ದೆಹಲಿಯಲ್ಲಿರುವ ನೆಹರು ಮೆಮೊರಿಯಲ್ ಮ್ಯೂಸಿಯಂ ಆ್ಯಂಡ್ ಲೈಬ್ರರಿಯನ್ನು (Nehru Memorial Museum and Library )ಯನ್ನು ಪ್ರಧಾನಮಂತ್ರಿ ಮ್ಯೂಸಿಯಂ ಆ್ಯಂಡ್ ಸೊಸೈಟಿಯಾಗಿ ಮರು ನಾಮಕರಣ ಮಾಡಲಾಗಿದೆ. ಹೆಸರು ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆದಿದೆ. ಹೆಸರು ಬದಲಾವಣೆಯು ದ್ವೇಷ ಹಾಗೂ ಸಂಕುಚಿತ ಮನೋಭಾವವನ್ನು ಸೂಚಿಸುತ್ತದೆ ಎಂದು
ಗಾಂಧಿನಗರ/ಅಹಮದಾಬಾದ್: ನಿನ್ನೆ ಗುರುವಾರ ಸಂಜೆ ಗುಜರಾತಿನ ಜಖೌ ಬಂದರಿನ ಬಳಿ ಬಿಪೊರ್‌ಜೋಯ್ ಚಂಡಮಾರುತ ತೀವ್ರ ಪ್ರಮಾಣದಲ್ಲಿ ಬೀಸಿ ಭೂಕುಸಿತವನ್ನು ಉಂಟುಮಾಡಿತು, ಗಂಟೆಗೆ 115-125 ಕಿಲೋಮೀಟರ್ ವೇಗದಲ್ಲಿ 140 ಕಿಲೋ ಮೀಟರ್ ಪ್ರದೇಶದವರೆಗೆ ಗಾಳಿ ಬೀಸಿದ್ದು ಭಾರಿ ಮಳೆಯಾಗಿದೆ. ಗುಜರಾತ್ ನ ಕರಾವಳಿ ಪ್ರದೇಶದಲ್ಲಿ ಭಾರಿ ಮಳೆ ಸುರಿದಿದೆ. ವಿದ್ಯುತ್ ಕಂಬಗಳು ಮತ್ತು
ಲಂಡನ್: ವೆಂಬ್ಲಿನಲ್ಲಿ ಹೈದರಾಬಾದ್‌ನ 27 ವರ್ಷದ ಯುವತಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಉನ್ನತ ವ್ಯಾಸಂಗಕ್ಕಾಗಿ ಲಂಡನ್‌ಗೆ ತೆರಳಿದ್ದ ತೇಜಸ್ವಿನಿ ರೆಡ್ಡಿ ಎಂಬ ಯುವತಿಗೆ ಮಂಗಳವಾರ ಬ್ರೆಜಿಲ್‌ನ ವ್ಯಕ್ತಿಯೊಬ್ಬ ವಸತಿಗೃಹದಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ತೇಜಸ್ವಿನಿ ರೆಡ್ಡಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ, ಇನ್ನೂ 28 ವರ್ಷ ವಯಸ್ಸಿನ ಇನ್ನೊಬ್ಬ ಯುವತಿಗೂ ಚಾಕುವಿನಿಂದ
ಚೆನ್ನೈ: ತಮಿಳು ನಾಡು ರಾಜಕೀಯದಲ್ಲಿ ಹೈಡ್ರಾಮಾ ನಡೆದಿದೆ. ತಮಿಳು ನಾಡು ಸರ್ಕಾರದ ಇಂಧನ ಸಚಿವ ಸಂಥಿಲ್ ಬಾಲಾಜಿ ಅವರನ್ನು ಜಾರಿ ನಿರ್ದೇಶನಾಲಯ ಬುಧವಾರ ನಸುಕಿನ ಜಾವ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ(PMLA)ಬಂಧಿಸಲಾಗಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳು ದೀರ್ಘಕಾಲದವರೆಗೆ ವಿಚಾರಣೆ ನಡೆಸಿದ ಬಳಿಕ ಬಂಧಿಸಲಾಗಿದ್ದು ಈ ಸಂದರ್ಭದಲ್ಲಿ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ
ಇಂಫಾಲ: ಶಂಕಿತ ಉಗ್ರರು ಇಂಫಾಲ್ ಪೂರ್ವ ಜಿಲ್ಲೆಯ ಖಮೆಲಾಕ್ ಗ್ರಾಮದ ಮೇಲೆ ದಾಳಿ ನಡೆಸಿ ಮನಬಂದಂತೆ ಗುಂಡು ಹಾರಿಸಿದ್ದು, ಕನಿಷ್ಠ ಒಂಬತ್ತು ಗ್ರಾಮಸ್ಥರು ಸಾವಿಗೀಡಾಗಿದ್ದಾರೆ ಮತ್ತು 25 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಸಾವಿನ ಸಂಖ್ಯೆ 11 ಎಂದು ಅನಧಿಕೃತ ಮೂಲಗಳು ತಿಳಿಸಿವೆ. ಮಂಗಳವಾರ ತಡರಾತ್ರಿ ಖಮೆಲಾಕ್ ಗ್ರಾಮದ
ಅಹಮದಾಬಾದ್: ವ್ಯಾಪಕ ಹಾನಿಯುಂಟುಮಾಡುವ ಸಾಮರ್ಥ್ಯ ಹೊಂದಿರುವ 'ಬಿಪರ್ಜೋಯ್' ಚಂಡಮಾರುತ ಗುರುವಾರ ಸಂಜೆ ಗುಜರಾತ್‌ನ ಕಚ್ ಜಿಲ್ಲೆಗೆ ಅಪ್ಪಳಿಸುವ ಸಾಧ್ಯತೆ ಇದ್ದು, ಸರ್ಕಾರ ಮುನ್ನೆಚ್ಚರಿಕೆ ಕ್ರಮವಾಗಿ ವಿವಿಧ ಕರಾವಳಿ ಜಿಲ್ಲೆಗಳಿಂದ 21,000 ಜನರನ್ನು ತಾತ್ಕಾಲಿಕ ಆಶ್ರಯ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಮಂಗಳವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕರಾವಳಿಯ 10 ಕಿಮೀ ವ್ಯಾಪ್ತಿಯ ಜನರನ್ನು
ಮುಂಬೈ: ಮಹಾರಾಷ್ಟ್ರದ ಲೋನಾವಾಲಾ ಬಳಿ ಮುಂಬೈ - ಪುಣೆ ಎಕ್ಸ್ಪ್ರೆಸ್ವೇಯಲ್ಲಿ ತೈಲ ಟ್ಯಾಂಕರ್ ವೊಂದು ಭೀಕರ ಅಪಘಾತಕ್ಕೀಡಾಗಿ ಬೆಂಕಿಯಿಂದ ಹೊತ್ತಿಕೊಂಡಿದ್ದು, ಘಟನೆಯಲ್ಲಿ ನಾಲ್ವರು ಸಜೀವ ದಹನವಾಗಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ. ಲೋನಾವಾಲಾ ಮೇಲ್ಸೇತುವೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಹೆದ್ದಾರಿಯ ಒಂದು ಬದಿ ಮಾತ್ರ ಬಳಕೆಯಲ್ಲಿದ್ದು, ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ" ಎಂದು
ಭುವನೇಶ್ವರ: ಜೂನ್ 2ರಂದು ಒಡಿಶಾದ ಬಾಲಾಸೋರ್ ಜಿಲ್ಲೆಯಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತದಲ್ಲಿ ಮೃತಪಟ್ಟವರ ಶವಗಳನ್ನು ಇಡಲು ತಾತ್ಕಾಲಿಕ ಶವಾಗಾರವಾಗಿ ಬಳಸಲಾಗಿದ್ದ 65 ವರ್ಷ ಹಳೆಯ ಬಹನಾಗ ಹೈಸ್ಕೂಲ್ ಕಟ್ಟಡವನ್ನು ಕೆಡವಲು ಒಡಿಶಾ ಸರ್ಕಾರ ಶುಕ್ರವಾರ ಆರಂಭಿಸಿದೆ. ಶಾಲಾ ವ್ಯವಸ್ಥಾಪಕ ಸಮಿತಿ (ಎಸ್‌ಎಂಸಿ) ಸದಸ್ಯರು ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳ
ಜಾರ್ಖಂಡ್: ಅಕ್ರಮ ಕಲ್ಲಿದ್ದಲು ಗಣಿ ಕುಸಿದು ಮೂವರು ಮೃತಪಟ್ಟಿರುವ ಹಾಗೂ ಅನೇಕರು ಗಾಯಗೊಂಡಿರುವ ಘಟನೆ ಜಾರ್ಖಂಡ್‌ನ ಧನ್‌ಬಾದ್ ಜಿಲ್ಲೆಯಲ್ಲಿ ನಡೆದಿದೆ. ಅನೇಕರು ಕಲ್ಲಿದ್ದಲು ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಉಪ ಪೊಲೀಸ್ ಅಧೀಕ್ಷಕ (ಡಿಎಸ್ಪಿ) ಅಭಿಷೇಕ್ ಕುಮಾರ್ ತಿಳಿಸಿದ್ದಾರೆ. ಸಾವು-ನೋವಿನ ಕುರಿತು ನಿಖರ ಮಾಹಿತಿ ಇಲ್ಲ,
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶದ ನಂತರ ಜೆಡಿಎಸ್ ಒಂದು ರೀತಿಯ ಅಸ್ತಿತ್ವದ ಬಿಕ್ಕಟ್ಟು ಎದುರಿಸುತ್ತಿದೆ. ಜೊತೆಗೆ ಎಲ್ಲರಿಗೂ ಕಾಣುವಂತೆ ಬಿಜೆಪಿಯತ್ತ ಆಕರ್ಷಿತವಾಗುತ್ತಿದೆ. ಶತ್ರುವಿನ ಶತ್ರು ಮಿತ್ರ ಎಂಬ ಪರಿಕಲ್ಪನೆಯಡಿ ಜೆಡಿಎಸ್ ಬಿಜೆಪಿ ತೆಕ್ಕೆಗೆ ಸರಿಯುತ್ತಿರುವಂತೆ ಕಾಣುತ್ತಿದೆ. 2005 ರಲ್ಲಿ ಜೆಡಿಎಸ್ ನಿಂದ ಉಚ್ಚಾಟನೆಗೊಂಡು ನಂತರ ಪ್ರಬಲವಾಗಿ ಬೆಳೆದು ನಿಂತಿರುವ ಸಿದ್ದರಾಮಯ್ಯ