ಬೆಂಗಳೂರು: ವಿಧಾನಸಭೆ ಚುನಾವಣೆ ಫಲಿತಾಂಶ ಬಂದು ಒಂದು ತಿಂಗಳು ಕಳೆದರೂ 66 ಶಾಸಕರಿರುವ ಬಿಜೆಪಿ ಇನ್ನೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಜುಲೈನಲ್ಲಿ ವಿಧಾನಮಂಡಲದ ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ, ಬಿಜೆಪಿ ಈ ವಾರದ ಅಂತ್ಯದ ವೇಳೆಗೆ ವಿರೋಧ ಪಕ್ಷದ ನಾಯಕ ಮತ್ತು ಪಕ್ಷದ ರಾಜ್ಯಾಧ್ಯಕ್ಷರ ಹೆಸರನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.
ವಿಜಯಪುರ: ಬುಧವಾರ ಬೆಳಗ್ಗೆ ಇಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನವವಿವಾಹಿತ ದಂಪತಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಮಲ್ಲು ತೇರದಾಳ (31) ಎಂಬುವವರು ತನ್ನ ಪತ್ನಿ ಗಾಯತ್ರಿ (24) ಅವರೊಂದಿಗೆ ಬೈಕ್ನಲ್ಲಿ ಹೋಗುತ್ತಿದ್ದಾಗ ಸೊಲ್ಲಾಪುರ ಬೈಪಾಸ್ ರಸ್ತೆಯಲ್ಲಿ ಟ್ಯಾಂಕರ್ಗೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ದಂಪತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅವರು
ಬೆಂಗಳೂರು: ಸರ್ಕಾರಿ ಸ್ವಾಮ್ಯದ ಸಾರಿಗೆ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಗೆ ರಾಜ್ಯ ಸರ್ಕಾರ ಭಾನುವಾರ ಚಾಲನೆ ನೀಡಿದ್ದು, ಎರಡನೇ ದಿನವಾದ ಸೋಮವಾರ ಬರೋಬ್ಬರಿ 41. 34 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಶಕ್ತಿ ಯೋಜನೆಗೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದ್ದು, ಮೊದಲ ದಿನವಾದ ಭಾನುವಾರ ಮಧ್ಯಾಹ್ನ 1
ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದ ಉದ್ದೇಶ ಸಮರ್ಪಕವಾಗಿ ಜಾರಿಯಾಗದೆ ತಜ್ಞ ವೈದ್ಯರ ಕೊರತೆ ಮತ್ತು ಎಂಆರ್ ಐ ಹಾಗೂ ಡಯಾಲಿಸಿಸ್ ಯಂತ್ರಗಳನ್ನು ತಾಲ್ಲೂಕಾ ಆಸ್ಪತ್ತೆಗಳಲ್ಲಿ ಸಮರ್ಪಕವಾಗಿ ಅಳವಡಿಸದಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ರಾಷ್ಟ್ರೀಯ ಆರೋಗ್ಯ ಅಭಿಯಾನ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಆರೋಗ್ಯ ಸೇವೆಯ ಲಭ್ಯತೆ
ನವದೆಹಲಿ: 'ಬಿಪೊರ್ಜೋಯ್' ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ತೀವ್ರಗೊಳ್ಳಲಿದ್ದು, ಉತ್ತರ-ಈಶಾನ್ಯಕ್ಕೆ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಶನಿವಾರ ತಿಳಿಸಿದೆ. ಪ್ರಸ್ತುತ ಗೋವಾದಿಂದ ಪಶ್ಚಿಮಕ್ಕೆ 690 ಕಿಮೀ, ಮುಂಬೈನ ಪಶ್ಚಿಮ-ನೈಋತ್ಯಕ್ಕೆ 640 ಕಿಮೀ ಮತ್ತು ಪೋರಬಂದರ್ನಿಂದ ನೈಋತ್ಯಕ್ಕೆ 640 ಕಿಮೀ ದೂರದಲ್ಲಿ ನೆಲೆಸಿರುವ ಚಂಡಮಾರುತವು ಗಂಟೆಗೆ 145
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕೊನೆಗೂ ತಲೆನೋವಾಗಿದ್ದ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಲೆಕ್ಕಾಚಾರದಲ್ಲಿರುವ ಕಾಂಗ್ರೆಸ್ ಸರ್ಕಾರ, ಅಳೆದು ತೂಗಿ ವಿವಿಧ ಜಿಲ್ಲೆಗಳ ಉಸ್ತುವಾರಿ ಸಚಿವರುಗಳನ್ನು ಶುಕ್ರವಾರ ನೇಮಕ ಮಾಡಿದೆ. ಮುಂಬರುವ ಲೋಕಸಭಾ ಚುನಾವಣೆ ಹಿನ್ನಲೆ ಅತಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶದ ನಂತರ ಜೆಡಿಎಸ್ ಒಂದು ರೀತಿಯ ಅಸ್ತಿತ್ವದ ಬಿಕ್ಕಟ್ಟು ಎದುರಿಸುತ್ತಿದೆ. ಜೊತೆಗೆ ಎಲ್ಲರಿಗೂ ಕಾಣುವಂತೆ ಬಿಜೆಪಿಯತ್ತ ಆಕರ್ಷಿತವಾಗುತ್ತಿದೆ. ಶತ್ರುವಿನ ಶತ್ರು ಮಿತ್ರ ಎಂಬ ಪರಿಕಲ್ಪನೆಯಡಿ ಜೆಡಿಎಸ್ ಬಿಜೆಪಿ ತೆಕ್ಕೆಗೆ ಸರಿಯುತ್ತಿರುವಂತೆ ಕಾಣುತ್ತಿದೆ. 2005 ರಲ್ಲಿ ಜೆಡಿಎಸ್ ನಿಂದ ಉಚ್ಚಾಟನೆಗೊಂಡು ನಂತರ ಪ್ರಬಲವಾಗಿ ಬೆಳೆದು ನಿಂತಿರುವ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯ ಸರ್ಕಾರವು ಅಲೋಕ್ ಕುಮಾರ್ ಸೇರಿ ನಾಲ್ವರು ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ. ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ (ಎಡಿಜಿಪಿ) ಸೇವೆ ಸಲ್ಲಿಸುತ್ತಿದ್ದ ಅಲೋಕ್ ಕುಮಾರ್ ಅವರನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ
ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ತಿನ ಮೂರು ಸ್ಥಾನಗಳಿಗೆ ಈ ತಿಂಗಳ ಅಂತ್ಯದಲ್ಲಿ ನಡೆಯುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಎಲ್ಲ ಮೂರು ಸ್ಥಾನಗಳನ್ನು ಗೆದ್ದುಕೊಳ್ಳಲಿದೆ. ಉಪ ಚುನಾವಣೆಗೆ ಪ್ರತ್ಯೇಕ ಚುನಾವಣೆ ಅಧಿಸೂಚನೆ ಹೊರಡಿಸುವುದರಿಂದ ವಿಧಾನಸಭೆಯಲ್ಲಿ ಅತಿಹೆಚ್ಚಿನ ಶಾಸಕರ ಬಲ ಹೊಂದಿರುವ ಆಡಳಿತ ಪಕ್ಷ ಕಾಂಗ್ರೆಸ್ ಅಭ್ಯರ್ಥಿಗಳೇ ಜಯಗಳಿಸುವುದು ನಿಶ್ಚಿತವಾಗಿದೆ. ವಿಧಾನಸಭೆಯಲ್ಲಿ ಕಾಂಗ್ರೆಸ್ 135
ಚಿತ್ರದುರ್ಗ: ನಿಂತಿದ್ದ ಲಾರಿಗೆ ಶವ ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಹೊರವಲಯದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ. ಕನಕಮಣಿ (72), ಆಕಾಶ್ (17) ಮತ್ತು ಆ್ಯಂಬುಲೆನ್ಸ್ ಚಾಲಕ ಸಾವನ್ನಪ್ಪಿದ್ದಾರೆ. ಮುಂಜಾನೆ ಆ್ಯಂಬುಲೆನ್ಸ್ ದಾವಣಗೆರೆ ಕಡೆಯಿಂದ ಬೆಂಗಳೂರು ಕಡೆ ತೆರಳುತ್ತಿತ್ತು. ಈ ವೇಳೆ