಾರೀ ಮಳೆಯಿಂದಾಗಿ ಗುಡ್ಡ ಕುಸಿತ ಉಂಟಾಗಿದ್ದು, ಪರಿಣಾಮ ಕರ್ನಾಟಕದ 83 ಮಂದಿ ಯಾತ್ರಾರ್ಥಿಗಳೆ ಮಾರ್ಗ ಮಧ್ಯೆ ಸಿಲುಕಿಕೊಂಡಿದ್ದಾರೆಂದು ತಿಳಿದುಬಂದಿದೆ. ಈ ಪೈಕಿ 23 ಮಂದಿ ಯಾತ್ರಾರ್ಥಿಗಳು ಗದಗ ಜಿಲ್ಲೆಯವರು ಎಂದು ಹೇಳಲಾಗುತ್ತಿದೆ. ಯಾತ್ರಾರ್ಥಿಗಳು ಸಂಕಷ್ಟಕ್ಕೆ ಸಿಲುಕಿಕೊಂಡಿರುವ ಸ್ಥಳದಿಂದಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ವಿಡಿಯೋ
ಕಾರವಾರ (ಉತ್ತರ ಕನ್ನಡ): ರಾಜ್ಯದಲ್ಲಿ ಮಳೆ ಸೃಷ್ಟಿಸಿದ ಅವಾಂತರಕ್ಕೆ 21 ಮಂದಿ ಬಲಿಯಾಗಿದ್ದು, 40ಕ್ಕೂ ಹೆಚ್ಚು ಜಾನುವಾರುಗಳು ಮೃತಪಟ್ಟಿವೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದ್ದಾರೆ. ಭಾರೀ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಕೊಚ್ಚಿ ಹೋಗಿ ಇಬ್ಬರು ಮೃತಪಟ್ಟ ಸಂಬಂಧ ಜಿಲ್ಲೆಯ ಕುಮಟಾ ತಾಲೂಕಿನ ಬೆಟ್ಕುಳಿ ಗ್ರಾಮಕ್ಕೆ ಭೇಟಿ ನೀಡಿದ