ನವದೆಹಲಿ: 2001 ರಲ್ಲಿ ಮುಂಬೈನಲ್ಲಿ ನಡೆದ ಹೋಟೆಲ್ ಉದ್ಯಮಿ ಜಯ ಶೆಟ್ಟಿ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಗ್ಯಾಂಗ್ಸ್ಟರ್ ಛೋಟಾ ರಾಜನ್ಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಬುಧವಾರ ರದ್ದುಗೊಳಿಸಿದೆ. ಕಳೆದ ವರ್ಷ ಅಕ್ಟೋಬರ್ 23 ರಂದು ರಾಜನ್ಗೆ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ್ದ ಮತ್ತು ಪ್ರಕರಣದಲ್ಲಿ ಜಾಮೀನು ನೀಡಿದ ಬಾಂಬೆ
ಜೈಪುರ: ಕೋಮು ಸಾಮರಸ್ಯ ಮತ್ತು ಮಾನವೀಯತೆಗೆ ಉದಾಹರಣೆಯಾಗಿ ಮುಸ್ಲಿಂ ಯುವಕನೊಬ್ಬ ಮಗನಂತೆ ಹಿಂದೂ ಮಹಿಳೆಯ ಅಂತ್ಯಕ್ರಿಯೆಯನ್ನು ನೆರವೇರಿಸಿದ ಘಟನೆ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ನಡೆದಿದೆ. ನಗರದ ಜಂಗಿ ಚೌಕ್ನಲ್ಲಿ 67 ವರ್ಷದ ಶಾಂತಿ ದೇವಿ ನಿಧನರಾಗಿದ್ದರು. ಅವರ ಕುಟುಂಬದಲ್ಲಿ ಯಾರೂ ಇರಲಿಲ್ಲ. ಇದರಿಂದಾಗಿ ಮೂವತ್ತು ವರ್ಷದ ಯುವಕ ಅಸ್ಗರ್ ಅಲಿ
ಡೆಹ್ರಾಡೂನ್ (ಉತ್ತರಾಖಂಡ): ಡೆಹ್ರಾಡೂನ್ನಲ್ಲಿ ಸೋಮವಾರ ರಾತ್ರಿ ಭಾರೀ ಮಳೆಯಾಗಿದ್ದು, ತಮ್ಸಾ ನದಿ ಉಕ್ಕಿ ಹರಿಯುತ್ತಿದೆ. ಪರಿಣಾಮ ಇಲ್ಲಿನ ಪ್ರಮುಖ ದೇವಾಲಯಗಳಲ್ಲಿ ಒಂದಾಗಿರುವ ತಪಕೇಶ್ವರ ಮಹಾದೇವ ದೇವಾಲಯ ಜಲಾವೃತಗೊಂಡಿದೆ. ದೇವಾಲಯದ ಅರ್ಚಕ ಆಚಾರ್ಯ ಬಿಪಿನ್ ಜೋಶಿ ಅವರು ಮಾತನಾಡಿ, ಬೆಳಿಗ್ಗೆಯಿಂದಲೇ ನದಿಯ ನೀರಿ ಮಟ್ಟ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿ, ಉಕ್ಕಿ ಹರಿಯುತ್ತಿತ್ತು. ಇದೀಗ
ಭೋಪಾಲ್: ಮಧ್ಯಪ್ರದೇಶದ ಸಿಎಂ ಮೋಹನ್ ಯಾದವ್ ಅವರು ಹಾರಾಟ ನಡೆಸಲು ಸಿದ್ಧತೆ ನಡೆಸಿದ್ದ ಹಾಟ್ ಏರ್ ಬಲೂನ್ನ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಮಂದಸೋರ್ನಲ್ಲಿ ನಡೆದಿದ್ದು, ಮೋಹನ್ ಯಾದವ್ ಅವರು ಅಪಾಯದಿಂದ ಪಾರಾಗಿದ್ದಾರೆ. ಶನಿವಾರ ಬೆಳಿಗ್ಗೆ ಮಂದಸೋರ್ನ ಗಾಂಧಿ ಸಾಗರ್ ಅರಣ್ಯ ಪ್ರದೇಶದಲ್ಲಿ ಮೋಹನ್ ಯಾದವ್ ಹಾಟ್ ಏರ್ ಬಲೂನ್ನಲ್ಲಿ
ಐಜ್ವಾಲ್:ಸೆ. 13: ಮಿಜೋರಾಂನ ಮೊಟ್ಟಮೊದಲ ರೈಲು ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹಸಿರು ನಿಶಾನೆ ತೋರಿಸಿದ್ದಾರೆ. 2015ರಲ್ಲಿ ಪ್ರಾರಂಭವಾದ ರೈಲ್ವೆ ಕಾಮಗಾರಿ ಇದೀಗಪೂರ್ಣಗೊಂಡಿದ್ದು, ಸೈರಾಂಗ್ನಿಂದ ದೆಹಲಿ ಸಂಪರ್ಕಿಸುವ ರಾಜಧಾನಿ ಎಕ್ಸ್ಪ್ರೆಸ್ ರೈಲು, ಸೈರಾಂಗ್-ಗುವಾಹಟಿ ಎಕ್ಸ್ಪ್ರೆಸ್ ಮತ್ತು ಸೈರಾಂಗ್-ಕೋಲ್ಕತ್ತಾ ಎಕ್ಸ್ಪ್ರೆಸ್ ರೈಲನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ. ಮಿಜೋರಾಂ ಗುಡ್ಡಗಾಡಿನಿಂದ ಕೂಡಿದ
ನವದೆಹಲಿ: ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಅವರು ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಧಾಕೃಷ್ಣನ್ಗೆ ಪ್ರಮಾಣವಚನ ಬೋಧಿಸಿದರು. ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ ಶುಕ್ರವಾರ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಭಾರತದ 15 ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು
ನವದೆಹಲಿ: ಭಾರತ-ಅಮೇರಿಕಾ ಆಪ್ತ ಸ್ನೇಹಿತರು ಮತ್ತು ನೈಸರ್ಗಿಕ ಪಾಲುದಾರರು. ನಿಮ್ಮೊಂದಿಗೆ ಮಾತನಾಡಲು ನಾನೂ ಉತ್ಸುಕನಾಗಿದ್ದೇನೆಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಹೇಳಿದ್ದಾರೆ. ಆತ್ಮೀಯ ಸ್ನೇಹಿತನೊಂದಿಗೆ ಮಾತನಾಡಲು ಎದುರು ನೋಡುತ್ತಿದ್ದೇನೆಂಬ ಟ್ರಂಪ್ ಅವರ ಹೇಳಿಕೆ ಕುರಿತು ಪ್ರಧಾನಿ ಮೋದಿಯವರು ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್
ಥಾಣೆ: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ 41 ವರ್ಷದ ನಟಿಯನ್ನು ಮಹಾರಾಷ್ಟ್ರದ ಥಾಣೆಯಲ್ಲಿ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ನಟಿಯನ್ನು ಅನುಷ್ಕಾ ಮೋನಿ ಮೋಹನ್ ದಾಸ್ ಎಂದು ಗುರುತಿಸಲಾಗಿದೆ. ಈಕೆ ನಟಿಯಾಗಬೇಕೆಂಬ ಆಸೆಯಿಂದ ಬರುತ್ತಿದ್ದ ನಟಿಯರನ್ನು ವೇಶ್ಯಾವಾಟಿಕೆ ದಂಧೆಗೆ ತಳ್ಳುತ್ತಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಖಚಿತ ಮಾಹಿತಿ ಆಧಾರದ
ಮುಂಬಯಿ: 34 ವಾಹನಗಳಲ್ಲಿ 400 ಕೆಜಿ ಆರ್ಡಿಎಕ್ಸ್ ಹೊತ್ತ ಮಾನವ ಬಾಂಬ್ಗಳನ್ನು ಇರಿಸಲಾಗಿದೆ ಎಂದು ಅನಾಮಿಕ ವ್ಯಕ್ತಿಯೊಬ್ಬ ಬೆದರಿಕೆ ಸಂದೇಶ ಕಳುಹಿಸಿದ್ದಾನೆ. ಸಂಚಾರ ಪೊಲೀಸ್ ಠಾಣೆಗೆ ಬೆದರಿಕೆ ವಾಟ್ಸಾಪ್ ಸಂದೇಶ ಬಂದಿದ್ದು ನಗರದ್ಯಾಂತ ಭಾರೀ ಕಟ್ಟೆಚ್ಚರವಹಿಸಿದ್ದಾರೆ. ಲಷ್ಕರ್-ಎ-ಜಿಹಾದಿ ಎಂಬ ಸಂಘಟನೆಯಿಂದ ಈ ಬೆದರಿಕೆ ಬಂದಿದ್ದು, ರಾಜ್ಯಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ. ಮಾನವ ಬಾಂಬ್ಗಳನ್ನು
ಶಿಮ್ಲಾ: ಹಿಮಾಚಲ ಪ್ರದೇಶದಾದ್ಯಂತ ಮಂಗಳವಾರ ಸುರಿದ ಧಾರಾಕಾರ ಮಳೆಯಿಂದಾಗಿ ಭೂಕುಸಿತ ಮತ್ತು ದಿಢೀರ್ ಪ್ರವಾಹ ಉಂಟಾಗಿ ಮನೆ ಕುಸಿದು ಐದು ಜನರು ಸಾವನ್ನಪ್ಪಿದ್ದಾರೆ. ನಾಲ್ಕು ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ 1,337 ರಸ್ತೆಗಳಲ್ಲಿ ಸಂಚಾರ ಸ್ಥಗಿತಗೊಂಡಿದೆ. ಕಾಂಗ್ರಾ, ಮಂಡಿ, ಸಿರಮೌರ್ ಮತ್ತು ಕಿನ್ನೌರ್ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಸ್ಥಳೀಯ ಹವಾಮಾನ