ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಜೈಪುರ:ಡಿ.18, ತರಬೇತಿ ವೇಳೆ ಬುಧವಾರದಂದು ಟ್ಯಾಂಕ್‌ನಲ್ಲಿ ಮದ್ದುಗುಂಡುಗಳನ್ನು ತುಂಬುತ್ತಿದ್ದಾಗ, ಬಿಕಾನೇರ್‌ನ ಮಹಾಜನ್ ಫೀಲ್ಡ್ ಫೈರಿಂಗ್ ರೇಂಜ್‌ನಲ್ಲಿ ಇಬ್ಬರು ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ. ಅವರು ಮದ್ದುಗುಂಡುಗಳನ್ನು ಲೋಡ್ ಮಾಡುವಾಗ ಚಾರ್ಜರ್ ಸ್ಫೋಟಗೊಂಡಿದೆ ಎಂದು ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಅಮಿತಾಭ್ ಶರ್ಮಾ ಹೇಳಿದ್ದಾರೆ. ಘಟನೆಯಲ್ಲಿ ಇಬ್ಬರು ಯೋಧರು ಸಾವನ್ನಪ್ಪಿದ್ದು,

ಚೆನ್ನೈ:ಡಿ.17.ವಿಶ್ವ ಚೆಸ್ ಚಾಂಪಿಯನ್ ಡಿ.ಗುಕೇಶ್‌ಗೆ ಇಂದು (ಡಿ.17) ತಮಿಳುನಾಡು ಸರ್ಕಾರ ಸನ್ಮಾನ ಸಮಾರಂಭದಲ್ಲಿ, 5 ಕೋಟಿರೂ. ಬಹುಮಾನ ನೀಡಿ ಗೌರವಿಸಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಇಂದು 5 ಕೋಟಿ ರೂ. ಬಹುಮಾನ ಚೆಕ್ ಹಸ್ತಾಂತರಿಸಲಿದ್ದಾರೆ. ಅಭಿನಂದನಾ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಹಾಗೂ ಚೆಸ್ ದಂತಕಥೆ ವಿಶ್ವನಾಥನ್

ನವದೆಹಲಿ: ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಕೇಂದ್ರ ಸರ್ಕಾರ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಸಂವಿಧಾನಾತ್ಮಕ ತಿದ್ದುಪಡಿ ಮಸೂದೆಯನ್ನು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದೆ. "ಒಂದು ದೇಶ, ಒಂದು ಚುನಾವಣೆ" ಮಸೂದೆ ಎಂದು ಉಲ್ಲೇಖಿಸಲ್ಪಡುವ ಸಂವಿಧಾನ(ನೂರಾ ಇಪ್ಪತ್ತೊಂಬತ್ತನೇ ತಿದ್ದುಪಡಿ) ತಿದ್ದುಪಡಿ ಮಸೂದೆ, 2024 ಅನ್ನು ಕೇಂದ್ರ ಕಾನೂನು ಸಚಿವ

ಮಾಸ್ಕೋ: ರಷ್ಯಾದ ಪರಮಾಣು, ಜೈವಿಕ ಮತ್ತು ರಾಸಾಯನಿಕ ರಕ್ಷಣಾ ಪಡೆಗಳ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಇಗೊರ್ ಕಿರಿಲ್ಲೋವ್ ಅವರು ಇಂದು ಬೆಳಿಗ್ಗೆ ವಸತಿ ಅಪಾರ್ಟ್ಮೆಂಟ್ ಬ್ಲಾಕ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ ಅಡಗಿಸಿಟ್ಟಿದ್ದ ಬಾಂಬ್ ಸ್ಫೋಟಗೊಂಡು ಸಾವನ್ನಪ್ಪಿದ್ದಾರೆ. ರಷ್ಯಾದ ತನಿಖಾ ಸಮಿತಿ ಈ ಮಾಹಿತಿ ನೀಡಿದೆ. ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಇರಿಸಲಾಗಿದ್ದ ಬಾಂಬ್

ರಾಜಸ್ಥಾನ: ಆಟವಾಡುತ್ತಲೇ ವಿಕ್ಸ್ ಡಬ್ಬದ ಮುಚ್ಚಳ ನುಂಗಿ 14 ತಿಂಗಳ ಮಗು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಬನ್ಸ್ವಾರಾದಲ್ಲಿ ನಡೆದಿದೆ. ಮದುವೆಯಾಗಿ 18 ವರ್ಷಗಳ ಬಳಿಕ ಹುಟ್ಟಿದ ಮಗು ಈಗ ದುರಂತ ಅಂತ್ಯ ಕಂಡಿದ್ದು, ಪೋಷಕರ ಆಕ್ರೋಶ ಮುಗಿಲು ಮುಟ್ಟಿದೆ. ಸರೆಡಿ ಗ್ರಾಮದ ನಿವಾಸಿ ಹೀರೆನ್ ಜೋಶಿ ಅವರ ಮಗ ಮಾನ್ವಿಕ್(14

ನವದೆಹಲಿ:ಡಿ.15, ಆಮ್ ಆದ್ಮಿ ಪಕ್ಷ (ಎಎಪಿ) ಭಾನುವಾರ ದೆಹಲಿ ವಿಧಾನಸಭಾ ಚುನಾವಣೆಗೆ 38 ಅಭ್ಯರ್ಥಿಗಳ ನಾಲ್ಕನೇ ಮತ್ತು ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ನವದೆಹಲಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಮುಖ್ಯಮಂತ್ರಿ ಅತಿಶಿ ಮತ್ತೊಮ್ಮೆ ಕಲ್ಕಾಜಿಯಿಂದ ಸ್ಪರ್ಧಿಸಲಿದ್ದಾರೆ. ಸೌರಭ್ ಭಾರದ್ವಾಜ್ ಗ್ರೇಟರ್ ಕೈಲಾಶ್ ನಿಂದ ಆಪ್

ಕೋಲ್ಕತಾ: ತನ್ನೊಂದಿಗೆ ಅಕ್ರಮ ಸಂಬಂಧಕ್ಕೆ ಒಪ್ಪಲಿಲ್ಲ ಎಂಬ ಒಂದೇ ಕಾರಣಕ್ಕೆ ದೂರ್ತನೋರ್ವ ಮಹಿಳೆಯ ಶಿರಚ್ಛೇದ ಮಾಡಿ ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಬಿಸಾಡಿರುವ ಧಾರುಣ ಘಟನೆ ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತಾದಲ್ಲಿ ನಡೆದಿದೆ. ಹೌದು.. ಈ ಹಿಂದೆ ಕೋಲ್ಕತಾದ ಟೋಲಿಗಂಜ್ ಪ್ರದೇಶದಲ್ಲಿ ಸುಮಾರು 30 ವರ್ಷದ ಮಹಿಳೆಯ ಕತ್ತರಿಸಿದ

ಹೈದರಾಬಾದ್: ಪುಷ್ಪ-2: ದಿ ರೂಲ್ ಸಿನಿಮಾದ ಪ್ರೀಮಿಯರ್ ಶೋ ವೇಳೆಯಲ್ಲಿ ಉಂಟಾದ ನೂಕುನುಗ್ಗಲಿನಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ್ದ ಮಹಿಳೆಯ ಕುಟುಂಬಕ್ಕೆ ರೂ. 25 ಲಕ್ಷ ಆರ್ಥಿಕ ನೆರವನ್ನು ನಟ ಅಲ್ಲು ಅರ್ಜುನ್ ಘೋಷಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವಿಡಿಯೋ ಫೋಸ್ಟ್ ಮಾಡಿರುವ ಅಲ್ಲು ಅರ್ಜುನ್, ಈ ನೋವಿನ

ಹೈದರಾಬಾದ್: ಸಂಧ್ಯಾ ಥಿಯೇಟರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ‘ಪುಷ್ಪ 2’ ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ನಡೆದ ಕಾಲ್ತುಳಿತದಲ್ಲಿ ಒಬ್ಬ ಮಹಿಳೆ ನಿಧನ ಹೊಂದಿದ್ದರು. ಅವರ ಪುತ್ರ

ನವದೆಹಲಿ: 2025ರ ದೆಹಲಿ ವಿಧಾನಸಭೆ ಚುನಾವಣೆಗೂ ಮೊದಲು ದೆಹಲಿ ಮುಖ್ಯಮಂತ್ರಿ ಅತಿಶಿ ಸರ್ಕಾರವು ಸಚಿವ ಸಂಪುಟ ಸಭೆಯ ನಂತರ ಅರವಿಂದ್ ಕೇಜ್ರಿವಾಲ್ ಅವರ ಗ್ಯಾರಂಟಿಯನ್ನು ಈಡೇರಿಸುವತ್ತ ಒಂದು ಹೆಜ್ಜೆ ಮುಂದಿಟ್ಟಿದೆ. ದೆಹಲಿ ಕ್ಯಾಬಿನೆಟ್ ಮುಖ್ಯಮಂತ್ರಿ ಮಹಿಳಾ ಸಮ್ಮಾನ್ ಯೋಜನೆಗೆ ಅನುಮೋದನೆ ನೀಡಿದ್ದು ಅದರಂತೆ ದೆಹಲಿಯ ಮಹಿಳೆಯರು ಪ್ರತಿ ತಿಂಗಳು 1000