Paris Olympics 2024: 33ನೇ ಒಲಿಂಪಿಕ್ಸ್ ಕ್ರೀಡಾಕೂಟಕ್ಕಾಗಿ ಪ್ರಣಯದೂರು ಪ್ಯಾರಿಸ್ ಸಜ್ಜಾಗಿ ನಿಂತಿದೆ. ಇಂದಿನಿಂದ ಶುರುವಾಗಲಿರುವ ಒಲಿಂಪಿಯಾಡ್ನಲ್ಲಿ ಈ ಬಾರಿ 206 ದೇಶಗಳ 10 ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ. ಹಾಗೆಯೇ ಈ ಕ್ರೀಡಾಕೂಟದಲ್ಲಿ ಭಾರತದ 117 ಕ್ರೀಡಾಪಟುಗಳು ಒಲಿಂಪಿಕ್ಸ್ನಲ್ಲಿ ಕಣಕ್ಕಿಳಿಯುತ್ತಿದ್ದು, ಇವರಲ್ಲಿ 47 ಮಹಿಳಾ ಸ್ಪರ್ಧಿಗಳಿರುವುದು ವಿಶೇಷ.
ನವದೆಹಲಿ: ಶಂಭು ಗಡಿಯಲ್ಲಿ ರೈತರ ಪ್ರತಿಭಟನೆಯ ಸಮಸ್ಯೆ ಪರಿಹರಿಸಲು ಮಾರ್ಗೋಪಾಯಗಳನ್ನು ಕಂಡುಕೊಳ್ಳುವಂತೆ ಪಂಜಾಬ್ ಮತ್ತು ಹರಿಯಾಣ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಬುಧವಾರ ಸೂಚಿಸಿದೆ. ಪಂಜಾಬ್-ಹರಿಯಾಣ "ಸರ್ಕಾರಗಳು ರೈತರ ಪ್ರತಿಭಟನೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಮತ್ತು ರೈತರೊಂದಿಗೆ ಮಾತುಕತೆ ನಡೆಸುವ ಸ್ವತಂತ್ರ ವ್ಯಕ್ತಿಗಳ ಸಮಿತಿ ರಚಿಸುವಂತೆ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ದೀಪಂಕರ್
ಕಠ್ಮಂಡು: ನೇಪಾಳ ರಾಜಧಾನಿ ಕಠ್ಮಂಡುವಿನಲ್ಲಿ ಬುಧವಾರ 19 ಜನರನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕ ವಿಮಾನವು ಟೇಕಾಫ್ ಸಮಯದಲ್ಲಿ ಪತನಗೊಂಡಿದ್ದು, 18 ಮಂದಿ ಮೃತಪಟ್ಟು ಪೈಲಟ್ ಮಾತ್ರ ಬದುಕುಳಿದಿದ್ದಾರೆ ಎಂದು ಪೊಲೀಸರು ಎಎಫ್ ಪಿ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ವಿಮಾನವು ದೇಶೀಯ ಶೌರ್ಯ ಏರ್ಲೈನ್ಗೆ ಸೇರಿದ್ದು, ಹಿಮಾಲಯ ಗಣರಾಜ್ಯದ ಪ್ರಮುಖ ಪ್ರವಾಸೋದ್ಯಮ ಕೇಂದ್ರವಾದ ಪೋಖರಾದ ರೆಸಾರ್ಟ್
ತಿರುಪತಿ ತಿಮ್ಮಪ್ಪನ ಭಕ್ತರ ಪರಮ ಭಕ್ತಿಯ, ಹೆಚ್ಚು ಇಷ್ಟಪಡುವ ಲಡ್ಡುವಿನ ಗುಣಮಟ್ಟ ಕ್ಷೀಣಿಸುತ್ತಿದೆ ಎಂಬ ಆರೋಪ ಇತ್ತೀಚೆಗೆ ಹೆಚ್ಚು ಹೆಚ್ಚು ಕೇಳಿಬರುತ್ತಿದೆ. ಆದರೆ ದೇವಸ್ಥಾನದ ಆಡಳಿತ ಮಂಡಳಿ ಟಿಟಿಡಿ ಈಗ ಅದರ ಬಗ್ಗೆ ಹೆಚ್ಚು ಗಮನಹರಿಸಿದೆ. ಲಡ್ಡು ತಯಾರಿಕೆಗೆ ಸರಬರಾಜಾಗುವ ತುಪ್ಪ ಕಳಪೆ ಗುಣಮಟ್ಟದ್ದಾಗಿರುವುದೇ ಇದಕ್ಕೆ ಕಾರಣವಾಗಿದೆ ಎಂದು
ನವದೆಹಲಿ: ನೀಟ್-ಯುಜಿ ಪರೀಕ್ಷೆಯಲ್ಲಿನ ವಿವಾದಿತ ಪ್ರಶ್ನೆಗೆ ಸರಿಯಾದ ಉತ್ತರವನ್ನು ಮೌಲ್ಯಮಾಪನ ಮಾಡಲು ಮತ್ತು ನಿರ್ಧರಿಸಲು ಮಂಗಳವಾರ ಮಧ್ಯಾಹ್ನದೊಳಗೆ ಮೂವರು ವಿಷಯ ತಜ್ಞರ ಸಮಿತಿ ರಚಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಐಐಟಿ ದೆಹಲಿಯ ನಿರ್ದೇಶಕರಿಗೆ ಸೂಚನೆ ನೀಡಿದೆ. ಒಂದೇ ಪ್ರಶ್ನೆಗೆ ಎರಡು ಸಂಭವನೀಯ ಉತ್ತರಗಳಿಗೆ ಅಂಕಗಳನ್ನು ನೀಡುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ನಿರ್ಧಾರದ
ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ಎಸ್ಎಸ್)ದ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಸರ್ಕಾರಿ ನೌಕರರ ಮೇಲಿದ್ದ ನಿರ್ಬಂಧವನ್ನು ಮೋದಿ ಸರ್ಕಾರ ತೆಗೆದು ಹಾಕಿದ್ದು, ಕೇಂದ್ರದ ಈ ಕ್ರಮವನ್ನು ಆರ್ಎಸ್ಎಸ್ ಸೋಮವಾರ ಶ್ಲಾಘಿಸಿದೆ. ಕೇಂದ್ರ ಸರ್ಕಾರದ ಈ ನಿರ್ಧಾರವು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುತ್ತದೆ ಎಂದು ಆರ್ಎಸ್ಎಸ್ ಹೇಳಿದೆ. ಈ ಹಿಂದಿನ ಸರ್ಕಾರಗಳು ಸರ್ಕಾರಿ ನೌಕರರ ಮೇಲೆ ನಿಷೇಧ
ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡಬೇಕು ಎಂಬ ಬೇಡಿಕೆ ಬಹಳ ದಿನಗಳಿಂದ ಕೇಳಿ ಬರುತ್ತಿದೆ. ಇತ್ತೀಚಿನ ದಿನಗಳಲ್ಲಿ ಎನ್ಡಿಎ ಸೇರಿರುವ ಹಲವು ರಾಜಕೀಯ ಪಕ್ಷಗಳು ಬಿಹಾರಕ್ಕೆ ವಿಶೇಷ ರಾಜ್ಯ ಸ್ಥಾನಮಾನ ನೀಡಬೇಕು ಎಂಬ ಬೇಡಿಕೆಯನ್ನು ಬೆಂಬಲಿಸಿದ್ದವು. ಅಲ್ಲದೆ ಇಂದು ಜೆಡಿಯುನ ರಾಮ್ಪ್ರೀತ್ ಮಂಡಲ್ ಅವರು ಸಂಸತ್ತಿನಲ್ಲಿ ಈ ಕುರಿತು ಕೇಂದ್ರ
ಕುವೈತ್: ಶಾರ್ಟ್ ಸರ್ಕ್ಯೂಟ್ನಿಂದಾಗಿ ಏರ್ ಕಂಡೀಷನರ್ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ಮೂಲದ ದಂಪತಿ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಕುವೈತ್ನ ಫ್ಲ್ಯಾಟ್ವೊಂದರಲ್ಲಿ ನಡೆದಿದೆ. ಕೇರಳದ ಅಲಪ್ಪುಳದ ನೀರತ್ತುಪುರಂನವರಾದ ಮ್ಯಾಥ್ಯೂಸ್ ಮುಲಾಕಲ್, ಪತ್ನಿ ಲಿನಿ ಅಬ್ರಹಾಂ ಮತ್ತು ಇಬ್ಬರು ಮಕ್ಕಳು ಘಟನೆಯಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೇಸಿಗೆ
ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರುದ್ಧದ ಹಿಂಸಾಚಾರಕ್ಕೆ ಇದುವರೆಗೆ 32 ಮಂದಿ ಬಲಿಯಾಗಿದ್ದಾರೆ. ಜೊತೆಗೆ ಪ್ರತಿಭಟನಾಕಾರರು ಸರ್ಕಾರಿ ಸುದ್ದಿವಾಹಿನಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದಾರೆ ಎಂದು ವರದಿಯಾಗಿದೆ. ಪ್ರತಿಭಟನಾಕಾರರು ಬಂಗ್ಲಾದ ರಾಜಧಾನಿ ಢಾಕಾದಲ್ಲಿನ ರಾಜ್ಯ ಸರ್ಕಾರ ಸುದ್ದಿವಾಹಿನಿಗೆ ಬೆಂಕಿ ಹಚ್ಚುವ ಒಂದು ದಿನ ಮೊದಲು, ಸರ್ಕಾರಿ ಟಿವಿ ಕಚೇರಿಯಲ್ಲಿ ಪ್ರಧಾನಿ ಶೇಖ್
ಗೊಂಡಾ ಜುಲೈ 18: ಉತ್ತರ ಪ್ರದೇಶದ ಗೊಂಡಾದಲ್ಲಿ ದಿಬ್ರುಗಢ ಎಕ್ಸ್ಪ್ರೆಸ್ನ (15904) (Dibrugarh Express)15 ಬೋಗಿಗಳು ಹಳಿತಪ್ಪಿದೆ. ಈ ದುರ್ಘಟನೆಯಲ್ಲಿ 4ಮಂದಿ ಸಾವಿಗೀಡಾಗಿದ್ದು 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ರೈಲು ಚಂಡೀಗಢದಿಂದ ಬರುತ್ತಿತ್ತು. ಯುಪಿಯ ಜಿಲಾಹಿ ರೈಲು ನಿಲ್ದಾಣ ಮತ್ತು ಗೋಸಾಯಿ