ವಾಷಿಂಗ್ಟನ್: ಎರಡನೇ ಬಾರಿಗೆ ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಡೊನಾಲ್ಡ್ ಟ್ರಂಪ್ ಅವರು ದೇಶದೊಳಗೆ ವಿರೋಧ ಎದುರಿಸಿದ್ದು, ಅವರು ಒಡೆದು ಆಳುವ ನೀತಿ ಹೊಂದಿದ್ದಾರೆ ಎಂದು ಆರೋಪಿಸಿ ಅಮೆರಿಕದ ಪ್ರಮುಖ ನಗರಗಳ ಬೀದಿಗಳಲ್ಲಿ ಹತ್ತಾರು ಸಾವಿರ ಜನರು ಪ್ರತಿಭಟನೆ ನಡೆಸಿದರು. ಸರ್ಕಾರದ ಹಲವು ಇಲಾಖೆಗಳಲ್ಲಿ ಸಿಬ್ಬಂದಿ ಕಡಿತದಿಂದ ಹಿಡಿದು ವ್ಯಾಪಾರ
ಥೈಲ್ಯಾಂಡ್: ಥೈಲ್ಯಾಂಡ್ನಲ್ಲಿ ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಅವರೊಂದಿಗಿನ ಪ್ರಧಾನಿ ಮೋದಿ ಅವರ ಭೇಟಿಯ ಕುರಿತು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಮಾಹಿತಿ ನೀಡಿದ್ದಾರೆ. "ಪ್ರಜಾಪ್ರಭುತ್ವ, ಸ್ಥಿರ, ಶಾಂತಿಯುತ, ಪ್ರಗತಿಪರ ಮತ್ತು ಎಲ್ಲರನ್ನೂ ಒಳಗೊಂಡ ಬಾಂಗ್ಲಾದೇಶಕ್ಕೆ ಭಾರತದ ಬೆಂಬಲವನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ" ಎಂದು ವಿಕ್ರಮ್ ಮಿಸ್ರಿ ಹೇಳಿದ್ದಾರೆ. ಬಾಂಗ್ಲಾದೇಶದೊಂದಿಗೆ ಸಕಾರಾತ್ಮಕ
ಚಂಡೀಗಢ: ಏ.04, 2 ಕೋಟಿ ಮೌಲ್ಯದ ಹೆರಾಯಿನ್ ಜೊತೆ ಪಂಜಾಬ್ನ ಮಹಿಳಾ ಕಾನ್ಸ್ಟೇಬಲ್ ನ್ನು ಬಂಧಿಸಲಾಗಿದೆ. ಆಕೆಯನ್ನು ಜಿಲ್ಲಾ ನ್ಯಾಯಾಲಯವು ಒಂದು ದಿನ ಪೊಲೀಸ್ ಕಸ್ಟಡಿಗೆ ನೀಡಿದೆ. 17.71 ಮಿ.ಗ್ರಾಂ ಹೆರಾಯಿನ್ ಜೊತೆ ಮಹಿಳಾ ಕಾನ್ಸ್ಟೇಬಲ್ ಅಮನ್ದೀಪ್ ಕೌರ್ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದರು. ಪ್ರಕರಣ ಬೆನ್ನಲ್ಲೇ ಆಕೆಯನ್ನು ಸೇವೆಯಿಂದ ವಜಾಗೊಳಿಸಲಾಗಿದ್ದು,
ನವದೆಹಲಿ: ಕೇಂದ್ರ ಜಲಶಕ್ತಿ ಸಚಿವ ಸಿ ಆರ್ ಪಾಟೀಲ್ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್,ರು ಮೇಕೆದಾಟು ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದ್ದಾರೆ. ರಾಜಸ್ಥಾನದ ನಂತರ ಕರ್ನಾಟಕವು ದೇಶದಲ್ಲಿ ಎರಡನೇ ಅತಿದೊಡ್ಡ ಒಣಭೂಮಿ ಪ್ರದೇಶವನ್ನು ಹೊಂದಿದೆ ಎಂದು ಸಭೆಯಲ್ಲಿ ಸಿದ್ದರಾಮಯ್ಯ
ಗುಜರಾತ್, ಏಪ್ರಿಲ್ 03: ಗುಜರಾತ್ನ ಜಾಮ್ನಗರದಲ್ಲಿ ಭಾರತೀಯ ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಅಪಘಾತಕ್ಕೀಡಾಗಿದ್ದು, ಒಬ್ಬ ಪೈಲಟ್ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಪೈಲಟ್ ನನ್ನು ರಕ್ಷಿಸಲಾಗಿದೆ. ಜಾಮ್ನಗರ ಎಸ್ಪಿ ಈ ಘಟನೆಯನ್ನು ದೃಢಪಡಿಸಿದ್ದಾರೆ. ವಿಮಾನದಲ್ಲಿ ಇಬ್ಬರು ಪೈಲಟ್ಗಳಿದ್ದರು ಎಂದು ಜಾಮ್ನಗರ ಎಸ್ಪಿ ಪ್ರೇಮ್ಸುಖ್ ದೇಲು ತಿಳಿಸಿದ್ದಾರೆ. ಅಪಘಾತ ಸಂಭವಿಸಿದಾಗ, ಒಬ್ಬ ಪೈಲಟ್ ವಿಮಾನದಿಂದ
ವಾಷಿಂಗ್ಟನ್:ಏ.03.ಜಾಗತಿಕ ವ್ಯಾಪಾರವನ್ನು ಪುನರ್ರೂಪಿಸುವ ದಿಟ್ಟ ಕ್ರಮದಲ್ಲಿ, ಆಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಅವರು ಭಾರತ ಸೇರಿದಂತೆ ವಿವಿಧ ದೇಶಗಳಿಂದ ಅಮೆರಿಕಕ್ಕೆ ಆಮದಾಗುತ್ತಿರುವ ಸರಕುಗಳಿಗೆ ಸುಂಕ ವಿಧಿಸುವ ‘ಪ್ರತಿ ಸುಂಕ’ ನೀತಿಯನ್ನು ಘೋಷಿಸಿದ್ದಾರೆ. ಶ್ವೇತಭವನದ ರೋಸ್ ಗಾರ್ಡನ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಟ್ರಂಪ್ ಪ್ರತಿ ಸುಂಕ ನೀತಿಯ ವಿವರಗಳನ್ನು ತಿಳಿಸಿದರು. ಭಾರತ ಮತ್ತು ಚೀನಾ
ಕೋಲ್ಕತಾ: ಶಿಕ್ಷಕರ ಆಯ್ಕೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ನಡುವೆಯೇ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಶಾಕ್ ನೀಡಿದ್ದು, 25,000 ಶಿಕ್ಷಕರನ್ನು ಗುರುವಾರ ವಜಾಗೊಳಿಸಿದೆ. ಹೌದು.. ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ 25,000 ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗಳ ನೇಮಕಾತಿಯನ್ನು ರದ್ದುಗೊಳಿಸಿದ್ದ ಕೋಲ್ಕತ್ತಾ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್
ಜೈಪುರ: ರಾಜಸ್ಥಾನದ ಬೀವರ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ನಿಲ್ಲಿಸಲಾಗಿದ್ದ ಟ್ಯಾಂಕರ್ನಿಂದ ವಿಷಕಾರಿ ಅನಿಲ ಸೋರಿಕೆಯಾಗಿ ಮೂವರು ಸಾವನ್ನಪ್ಪಿದ್ದು, 50 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯಲ್ಲಿ ಕಾರ್ಖಾನೆ ಮಾಲೀಕ ಮತ್ತು ಇತರ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ. ಬಡಿಯಾದ ವಸತಿ ಪ್ರದೇಶದಲ್ಲಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಈ ರಾಸಾಯನಿಕ
ನವದೆಹಲಿ: ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಹಾಗೂ ಪ್ರಯಾಗ್ ರಾಜ್ ಅಭಿವೃದ್ಧಿ ಪ್ರಾಧಿಕಾರಗಳ ನಡೆಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ತರಾಟೆಗೆ ತೆಗೆದುಕೊಂಡಿದೆ. ಪ್ರಯಾಗ್ ರಾಜ್ ಅಭಿವೃದ್ಧಿ ಪ್ರಾಧಿಕಾರ ಹಾಗೂ ಸರ್ಕಾರ ಬಲಪ್ರಯೋಗದ ಮೂಲಕ ತೆರವು ಕಾರ್ಯಾಚರಣೆಗಳನ್ನು ಕೈಗೊಂಡಿದೆ
ಜಾರ್ಖಂಡ್: ಜಾರ್ಖಂಡ್ನಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಸಾಹಿಬ್ಗಂಜ್ನ ಬರ್ಹೆತ್ನ ಎನ್ಟಿಪಿಸಿ ಗೇಟ್ ಬಳಿ ಎರಡು ಸರಕು ರೈಲುಗಳ ನಡುವೆ ಭಾರಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಆದ್ರೆ ಈ ಅಪಘಾತದಲ್ಲಿ ಕಾರ್ಮಿಕನೊಬ್ಬ ಕಾರ್ಮಿಕ ಸಿಕ್ಕಿಹಾಕಿಕೊಂಡಿದ್ದಾರೆ ಎಂಬ ಮಾಹಿತಿ ಇದೆ. ಈ ಬಗ್ಗೆ ಮಾಹಿತಿ ನೀಡಿದ