ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಹೆಚ್ಚಿನ ಕಸ್ಟಡಿ ವಿಚಾರಣೆಗೆ ಇಡಿ ಸಲ್ಲಿಸಿರುವ ಅರ್ಜಿ ಕುರಿತ ಆದೇಶವನ್ನು ನ್ಯಾಯಾಲಯ ಕಾಯ್ದಿರಿಸಿದೆ. ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರ ನ್ಯಾಯಾಲಯಕ್ಕೆ ಕೇಜ್ರಿವಾಲ್ ಅವರನ್ನು ಹಾಜರುಪಡಿಸಿ ಏಳು ದಿನಗಳ ಹೆಚ್ಚಿನ ಕಸ್ಟಡಿಗೆ ಇಡಿ ಮನವಿ ಮಾಡಿತು. ಪ್ರಕರಣದೊಂದಿಗೆ ಸಂಬಂಧ ಹೊಂದಿರುವ ಕೆಲವು ಜನರನ್ನು
ಕೊಯಮತ್ತೂರು:ಮಾ,27; ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವ ಮುನ್ನ ಕೊಯಮತ್ತೂರಿನ ಪ್ರಸಿದ್ಧ ಕೊನಿಯಮ್ಮನ್ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.ದೇವರ ದರ್ಶನದ ಬಳಿಕ ಕೊಯಮತ್ತೂರು ಜಿಲ್ಲಾಧಿಕಾರಿ ಕಚೇರಿಗೆ ಬಿಜೆಪಿ ಮತ್ತು ಮಿತ್ರ ಪಕ್ಷಗಳ ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ
ಅಯೋಧ್ಯೆಯ ರಾಮ ಮಂದಿರ(Ram Mandir)ದಲ್ಲಿ ಭದ್ರತೆಗೆಂದು ನಿಯೋಜಿಸಿದ್ದ ಕಮಾಂಡರ್ ಒಬ್ಬರಿಗೆ ಗುಂಡು ತಗುಲಿದೆ. ಅವರು ಆಯುಧಗಳನ್ನು ಸ್ವಚ್ಛಗೊಳಿಸುತ್ತಿರುವಾಗ ತಿಳಿಯದೇ ತಮಗೆ ತಾವೇ ಎಕೆ-47ನಿಂದ ಗುಂಡು ಹಾರಿಸಿಕೊಂಡಿರುವ ಘಟನೆ ನಡೆದಿದೆ. ಅವರನ್ನು ಶ್ರೀ ರಾಮ್ ಆಸ್ಪತ್ರೆಗೆ ಕರೆತರಲಾಯಿತು. ಅಲ್ಲಿಂದ ಅವರನ್ನು ಲಕ್ನೋದ ವೈದ್ಯಕೀಯ ಕಾಲೇಜಿಗೆ ಉಲ್ಲೇಖಿಸಲಾಯಿತು. ವೈದ್ಯಕೀಯ ಕಾಲೇಜಿನಲ್ಲಿ ಶಸ್ತ್ರಚಿಕಿತ್ಸೆಯ ನಂತರ,
ಪೇಶಾವರ ಮಾರ್ಚ್ 26: ವಾಯವ್ಯ ಪಾಕಿಸ್ತಾನದಲ್ಲಿ (Pakistan) ಮಂಗಳವಾರ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ (suicide bomb) ಐವರು ಚೀನಾ ಪ್ರಜೆಗಳು ಸಾವಿಗೀಡಾಗಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಸ್ಲಾಮಾಬಾದ್‌ನಿಂದ ಖೈಬರ್ ಪಖ್ತುನ್‌ಖ್ವಾ (Khyber Pakhtunkhwa) ಪ್ರಾಂತ್ಯದ ದಾಸುನಲ್ಲಿರುವ ತಮ್ಮ ಶಿಬಿರಕ್ಕೆ ತೆರಳುತ್ತಿದ್ದ ಚೀನಾದ ಇಂಜಿನಿಯರ್‌ಗಳ ಬೆಂಗಾವಲು ವಾಹನಕ್ಕೆ ಆತ್ಮಾಹುತಿ ಬಾಂಬರ್,
ದೆಹಲಿ ಮದ್ಯನೀತಿ(Liquor Policy) ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಬಿಆರ್ಎಸ್ ನಾಯಕಿ ಕೆ ಕವಿತಾ ಅವರನ್ನು ದೆಹಲಿ ನ್ಯಾಯಾಲಯವು ಏಪ್ರಿಲ್ 9ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿಯಾಗಿರುವ ಕೆ ಕವಿತಾ ಅವರನ್ನು ಮಾರ್ಚ್ 15 ರಂದು ಹೈದರಾಬಾದ್‌ನಿಂದ ಜಾರಿ ನಿರ್ದೇಶನಾಲಯವು ಬಂಧಿಸಿತ್ತು.
ನವದೆಹಲಿ: ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಮತ್ತು ಮೊಹಲ್ಲಾ ಚಿಕಿತ್ಸಾಲಯಗಳಲ್ಲಿ ಜನರಿಗೆ ಔಷಧಿಗಳು ಮತ್ತು ಪರೀಕ್ಷೆಗಳು ಲಭ್ಯವಾಗುವಂತೆ ನೋಡಿಕೊಳ್ಳಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಜಾರಿ ನಿರ್ದೇಶನಾಲಯದ ಕಸ್ಟಡಿಯಿಂದ ಆದೇಶ ಹೊರಡಿಸಿದ್ದಾರೆ ಎಂದು ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಮಂಗಳವಾರ ತಿಳಿಸಿದ್ದಾರೆ. ಮೊಹಲ್ಲಾ ಕ್ಲಿನಿಕ್‌ಗಳಲ್ಲಿ ಲಭ್ಯವಿರುವ ಪ್ರಯೋಗಾಲಯ ಪರೀಕ್ಷೆಗಳಲ್ಲಿನ ಸಮಸ್ಯೆಗಳ ಬಗ್ಗೆ
ಚೆನ್ನೈ: ತಮಿಳುನಾಡಿನ ಈರೋಡ್ ಸಂಸದ ಎ. ಗಣೇಶಮೂರ್ತಿ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದ್ದು ಅವರನ್ನು ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಅವರ ಸದ್ಯದ ಪರಿಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಅವರು ಕೀಟನಾಶಕ ಸೇವಿಸಿದ ಕಾರಣ ಆರೋಗ್ಯ ಹದಗೆಟ್ಟಿದೆ ಎನ್ನಲಾಗಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಡಿಎಂಕೆ ಪಕ್ಷದಿಂದ ಸ್ಪರ್ಧೆ ನಡೆಸಿದ್ದ
ಜಲ್ವಾರ್ : ಪೊಲೀಸ್ ಠಾಣೆಗೆ ದೂರು ನೀಡಲು ಹೊರಟ್ಟಿದ್ದ ಐವರನ್ನು ಡಂಪರ್ ಟ್ರಕ್ ಹರಿಸಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಜಲ್ವಾರ್ ಜಿಲ್ಲೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಮೃತರ ಪೈಕಿ ಇಬ್ಬರು ಸಹೋದರರು ಸೇರಿದ್ದಾರೆ. ಘಟನೆಯ ಬಳಿಕ ಆರೋಪಿಗಳು ಡಂಪರ್ ಅಲ್ಲಿಯೇ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ. ತಡರಾತ್ರಿ ಯಾವುದೋ ವಿಚಾರಕ್ಕೆ ಎರಡು
ನವದೆಹಲಿ: ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು. ಜೈಲಿನಿಂದಲೇ ತಮ್ಮ ಮೊದಲ ಸರ್ಕಾರಿ ಆದೇಶವನ್ನು ಹೊರಡಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮೂಲಗಳು ತಿಳಿಸಿವೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ರಾಷ್ಟ್ರ ರಾಜಧಾನಿಯ ಸಿವಿಲ್ ಲೈನ್ಸ್ ಪ್ರದೇಶದಲ್ಲಿನ ಅವರ ಅಧಿಕೃತ
ಬೆಂಗಳೂರು: ಕರ್ನಾಟಕದ ಬಹುತೇಕ ಲೋಕಸಭಾ ಕ್ಷೇತ್ರಗಳಿಗೆ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಹೆಸರು ಘೋಷಣೆ ಮಾಡುವ ಮೂಲಕ ಮೆಗಾ ಕದನಕ್ಕೆ ವೇದಿಕೆ ಸಜ್ಜಾಗುತ್ತಿದೆ. ಆದರೆ, ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಹು ಚರ್ಚಿತವಾಗಿರುವ ಬಿಜೆಪಿ-ಜೆಡಿಎಸ್ ಮೈತ್ರಿ ಇನ್ನೂ ಗಟ್ಟಿಯಾಗಿ ಒಮ್ಮತಕ್ಕೆ ಬಂದಂತೆ ಕಂಡುಬರುತ್ತಿಲ್ಲ. ಜೆಡಿಎಸ್ ನ ತಳಮಟ್ಟದ ನಾಯಕರನ್ನು ಇನ್ನೂ ಬಿಜೆಪಿ ವಿಶ್ವಾಸಕ್ಕೆ