ಇಂಫಾಲ: ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ ಅಪರಿಚಿತ ಬಂದೂಕುಧಾರಿಗಳು ನಡೆಸಿದೆ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಇಬ್ಬರು ಸ್ವಯಂಸೇವಕರು ಸಾವನ್ನಪ್ಪಿದ್ದಾರೆಂದು ಪೊಲೀಸರು ಭಾನುವಾರ ಮಾಹಿತಿ ನೀಡಿದ್ದಾರೆ. ತಡರಾತ್ರಿ ಖೋಯಿಜುಮಂತಬಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. "ಗ್ರಾಮದ ಸ್ವಯಂಸೇವಕರು" ತಾತ್ಕಾಲಿಕ ಬಂಕರ್‌ನಲ್ಲಿ ಕಾವಲು ಕಾಯುತ್ತಿದ್ದರು. ಈ ವೇಳೆ ಗುಂಡಿನ ದಾಳಿ ನಡೆದಿದೆ ಎಂದು ಹೇಳಿದ್ದಾರೆ. ಭದ್ರತಾ
ಚಮೋಲಿ: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ಬದರಿನಾಥ್ ರಾಷ್ಟ್ರೀಯ ಹೆದ್ದಾರಿ (ಎನ್ ಹೆಚ್ 7ನ್ನು) ಲಂಬಗಡ ಮತ್ತು ಖಚಡಾ ಡ್ರೈನ್‌ಗಳಲ್ಲಿ ಕಳೆದ 13 ಗಂಟೆಗಳಿಂದ ಮುಚ್ಚಲಾಗಿದೆ. ಇದರಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ. ಸಾರ್ವಜನಿಕರ ಪ್ರಯಾಣಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರಂತರವಾಗಿ ಶ್ರಮಿಸುತ್ತಿದೆ. ಹೆದ್ದಾರಿ ಬಂದ್
ಮುಂಬೈ: ಬೈಜೂಸ್ ಭಾರತ ಕ್ರಿಕೆಟ್ ತಂಡದ ಪ್ರಾಯೋಜಕತ್ವದಿಂದ ಹಿಂದೆ ಸರಿದ ದೀರ್ಘ ಕಾಲದ ನಂತರ ಬಿಸಿಸಿಐ ಹೊಸ ಪ್ರಾಯೋಜಕರನ್ನು ಆಯ್ಕೆ ಮಾಡಿದೆ. ಆನ್‌ಲೈನ್ ಫ್ಯಾಂಟಸಿ ಗೇಮಿಂಗ್ ವೇದಿಕೆಯಾದ 'ಡ್ರೀಮ್11' ಇನ್ಮುಂದೆ ಮೂರು ವರ್ಷಗಳ ಅವಧಿಗೆ ಟೀಂ ಇಂಡಿಯಾದ ಪ್ರಾಯೋಜಕತ್ವ ವಹಿಸಿಕೊಳ್ಳಲಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)
ಇಂಫಾಲ್: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಪರಿಸ್ಥಿತಿ ಇನ್ನೂ ಉದ್ವಿಗ್ನವಾಗಿದ್ದು, ಜುಲೈ 8 ರವರೆಗೂ ರಾಜ್ಯದ ಎಲ್ಲಾ ಶಾಲೆಗಳ ಸಾಮಾನ್ಯ ತರಗತಿಗಳನ್ನು ಬಂದ್ ಮಾಡಲು ರಾಜ್ಯ ಸರ್ಕಾರ ಶುಕ್ರವಾರ ನಿರ್ಧರಿಸಿದೆ. ಆದೇಶದಲ್ಲಿ, "ರಾಜ್ಯದ ಎಲ್ಲಾ ಶಾಲೆಗಳಿಗೆ ಸಾಮಾನ್ಯ ತರಗತಿಗಳ ಪುನರಾರಂಭ ದಿನಾಂಕ 19-06-2023ರ ಆದೇಶದಂತೆ, 08-07-2023 ರವರೆಗೆ ಅಥವಾ ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ". "ಶಿಕ್ಷಣ
ಗುವಾಹಟಿ: ಮಣಿಪುರದಲ್ಲಿ ಹಿಂಸಾಚಾರ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಸಿಎಂ ಬಿರೇನ್ ಸಿಂಗ್ ರಾಜೀನಾಮೆ ನೀಡಲಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ರಾಜೀನಾಮೆ ನೀಡುವುದಿಲ್ಲ ಎಂದು ಸಿಎಂ ಯು-ಟರ್ನ್ ಹೊಡೆದಿದ್ದಾರೆ. ಮಣಿಪುರ ಸಿಎಂ ಗೃಹ ಕಚೇರಿಯ ಹೊರಭಾಗದಲ್ಲಿ ಹೈಡ್ರಾಮ ನಡೆದಿದ್ದು, ನೂರಾರು ಮಹಿಳೆಯರು ರಸ್ತೆ ತಡೆದಿದ್ದಾರೆ. ಮಧ್ಯಾಹ್ನ 1 ಗಂಟೆಗೆ ರಾಜಭವನಕ್ಕೆ ತೆರಳಬೇಕಿದ್ದ ಸಿಎಂ
ಸೌತ್ ಕೊರಿಯಾದಲ್ಲಿ ನಡೆದ ಏಷ್ಯನ್ ಕಬಡ್ಡಿ ಚಾಂಪಿಯನ್‌ಶಿಪ್ 2023 (Asian Kabaddi Championship 2023)ರ ಫೈನಲ್ ಪಂದ್ಯದಲ್ಲಿ ಇರಾನ್ ತಂಡವನ್ನು 32- 42 ಅಂತರದಿಂದ ಮಣಿಸಿದ ಭಾರತ ಕಬಡ್ಡಿ ತಂಡ ಚಾಂಪಿಯನ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ಇದರೊಂದಿಗೆ ಇದುವರೆಗೆ ನಡೆದಿರುವ 11 ಆವೃತ್ತಿಗಳಲ್ಲಿ ಭಾರತ ಒಂದೇ ಬರೋಬ್ಬರಿ 7 ಬಾರಿ ಚಾಂಪಿಯನ್
ಬದ್ರಿನಾಥ್: ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿದ್ದು, ಯಾತ್ರಾರ್ಥಿಗಳು ಮಾರ್ಗ ಮಧ್ಯೆ ಸಿಲುಕಿದ್ದಾರೆ. ಉತ್ತರಾಖಂಡ್ ನ ಚಿಮೋಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ನೂರಾರು ಮಂದಿ ಯಾತ್ರಿಕರು ಸಿಲುಕಿದ್ದಾರೆ. ಯಾತ್ರಿಕರು ಬದ್ರಿನಾಥ್ ಹಾಗೂ ಹೇಮಕುಂಡ್ ಸಾಹಿಬ್ ಗೆ ಯಾತ್ರೆ ಕೈಗೊಂಡಿದ್ದರು. ರಸ್ತೆಯಲ್ಲಿ ಅವಶೇಷಗಳ ರಾಶಿ ಬಿದ್ದಿದ್ದು, ನೂರಾರು ವಾಹನಗಳು ಸಾಲುಗಟ್ಟಿ ನಿಂತಿರುವ ಹಿನ್ನೆಲೆಯಲ್ಲಿ
ಇಂಫಾಲ: ಮಣಿಪುರ ಹಿಂಸಾಚಾರದಿಂದ ಹೆಚ್ಚು ತತ್ತರಿಸಿರುವ ಚುರಚಂದಪುರ ಜಿಲ್ಲೆಗೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಬೆಂಗಾವಲು ಪಡೆ ವಾಹನವನ್ನು ಪೊಲೀಸರು ತಡೆಹಿಡಿದಿದ್ದಾರೆ ಎಂದು ಗುರುವಾರ ತಿಳಿದುಬಂದಿದೆ. ರಾಹುಲ್ ಗಾಂಧಿ ಇಂದು ಬೆಳಗ್ಗೆ ಇಂಫಾಲ್ ಗೆ ಬಂದಿಳಿದರು ಹಾಗೂ ಚುರಚಂದಪುರ ಜಿಲ್ಲೆಗೆ ತೆರಳುತ್ತಿದ್ದ ಮಾರ್ಗದಲ್ಲಿ ಅವರನ್ನು ತಡೆಯಲಾಗಿದೆ. ಮಣಿಪುರಕ್ಕೆ ಇಂದು
ಭೋಪಾಲ್: ಮದುವೆ ಮನೆಯವರನ್ನು ಹೊತ್ತೊಯುತ್ತಿದ್ದ ಟ್ರಕ್'ವೊಂದು ನದಿಗೆ ಉರುಳಿ ಬಿದ್ದ ಪರಿಣಾಮ ಐವರು ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ದತಿಯಾ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. "ಕಳೆದ ತಡರಾತ್ರಿ, ಟ್ರಕ್ ಬುಹಾರಾ ಗ್ರಾಮವನ್ನು ತಲುಪಿದಾಗ, ನದಿಯ ದಡದ ಬಳಿ ಉರುಳಿಬಿದ್ದಿದೆ. ಪರಿಣಾಮ 65 ವರ್ಷದ ಮಹಿಳೆ, 15 ವರ್ಷದ ಬಾಲಕ
ನವದೆಹಲಿ/ಬೆಂಗಳೂರು: ವಾತಾವರಣದಲ್ಲಿ ಉಂಟಾದ ವೈಪರೀತ್ಯಗಳಿಂದಾಗಿ ಆಹಾರ ತಯಾರಿಕೆಯಲ್ಲಿ ಬಹುಮುಖ್ಯವಾಗಿ ಬೇಕಾಗಿರುವ ಟೊಮೇಟೊ ಬೆಲೆ ಗಗನಕ್ಕೇರಿದೆ. ಒಂದು ಕಡೆ ಅತಿವೃಷ್ಟಿ, ಮತ್ತೊಂದೆಡೆ ಅನಾವೃಷ್ಟಿ ಕಾರಣದಿಂದಾಗಿ ದಿನನಿತ್ಯ ಅಡುಗೆಗೆ ಬೇಕಾದ ಟೊಮೇಟೊ ಬೆಲೆ ದಿಢೀರ್ ಏರಿಕೆಯಾಗಿದ್ದು, ಬಡವರು, ಮದ್ಯಮ ವರ್ಗದವರಿಗೆ ಕೈಗೆಟುಕದಂತಾಗಿದೆ. ಒಂದು ಕೆಜಿ ಟೊಮೇಟೊ ಬೆಲೆ 80 ರಿಂದ 100 ರೂಪಾಯಿಗೆ ಮಾರಾಟವಾಗುತ್ತಿರುವುದು