ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಅವರಿಗೆ ಗಂಭೀರ ಗಾಯವಾಗಿರುವ ಬಗ್ಗೆ ವರದಿಯಾಗಿದೆ. ಮಮತಾ ಬ್ಯಾನರ್ಜಿ ಅವರ ಹಣೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಟಿಎಂಸಿ ಪಕ್ಷ ಅಧಿಕೃತವಾಗಿ ತಿಳಿಸಿದೆ. ಟಿಎಂಸಿ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಮತಾ ಬ್ಯಾನರ್ಜಿ

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿಯು ಮಾಜಿ ಅಧಿಕಾರಿ ಸುಖಬೀರ್ ಸಿಂಗ್ ಸಂಧು ಮತ್ತು ಜ್ಞಾನೇಶ್ ಕುಮಾರ್ ಅವರನ್ನು ನೂತನ ಚುನಾವಣಾ ಆಯುಕ್ತರಾಗಿ ನೇಮಕ ಮಾಡಿದೆ. ಈ ಬಗ್ಗೆ ಸಮಿತಿಯ ಸದಸ್ಯ ಮತ್ತು ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ಗುರುವಾರ ಮಾಹಿತಿ ನೀಡಿದ್ದು, ಇಂದು ನಡೆದ

ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಭಾರತೀಯ ವಾಯುಪಡೆಯ ತೇಜಸ್​ ಯುದ್ಧ ವಿಮಾನ ಪತನವಾಗಿದೆ. ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಸೇನೆ ಆದೇಶಿಸಿದೆ. ಭಾರತೀಯ ವಾಯುಪಡೆಯ ಲಘು ಯುದ್ಧ ವಿಮಾನ (ಎಲ್‌ಸಿಎ) ತೇಜಸ್ ಕಾರ್ಯಾಚರಣೆಯ ತರಬೇತಿಯ ಸಮಯದಲ್ಲಿ ಜೈಸಲ್ಮೇರ್ ಬಳಿ ಪತನಗೊಂಡಿದೆ. ಪೈಲಟ್​ಗಳು ಸುರಕ್ಷಿತವಾಗಿದ್ದಾರೆ. ಭಾರತೀಯ ವಾಯುಪಡೆಯ ಒಂದು ತೇಜಸ್ ವಿಮಾನವು ಇಂದು

ನವದೆಹಲಿ:ಮಾ,10: ಲೋಕಸಭೆ ಚುನಾವಣೆ ಬೆನ್ನಲ್ಲೇ ಹಿಸಾರ್‌ನ ಬಿಜೆಪಿ ಸಂಸದ ಬ್ರಿಜೇಂದ್ರ ಸಿಂಗ್ ಅವರು ರಾಜಕೀಯ ಕಾರಣಗಳಿಂದ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಭಾನುವಾರ ರಾಜೀನಾಮೆ ನೀಡಿದ್ದು, ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಬ್ರಿಜೇಂದ್ರ ಸಿಂಗ್ ಅವರು ರಾಜೀನಾಮೆ ಘೋಷಿಸಿದ ಬಳಿಕ ಬಿಜೆಪಿ ನಾಯಕ ಬಿರೇಂದರ್ ಸಿಂಗ್ ಅವರ ಪುತ್ರ ಬ್ರಿಜೇಂದ್ರ ಸಿಂಗ್

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಎಲ್ಲಾ 42 ಲೋಕಸಭಾ ಸ್ಥಾನಗಳಿಗೆ ಟಿಎಂಸಿ ಭಾನುವಾರ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಕನಿಷ್ಠ ಎಂಟು ಹಾಲಿ ಸಂಸದರನ್ನು ಕೈಬಿಟ್ಟಿದೆ ಮತ್ತು ಮಾಜಿ ಕ್ರಿಕೆಟಿಗರಾದ ಯೂಸುಫ್ ಪಠಾಣ್ ಮತ್ತು ಕೀರ್ತಿ ಆಜಾದ್ ಅವರಂತಹ ಹಲವು ಹೊಸ ಮುಖಗಳನ್ನು ಕಣಕ್ಕಿಳಿಸಿದೆ. ಈ ಬಾರಿಯ ಲೋಕಸಭೆ ಚುನಾವಣೆಗೆ ಪಕ್ಷವು 16

ನವದೆಹಲಿ: ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇನ್ನು ಕೆಲವೇ ವಾರಗಳಲ್ಲಿ ದೇಶದಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವ ಸಂದರ್ಭದಲ್ಲಿ ಚುನಾವಣಾ ಆಯುಕ್ತರು ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಕೇಂದ್ರ ಚುನಾವಣಾ ಆಯೋಗವು ಶೀಘ್ರದಲ್ಲೇ ಚುನಾವಣಾ ದಿನಾಂಕಗಳನ್ನು ಘೋಷಿಸಲಿದೆ.

ನವದೆಹಲಿ: ವಿಶ್ವವಿದ್ಯಾಲಯ ಪ್ರವೇಶ, ನೌಕರಿಯ ಆಮಿಷಗಳನ್ನೊಡ್ಡಿ ಯುಕ್ರೇನ್ ವಿರುದ್ಧದ ಯುದ್ಧರಂಗಕ್ಕೆ ಭಾರತೀಯರನ್ನು ಸಾಗಣೆ ಮಾಡಲಾಗಿದೆ ಎಂದು ಸಿಬಿಐ ಹೇಳಿದೆ. ರಷ್ಯಾ-ಯುಕ್ರೇನ್ ಕದನರಂಗಕ್ಕೆ ಭಾರತೀಯರನ್ನು ಸಾಗಣೆ ಮಾಡಿರುವವರ ಮೇಲೆ ಕಣ್ಣಿಡಲಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. ಏಜೆಂಟರು ರಷ್ಯಾಕ್ಕೆ ಆಗಮಿಸುವ ಭಾರತೀಯರ ಪಾಸ್‌ಪೋರ್ಟ್‌ಗಳನ್ನು ವಶಪಡಿಸಿಕೊಂಡರು ಮತ್ತು ಸಶಸ್ತ್ರ ಪಡೆಗಳೊಂದಿಗೆ ಹೋರಾಡುವಂತೆ ಒತ್ತಾಯಿಸಿದರು ಎಂದು

ಇಂಫಾಲ್: ಮಣಿಪುರದ ತೌಬಲ್ ಜಿಲ್ಲೆಯ ತಮ್ಮ ಮನೆಯಲ್ಲಿದ್ದ ಭಾರತೀಯ ಸೇನೆಯ ಜೂನಿಯರ್ ಕಮಿಷನ್ಡ್ ಆಫೀಸರ್(ಜೆಸಿಒ)ನನ್ನು ದುಷ್ಕರ್ಮಿಗಳು ಶುಕ್ರವಾರ ಅಪಹರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚರಂಗ್‌ಪತ್ ಮಮಾಂಗ್ ಲೈಕೈ ನಿವಾಸಿಯಾದ ಜೆಸಿಒ ಕೊನ್ಸಮ್ ಖೇಡಾ ಸಿಂಗ್ ರಜೆಯಲ್ಲಿದ್ದರು ಮತ್ತು ಇಂದು ಬೆಳಗ್ಗೆ 9 ಗಂಟೆಗೆ ಕೆಲವು ದುಷ್ಕರ್ಮಿಗಳು ಅವರ ಮನೆಗೆ ನುಗ್ಗಿ ವಾಹನದಲ್ಲಿ

ನವದೆಹಲಿ: ಮಹಿಳಾ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಮಹಿಳಾ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇನ್ಫೋಸಿಸ್ ಫೌಂಡೇಶನ್ ಮಾಜಿ ಅಧ್ಯಕ್ಷೆ, ಸಮಾಜಸೇವಕಿ, ಲೇಖಕಿ ಡಾ ಸುಧಾಮೂರ್ತಿ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದಾರೆ. ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಡಾ ಸುಧಾಮೂರ್ತಿಯವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ

ಕೋಲ್ಕತಾ: ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರು ಕಲ್ಕತ್ತಾ ಹೈಕೋರ್ಟ್‌ ನ್ಯಾಯಮೂರ್ತಿ ಹುದ್ದೆಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳ ನಂತರ ತಾವು ಬಿಜೆಪಿ ಸೇರುವುದಾಗಿ ಮಂಗಳವಾರ ಘೋಷಿಸಿದ್ದಾರೆ. ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಭಿಜಿತ್ ಗಂಗೋಪಾಧ್ಯಾಯ ಅವರು, ಮಾರ್ಚ್ 7ರಂದು ಬಿಜೆಪಿ ಸೇರುವುದಾಗಿ ತಿಳಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿರುವ ರಾಷ್ಟ್ರೀಯ