ತಿರುಪತಿ: ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನವು ತನ್ನ ಮೂರನೇ ದಂಡಯಾತ್ರೆಯಲ್ಲಿ ಚಂದ್ರನ ಕಡೆಗೆ ಹಾರಲು ಸಿದ್ಧವಾಗಿದ್ದು, ಈ ಮಧ್ಯೆ ಚಂದ್ರಯಾನ-3 ಉಪಗ್ರಹ ನೌಕೆಯ ಮಾಡೆಲ್ ಜೊತೆ ಇಸ್ರೋ ವಿಜ್ಞಾನಿಗಳು ಹಾಗೂ ಸಿಬ್ಬಂದಿಗಳ ತಂಡ ತಿರುಪತಿ ತಿಮ್ಮಪ್ಪನ ಸನ್ನಿಧಾನಕ್ಕೆ ಭೇಟಿ ನೀಡಿದ್ದು, ವಿಶೇಷ ಪೂಜೆ ಸಲ್ಲಿಸಿದೆ. ಆಂಧ್ರಪ್ರದೇಶದ ತಿರುಪತಿಯಲ್ಲಿರುವ ಬಾಲಾಜಿಯ ದೇಗುಲಕ್ಕೆ
ರಾಂಚಿ: ಹಣೆಗೆ ಬಿಂದಿ (Bindi) ಧರಿಸಿ ಶಾಲೆಗೆ ಹೋಗಿದ್ದ ವಿದ್ಯಾರ್ಥಿನಿಯನ್ನು (Student) ಶಿಕ್ಷಕಿಯೊಬ್ಬರು (Teacher) ಥಳಿಸಿದ್ದು, ಘಟನೆಯಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ. ಜಾರ್ಖಂಡ್ ನ ಧನ್‌ಬಾದ್‌ನಲ್ಲಿ (Dhanbad) ಈ ಘಟನೆ ನಡೆದಿದ್ದು, ಹಣೆಗೆ ಬಿಂದಿ ಧರಿಸಿ ಶಾಲೆಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ಶಿಕ್ಷಕಿಯೊಬ್ಬರು (Teacher) ಥಳಿಸಿದ್ದು, ಘಟನೆಯಿಂದ
ಶಿಮ್ಲಾ/ಕುಲು: ನಿರಂತರ ಮಳೆಯಿಂದಾಗಿ ಕುಲು ಜಿಲ್ಲೆಯ ಕಸೋಲ್ ಪ್ರದೇಶದಲ್ಲಿ ಸಿಲುಕಿದ್ದ ಸುಮಾರು 2,000 ಪ್ರವಾಸಿಗರನ್ನು ರಕ್ಷಿಸಿ, ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಬುಧವಾರ ತಿಳಿಸಿದ್ದಾರೆ. ಲಾಹೌಲ್‌ನಲ್ಲಿ ಸಿಲುಕಿದ್ದ 300ಕ್ಕೂ ಹೆಚ್ಚು ಪ್ರವಾಸಿ ವಾಹನಗಳು ಆಯಾ ಸ್ಥಳಗಳಿಗೆ ತೆರಳಿವೆ ಎಂದು ಹಿಮಾಚಲ ಸಿಎಂ ಹೇಳಿದ್ದಾರೆ. ಮಂಗಳವಾರ
ಭೋಪಾಲ್: ಮಧ್ಯಪ್ರದೇಶದ ಝಬುವಾ ಜಿಲ್ಲೆಯ ಸರ್ಕಾರಿ ಬುಡಕಟ್ಟು ಬಾಲಕಿಯರ ವಸತಿ ನಿಲಯದಲ್ಲಿ ತಪಾಸಣೆ ವೇಳೆ ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜಿಲ್ಲಾಧಿಕಾರಿಯನ್ನು ಅಮಾನತುಗೊಳಿಸಿ, ಬಂಧಿಸಲಾಗಿದೆ. ಬಂಧಿತ ಡೆಪ್ಯುಟಿ ಕಲೆಕ್ಟರ್ ಸುನಿಲ್ ಕುಮಾರ್ ಝಾ(58) ಅವರ ವಿರುದ್ಧ ಮಂಗಳವಾರ ಬೆಳಗ್ಗೆ ಪೋಕ್ಸೊ ಕಾಯಿದೆ ಮತ್ತು SC/ST ದೌರ್ಜನ್ಯ ತಡೆ
ನವದೆಹಲಿ: ಕಳೆದ ವರ್ಷ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣ ಇನ್ನೂ ಹಸಿರಾಗಿರುವಂತೆಯೇ ದೆಹಲಿಯಲ್ಲಿ ಅಂತಹುದೇ ಮತ್ತೊಂದು ಘಟನೆ ಬೆಳಕಿಗೆ ಬಂದಿದ್ದು, ಮಹಿಳೆಯೊಬ್ಬರ ತುಂಡು-ತುಂಡಾದ ದೇಹ ಪತ್ತೆಯಾಗಿದೆ. ದೆಹಲಿ ಪೊಲೀಸರು ಇಂದು ಗೀತಾ ಕಾಲೋನಿಯ ಫ್ಲೈಓವರ್ ಬಳಿ ಮಹಿಳೆಯೊಬ್ಬಳ ದೇಹದ ಭಾಗಗಳನ್ನು ಪತ್ತೆ ಮಾಡಿದ್ದು, ಮಹಿಳೆಯ ದೇಹವನ್ನು ಹಲವಾರು
ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಕೇಂದ್ರ ಸರಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಆಗಸ್ಟ್ 2ರಿಂದ ಆಲಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಮಂಗಳವಾರ ಪ್ರಕರಣದ ವಿಚಾರಣೆ ನಡೆಸಿದ ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠವು, ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವುದನ್ನು
ನವದೆಹಲಿ: ಉತ್ತರ ಭಾರತದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ದೆಹಲಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಯಮುನಾ ನದಿ ಉಕ್ಕಿ ಹರಿಯುತ್ತಿದ್ದು, ಪ್ರವಾಹ ಭೀತಿ ಹಿನ್ನಲೆಯಲ್ಲಿ ದೆಹಲಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಮುನಾ ನದಿ ನೀರಿನ ಮಟ್ಟ 206.24 ಮೀಟರ್‌ಗೆ ಏರಿಕೆಯಾಗಿದ್ದು, ಯಮುನಾ ನದಿ ನೀರಿನ ಗರಿಷ್ಠ ಮಟ್ಟ 207.49 ಮೀಟರ್ ಆಗಿದೆ. ಅಪಾಯಕಾರಿ ಮಟ್ಟ
ಕಠ್ಮಂಡು: ನೇಪಾಳದಲ್ಲಿ ಮತ್ತೊಂದು ಹೆಲಿಕಾಪ್ಟರ್ ದುರಂತ ಸಂಭವಿಸಿದ್ದು, ಇಂದು ಬೆಳಗ್ಗೆ ಸಂಪರ್ಕ ಕಡಿತಗೊಂಡಿದ್ದ ಪ್ರಯಾಣಿಕ ಹೆಲಿಕಾಪ್ಟರ್ ಪತನವಾಗಿದೆ ಎಂದು ತಿಳಿದುಬಂದಿದೆ. ಮಂಗಳವಾರ ನೇಪಾಳದ ಮೌಂಟ್ ಎವರೆಸ್ಟ್ ಪ್ರದೇಶದ ಬಳಿ ನಾಪತ್ತೆಯಾಗಿದ್ದ ಐವರು ಮೆಕ್ಸಿಕನ್ ಪ್ರಜೆಗಳು ಸೇರಿದಂತೆ ಆರು ಜನರಿದ್ದ ಖಾಸಗಿ ವಾಣಿಜ್ಯ ಹೆಲಿಕಾಪ್ಟರ್ ದೇಶದ ಪೂರ್ವ ಪ್ರದೇಶದ ಗುಡ್ಡಗಾಡು ಪ್ರದೇಶದಲ್ಲಿ ಪತನಗೊಂಡಿದೆ
ಪ್ರಕಾಶಂ (ಆಂಧ್ರ ಪ್ರದೇಶ): ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ಸೊಂದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ 7 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಸೋಮವಾರ ತಡರಾತ್ರಿ ಪ್ರಕಾಶಂ ಜಿಲ್ಲೆಯ ದರ್ಶಿ ಎಂಬಲ್ಲಿ ನಡೆದಿದೆ. ಅಪಘಾತಕ್ಕೀಡಾದ ಸಂದರ್ಭದಲ್ಲಿ ಬಸ್ ನಲ್ಲಿ 47 ಮಂದಿ ಇದ್ದರು ಎಂದು ತಿಳಿದುಬಂದಿದೆ. ಈ ಪೈಕಿ 7 ಮಂದಿ ಸ್ಥಳದಲ್ಲಿಯೇ
ನವದೆಹಲಿ: ಗಾಜಿಯಾಬಾದ್ನ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 6 ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ. ಇಂದು ಮುಂಜಾನೆ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ಶಾಲಾ ಬಸ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿದೆ. ಮುಖಾಮುಖಿಯಾಗಿದೆ. ಅದೃಷ್ಟವಶಾತ್ ಬಸ್‌ನಲ್ಲಿ ಯಾವುದೇ ಪ್ರಯಾಣಿಕರಿರಲಿಲ್ಲ. ಅಪಘಾತದಲ್ಲಿ ಸಾವನ್ನಪ್ಪಿದ ಎಲ್ಲಾ ಆರು ಮಂದಿ ಕಾರಿನಲ್ಲಿದ್ದು, ಕಾರು