ಪೇಶಾವರ: ಪಾಕಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಶನಿವಾರ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 20 ಜನರು ಸಾವನ್ನಪ್ಪಿದ್ದು, 30 ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ ರೈಲು ಪ್ಲಾಟ್ಫಾರ್ಮ್ಗೆ ಬರುವ ಮುನ್ನವೇ ರೈಲ್ವೆ ನಿಲ್ದಾಣದ ಬುಕಿಂಗ್ ಕಚೇರಿಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಜಿಯೋ ನ್ಯೂಸ್ ವರದಿ
ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಉಡುಪಿ ಬ್ಲಾಕ್ ಕಾಂಗ್ರೆಸ್ ಇದರ ಸಮಿತಿಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಮೃತ್ ಶಣೈ ಇವರು ಕಾಂಗ್ರೆಸ್ ಪಕ್ಷವು ಯಾವತ್ತು ಕಾರ್ಯಕರ್ತರನ್ನು ಮರೆಯದೆ ಕಾರ್ಯಕರ್ತರ ಬೆಂಗಾವಲಾಗಿ ಇದೆ ಎಂಬುದಕ್ಕೆ ಸಾಕ್ಷಿ ದಿನಕರ್ ಹೇರೂರು ಇವರು ಕಳೆದ 30
ಸಂವಿಧಾನದ 370ನೇ ವಿಧಿ ಜಾರಿ ನಿರ್ಣಯ ಬೆಂಬಲಿಸಿ ಬ್ಯಾನರ್ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಭಾರೀ ಕೋಲಾಹಲ ಸೃಷ್ಟಿಯಾಯಿತು. ಅವಾಮಿ ಇತ್ತೆಹಾದ್ ಪಕ್ಷದ ಶಾಸಕ ಖುರ್ಷಿದ್ ಅಹಮದ್ ಬ್ಯಾನರ್ ಪ್ರದರ್ಶಿಸಿದ್ದರು. ಇದಕ್ಕೆ ಬಿಜೆಪಿ ಶಾಸಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬ್ಯಾನರ್ ಕಿತ್ತುಕೊಳ್ಳಲು ಮುಂದಾದ ಬಿಜೆಪಿ ಶಾಸಕರು, ಪಿಡಿಪಿ, ಎನ್ಸಿ
ನವದೆಹಲಿ: ಜಮ್ಮು-ಕಾಶ್ಮೀರದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಸತ್ ಶರ್ಮಾ ಅವರು ನೇಮಕಗೊಂಡಿದ್ದಾರೆ. ರವೀಂದರ್ ರೈನಾ ಅವರನ್ನು ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರನ್ನಾಗಿ ಮಾಡಲಾಗಿದೆ ಎಂದು ಪಕ್ಷದ ಮೂಲಗಳು ಮಾಹಿತಿ ನೀಡಿದೆ. ರವೀಂದರ್ ರೈನಾ ಅವರು 2018ರಿಂದ ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿದ್ದರು. ಅವರ ಅಧಿಕಾರಾವಧಿ ಬಹಳ ಹಿಂದೆಯೇ
ಸಿಕಾರ್: ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ಮಂಗಳವಾರ ಮಧ್ಯಾಹ್ನ ಬಸ್ವೊಂದು ಫ್ಲೈಓವರ್ನ ತಡೆಗೋಡೆಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ ಮತ್ತು 34ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭುವನ್ ಭೂಷಣ್ ಯಾದವ್ ಮಾತನಾಡಿ, ಸಲಾಸರ್ನಿಂದ ಲಕ್ಷ್ಮಣಗಢಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ತಿರುವು
ಕಾನ್ಪುರ: 4 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯೊಬ್ಬರ ಶವವೊಂದು ಉತ್ತರ ಪ್ರದೇಶದ ಕಾನ್ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ಬಂಗಲೆಯ ಬಳಿ ಪತ್ತೆಯಾದ ಘಟನೆ ವರದಿಯಾಗಿದೆ. ಉತ್ತರ ಪ್ರದೇಶದಲ್ಲಿ ಮಹಿಳೆಯೊಬ್ಬ ಹೈ ಪ್ರೊಪೈಲ್ ನಾಪತ್ತೆ ಪ್ರಕರಣಕ್ಕೆ ಇದೀಗ ಮಹತ್ತರ ಟ್ವಿಸ್ಟ್ ದೊರೆತಿದ್ದು, ಕಾನ್ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ಬಂಗಲೆಯ ಬಳಿ ಮಹಿಳೆಯ ಶವ ಪತ್ತೆಯಾಗಿದೆ.
ಹೊಸದಿಲ್ಲಿ: ಡಾನಾ ಚಂಡಮಾರುತವು ಒಡಿಶಾ ಕರಾವಳಿಗೆ ಅಪ್ಪಳಿಸಿದ್ದು, ಹಲವು ಪ್ರದೇಶಗಳಲ್ಲಿ ಭಾರಿ ಮಳೆ ಮತ್ತು ಬಿರುಗಾಳಿಗೆ ಕಾರಣವಾಗಿದೆ. ಕೇಂದ್ರಪಾರ ಜಿಲ್ಲೆಯ ಭಿಟಾರ್ ಕನಿಕ ಹಾಗೂ ಭದ್ರಕ್ ಜಿಲ್ಲೆಯ ಧಮ್ರ ನಡುವೆ ಈ ಚಂಡಮಾರುತ ಅಪ್ಪಳಿಸಿದ್ದು, ಗಂಟೆಗೆ ಸುಮಾರು 110 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುತ್ತಿದೆ. ಒಡಿಶಾದ ಕರಾವಳಿ ಜಿಲ್ಲೆಗಳಾದ ಭದ್ರಕ್,
ನವದೆಹಲಿ: ದೆಹಲಿಯ ರೋಹಿಣಿ ಪ್ರದೇಶದ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಶಾಲೆಯ ಸಮೀಪ ಭಾನುವಾರ ಬೆಳಿಗ್ಗೆ ಸ್ಫೋಟ ಸಂಭವಿಸಿದ್ದು, ಶಾಲೆಯ ಗೋಡೆಗೆ ಹಾನಿಯಾಗಿದೆ ಎಂದು ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ. ಸ್ಫೋಟ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಆದರೆ ನಾಯಕ ನಿರ್ಧಾರ ತಪ್ಪು ಎಂಬುದನ್ನು ಮೊದಲ 10 ಓವರ್ಗಳಲ್ಲೇ ಕಿವೀಸ್ ಬೌಲರ್ಗಳು ನಿರೂಪಿಸಿದ್ದರು. ಮೊದಲ
ಇಂಫಾಲ್: ಜಿರಿಬಾಮ್ ಜಿಲ್ಲೆಯ ಹಳ್ಳಿಯೊಂದರ ಮೇಲೆ ಉಗ್ರರು ಶನಿವಾರ ದಾಳಿ ನಡೆಸಿದ್ದರಿಂದ ಮಣಿಪುರದಲ್ಲಿ ಹೊಸ ಹಿಂಸಾಚಾರ ಭುಗಿಲೆದ್ದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಬಳಸಿ, ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಬೊರೊಬೆಕ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅವರು