ನಾಸಿಕ್: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಯೆಯೋಲಾದಲ್ಲಿ ಆಡಳಿತಾರೂಢ ಮಹಾಯುತಿ ಮೈತ್ರಿಕೂಟ ವಿಭಜನೆಯಾಗಿದ್ದು, ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಶಿವಸೇನೆಯು ಪ್ರತಿಪಕ್ಷದ ಭಾಗವಾಗಿರುವ ಎನ್ಸಿಪಿ(ಎಸ್ಪಿ) ಜೊತೆ ಕೈಜೋಡಿಸಲು ನಿರ್ಧರಿಸಿದೆ. ಈ ಹೊಸ ಮೈತ್ರಿಯು, ಭಾರತೀಯ ಜನತಾ ಪಕ್ಷ(ಬಿಜೆಪಿ) ಮತ್ತು ಅಜಿತ್ ಪವಾರ್ ಅವರ ಎನ್ಸಿಪಿಯ ವಿರುದ್ಧ ಸ್ಪರ್ಧಿಸಲಿದೆ. ಯೆಯೋಲಾ, ಸಚಿವ ಮತ್ತು ಎನ್ಸಿಪಿ
ಢಾಕಾ: ಮಾನವ ಹಕ್ಕು ಉಲ್ಲಂಘನೆ ಪ್ರಕರಣದಲ್ಲಿ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರನ್ನು ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ICT-BD) ದೋಷಿ ಎಂದು ತೀರ್ಪು ನೀಡಿದ್ದು ಅವರಿಗೆ ಗಲ್ಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯ ತ್ರಿಸದಸ್ಯ ನ್ಯಾಯಪೀಠವು ಶೇಖ್ ಹಸೀನಾ ಅವರ ಮೇಲಿರುವ ಆರೋಪ ಸಾಬೀತಾಗಿದೆ
ನವದೆಹಲಿ: ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿಎ ಗೆ ಅಭೂತಪೂರ್ವ ಗೆಲುವು ಲಭ್ಯವಾಗಿದ್ದು, ವಿಪಕ್ಷಗಳಿಂದ ವೋಟ್ ಚೋರಿ ಆರೋಪ ಬಂದ ಬೆನ್ನಲ್ಲೇ ಮತ್ತೊಂದು ಗಂಭೀರ ಆರೋಪ ಕೇಂದ್ರ ಸರ್ಕಾರದ ವಿರುದ್ಧ ಕೇಳಿಬಂದಿದೆ. ಜನ ಸುರಾಜ್ ವಕ್ತಾರ ಮತ್ತು ಪಕ್ಷದ ಪ್ರಮುಖ ನಾಯಕರಲ್ಲಿ ಒಬ್ಬರಾದ ಪವನ್ ವರ್ಮಾ, ಕೇಂದ್ರ ಸರ್ಕಾರದ ವಿರುದ್ಧ ವಿಶ್ವಬ್ಯಾಂಕ್ನಿಂದ
ಕೋಲ್ಕತ್ತಾ: ನ. 15,ವಿದ್ಯುತ್ ಉಪಕರಣಗಳನ್ನು ಸಂಗ್ರಹಿಸಿಡುತ್ತಿದ್ದ ಗೋಡೌನ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಭಾರೀ ಅವಘಡ ಸಂಭವಿಸಿರುವ ಘಟನೆ ಕೋಲ್ಕತ್ತಾದ 26ನೇ ಎಜ್ರಾ ಸ್ಟ್ರೀಟ್ನಲ್ಲಿ ಶನಿವಾರ ಬೆಳಗಿನ ಜಾವ ಸಂಭವಿಸಿದೆ. ವಿದ್ಯುತ್ ಉಪಕರಣಗಳನ್ನು ಸಂಗ್ರಹಿಸಿಡುತ್ತಿದ್ದ ಗೋಡೌನ್ಗೆ ಬೆಂಕಿ ಹೊತ್ತಿಕೊಂಡಿದ್ದು, ನೋಡನೋಡುತ್ತಲೇ ಅಕ್ಕಪಕ್ಕದ ಕಟ್ಟಡಗಳಿಗೆ ಬೆಂಕಿ ಆವರಿಸಿಕೊಂಡಿದೆ. ಜೊತೆಗೆ ದಟ್ಟ ಹೊಗೆ ಆವರಿಸಿಕೊಂಡಿದ್ದು,
ಶ್ರೀನಗರ: ಜಮ್ಮು-ಕಾಶ್ಮೀರದ ನೌಗಮ್ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸ್ಫೋಟ ಸಂಭವಿಸಿದ್ದು, ಒಂಭತ್ತು ಮೃತಪಟ್ಟು , 27 ಜನರು ಗಾಯಗೊಂಡಿದ್ದಾರೆ.'ವೈಟ್-ಕಾಲರ್' ಭಯೋತ್ಪಾದಕ ಮಾಡ್ಯೂಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ವಶಪಡಿಸಿಕೊಂಡ ಸ್ಫೋಟಕಗಳ ದೊಡ್ಡ ಸಂಗ್ರಹದಿಂದ ಅಧಿಕಾರಿಗಳು ಮಾದರಿಗಳನ್ನು ಹೊರತೆಗೆಯುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ಇಂದು ಬೆಳಗ್ಗೆ ತಿಳಿಸಿದ್ದಾರೆ.ಅಧಿಕಾರಿಗಳ ಪ್ರಕಾರ, ನಿನ್ನೆ ಶುಕ್ರವಾರ
ಪಾಟ್ನ: ಬಿಹಾರ ಚುನಾವಣಾ ಫಲಿತಾಂಶಗಳು ಕಾಂಗ್ರೆಸ್ಗೆ ಗಂಭೀರ ಸೋಲನ್ನುಂಟುಮಾಡುವುದಲ್ಲದೆ, ಈ ವರ್ಷದ ಆರಂಭದಲ್ಲಿ ಬಿಜೆಪಿ ಮತಗಳನ್ನು ಕದಿಯುತ್ತಿದೆ ಎಂದು ಮತದಾರರಿಗೆ ಮನವರಿಕೆ ಮಾಡಿಕೊಡಲು ರಾಜ್ಯಾದ್ಯಂತ ಸಂಚರಿಸಿದ್ದ ರಾಹುಲ್ ಗಾಂಧಿಗೆ ದೊಡ್ಡ ಹಿನ್ನಡೆಯನ್ನೂ ತಂದಿದೆ. ಕಳೆದ ಕೆಲವು ಚುನಾವಣೆಗಳಲ್ಲಿ ಪಕ್ಷ ಮತಗಳನ್ನು ಕ್ರೋಢೀಕರಿಸಲು ಸಹಾಯ ಮಾಡಿದೆ ಎಂದು ನಂಬಿದ್ದ ಎರಡು ಹಿಂದಿನ ಯಾತ್ರೆಗಳಿಂದ
ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪು ಕೋಟೆ ಬಳಿ ನಡೆದ ಸ್ಫೋಟ ಪ್ರಕರಣದ ತನಿಖೆಯನ್ನು ಕೇಂದ್ರ ತಂಡಗಳು ಚುರುಕುಗೊಳಿಸಿದ್ದು, ಸ್ಪೋಟದ ಲಿಂಕ್ ಗೆ ಸಂಬಂಧಿಸಿದಂತೆ ಇಬ್ಬರು ವೈದ್ಯರನ್ನು ಬಂಧಿಸಿದ್ದಾರೆ.ನಿನ್ನೆ ದಿನ ಸಂಭವಿಸಿದ ಸ್ಪೋಟ ಸೇರಿದಂತೆ ಉಗ್ರ ಚಟುವಟಿಕೆಗಳಲ್ಲಿ ಭಾಗಿಯಾದ ಆರೋಪದ ಮೇಲೆ ಮೂವರು ವೈದ್ಯರ ಹೆಸರು ಬೆಳಕಿಗೆ ಬಂದ ನಂತರ ಫರಿದಾಬಾದ್ನ
ಇಸ್ಲಾಮಾಬಾದ್: ದೆಹಲಿ ಬಾಂಬ್ ಸ್ಫೋಟ ಪ್ರಕರಣ ಹಸಿರಾಗಿರುವಂತೆಯೇ ಅತ್ತ ಪಾಕಿಸ್ತಾನದಲ್ಲೂ ಭೀಕರ ಕಾರ್ ಬಾಂಬ್ ಸ್ಫೋಟ ಸಂಭವಿಸಿ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದಾರೆ. ಇಸ್ಲಾಮಾಬಾದ್ನ ಜಿಲ್ಲಾ ನ್ಯಾಯಾಲಯದ ಹೊರಗೆ ನಡೆದ ಕಾರು ಸ್ಫೋಟದಲ್ಲಿ 12 ಮಂದಿ ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ನ್ಯಾಯಾಲಯಕ್ಕೆ ಆಗಮಿಸಿದ್ದವರು ಅಥವಾ ಪಾದಚಾರಿಗಳು. ಸ್ಫೋಟದಿಂದ
ಬೆಟ್ಟಿಂಗ್ ಆ್ಯಪ್ ಪ್ರಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಿಕ್ಕು ವಿಲವಿಲ ಎಂದು ಒದ್ದಾಡುತ್ತಿರುವ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗರಾದ ಶಿಖರ್ ಧವನ್ ಹಾಗೂ ಸುರೇಶ್ ರೈನಾಗೆ ಜಾರಿ ನಿರ್ದೇಶನಾಲಯ ಮತ್ತೊಂದು ಆಘಾತ ನೀಡಿದೆ. ಈ ಇಬ್ಬರು ಕ್ರಿಕೆಟಿಗರಿಗೆ ಸೇರಿರುವ ಒಟ್ಟು 11.14 ಕೋಟಿ ರೂ ಮೊತ್ತದ ಆಸ್ತಿಯನ್ನು ಜಾರಿ ನಿರ್ದೇಶನಾಲಯ
ಬೆಂಗಳೂರು:ನವೆಂಬರ್ 6, ಕರ್ನಾಟಕ ರಾಜಧಾನಿ ಬೆಂಗಳೂರಿನ ಹಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ಪ್ರಕರಣದಲ್ಲಿ ಗುಜರಾತ್ ಮೂಲದ ಮಹಿಳಾ ಸಾಫ್ಟ್ವೇರ್ ಇಂಜಿನಿಯರ್ ರೆನೆ ಜೋಶಿಲ್ದಾ ಎಂಬಾಕೆಯನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಅಚ್ಚರಿಯ ವಿಚಾರವೆಂದರೆ, ಆಕೆ ಯುವಕನೊಬ್ಬನನ್ನು ಪ್ರೀತಿಸಿದ್ದಳು. ಯುವಕ ಆಕೆಯ ಪ್ರೀತಿಯನ್ನು ನಿರಾಕರಿಸಿದ್ದ. ಹೀಗಾಗಿ