ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಬೆಂಗಳೂರು: ಪ್ರತ್ಯೇಕ ರಾಷ್ಟ್ರದ ಕುರಿತು ಹೇಳಿಕೆ ನೀಡಿರುವ ಸಂಸದ ಡಿಕೆ ಸುರೇಶ್ ನಿವಾಸಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದ ಘಟನೆ ಭಾನುವಾರ ನಡೆಯಿತು. ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಕೆ ಸುರೇಶ್ ಅವರ ನಿವಾಸಕ್ಕೆ ಬಿಜೆಪಿ ಕಾರ್ಯಕರ್ತರು ನುಗ್ಗಿದ್ದರು. ಇದರಿಂದ ಸ್ಥಳದಲ್ಲಿ ಕೆಲ ಕಾಲ ಹೈಡ್ರಾಮಾ ನಡೆಯಿತು. ಬಿಜೆಪಿ ಕಾರ್ಯಕರ್ತರು ಏಕಾಏಕಿ ಸುರೇಶ್

ಚಂಡೀಗಢ: ಪಂಜಾಬ್ ಗವರ್ನರ್ ಮತ್ತು ಚಂಡೀಗಢದ ಆಡಳಿತಾಧಿಕಾರಿ ಬನ್ವಾರಿಲಾಲ್ ಪುರೋಹಿತ್ ಅವರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. "ನನ್ನ ವೈಯಕ್ತಿಕ ಕಾರಣಗಳು ಮತ್ತು ಇತರ ಕೆಲವು ಬದ್ಧತೆಗಳಿಂದಾಗಿ, ನಾನು ಪಂಜಾಬ್ ರಾಜ್ಯಪಾಲರ ಹುದ್ದೆಗೆ ಮತ್ತು ಕೇಂದ್ರಾಡಳಿತ ಪ್ರದೇಶ ಚಂಡೀಗಢದ ಆಡಳಿತಾಧಿಕಾರಿ ಹುದ್ದೆಗೆ ರಾಜೀನಾಮೆ

ಲಖನೌ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿಗೆ ಲಕ್ನೋ ಕೋರ್ಟ್ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. 2012ರ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಭಾರತೀಯ ಜನತಾ ಪಕ್ಷದ ಸಂಸದೆ ರೀಟಾ ಬಹುಗುಣ ಜೋಶಿ ಅವರಿಗೆ ಶುಕ್ರವಾರ

ನವದೆಹಲಿ, ಫೆಬ್ರವರಿ 3: ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ (LK Advani) ಅವರಿಗೆ ದೇಶದ ಪರಮೋಚ್ಚ ಗೌರವವಾದ ಭಾರತ ರತ್ನ (Bharat Ratna) ನೀಡಿ ಗೌರವಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಶನಿವಾರ ಘೋಷಣೆ ಮಾಡಿದ್ದಾರೆ. ಎಲ್​​ಕೆ ಅಡ್ವಾಣಿ ಜೀ ಅವರಿಗೆ ಭಾರತ

ನವದೆಹಲಿ: ಕಾಂಗ್ರೆಸ್ ಸಂಸದ ಡಿಕೆ ಸುರೇಶ್ಅವರ ಪ್ರತ್ಯೇಕ ರಾಷ್ಟ್ರ ಹೇಳಿಕೆ ಸಂಸತ್ತಿನಲ್ಲಿ ಭಾರೀ ಗದ್ದಲ, ಕೋಲಾಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಸಂಸದ ಸುರೇಶ್ ಅವರು ಸದನದಲ್ಲಿ ಬೇಷರತ್ ಕ್ಷಮೆಯಾಚಿಸಬೇಕೆಂದು ಆಡಳಿತ ಪಕ್ಷದ ಸದಸ್ಯರು ಆಗ್ರಹಿಸುತ್ತಿದ್ದಾರೆ. ಡಿಕೆ ಸುರೇಶ್ ಹೇಳಿಕೆ ಬಗ್ಗೆ ಕೇಂದ್ರ ಸಚಿವ ಪಿಯೂಶ್ ಗೋಯಲ್ ಇಂದು ರಾಜ್ಯಸಭೆಯಲ್ಲಿ ಪ್ರಸ್ತಾಪ ಮಾಡಿದರು. ಜೊತೆಗೆ

ಇಸ್ಲಾಮಾಬಾದ್: ದೇಶದ ಗೌಪ್ಯತೆ ಸೋರಿಕೆ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಮಂಗಳವಾರ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಸರ್ಕಾರಿ ಮಾಧ್ಯಮ ಮತ್ತು ಅವರ ಪಕ್ಷದ ವಕ್ತಾರರು ತಿಳಿಸಿದ್ದಾರೆ. ದೇಶದ ಗೌಪ್ಯತೆ ಸೋರಿಕೆಗೆ ಸಂಬಂಧಿಸಿದ ಸೈಫರ್ ಪ್ರಕರಣದಲ್ಲಿ ಪಾಕಿಸ್ತಾನ ತೆಹ್ರಿಕ್ - ಇ - ಇನ್ಸಾಫ್

ದೆಹಲಿ: ಉತ್ತರ ಭಾರತದ ಪ್ರದೇಶಗಳಲ್ಲಿ ತೀವ್ರ ಚಳಿಯಿಂದ ಮುಕ್ತಿಪಡೆಯುವುದಕ್ಕೆ ಸಾಂಪ್ರದಾಯಿಕ ಶೈಲಿಯ ಅಂಗೀತಿಯ ಬೆಂಕಿ ಹಾಕಿ ಬೆಚ್ಚಗಿರುವುದು ರೂಢಿ. ಆದರೆ ಅಂಗೀತಿ (ಅಗ್ಗಿಷ್ಟಿಕೆ) ಹೊಗೆ ದೆಹಲಿಯಲ್ಲಿ 15 ಮಂದಿಯನ್ನು ಬಲಿಪಡೆದಿದೆ. ದೆಹಲಿ ಅಗ್ನಿಶಾಮಕ ನಿರ್ದೇಶಕ ಅತುಲ್ ಗರ್ಗ್, ದೆಹಲಿ-ಎನ್ ಸಿಆರ್ ನ ಪ್ರದೇಶಗಳನ್ನು ಪರಿಗಣಿಸಿದರೆ, ಸಾವಿನ ಸಂಖ್ಯೆ 20 ಕ್ಕೆ ಏರಿಕೆಯಾಗುತ್ತದೆ.

ಬಿಹಾರ: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ಭಾನುವಾರ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಕಳೆದ ಎರಡ್ಮೂರು ದಿನಗಳಿಂದ ಬಿಹಾರ ರಾಜಕಾರಣದಲ್ಲಿ ಎದಿದ್ದ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದು, ಎನ್ ಡಿಎ ಜೊತೆಗೆ ಹೊಸ ಸರ್ಕಾರ ರಚಿಸುವ ಸಾಧ್ಯತೆಯಿದೆ. ಇಂದು ಬೆಳಗ್ಗೆ ತಮ್ಮ ನಿವಾಸದಲ್ಲಿ ಜೆಡಿಯು ಶಾಸಕರ ಸಭೆ ನಡೆಸಿದ ಬಳಿಕ ಹಿರಿಯ

ನವದೆಹಲಿ: ಭಾರತೀಯ ಸೇನೆಯ ಮೊದಲ ಮಹಿಳಾ ಸುಬೇದಾರ್ ಆಗಿ ಚಾಂಪಿಯನ್ ಟ್ರ್ಯಾಪ್ ಶೂಟರ್ ಆಗಿರುವ ಪ್ರೀತಿ ರಜಕ್ ಅವರು ನೇಮಕ ಗೊಂಡಿದ್ದಾರೆ. ಹವಾಲ್ದಾರ್ ಆಗಿದ್ದ ಪ್ರೀತಿ ರಜಕ್ ಭಾನುವಾರ ಬಡ್ತಿ ಪಡೆದ ನಂತರ ಭಾರತೀಯ ಸೇನೆಯಲ್ಲಿ ಸುಬೇದಾರ್ ಹುದ್ದೆಯನ್ನು ಅಲಂಕರಿಸಿದ ಮೊದಲ ಮಹಿಳೆ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಸುಬೇದಾರ್ ಪ್ರೀತಿ ರಜಕ್

ನವದೆಹಲಿ: 22 ಭಾರತೀಯರಿದ್ದ ಮತ್ತೊಂದು ಭಾರತೀಯ ವ್ಯಾಪಾರಿ ಹಡಗಿನ ಮೇಳೆ ದಾಳಿಯಾಗಿದ್ದು, ವಿಚಾರ ತಿಳಿದ ಕೂಡಲೇ ಭಾರತೀಯ ನೌಕಾಪಡೆ ರಕ್ಷಣೆಗೆ ದೌಡಾಯಿಸಿದೆ. ಗಲ್ಫ್ ಆಫ್ ಏಡನ್‌ನಲ್ಲಿ ಕ್ಷಿಪಣಿ ದಾಳಿಯಾಗಿದ್ದು, ವ್ಯಾಪಾರಿ ಹಡಗಿನ SOS ಕರೆಗೆ ಸ್ಪಂದಿಸಿದ ಭಾರತೀಯ ಸೇನೆ ತುರ್ತಾಗಿ ಯುದ್ಧನೌಕೆಯನ್ನು ರವಾನಿಸಿದೆ. ಮೂಲಗಳ ಪ್ರಕಾರ ವ್ಯಾಪಾರಿ ನೌಕೆಯಲ್ಲಿ 22 ಭಾರತೀಯರು