ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಪಟ್ನಾ: ಬಿಹಾರದ ನಳಂದ ಜಿಲ್ಲೆಯ ಕುಲ್ ಗ್ರಾಮದಲ್ಲಿ ಕೊಳವೆ ಬಾವಿಗೆ ಬಿದಿದ್ದ ಮೂರು ವರ್ಷದ ಮಗುವನ್ನು ರಕ್ಷಿಸಲಾಗಿದೆ. ಸತತ 5 ಗಂಟೆಗಳ ಕಾಲ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ನೇತೃತ್ವದಲ್ಲಿ ನಡೆದ ಯಶಸ್ವಿ ಕಾರ್ಯಾಚರಣೆ  ಮೂಲಕ ಬಾಲಕನನ್ನು ರಕ್ಷಿಸಲಾಗಿದೆ. ಬಾಲಕ ಆರೋಗ್ಯವಾಗಿದ್ದು, ಕೊಳವೆ ಬಾವಿಯಿಂದ ಸುರಕ್ಷಿತ ಮೇಲಕ್ಕೆತ್ತಿದ ನಂತರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು

ಇಂಫಾಲ: ಮಣಿಪುರ ಹಿಂಸಾಚಾರದ ಸಂದರ್ಭದಲ್ಲಿ ನಡೆದ ಭೀಕರ ಘಟನೆಗಳ ಸರಮಾಲೆ ಒಂದೊಂದಾಗಿ ನಿಧಾನವಾಗಿ ಬಯಲಾಗುತ್ತಿದ್ದು, ಇದೀಗ ಹಿಂಸಾಚಾರದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ವೃದ್ಧ ಪತ್ನಿಯನ್ನು ಸಜೀವ ದಹನ ಮಾಡಿದ ಧಾರುಣ ಘಟನೆ ಕೂಡ ಬೆಳಕಿಗೆ ಬಂದಿದೆ. ಗುಂಪೊಂದು ಸ್ವಾತಂತ್ರ್ಯ ಹೋರಾಟಗಾರರೊಬ್ಬರ ಪತ್ನಿಯನ್ನು ಮನೆಯೊಳಗೆ ಕೂಡಿ ಹಾಕಿ ಬೆಂಕಿ ಹಚ್ಚಿದೆ ಎಂಬುದು ಇದೀಗ ಬಹಿರಂಗವಾಗಿದ್ದು,

ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಬುಕ್ಕಿಯೋರ್ವ ಮಹಾರಾಷ್ಟ್ರ ಉದ್ಯಮಿಗೆ ಬರೊಬ್ಬರಿ 58 ಕೋಟಿ ರೂಪಾಯಿಗಳಷ್ಟು ವಂಚನೆ ಮಾಡಿರುವ ಘಟನೆ ವರದಿಯಾಗಿದೆ. ಟ್ಯಾಂಪರ್ ಮಾಡಿದ ಬ್ಯಾಟಿಂಗ್ ಆಪ್ ಗಳಲ್ಲಿ ಹೂಡಿಕೆ ಮಾಡುವಂತೆ ಆಮಿಷವೊಡ್ಡಿ,  58 ಕೋಟಿ ರೂಪಾಯಿಗಳಷ್ಟು ವಂಚನೆ ಮಾಡಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗೋಂಡಿಯಾ ಮೂಲದ ವಂಚಕನ ವಿರುದ್ಧ ಮಹಾರಾಷ್ಟ್ರ ಪೊಲೀಸರು

ಇಂಫಾಲ್: ಮಣಿಪುರದಲ್ಲಿ ಬುಡಕಟ್ಟು ಸಮುದಾಯದ ಮಹಿಳೆಯರನ್ನು ಬೆತ್ತಲುಗೊಳಿಸಿ, ರಸ್ತೆಯಲ್ಲಿ ಮೆರವಣಿಗೆ ನಡೆಸಿ, ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. 19 ವರ್ಷದ ಆರೋಪಿಯನ್ನು ಬಂಧಿಸಲಾಗಿದ್ದು, ಇದರೊಂದಿಗೆ ಪ್ರಕರಣ ಸಂಬಂಧ ಈ ವರೆಗೂ ಐವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದಂತಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧಿಸಲಾಗಿರುವ

ಇಂಫಾಲ: ಮಹಿಳೆಯರ ಬೆತ್ತಲೆ ಮೆರವಣಿಗೆ ವಿಚಾರವಾಗಿ ದೇಶಾದ್ಯಂತ ಸುದ್ದಿಗೆ ಗ್ರಾಸವಾಗಿರುವ ಮಣಿಪುರದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು, ವ್ಯಕ್ತಿಯ ತಲೆ ಕತ್ತರಿಸಿ ಕೋಲಿಗೆ ನೇತು ಹಾಕಿ ಘಟನೆ ವರದಿಯಾಗಿದೆ. ಬಿಷ್ಣುಪುರ ಜಿಲ್ಲೆಯ ವಸತಿ ಪ್ರದೇಶ (residential area)ದಲ್ಲಿ ಈ ಕೃತ್ಯ ನಡೆದಿದ್ದು, ಕುಕಿ ಸಮುದಾಯದ ಡೆವಿಡ್ ಥೀಕ್, ಎಂಬಾತನನ್ನು ಬರ್ಬರವಾಗಿ

ನವದೆಹಲಿ: ಮಣಿಪುರದಲ್ಲಿನ ಜನಾಂಗೀಯ ಹಿಂಸಾಚಾರ ಹಾಗೂ ಇಬ್ಬರು ಬುಡಕಟ್ಟು ಮಹಿಳೆಯರ ಅರೆಬೆತ್ತಲೆ ಮೆರವಣಿಗೆಯ ವಿಡಿಯೋ ವೈರಲ್ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಒತ್ತಾಯಿಸಿ ಲೋಕಸಭೆಯಲ್ಲಿ ವಿಪಕ್ಷಗಳು ಇಂದು ಕೂಡಾ ಗದ್ದಲ, ಕೋಲಾಹಲ ಮುಂದುವರೆಸಿದ್ದರಿಂದ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು. ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ ಕಾಂಗ್ರೆಸ್, ಡಿಎಂಕೆ, ಎಡಪಕ್ಷಗಳು ಪ್ರತಿಪಕ್ಷಗಳ

ನವದೆಹಲಿ: ಮಣಿಪುರ ಹಿಂಸಾಚಾರ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಪರೇಡ್ ಮಾಡಿಸಿದ ಘಟನೆ 140 ಕೋಟಿ ಭಾರತೀಯರಿಗೆ ಮಾಡಿದ ಅವಮಾನ ಎಂದು ಪ್ರಧಾನಿ ಬೇಸರ ವ್ಯಕ್ತಪಡಿಸಿದ್ದಾರೆ. ಇಂದು ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗುತ್ತಿದ್ದು ಇದಕ್ಕೂ ಮುನ್ನ ಸಂಸತ್ತು ಭವನ

ಡೆಹ್ರಾಡೂನ್:‌ ಅಲಕನಂದಾ ನದಿ ತೀರದಲ್ಲಿ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡ ಪರಿಣಾಮ ಉಂಟಾದ ಅವಘಡದಲ್ಲಿ ಸುಮಾರು 15 ಮಂದಿ ಮೃತಪಟ್ಟು, ಅನೇಕರು ಗಾಯಗೊಂಡ ಭೀಕರ ಘಟನೆ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಬುಧವಾರ ನಡೆದಿದೆ. ಅನೇಕ ಗಾಯಾಳುಗಳ ಸ್ಥಿತಿ ಗಂಭೀರವಾಗಿರುವುದರಿಂದ ಮರಣ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರಾಖಂಡದ ಚಮೋಲಿ

ನವದೆಹಲಿ: ಬೆಂಗಳೂರಿನಲ್ಲಿ ಪ್ರತಿಪಕ್ಷಗಳ ಸಭೆ ನಡೆಯುತ್ತಿರುವ ಹಿನ್ನಲೆಯಲ್ಲಿ ತೀವ್ರ ವಾಗ್ದಾಳಿ ನಡೆಸಿರುವ ಪ್ರಧಾನಿ ಮೋದಿ ಅವರಿಗೆ ಕುಟುಂಬವಷ್ಟೇ ಮುಖ್ಯ.. ದೇಶದ ಏನೂ ಅಲ್ಲ ಎಂದು ಕಿಡಿಕಾರಿದ್ದಾರೆ. ಅಂಡಮಾನ್ ಮತ್ತು ನಿಕೋಬಾರ್ ಪೋರ್ಟ್ ಬ್ಲೇರ್ ನಲ್ಲಿ ವೀರ್ ಸಾವರ್ಕರ್ ವಿಮಾನ ನಿಲ್ದಾಣದ ಟರ್ಮಿನಲ್ ನ ವರ್ಚುವಲ್ ಉದ್ಘಾಟನೆ ಬಳಿಕೆ ಮಾತನಾಡಿದ ಪ್ರಧಾನಿ ಮೋದಿ,

ಥಾಣೆ(ಮಹಾರಾಷ್ಟ್ರ): ಮಹಾರಾಷ್ಟ್ರದ ಥಾಣೆಯಲ್ಲಿ ಇಂದು ಕಂಟೈನರ್ ಟ್ರಕ್ ಜೀಪ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಕೆಲವು ವಿದ್ಯಾರ್ಥಿಗಳು ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ ಜೀಪ್ ಪದ್ಘಾದಿಂದ ಖಡವಾಲಿ ರೈಲು ನಿಲ್ದಾಣಕ್ಕೆ ಹೋಗುತ್ತಿದ್ದಾಗ ಎದುರಿನಿಂದ ಬಂದ ಟ್ರಕ್ ಡಿಕ್ಕಿ ಹೊಡೆದ ನಂತರ ಜೀಪ್ ಸುಮಾರು 100 ಮೀಟರ್ ಸ್ಕಿಡ್