ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಜೈಪುರ: ರಾಜಸ್ಥಾನದ ಸಿಕಾರ್ ಜಿಲ್ಲೆಯ ಜೈಪುರ-ಬಿಕಾನೇರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ರಾತ್ರಿ ಬಸ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 27 ಮಂದಿ ಗಾಯಗೊಂಡಿದ್ದಾರೆ. ಬಿಕಾನೇರ್ ನಿಂದ ಜೈಪುರ ಕಡೆಗೆ ಪ್ರಯಾಣಿಸುತ್ತಿದ್ದ ಸ್ಲೀಪರ್ ಬಸ್ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು ನಾಲ್ವರು ಸಾವನ್ನಪ್ಪಿದ್ದಾರೆ ಎಂದು

ಮುಂಬೈ: ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಆಪ್ತರಾಗಿರುವ ಮಹಾಯುತಿ ಮಿತ್ರಪಕ್ಷದ 22 ಶಾಸಕರು ಪಕ್ಷ ತೊರೆಯಲು ಸಿದ್ಧರಾಗಿದ್ದಾರೆ ಎಂದು ಶಿವಸೇನಾ- ಯುಬಿಟಿ ನಾಯಕ ಆದಿತ್ಯ ಠಾಕ್ರೆ ಸೋಮವಾರ ಹೇಳಿದ್ದಾರೆ. ಅವರು ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಶಾಸಕರನ್ನು ಉಲ್ಲೇಖಿಸಿ ಈ ಮಾತುಗಳನ್ನಾಡಿದ್ದಾರೆ.ಜೂನ್ 2022 ರಲ್ಲಿ ಶಿಂಧೆ ನೇತೃತ್ವದ

ನವದೆಹಲಿ: 'ವಂದೇ ಮಾತರಂ' ಗೀತೆಯ 150ನೇ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ 'ವಂದೇ ಮಾತರಂ' ಕುರಿತ ಚರ್ಚೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿ ಸರ್ಕಾರದ ವಿರುದ್ಧ ಕಿಡಿಕಾರಿದರು. ಜನರ ಗಮನವನ್ನು ಬೇರೆಡೆ ಸೆಳೆಯಲು ಸರ್ಕಾರ

ಕೋಲ್ಕತ್ತ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಅಮಾನತುಗೊಂಡ ಟಿಎಂಸಿ ಶಾಸಕ ಹುಮಾಯೂನ್ ಕಬೀರ್ ನಿರ್ಮಿಸಲಿರುವ ಪ್ರಸ್ತಾವಿತ ಬಾಬರಿ ಮಸೀದಿ ಮಾದರಿಯ ಮಸೀದಿಗಾಗಿ ಇರಿಸಲಾಗಿರುವ ದೇಣಿಗೆ ಪೆಟ್ಟಿಗೆಗಳು ಬಹುತೇಕ ತುಂಬಿವೆ. ಭೌತಿಕವಾಗಿ ಮತ್ತು ಆನ್‌ಲೈನ್‌ ಮೂಲಕ ದೇಣಿಗೆಗಳು ಹರಿದುಬರುತ್ತಲೇ ಇದ್ದು ನಗದು ಎಣಿಕೆ ಯಂತ್ರಗಳು ರಾತ್ರಿಯಿಡೀ ಓಡಾಡುತ್ತಿವೆ. ನಾಲ್ಕು ದೇಣಿಗೆ ಪೆಟ್ಟಿಗೆಗಳು ಮತ್ತು ಒಂದು

ಪಣಜಿ: ಗೋವಾದ ಅರ್ಪೋರಾ ನೈಟ್‌ಕ್ಲಬ್‌ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಲಬ್‌ನ ಮ್ಯಾನೇಜರ್‌ನನ್ನೂ ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದು, ಕ್ಲಬ್‌ ಮಾಲೀಕನ ವಿರುದ್ಧವೂ ಅರೆಸ್ಟ್‌ ವಾರಂಟ್‌ ಜಾರಿಗೊಳಿಸಿದ್ದಾರೆ. ಪ್ರಕರಣ ಸಂಬಂಧ ಅರ್ಪೋರಾ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ಅಗ್ನಿ ಸುರಕ್ಷತಾ ನಿಯಮ ಪಾಲಿಸದೇ ನಿರ್ಲಕ್ಷ್ಯ ವಹಿಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಕ್ಲಬ್

ಇಸ್ಲಾಮಾಬಾದ್: ಪಾಕಿಸ್ತಾನದ ಅಡಿಯಾಲಾ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮಾನಸಿಕ ಅಸ್ವಸ್ಥ? ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ (PTI) ಮುಖ್ಯಸ್ಥ 'ಮಾನಸಿಕ ಅಸ್ವಸ್ಥ' ಮತ್ತು ದೇಶಕ್ಕೆ ಬೆದರಿಕೆ ಎಂದು ಪಾಕಿಸ್ತಾನ ಸೇನೆ ಘೋಷಿಸಿದೆ. ಪಾಕಿಸ್ತಾನ ಸೇನಾ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಇಮ್ರಾನ್ ಖಾನ್ ಅವರು ಸೇನಾ ವಿರೋಧಿ

ಟೀಂ ಇಂಡಿಯಾ ವಿರುದ್ಧದ ಮೊದಲೆರಡು ಏಕದಿನ ಪಂದ್ಯಗಳಲ್ಲಿ ಸಪ್ಪೆ ಪ್ರದರ್ಶನ ನೀಡಿದ್ದ ದಕ್ಷಿಣ ಆಫ್ರಿಕಾದ ಸ್ಟಾರ್ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಕ್ವಿಂಟನ್ ಡಿ ಕಾಕ್ ಇದೀಗ ಮೂರನೇ ಏಕದಿನದಲ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ. ವಿಶಾಖಪಟ್ಟಣದಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಸರಣಿಯ ನಿರ್ಣಾಯಕ ಪಂದ್ಯದಲ್ಲಿ, ಡಿ ಕಾಕ್

ಲಕ್ನೋ: ನಿಲ್ಲಿಸಿದ್ದ ಟ್ರಕ್ ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾದ ದೆಹಲಿ-ಲಕ್ನೋ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬುಧವಾರ ತಡರಾತ್ರಿ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದವರು ಬದುಕುಳಿಯುವ

ರಾಂಚಿ: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತ 17 ರನ್ ಗಳಿಂದ ರೋಚಕ ಜಯ ಸಾಧಿಸಿದೆ. ದಕ್ಷಿಣ ಆಫ್ರಿಕಾ ಅಬ್ಬರದ ಬ್ಯಾಟಿಂಗ್ ಮಾಡಿದ್ದು ಗೆಲುವಿನ ಸೂಚನೆ ನೀಡಿತ್ತು. ಆದರೆ ಭಾರತೀಯ ಬೌಲರ್ ಆಫ್ರಿಕಾ ಬ್ಯಾಟರ್ ಗಳನ್ನು ಕಟ್ಟಿಹಾಕಿದರು. ಈ ಮೂಲಕ ಟೆಸ್ಟ್ ಸರಣಿ ಸೋಲನ್ನು ಭಾರತ

ಮುಂಬೈ: ಡೊಂಬಿವಿಲಿಯಲ್ಲಿ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ರವೀಂದ್ರ ಚವಾಣ್ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷ ಮತ್ತು ಶಿವಸೇನೆ ನಡುವಿನ ಕುದಿಯುತ್ತಿದ್ದ ಉದ್ವಿಗ್ನತೆ ಭಾನುವಾರ ಬೀದಿಗೆ ಬಂದಿದೆ. ಡಿಸೆಂಬರ್ 2 ರಂದು ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಗೆ ಮುನ್ನ ಎರಡೂ ಪಕ್ಷಗಳ ಕೆಲವು ಪದಾಧಿಕಾರಿಗಳ ಸೇರ್ಪಡೆಗೆ ಸಂಬಂಧಿಸಿದಂತೆ ಪಕ್ಷಗಳ ನಡುವಿನ ವಿವಾದದ