ಸಕಲೇಶಪುರ: ಆ 31. ಆಲೂರು ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ಗಾಯಗೊಂಡಿದ್ದ ಭೀಮ ಕಾಡಾನೆಗೆ ಚಿಕಿತ್ಸೆ ನೀಡಲು ಶಾರ್ಪ್ ಶೂಟ್ ಮುಖಾಂತರ ಅರವಳಿಕೆ ನೀಡಿದ ಸಂದರ್ಭದಲ್ಲಿ ಭೀಮ ಕಾಡಾನೆ ಓಡಿ ಬಂದು ಅರಣ್ಯ ಇಲಾಖೆ ಶಾರ್ಪ್ ಶೂಟರ್ ವೆಂಕಟೇಶ್ ರವರ ಮೇಲೆ ದಾಳಿ ನಡೆಸಿರುವ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ವೆಂಕಟೇಶ್
ಮೈಸೂರು: ಮಳೆಯಿಲ್ಲದೆ ರಾಜ್ಯ ಸಂಕಷ್ಟಕ್ಕೆ ಸಿಲುಕಿದ್ದರೂ, ವಿರೋಧ ನಡುವಲ್ಲೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶಕ್ಕೆ ಮಣಿದ ರಾಜ್ಯ ಸರ್ಕಾರ, ಬುಧವಾರದಿಂದಲೇ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಮಾಡುವುದನ್ನು ಆರಂಭಿಸಿದೆ. ತಮಿಳುನಾಡಿಗೆ ನೀರು ಹರಿಸಲು ಕಾವೇರಿ ನೀರಾವರಿ ಪ್ರಾಧಿಕಾರ ಆದೇಶ ಹಿನ್ನಲೆ ಕೆಆರ್ಎಸ್ ಡ್ಯಾಂನಿಂದ ನದಿಗೆ ನೀರು ಹರಿಸಲಾಗುತ್ತಿದೆ
ಹುಬ್ಬಳ್ಳಿ: ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆಂಬ ವಿಷಯ ಎಲ್ಲೆಡೆ ಹರಿದಾಡುತ್ತಿದೆ. ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಮುನ್ನ ಪಕ್ಷದೊಳಗಿನ ನಾಯಕರ ಗುಂಪು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಮೂಲೆಗುಂಪು ಮಾಡಲು ಯತ್ನಿಸುತ್ತಿದೆಯೇ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದಾಗಿನಿಂದ ಜೋಶಿ ಜೊತೆ
ಬೆಂಗಳೂರು: ಪ್ರವಾಹ ಹಾಗೂ ಭೂ ಕುಸಿತದಿಂದ ತತ್ತರಿಸಿರುವ ಹಿಮಾಚಲ ಪ್ರದೇಶಕ್ಕೆ ಕರ್ನಾಟಕ ಆರ್ಥಿಕ ನೆರವು ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆದೇಶದಂತೆ 15 ಕೋಟಿ ರೂಪಾಯಿಯನ್ನು ಹಣಕಾಸು ಇಲಾಖೆ ಹಣ ಬಿಡುಗಡೆ ಮಾಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ಸಂಕಷ್ಟದ ಸಮಯದಲ್ಲಿ ನಮ್ಮ ಸಹೋದರ ಸಹೋದರಿಯರೊಂದಿಗೆ ನಿಲ್ಲುವುದು ಮುಖ್ಯವಾಗಿದೆ.
ಮಡಿಕೇರಿ: ಸೋಮವಾರ ನಸುಕಿನ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದಿವಂಗತ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಪ್ರತಿಮೆಗೆ ಧಕ್ಕೆಯಾಗಿದೆ. ಹಿಂದಿನ ವರ್ಷಗಳಲ್ಲಿ ಸಾಕಷ್ಟು ಹೋರಾಟದ ನಂತರ ಸ್ಥಾಪಿಸಲಾದ ಈ ಪ್ರತಿಮೆ ಸುಮಾರು 50 ವರ್ಷ ಹಳೆಯದು. ವೇಗವಾಗಿ ಬಂದ ಕೆಎಸ್ಆರ್ಟಿಸಿ ಬಸ್ ಪ್ರತಿಮೆ ಇದ್ದ ವೃತ್ತಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅದು
ಮಂಡ್ಯ: ಕೃಷಿ ಸಚಿವ ಚಲುವರಾಯಸ್ವಾಮಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂದು ಆರೋಪಿ ರಾಜ್ಯಪಾಲ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಬಂಧಿಸಿದ್ದ ಇಬ್ಬರು ಕೃಷಿ ಅಧಿಕಾರಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಆರೋಪಿಗಳನ್ನು 3 ದಿನ ಪೊಲೀಸರ ವಶಕ್ಕೆ ನೀಡಿ ಸ್ಥಳೀಯ ನ್ಯಾಯಾಲಯ ಆದೇಶ
ಬೆಂಗಳೂರು: ಕಾವೇರಿ ಮತ್ತು ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಆ.30ರಂದು ಸರ್ವ ಪಕ್ಷಗಳ ಸಭೆ ನಡೆಯಲಿದೆ. ರಾಜ್ಯದಲ್ಲಿ ಮಳೆ ಕೊರತೆಯಿಂದ ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರು ಕಡಿಮೆ ಇದೆ. ಇಂತಹ ಸಂಕಷ್ಟ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡಬೇಕು ಎಂಬ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ
ದಾವಣಗೆರೆ: ದಾವಣಗೆರೆ ಮೂಲದ ಟೆಕ್ಕಿ ದಂಪತಿ ಹಾಗೂ ಅವರ ಪುತ್ರ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಅಮೆರಿಕಾದ ಮೆರಿಲ್ಯಾಂಡ್ ರಾಜ್ಯದ ಬಾಲ್ಟಿಮೋರ್ನಲ್ಲಿ ನಡೆದಿದೆ. ಮೃತರನ್ನು ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹಾಲೆಕಲ್ಲು ಗ್ರಾಮದ ಯೋಗೇಶ್ ಹೊನ್ನಾಳ(37), ಪ್ರತಿಭಾ(35), ಯಶ್(6) ಎಂದು ಗುರುತಿಸಲಾಗಿದೆ. ಕಳೆದ 9 ವರ್ಷಗಳಿಂದ ಅಮೆರಿಕದಲ್ಲಿ ವಾಸವಾಗಿದ್ದ ಯೋಗೇಶ್ ಹಾಗೂ ಪ್ರತಿಭಾ ಇಬ್ಬರೂ
ಬೆಂಗಳೂರು: ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರಿ ಸದ್ದು ಮಾಡಿದ್ದ 40 ಪರ್ಸೆಂಟ್ಕಮಿಷನ್ ಆರೋಪದ ಬಗ್ಗೆ ಸಿದ್ದರಾಮಯ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಈ ಮೂಲಕ ಪ್ರತಿಪಕ್ಷ ಬಿಜೆಪಿಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ಅಧಿಕಾರಕ್ಕೆ ಬಂದ ಮೂರೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ, ರಾಜ್ಯ ಗುತ್ತಿಗೆದಾರರ ಸಂಘದ
ಬೆಳಗಾವಿ:ಆ 17: ಸತತ ಯತ್ನದ ನಂತರವೂ ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣನಾಗದಿದ್ದಕ್ಕೆ ಮನನೊಂದು ನಿಪ್ಪಾಣಿ ತಾಲೂಕಿನಲ್ಲಿ ಗುರುವಾರ 24 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಮೃತನನ್ನು ಬೆಳಗಾವಿ ಸಮೀಪದ ನಿಪ್ಪಾಣಿ ತಾಲೂಕಿನ ಹಂಚಿನಾಳ್ ಗ್ರಾಮದ ನಿವಾಸಿ ಅಪ್ಪಾಸೊ ಶಿವಾಜಿ ಪಾನಡೆ ಎಂದು ಗುರುತಿಸಲಾಗಿದೆ. ಯುವಕ ಬಾಲ್ಯದಿಂದಲೂ ಸೇನೆಗೆ ಸೇರುವ