ಶಿವಮೊಗ್ಗ: ಮನೆಯಲ್ಲೇ ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದ ಮೂವರು ವೈದ್ಯಕೀಯ ವಿದ್ಯಾರ್ಥಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ವಿಘ್ನರಾಜ್, ಪಾಂಡಿದೊರೈ ಮತ್ತು ವಿನೋದ್ ಕುಮಾರ್ ಎಂದು ಗುರ್ತಿಸಲಾಗಿದೆ. ಮೂವರು ವಿದ್ಯಾರ್ಥಿಗಳು ಮನೆಯಲ್ಲೆ ಹೈಟೆಕ್ ಫಾರ್ಮಿಂಗ್ ಮೂಲಕ ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದರೆನ್ನಲಾಗಿದೆ. ಮನೆ ಮಾಲಕರ ಗಮನಕ್ಕೆ ಬಾರದಂತೆ ಮನೆಯೊಳಗೆ ಕೃತಕ ವಾತಾವರಣ ಸೃಷ್ಟಿಸಿ
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹುಬ್ಬಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಬೋಸರಾಜು ಹಾಗೂ ತಿಪ್ಪಣ್ಣ ಕಮಕನೂರು ಅವರು ವಿಧಾನ ಪರಿಷತ್ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನ ಪರಿಷತ್ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ಮೂವರು ಅಭ್ಯರ್ಥಿಗಳಾದ ಜಗದೀಶ್ ಶೆಟ್ಟರ್, ತಿಪ್ಪಣ್ಣ
ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಶುಶ್ರೂಷಾ ವೃತ್ತಿಪರರಿಗೆ 2022- 2023ನೇ ಸಾಲಿನ ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದರು. ಒಟ್ಟು 30 ಆರೋಗ್ಯ ಸೇವಾಕರ್ತರಿಗೆ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಲಾಯಿತು. ನರ್ಸ್ ಸೇವೆ ಮತ್ತು ಅಸಾಧಾರಣ ವೃತ್ತಿಪರತೆಗಾಗಿ ನೀಡಲಾಗುವ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾಗಿದೆ.
ಬೆಂಗಳೂರು: ತಾಯಿ-ಮಗು ಸಾವಿಗೆ ಕಾರಣವಾಗಿದ್ದ ಬೆಂಗಳೂರು ಮೆಟ್ರೋ ಪಿಲ್ಲರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಿಎಂಆರ್ ಸಿಎಲ್ ಇಂಜಿನಿಯರ್ ಗಳು ಸೇರಿದಂತೆ 11 ಮಂದಿ ವಿರುದ್ಧ 1,100 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಹೌದು
ಚಾಮರಾಗನಗರ: ಜೂ 22. ಜುಲೈ 3ರ ಒಳಗೆ ವಿರೋಧಪಕ್ಷ ನಾಯಕನನ್ನು ಆಯ್ಕೆ ಮಾಡಲಾಗುವುದು ಎಂದು ಮಾಜಿ ಸಿಎಂ ಸದಾನಂದಗೌಡ ಹೇಳಿದ್ದಾರೆ. ಇಂದು ಚಾಮರಾಜನಗರದಲ್ಲಿ ಮಾದ್ಯಮದೊಂದಿಗೆ ಮಾತನಾಡಿದ ಸದಾನಂದಗೌಡ ಅವರು, ವಿಪಕ್ಷ ನಾಯಕ ಸಮರ್ಥನಾಗಿದ್ದು, ವಿಧಾನಸಭೆಯಲ್ಲಿ ಆಡಳಿತ ಪಕ್ಷಕ್ಕೆ ಸವಾಲು ಹಾಕುವಂತಿರಬೇಕು. ಅಂತಹ ಸೂಕ್ತ ನಾಯಕನನ್ನು ಜುಲೈ 3ರ ಒಳಗೆ ಆಯ್ಕೆ
ಬೆಂಗಳೂರು: ವಿದ್ಯುತ್ ದರ ಏರಿಕೆ ಕುರಿತು ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಅವರು ಗುರುವಾರ ಕೈಗಾರಿಕೋದ್ಯಮಿಗಳಿಗೆ ಮನವಿ ಮಾಡಿದರು. ವಿದ್ಯುತ್ ಏರಿಕೆಯಿಂದ ರಾಜ್ಯದ ಕೈಗಾರಿಕೋದ್ಯಮಿಗಳು ಬಂದ್ ಆಚರಿಸುತ್ತಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿದ್ಯುತ್ ದರ ಏರಿಕೆಯು ಸ್ವತಂತ್ರ ಸಂಸ್ಥೆಯಾಗಿರುವ
ಕೋಲಾರ: ಮುಳಬಾಗಿಲು ತಾಲ್ಲೂಕ್ ಬಿಸ್ನಹಳ್ಳಿ ಗ್ರಾಮದಲ್ಲಿ ಸಾಲ ವಸೂಲಿ ಮಾಡಲು ಹೋದ ಡಿಸಿಸಿ ಬ್ಯಾಂಕ್ ಸಿಬ್ಬಂದಿಯ ಬೈಕಿಗೆ ಸ್ತ್ರಿ ಶಕ್ತಿ ಸಂಘದವರು ಬೆಂಕಿ ಹಚ್ಚಿದ್ದಾರೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಆದರೆ, ಇಂತಹ ಯಾವುದೇ ಘಟನೆ ನಡೆದಿಲ್ಲ, ಇದು ಸುಳ್ಳು ಸುದ್ದಿ ಎಂದು ಜಿಲ್ಲಾ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಸಾಲ ವಸೂಲಾತಿಗಾಗಿ ಬ್ಯಾಂಕ್
ಬೆಂಗಳೂರು: ನಂದಿನಿ ಹಾಲಿನ ದರ ಹೆಚ್ಚಿಸುವ ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ್ ಅವರ ಹೇಳಿಕೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಕೆಎಂಎಫ್ ಅಧ್ಯಕ್ಷರು ಹಾಲಿನ ದರವನ್ನು ಲೀಟರ್ ಗೆ ಐದು ರೂಪಾಯಿ ಹೆಚ್ಚಿಸುತ್ತೇವೆ ಎಂದು ಏಕಾಏಕಿ ಹೇಳುವ ಮೂಲಕ ರಾಜ್ಯದ ಪ್ರಜೆಗಳ ಜೇಬಿಗೆ ಕನ್ನ
ಬೆಂಗಳೂರು: ರಾಜ್ಯ ವಿಧಾನಸಭೆ ಸದಸ್ಯರಿಂದ ವಿಧಾನಪರಿಷತ್ ನ ಖಾಲಿ ಇರುವ ಮೂರು ಸ್ಥಾನಗಳಿಗೆ ಜೂನ್ 30 ರಂದು ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಮೂವರು ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಿದರು. ಪಕ್ಷದ ಮೊದಲ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ , ಎರಡನೆಯ ಅಭ್ಯರ್ಥಿಯಾಗಿ ಎನ್ ಎಸ್ ಬೋಸರಾಜು ಹಾಗೂ ಮೂರನೇ
ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು ಸ್ವಿಫ್ಟ್ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ಬಳಿಯ ಕಿಟ್ಟಿ ಡಾಬಾ ಬಳಿ ಟಾಟಾ ಹೆಕ್ಸಾ ಹಾಗೂ ಸ್ವಿಫ್ಟ್ ಡಿಜೈರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಸ್ವಿಫ್ಟ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಮೂವರು