ಕಾರವಾರ: ಆಘಾತಕಾರಿ ಘಟನೆಯೊಂದರಲ್ಲಿ ಗೋವಾದ ಮೂವರ ಕುಟುಂಬವೊಂದು ಸಾಲದ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರು ಇಲ್ಲಿನ ಕಾಳಿ ನದಿ ದಂಡೆಯಲ್ಲಿ ಸಾವನ್ನಪ್ಪಿದ್ದರೆ, ಗೋವಾದಲ್ಲಿ ಒಬ್ಬರು ನೇಣು ಹಾಕಿಕೊಂಡಿದ್ದಾರೆ. ಕಾರವಾರದಿಂದ 5 ಕಿಮೀ ದೂರದಲ್ಲಿರುವ ದೇವಬಾಗ್ ದ್ವೀಪದಲ್ಲಿ ಬುಧವಾರ 12 ವರ್ಷದ ಬಾಲಕನ ಶವವನ್ನು ಸ್ಥಳೀಯರು ಪತ್ತೆ ಮಾಡಿದ ನಂತರ ಇದು ಗೊತ್ತಾಗಿದೆ.
ಬೆಂಗಳೂರು: ಆ್ಯಸಿಡ್ ದಾಳಿಗೆ ಒಳಗಾಗಿ ಸಂಕಷ್ಟಕ್ಕೆ ತುತ್ತಾಗಿದ್ದ ಸ್ನಾತಕೋತ್ತರ ಪದವೀಧರೆಯಾಗಿರುವ ಸಂತ್ರಸ್ತೆಗೆ ತಮ್ಮ ಸಚಿವಾಲಯದಲ್ಲಿ ಉದ್ಯೋಗ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಮುಖ್ಯಮಂತ್ರಿ, ಸಂತ್ರಸ್ತೆ ಅಹವಾಲನ್ನು ಕೇಳಿ ಸ್ಥಳದಲ್ಲೇ ಉದ್ಯೋಗದ ಭರವಸೆ ನೀಡಿದರು. 2022ರ ಏಪ್ರಿಲ್ 28 ರಂದು ಆ್ಯಸಿಡ್ ದಾಳಿಗೆ ತುತ್ತಾಗಿದ್ದ
ಬೆಂಗಳೂರು: ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದ ಹಿನ್ನಲೆಯಲ್ಲಿ ನಿನ್ನೆ ಹಲವೆಡೆ ದಾಳಿ ಮಾಡಿದ್ದ ಲೋಕಾಯುಕ್ತ ಪೊಲೀಸರು ಇಂದು ಕೆಆರ್ ಪುರ ತಹಶೀಲ್ದಾರ್ ಅಜಿತ್ ರೈ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರು ಸೇರಿ ಅಜಿತ್ಗೆ ಸೇರಿದ 12 ಕಡೆ ಲೋಕಾಯುಕ್ತ ಪೊಲೀಸರು ನಿನ್ನೆ ದಾಳಿ ನಡೆಸಿದ್ದರು. ಸತತ 30 ಗಂಟೆಗಳ
ಬೆಂಗಳೂರು: ಕರ್ನಾಟಕ ಸರ್ಕಾರವು ತನ್ನ ಚುನಾವಣಾ ಖಾತರಿಯನ್ನು ಪೂರೈಸಲು ಅಗತ್ಯವಾದ ದೊಡ್ಡ ಪ್ರಮಾಣದ ಅಕ್ಕಿಯನ್ನು ಸಂಗ್ರಹಿಸಲು ತೊಂದರೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಫಲಾನುಭವಿಗಳಿಗೆ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಿಗೆ ಪ್ರತಿ ಕೆಜಿಗೆ 34 ರೂ.ನಂತೆ ಹಣ ಪಾವತಿಸಲು ನಿರ್ಧರಿಸಿದೆ. ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಕೇಂದ್ರವು ಉಚಿತವಾಗಿ ನೀಡುವ ಐದು ಕೆಜಿ
ಬೆಂಗಳೂರು: ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ಮುಂದುವರಿದಿದೆ. ರಾಜ್ಯಾದ್ಯಂತ ಇಂದು ಬುಧವಾರ ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ(Lokayukta raid) ನಡೆದಿದೆ. ಭ್ರಷ್ಟಾಚಾರ ಆರೋಪಗಳು ಹಾಗೂ ಆದಾಯ ಮೀರಿ ಆಸ್ತಿ ಸಂಪಾದನೆ ಆರೋಪಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯ ಹಲವೆಡೆ ದಾಳಿ ಮಾಡಿದ್ದು,
ನವದೆಹಲಿ/ಬೆಂಗಳೂರು: ವಾತಾವರಣದಲ್ಲಿ ಉಂಟಾದ ವೈಪರೀತ್ಯಗಳಿಂದಾಗಿ ಆಹಾರ ತಯಾರಿಕೆಯಲ್ಲಿ ಬಹುಮುಖ್ಯವಾಗಿ ಬೇಕಾಗಿರುವ ಟೊಮೇಟೊ ಬೆಲೆ ಗಗನಕ್ಕೇರಿದೆ. ಒಂದು ಕಡೆ ಅತಿವೃಷ್ಟಿ, ಮತ್ತೊಂದೆಡೆ ಅನಾವೃಷ್ಟಿ ಕಾರಣದಿಂದಾಗಿ ದಿನನಿತ್ಯ ಅಡುಗೆಗೆ ಬೇಕಾದ ಟೊಮೇಟೊ ಬೆಲೆ ದಿಢೀರ್ ಏರಿಕೆಯಾಗಿದ್ದು, ಬಡವರು, ಮದ್ಯಮ ವರ್ಗದವರಿಗೆ ಕೈಗೆಟುಕದಂತಾಗಿದೆ. ಒಂದು ಕೆಜಿ ಟೊಮೇಟೊ ಬೆಲೆ 80 ರಿಂದ 100 ರೂಪಾಯಿಗೆ ಮಾರಾಟವಾಗುತ್ತಿರುವುದು
ಬೆಂಗಳೂರು: ರಾಜ್ಯದಲ್ಲಿ ವರ್ಗಾವಣೆ ಪರ್ವ ಮುಂದುವರಿದಿದ್ದು, ರಾಜ್ಯ ಸರ್ಕಾರವು 34 ಪೊಲೀಸ್ ಉಪ ಅಧೀಕ್ಷಕರು (ಸಶಸ್ತ್ರ) ಮತ್ತು 25 ಮೀಸಲು ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು (ಸಶಸ್ತ್ರ) ವರ್ಗಾವಣೆ ಮಾಡಿದೆ. ಈ ಕುರಿತು ಜೂನ್ 23ರಂದು ಆದೇಶ ಹೊರಡಿಸಲಾಗಿದೆ. ವರ್ಗಾವಣೆಗೊಂಡ ಡಿವೈಎಸ್‌ಪಿಗಳಲ್ಲಿ 13 ಮಂದಿ ಬೆಂಗಳೂರಿನವರು, ಮೂವರು ಮೈಸೂರಿನವರು, ಇಬ್ಬರು ಕಲಬುರಗಿಯವರು ಮತ್ತು ಗದಗ,
ಬೆಂಗಳೂರು: ಜುಲೈ 3 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಜುಲೈ 7 ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರತಿಪಕ್ಷ ಬಿಜೆಪಿ, ಇತ್ತೀಚಿನ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ನೀಡಿದ ಐದು ಭರವಸೆಗಳ ಜಾರಿ ವಿಳಂಬ, ಹಿಂದಿನ ಬೊಮ್ಮಾಯಿ ಜಾರಿಗೊಳಿಸಿದ್ದ ಹಲವು ಕಾನೂನುಗಳನ್ನು ಹಿಂಪಡೆಯುವುದು ಸೇರಿದಂತೆ
ಬಾಗಲಕೋಟೆ: ಬಾಗಲಕೋಟೆಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಗೂ ಮಾಜಿ ಸಚಿವ ಮುರುಗೇಶ್ ನಿರಾಣಿ ಪರಸ್ಪರ ಕೆಸರೆರೆಚಾಟ ಮುಂದುವರಿಸಿದ್ದಾರೆ. ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿಯಲ್ಲಿನ ದೇವರಂತಹ ಕಾರ್ಯಕರ್ತರು ಎಲ್ಲಿಯೂ ಸಿಗೋದಿಲ್ಲ, ನಾನು ಯಡಿಯೂರಪ್ಪ, ಅನಂತ ಕುಮಾರ್ ಜೊತೆ ಬೆಳೆದವನು, ನಾನು
ಹುಬ್ಬಳ್ಳಿ: ಬಿಜೆಪಿಯಲ್ಲಿ ಸದ್ಯ ಅಶಿಸ್ತು ಮೂಡಿದೆ, ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ವಲಸಿಗರು ಬಂದ ನಂತರ ಪಕ್ಷದಲ್ಲಿ ಅಲ್ಪಸ್ವಲ್ಪ ಅಶಿಸ್ತು ಮೂಡಿದ್ದು, ಅಶಿಸ್ತು ತೋರುವವರ ಬಾಲವನ್ನು ಕಟ್ ಮಾಡ್ತೇವೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಆಪರೇಷನ್ ಕಮಲ ಮುಳುವಾಯ್ತು. ಕಾಂಗ್ರೆಸ್ ನಾಯಕರನ್ನು