ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಕುವೈತ್: ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಏರ್ ಕಂಡೀಷನರ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ಮೂಲದ ದಂಪತಿ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಕುವೈತ್‌ನ ಫ್ಲ್ಯಾಟ್‌ವೊಂದರಲ್ಲಿ ನಡೆದಿದೆ. ಕೇರಳದ ಅಲಪ್ಪುಳದ ನೀರತ್ತುಪುರಂನವರಾದ ಮ್ಯಾಥ್ಯೂಸ್ ಮುಲಾಕಲ್, ಪತ್ನಿ ಲಿನಿ ಅಬ್ರಹಾಂ ಮತ್ತು ಇಬ್ಬರು ಮಕ್ಕಳು ಘಟನೆಯಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೇಸಿಗೆ

ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರುದ್ಧದ ಹಿಂಸಾಚಾರಕ್ಕೆ ಇದುವರೆಗೆ 32 ಮಂದಿ ಬಲಿಯಾಗಿದ್ದಾರೆ. ಜೊತೆಗೆ ಪ್ರತಿಭಟನಾಕಾರರು ಸರ್ಕಾರಿ ಸುದ್ದಿವಾಹಿನಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದಾರೆ ಎಂದು ವರದಿಯಾಗಿದೆ. ಪ್ರತಿಭಟನಾಕಾರರು ಬಂಗ್ಲಾದ ರಾಜಧಾನಿ ಢಾಕಾದಲ್ಲಿನ ರಾಜ್ಯ ಸರ್ಕಾರ ಸುದ್ದಿವಾಹಿನಿಗೆ ಬೆಂಕಿ ಹಚ್ಚುವ ಒಂದು ದಿನ ಮೊದಲು, ಸರ್ಕಾರಿ ಟಿವಿ ಕಚೇರಿಯಲ್ಲಿ ಪ್ರಧಾನಿ ಶೇಖ್

ಗೊಂಡಾ ಜುಲೈ 18: ಉತ್ತರ ಪ್ರದೇಶದ  ಗೊಂಡಾದಲ್ಲಿ ದಿಬ್ರುಗಢ ಎಕ್ಸ್‌ಪ್ರೆಸ್‌ನ (15904) (Dibrugarh Express)15 ಬೋಗಿಗಳು ಹಳಿತಪ್ಪಿದೆ. ಈ ದುರ್ಘಟನೆಯಲ್ಲಿ 4ಮಂದಿ ಸಾವಿಗೀಡಾಗಿದ್ದು  25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ರೈಲು ಚಂಡೀಗಢದಿಂದ ಬರುತ್ತಿತ್ತು. ಯುಪಿಯ ಜಿಲಾಹಿ ರೈಲು ನಿಲ್ದಾಣ ಮತ್ತು ಗೋಸಾಯಿ

ಛತ್ರಪತಿ ಶಿವಾಜಿ ಮಹಾರಾಜರ ಪೌರಾಣಿಕ ವಾಘ್ ನಖ್ ಅಥವಾ ಹುಲಿ ಉಗುರು(ವ್ಯಾಘ್ರನಖ) ಮಾದರಿ ಅಸ್ತ್ರ ಬರೊಬ್ಬರಿ 350ನೇ ವರ್ಷಗಳ ಬಳಿಕ ಭಾರತಕ್ಕೆ ಮರಳಿದೆ. ಲಂಡನ್ ನಿಂದ ತರಿಸಲಾದ ಈ ಪುರಾತನ ಕಾಲದ ಆಯುಧಕ್ಕೆ ಬುಲೆಟ್ ಪ್ರೂಫ್ ಕವರ್ ಹಾಕಿ ತರಲಾಯಿತು. ಇದನ್ನು ಜುಲೈ 19 ರಿಂದ 7 ತಿಂಗಳ ಕಾಲ

ಪಾಟ್ನಾ: ನೀಟ್-ಯುಜಿ ಪೇಪರ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಪಾಟ್ನಾದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS)ಯ ಮೂವರು ವೈದ್ಯಕೀಯ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಕರೆದೊಯ್ದಿದೆ.ಅವರ ಮೊಬೈಲ್ ಫೋನ್‌ಗಳು ಮತ್ತು ಲ್ಯಾಪ್‌ಟಾಪ್‌ಗಳನ್ನು ಸಹ ತನಿಖಾ ಸಂಸ್ಥೆ ವಶಪಡಿಸಿಕೊಂಡಿದೆ. 2021 ರ ಬ್ಯಾಚ್‌ಗೆ ಸೇರಿದ ವಿದ್ಯಾರ್ಥಿಗಳನ್ನು

ಉಡುಪಿ: ಜುಲೈ.16: ಉಡುಪಿಯ ಅಂಬಲಪಾಡಿಯ ಗಾಂಧಿನಗರದ ಮನೆಯೊಂದರಲ್ಲಿ ಸೋಮವಾರ ಮು೦ಜಾನೆ ಅಗ್ನಿ ಅವಘಡ ಸಂಭವಿಸಿದ್ದು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾರ್‌ ಮಾಲೀಕ ಚಿಕಿತ್ಸೆ ಫಲಿಸದೆ ಸೋಮವಾರದ೦ದು ಮೃತಪಟ್ಟಿದ್ದು ಇ೦ದು ಮ೦ಗಳವಾರದ೦ದು ಮೃತರ ಪತ್ನಿ ಅಶ್ವಿನಿ ಶೆಟ್ಟಿಯವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿಧನಹೊ೦ದಿದ್ದಾರೆ. ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜೇ೦ದ್ರ ಹಾಗೂ ಉಡುಪಿ

ಟೀಮ್ ಇಂಡಿಯಾದ ಮಾಜಿ ಆಟಗಾರರಾದ ಯುವರಾಜ್ ಸಿಂಗ್, ಹರ್ಭಜನ್ ಸಿಂಗ್ ಮತ್ತು ಸುರೇಶ್ ರೈನಾ ಮತ್ತೊಮ್ಮೆ ವಿವಾದಕ್ಕೆ ಸಿಲುಕಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಮೂವರು ಆಟಗಾರರು ಕಾಣಿಸಿಕೊಂಡ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ವಿಡಿಯೋದಲ್ಲಿ ತೌಬಾ ತೌಬಾ ಹಾಡಿಗೆ ಮೈ ಕೈ ನೋವನ್ನು ಪ್ರಸ್ತಾಪಿಸುವಂತೆ ಕಾಣಿಸಿಕೊಂಡಿದ್ದರು. ಆದರೆ

ಭುವನೇಶ್ವರ: ಒಡಿಶಾದ ಪುರಿ ಜಗನ್ನಾಥ ದೇವಾಲಯದ ‘ರತ್ನ ಭಂಡಾರ’ವನ್ನು 46 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ತೆರೆಯಲಾಗಿದೆ. ಪುರಿ ಜಗನ್ನಾಥ ದೇಗುಲದಲ್ಲಿರುವ ರತ್ನ ಭಂಡಾರದಲ್ಲಿರುವ ಬೆಲೆಬಾಳುವ ವಸ್ತುಗಳ ಡಿಜಿಟಲ್ ಕ್ಯಾಟಲಾಗ್ ಅನ್ನು ಸಿದ್ಧಪಡಿಸಲು ಸರ್ಕಾರ ನಿರ್ಧರಿಸಿದ್ದು, ಅದು ಅವುಗಳ ತೂಕ ಮತ್ತು ತಯಾರಿಕೆಯ ವಿವರಗಳನ್ನು ಹೊಂದಿರುತ್ತದೆ. ಅಲ್ಲದೆ ರತ್ನ ಭಂಡಾರ

ನವದೆಹಲಿ: ಲೋಕಸಭೆಯಲ್ಲಿ ಕಾಂಗ್ರೆಸ್ ಉಪ ನಾಯಕರಾಗಿ ಗೌರವ್ ಗೊಗೊಯ್ ಅವರನ್ನು ನೇಮಿಸಲಾಗಿದೆ. ಈ ಸಂಬಂಧ ಸ್ಪೀಕರ್ ಓಂ ಬಿರ್ಲಾ ಅವರಿಗೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪತ್ರ ಬರೆದಿದ್ದು, ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉಪ ನಾಯಕ, ಮುಖ್ಯ ಸಚೇತಕ ಮತ್ತು ಇಬ್ಬರು ವಿಪ್‌ಗಳನ್ನು ನೇಮಿಸುವ ಕುರಿತು

ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಪೊಲೀಸರೊಂದಿಗೆ ಜಂಟಿ ಗಸ್ತು ತಿರುಗುವ ಸಿಆರ್‌ಪಿಎಫ್ ತಂಡವನ್ನು ಶಂಕಿತ ಉಗ್ರರು ಹೊಂಚು ಹಾಕಿ ದಾಳಿ ಮಾಡಿದ್ದು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಯೋಧ ಹುತಾತ್ಮರಾಗಿದ್ದರೆ ಪೊಲೀಸ್ ಕಮಾಂಡೋ ಗಾಯಗೊಂಡಿದ್ದಾರೆ. ಸದ್ಯ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಅಸ್ಸಾಂ ಗಡಿಗೆ ಹೊಂದಿಕೊಂಡಿರುವ