ಹೊಸದಿಲ್ಲಿ: ರಾಜಸ್ಥಾನದ ಬುಂದಿ ಜಿಲ್ಲೆಯಲ್ಲಿ ಇಂದ (ಸೆ.15) ಬೆಳಗ್ಗೆ ಕಾರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜೈಪುರ ರಾಷ್ಟ್ರೀಯ ಹೆದ್ದಾರಿಯ ಹಿಂದೋಲಿ ಬಳಿ ಮುಂಜಾನೆ 4:30 ರ ಸುಮಾರಿಗೆ ಉತ್ತರ ಪ್ರದೇಶದ ದೇವಾಸ್ ನಿವಾಸಿಗಳು ಸಿಕಾರ್
ಎರಡು ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ಬಿಜೆಪಿ ತನ್ನ ವಿರುದ್ಧ ಸುಳ್ಳು ಆರೋಪ ಮಾಡಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಹೀಗಾಗಿ ಸಾರ್ವಜನಿಕ ನ್ಯಾಯಾಲಯದ ಮೊರೆ ಹೋಗುತ್ತೇವೆ.ಅವರ ಸ್ಥಾನದಲ್ಲಿ ಆಮ್ ಆದ್ಮಿ ಪಕ್ಷದ ಶಾಸಕರೊಬ್ಬರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ನವೆಂಬರ್‌ನಲ್ಲಿ ದೆಹಲಿ ಚುನಾವಣೆ ನಡೆಸುವಂತೆ
ದೆಹಲಿ ಮದ್ಯನೀತಿ ಹಗರಣದಲ್ಲಿ ಜೈಲುಪಾಲಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal)ಗೆ ಸುಪ್ರೀಂಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಕೇಜ್ರಿವಾಲ್ ಕಚೇರಿಗೆ ತೆರಳಿ ಕಡತಗಳಿಗೆ ಸಹಿ ಮಾಡುವಂತಿಲ್ಲ, ಬಹಿರಂಗ ಪ್ರಚಾರ ಮಾಡುವಂತಿಲ್ಲ, ಅರವಿಂದ್ ಕೇಜ್ರಿವಾಲ್ ಅವರು ಮುಖ್ಯಮಂತ್ರಿ ಕಚೇರಿಗೆ ಹೋಗುವಂತಿಲ್ಲ ಮತ್ತು ಅವರು ಯಾವುದೇ ಸಾಕ್ಷಿಗಳೊಂದಿಗೆ ಮಾತನಾಡುವುದಿಲ್ಲ. ಅಗತ್ಯ
ನವದೆಹಲಿ: ಕೋಲ್ಕತ್ತಾದ ಆರ್ ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಕಿರಿಯ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಕಿರಿಯ ವೈದ್ಯರಿಗೆ ಸುಪ್ರೀಂ ಕೋರ್ಟ್ ನಾಳೆ ಮಂಗಳವಾರ ಸಂಜೆ 5 ಗಂಟೆಯೊಳಗೆ ತಮ್ಮ ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶ ನೀಡಿದೆ. ವೈದ್ಯರು ಆದೇಶ ಪಾಲಿಸದಿದ್ದರೆ ರಾಜ್ಯ
ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ ತನ್ನ ಆರನೇ ಚಿನ್ನದ ಪದಕವನ್ನು ಪಡೆದುಕೊಂಡಿದೆ. ಕ್ರೀಡಾಕೂಟದ ಒಂಬತ್ತನೇ ದಿನ ಪುರುಷರ ಹೈಜಂಪ್-ಟಿ64 ಸ್ಪರ್ಧೆಯಲ್ಲಿ ಭಾರತದ ಪ್ರವೀಣ್ ಕುಮಾರ್ ಚಿನ್ನದ ಪದಕವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಇದು ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಸಿಕ್ಕ 26 ನೇ ಪದಕ ಮತ್ತು ಆರನೇ ಚಿನ್ನದ ಪದಕವಾಗಿದೆ. ಪ್ರವೀಣ್ ಕುಮಾರ್ ಅವರು 2.08
ಮಧ್ಯಪ್ರದೇಶ: ಮದ್ಯದ ಅಮಲಿನಲ್ಲಿದ್ದ ಶಿಕ್ಷಕನೊರ್ವ ವಿದ್ಯಾರ್ಥಿಯ ಜಡೆ ಕತ್ತರಿಸಿರುವ ಘಟನೆ ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. ಶಿಕ್ಷಕರ ದಿನದಂದು ಗುರುವಾರ (ಸೆ.05) ಈ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಶಿಕ್ಷಕ ವೀರ್
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಅಪಹರಣ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮತ್ತು ಅವರ ಗ್ಯಾಂಗ್ ವಿರುದ್ಧ 3,991 ಪುಟಗಳ ದೋಷಾರೋಪ ಪಟ್ಟಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಬುಧವಾರ ಸಲ್ಲಿಕೆ ಮಾಡಿದ್ದಾರೆ. ಬೆಂಗಳೂರು ಪೊಲೀಸರು 24ನೇ ಎಸಿಎಂಎಂ ಕೋರ್ಟ್‌ಗೆ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳ ವಿರುದ್ಧ
100 ಮೀಟರ್ ಅಥವಾ 200 ಮೀಟರ್ ಓಟವೇ ಆಗಿರಲಿ, ಭಾರತೀಯನೊಬ್ಬ ಒಲಿಂಪಿಕ್ಸ್ ಮತ್ತು ಪ್ಯಾರಾಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವುದು ಕನಸಿನ ಮಾತು. ಆದರೆ, 23 ವರ್ಷದ ಪ್ರೀತಿ ಪಾಲ್ ಭಾರತದ ಈ ಮಹಾ ಕನಸನ್ನು ಈಗ ನನಸಾಗಿಸಿದ್ದಾರೆ. ಈ ಕನಸನ್ನು ಸಾಕಾರಗೊಳಿಸುವ ಮೂಲಕ ಕೇವಲ 48 ಗಂಟೆಗಳಲ್ಲಿ ಎರಡು ಬಾರಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ವೈಷ್ಣೋದೇವಿ ದೇಗುಲಕ್ಕೆ ಹೋಗುವ ಮಾರ್ಗದಲ್ಲಿ ಇಂದು (ಸೋಮವಾರ) ಸಂಭವಿಸಿದ ಭೂಕುಸಿತದ ನಂತರ ಇಬ್ಬರು ಮಹಿಳಾ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಓರ್ವ ಬಾಲಕಿಗೆ ತೀವ್ರ ಗಾಯಗಳಾಗಿವೆ. ಶ್ರೀ ಮಾತಾ ವೈಷ್ಣೋದೇವಿ ದೇಗುಲ ಮಂಡಳಿಯ ವಿಪತ್ತು ನಿರ್ವಹಣಾ ತಂಡವು ಸ್ಥಳಕ್ಕೆ ತಲುಪಿದೆ
ಪ್ಯಾರಿಸ್ ಪ್ಯಾರಾಲಿಂಪಿಕ್ಸ್ನ ಐದನೇ ದಿನ ಭಾರತಕ್ಕೆ ಎಂಟನೇ ಪದಕ ಲಭಿಸಿದೆ. ಪುರುಷರ ಎಫ್56 ಡಿಸ್ಕಸ್ ಥ್ರೋ ಈವೆಂಟ್ನಲ್ಲಿ ಭಾರತದ ಯೋಗೇಶ್ ಕುಮಾರ್ ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ. ಯೋಗೇಶ್ ತನ್ನ ಮೊದಲ ಪ್ರಯತ್ನದಲ್ಲೇ 42.22 ಮೀಟರ್ ದೂರ ಡಿಸ್ಕಸ್ ಎಸೆದು ಬೆಳ್ಳಿ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪದಕದೊಂದಿಗೆ ಭಾರತ