ಕೋಲ್ಕತ್ತಾ: ಪಶ್ಚಿಮ ಬಂಗಾಳದ ಎಲ್ಲಾ 42 ಲೋಕಸಭಾ ಸ್ಥಾನಗಳಿಗೆ ಟಿಎಂಸಿ ಭಾನುವಾರ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಕನಿಷ್ಠ ಎಂಟು ಹಾಲಿ ಸಂಸದರನ್ನು ಕೈಬಿಟ್ಟಿದೆ ಮತ್ತು ಮಾಜಿ ಕ್ರಿಕೆಟಿಗರಾದ ಯೂಸುಫ್ ಪಠಾಣ್ ಮತ್ತು ಕೀರ್ತಿ ಆಜಾದ್ ಅವರಂತಹ ಹಲವು ಹೊಸ ಮುಖಗಳನ್ನು ಕಣಕ್ಕಿಳಿಸಿದೆ. ಈ ಬಾರಿಯ ಲೋಕಸಭೆ ಚುನಾವಣೆಗೆ ಪಕ್ಷವು 16
ನವದೆಹಲಿ: ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇನ್ನು ಕೆಲವೇ ವಾರಗಳಲ್ಲಿ ದೇಶದಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವ ಸಂದರ್ಭದಲ್ಲಿ ಚುನಾವಣಾ ಆಯುಕ್ತರು ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಕೇಂದ್ರ ಚುನಾವಣಾ ಆಯೋಗವು ಶೀಘ್ರದಲ್ಲೇ ಚುನಾವಣಾ ದಿನಾಂಕಗಳನ್ನು ಘೋಷಿಸಲಿದೆ.
ನವದೆಹಲಿ: ವಿಶ್ವವಿದ್ಯಾಲಯ ಪ್ರವೇಶ, ನೌಕರಿಯ ಆಮಿಷಗಳನ್ನೊಡ್ಡಿ ಯುಕ್ರೇನ್ ವಿರುದ್ಧದ ಯುದ್ಧರಂಗಕ್ಕೆ ಭಾರತೀಯರನ್ನು ಸಾಗಣೆ ಮಾಡಲಾಗಿದೆ ಎಂದು ಸಿಬಿಐ ಹೇಳಿದೆ. ರಷ್ಯಾ-ಯುಕ್ರೇನ್ ಕದನರಂಗಕ್ಕೆ ಭಾರತೀಯರನ್ನು ಸಾಗಣೆ ಮಾಡಿರುವವರ ಮೇಲೆ ಕಣ್ಣಿಡಲಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. ಏಜೆಂಟರು ರಷ್ಯಾಕ್ಕೆ ಆಗಮಿಸುವ ಭಾರತೀಯರ ಪಾಸ್‌ಪೋರ್ಟ್‌ಗಳನ್ನು ವಶಪಡಿಸಿಕೊಂಡರು ಮತ್ತು ಸಶಸ್ತ್ರ ಪಡೆಗಳೊಂದಿಗೆ ಹೋರಾಡುವಂತೆ ಒತ್ತಾಯಿಸಿದರು ಎಂದು
ಇಂಫಾಲ್: ಮಣಿಪುರದ ತೌಬಲ್ ಜಿಲ್ಲೆಯ ತಮ್ಮ ಮನೆಯಲ್ಲಿದ್ದ ಭಾರತೀಯ ಸೇನೆಯ ಜೂನಿಯರ್ ಕಮಿಷನ್ಡ್ ಆಫೀಸರ್(ಜೆಸಿಒ)ನನ್ನು ದುಷ್ಕರ್ಮಿಗಳು ಶುಕ್ರವಾರ ಅಪಹರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚರಂಗ್‌ಪತ್ ಮಮಾಂಗ್ ಲೈಕೈ ನಿವಾಸಿಯಾದ ಜೆಸಿಒ ಕೊನ್ಸಮ್ ಖೇಡಾ ಸಿಂಗ್ ರಜೆಯಲ್ಲಿದ್ದರು ಮತ್ತು ಇಂದು ಬೆಳಗ್ಗೆ 9 ಗಂಟೆಗೆ ಕೆಲವು ದುಷ್ಕರ್ಮಿಗಳು ಅವರ ಮನೆಗೆ ನುಗ್ಗಿ ವಾಹನದಲ್ಲಿ
ನವದೆಹಲಿ: ಮಹಿಳಾ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಮಹಿಳಾ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇನ್ಫೋಸಿಸ್ ಫೌಂಡೇಶನ್ ಮಾಜಿ ಅಧ್ಯಕ್ಷೆ, ಸಮಾಜಸೇವಕಿ, ಲೇಖಕಿ ಡಾ ಸುಧಾಮೂರ್ತಿ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದಾರೆ. ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಡಾ ಸುಧಾಮೂರ್ತಿಯವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ
ಕೋಲ್ಕತಾ: ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರು ಕಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳ ನಂತರ ತಾವು ಬಿಜೆಪಿ ಸೇರುವುದಾಗಿ ಮಂಗಳವಾರ ಘೋಷಿಸಿದ್ದಾರೆ. ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಭಿಜಿತ್ ಗಂಗೋಪಾಧ್ಯಾಯ ಅವರು, ಮಾರ್ಚ್ 7ರಂದು ಬಿಜೆಪಿ ಸೇರುವುದಾಗಿ ತಿಳಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿರುವ ರಾಷ್ಟ್ರೀಯ
ಕೋಲ್ಕತ್ತ: ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಭೂಕಬಳಿಕೆ ಆರೋಪದ ಆರೋಪಿ ಟಿಎಂಸಿ ನಾಯಕ ಶಾಜಹಾನ್ ಶೇಖ್‌ನನ್ನು ಗುರುವಾರ ಬೆಳಗ್ಗೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 55 ದಿನಗಳಿಂದ ತಲೆಮರೆಸಿಕೊಂಡಿದ್ದ ಶಾಜಹಾನ್ ಅವರನ್ನು ಪಶ್ಚಿಮ ಬಂಗಾಳ ಪೊಲೀಸ್ ವಿಶೇಷ ಪಡೆಯು 'ಉತ್ತರ 24 ಪರಗಣ' ಜಿಲ್ಲೆಯಲ್ಲಿ
ನವದೆಹಲಿ,ಫೆ 28: ಭಾರತೀಯ ನೌಕಾಪಡೆ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಮಹತ್ವದ ಕಾರ್ಯಾಚರಣೆಯಲ್ಲಿ ಗುಜರಾತ್‌ನ ಪೋರಬಂದರ್ ಬಳಿ ಸಣ್ಣ ಹಡಗೊಂದರಿಂದ 3,300 ಕೆಜಿಗೂ ಹೆಚ್ಚು ಮಾದಕವಸ್ತುಗಳನ್ನು ವಶಪಡಿಸಿಕೊಂಡಿದೆ. ಇದು ನೌಕಾಪಡೆ ಘೋಷಿಸಿದಂತೆ ಇತ್ತೀಚಿನ ದಿನಗಳಲ್ಲಿ ಅತಿದೊಡ್ಡ ಮಾದಕ ದ್ರವ್ಯ ದಂಧೆ ಪತ್ತೆಯಾಗಿದೆ. ನೌಕಾಪಡೆಯು ಮಂಗಳವಾರದಂದು ಅನುಮಾನಸ್ಪದ್ದ ಸಣ್ಣ ಹಡಗನ್ನು
ಚೈನ್ನೈ, ಫೆ 28 : ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಜೈಲು ಶಿಕ್ಷೆಗೆ ಗುರಿಯಾಗಿದ್ದ 7 ಅಪರಾಧಿಗಳ ಪೈಕಿ ಒಬ್ಬರಾದ ಶಾಂತನ್ ಇಂದು ಬೆಳಗ್ಗೆ ಚೈನ್ನೈನಲ್ಲಿ ನಿಧನರಾಗಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೂಲತ ಶ್ರೀಲಂಕಾದ ಟಿ. ಸುತೇಂದ್ರರಾಜ ಅಲಿಯಾಸ್ ಶಾಂತನ್ ( 55)
ಆಮ್ ಆದ್ಮಿ ಪಕ್ಷ ದೆಹಲಿ ಮತ್ತು ಹರಿಯಾಣ ಲೋಕಸಭಾ ಅಭ್ಯರ್ಥಿಗಳನ್ನು ಘೋಷಿಸಿದೆ. ಪೂರ್ವ ದೆಹಲಿ – ಕುಲದೀಪ್ ಕುಮಾರ್ (ಶಾಸಕ) ನವದೆಹಲಿ – ಸೋಮನಾಥ್ ಭಾರತಿ (ಶಾಸಕ) ಪಶ್ಚಿಮ ದೆಹಲಿ – ಮಹಾಬಲ್ ಮಿಶ್ರಾ (ಮಾಜಿ ಕಾಂಗ್ರೆಸ್ ಸಂಸದ) ದಕ್ಷಿಣ ದೆಹಲಿ – ಸಾಹಿ ರಾಮ್ ಪಹಲ್ವಾನ್ (ಶಾಸಕ) ಹರಿಯಾಣ ಕುರುಕ್ಷೇತ್ರ – ಸುಶೀಲ್ ಗುಪ್ತಾ (ಮಾಜಿ